Saturday | June 20, 2026 |

ಕೆಎಸ್‌ಒಯು ಬ್ಯಾಂಕ್‌ ಖಾತೆ ಸ್ಥಗಿತ; ಬ್ಯಾಂಕ್‌ ಕಾರ್ಯಾಚರಣೆ ನಿರ್ಬಂಧಿಸಲು ರಾಜ್ಯ ಸರ್ಕಾರಕ್ಕೆ ಯಾವ ಕಾನೂನುಬದ್ಧ ಅಧಿಕಾರವಿದೆ?

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬ್ಯಾಂಕ್‌ ಖಾತೆಗಳ ಸ್ಥಗಿತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ನಡೆಯುತ್ತಿರುವ ಹಗ್ಗ ಜಗ್ಗಾಟ ನಡೆಯುತ್ತಿರುವ ನಡುವೆಯೇ ಬ್ಯಾಂಕ್‌ ಕಾರ್ಯಾಚರಣೆಯನ್ನು ನಿರ್ಬಂಧಿಸಲು ರಾಜ್ಯ ಸರ್ಕಾರಕ್ಕೆ ಯಾವ ಕಾನೂನುಬದ್ಧ ಅಧಿಕಾರವಿದೆ ಎಂದು ಎಚ್‌ಡಿಎಫ್‌ಸಿ ಬ್ಯಾಂಕ್‌ ಪ್ರಶ್ನಿಸಿದೆ. ಈ ಸಂಬಂಧ ರಾಜ್ಯಪಾಲರಿಗೇ ನೇರವಾಗಿ ಪತ್ರ ಬರೆದಿದೆ.

ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು 2 ಬಾರಿ ಅಂದರೇ 2026ರ ಏಪ್ರಿಲ್‌, ಮೇ ತಿಂಗಳಿನಲ್ಲಿ ಪತ್ರ ಬರೆದಿದ್ದರು ಪತ್ರ ಬರೆದಿದ್ದರು. ಈ ನಡುವೆಯೇ ಎಚ್‌ಡಿಎಫ್‌ಸಿ ಬ್ಯಾಂಕ್‌ ಕೂಡ ಸರ್ಕಾರ ಮತ್ತು ರಾಜ್ಯಪಾಲರಿಗೆ ಪತ್ರ ಬರೆದಿರುವುದು ಮುನ್ನೆಲೆಗೆ ಬಂದಿದೆ.

ಎಚ್‌ಡಿಎಫ್‌ಸಿ ಬ್ಯಾಂಕ್‌ ಪತ್ರ ಆಧರಿಸಿ ರಾಜ್ಯಪಾಲರು ಈ ಪ್ರಕರಣದ ಬಗ್ಗೆ ಸರ್ಕಾರಕ್ಕೆ ಮೂರನೇ ಪತ್ರವನ್ನು ಬರೆದಿದ್ದಾರೆ. ಇದೀಗ 2026ರ ಜೂನ್‌ 8ರಂದು ಮೂರನೇ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಈ ಬಾರಿ ಬರೆದಿರುವ ಪತ್ರದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಎಚ್‌ಡಿಎಫ್‌ಸಿ ಬ್ಯಾಂಕ್‌ನೊಂದಿಗೆ 2026ರ ಮಾರ್ಚ್‌ 27ರಂದು ನಡೆಸಿದ್ದ ಸಂವಹನವನ್ನು ಹಿಂಪಡೆಯಬೇಕು ಎಂದು ಸೂಚಿಸಿದ್ದಾರೆ.

ರಾಜ್ಯಪಾಲರ ಪತ್ರದಲ್ಲೇನಿದೆ?

ವಿಶ್ವವಿದ್ಯಾಲಯದ ಕಾನೂನುಬದ್ಧ ಕಾರ್ಯನಿರ್ವಹಣೆಗೆ ಯಾವುದೇ ರೀತಿಯ ಅಡ್ಡಿಪಡಿಸುವ ಕ್ರಮಗಳನ್ನು ಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ಮತ್ತಷ್ಟು ನಿರ್ದೇಶನ ನೀಡಲಾಗಿತ್ತು. ಅಲ್ಲದೆ, ಯಾವುದೇ ಅಕ್ರಮಗಳ ಕುರಿತು ಲಭ್ಯವಿರುವ ದಾಖಲೆಗಳು ಅಥವಾ ಮಾಹಿತಿಗಳನ್ನು ಕಾನೂನಿನಡಿ ನಿಗದಿಪಡಿಸಿರುವ ವಿಧಾನವನ್ನು ಅನುಸರಿಸಿ ಕುಲಾಧಿಪತಿಗಳ ಪರಿಗಣನೆಗೆ ಸಲ್ಲಿಸಬೇಕು ಎಂದು ಸ್ಪಷ್ಟಪಡಿಸಲಾಗಿತ್ತು ಎಂದು ಸರ್ಕಾರದ ಗಮನಸೆಳೆದಿದೆ.

ಈ ಹಿನ್ನೆಲೆಯಲ್ಲಿಯೇ, ಎಚ್‌ಡಿಎಫ್‌ಸಿ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕರು 2026ರ ಮಾರ್ಚ್ f25ರಂದೇ ತಮ್ಮ ಪತ್ರದ ಮೂಲಕ ರಾಜ್ಯ ಸರ್ಕಾರದಿಂದ ಸ್ಪಷ್ಟೀಕರಣವನ್ನು ಕೋರಿದ್ದಾರೆ. ಇದು ರಾಜ್ಯಪಾಲರು ಹಾಗೂ ಕುಲಾಧಿಪತಿಗಳ ಗಮನಕ್ಕೆ ಬಂದಿದೆ. ಬ್ಯಾಂಕ್ ಕಾರ್ಯಾಚರಣೆಯನ್ನು ನಿರ್ಬಂಧಿಸಲು ರಾಜ್ಯ ಸರ್ಕಾರಕ್ಕೆ ಯಾವ ಕಾನೂನುಬದ್ಧ ಅಧಿಕಾರವಿದೆ ಎಂಬುದರ ಕುರಿತು ಎಚ್‌ಡಿಎಫ್‌ಸಿ ಬ್ಯಾಂಕ್‌ ಸ್ಪಷ್ಟೀಕರಣ ಕೇಳಿದೆ.

 

 

 

ಈ ಹಿಂದೆ ಗಮನಿಸಿದಂತೆ, ಈ ನಿರ್ದೇಶನವು ಅವಸರದ, ದಂಡಾತ್ಮಕ ಹಾಗೂ ಅಸಮತೋಲನದ ಕ್ರಮದ ಸ್ವರೂಪವನ್ನು ಹೊಂದಿದೆ. ವಿಶ್ವವಿದ್ಯಾಲಯದ ಕಾರ್ಯಚಟುವಟಿಕೆಗಳನ್ನು ಸ್ಥಗಿತಗೊಳಿಸುವ ಪರಿಣಾಮ ಬೀರುತ್ತದೆ. ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವುದರಿಂದ ಶೈಕ್ಷಣಿಕ ಚಟುವಟಿಕೆಗಳು, ವೇತನ ಪಾವತಿ, ವಿದ್ಯಾರ್ಥಿವೇತನ ವಿತರಣೆ ಹಾಗೂ ಕಾನೂನುಬದ್ಧ ಕರ್ತವ್ಯಗಳ ನಿರ್ವಹಣೆಗೆ ನೇರ ಪರಿಣಾಮ ಬೀಳುತ್ತದೆ. ಇದರಿಂದ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಾರ್ವಜನಿಕರ ಹಿತಾಸಕ್ತಿಗಳಿಗೆ ಗಂಭೀರ ಹಾನಿಯಾಗುತ್ತದೆ ಎಂದು ಪತ್ರದಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

‘ಆದುದರಿಂದ ರಾಜ್ಯಪಾಲರು ಹಾಗೂ ಕುಲಾಧಿಪತಿಗಳ ನಿರ್ದೇಶನದಂತೆ, ರಾಜ್ಯ ಸರ್ಕಾರವು 2026ರ ಮಾರ್ಚ್‌ 27 ರಂದು ಪತ್ರದ (ED 15 UOV 2026) ಮೂಲಕ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕರಿಗೆ ನೀಡಿರುವ ವಿಶ್ವವಿದ್ಯಾಲಯದ ಖಾತೆಗಳನ್ನು ಸ್ಥಗಿತಗೊಳಿಸುವ ಸೂಚನೆಯನ್ನು ಹಿಂಪಡೆಯಬೇಕು. ಜೊತೆಗೆ ರಾಜ್ಯಪಾಲರು ಹಾಗೂ ಕುಲಾಧಿಪತಿಗಳ ನಿರ್ದೇಶನದ ಅನುಸರಣೆಯಾಗಿ ಕೈಗೊಂಡ ಕ್ರಮಗಳ ವರದಿಯನ್ನು ಶೀಘ್ರದಲ್ಲೇ ಸಲ್ಲಿಸಬೇಕು,’ ಎಂದು ನಿರ್ದೇಶಿಸಿರುವುದು ತಿಳಿದು ಬಂದಿದೆ.

ಎಚ್‌ಡಿಎಫ್‌ಸಿ ಬ್ಯಾಂಕ್‌ನ ಪತ್ರದಲ್ಲೇನಿತ್ತು?

ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳ ನಿರ್ದೇಶನದ ಅನ್ವಯ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಗೆ ಸಂಬಂಧಿಸಿದ ಖಾತೆಯನ್ನು ಸ್ಥಗಿತಗೊಳಿಸಿರುವುದನ್ನು 2026ರ ಜೂನ್‌ 20ರೊಳಗೆ ತೆರವುಗೊಳಿಸಿರಬೇಕು. ಈ ಸಂಬಂಧ ದೃಢೀಕರಿಸಬೇಕು. ಒಂದೊಮ್ಮೆ ಹಿಂಪಡೆಯದಿದ್ದಲ್ಲಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಹೊರಡಿಸಿರುವ ಪತ್ರದ ಅಧಾರದ ಮೇಲೆ ಕೆಎಸ್‌ಒಯುಗೆ ಸಂಬಂಧಿಸಿದ ಖಾತೆಗಳ ಮೇಲಿನ ಡೆಬಿಟ್ ಫ್ರೀಜ್ ಅನ್ನು ನಾವೇ ತೆರವುಗೊಳಿಸುತ್ತೇವೆ ಎಂದು ಸರ್ಕಾರದ ಗಮನಸೆಳೆದಿದೆ.

 

 

ಪ್ರಕರಣದ ಹಿನ್ನೆಲೆ

ಕೆಎಸ್‌ಒಯು 2026ರ ಮಾರ್ಚ್‌ 25ರಿಂದ 27ರವರೆಗೆ ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಕೆಎಸ್‌ಒಯು ಆವರಣದಲ್ಲಿ ಏಕಾತ್ಮ ಮಾನವ ದರ್ಶನ ಎಂಬ ಅಂತರಾಷ್ಟ್ರೀಯ ಶೈಕಷಣಿಕ ಸಮ್ಮೇಳನ ನಡೆದಿತ್ತು. ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಲೋಗೋ ಬಳಸಲಾಗಿತ್ತು. ಆದರೆ ಉನ್ನತ ಶಿಕ್ಷಣ ಸಚಿವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿರಲಿಲ್ಲ.

ರಾಜ್ಯಪಾಲರು ಮತ್ತು ಕೇಂದ್ರ ಸಚಿವರನ್ನು ಆಹ್ವಾನಿಸಲಾಗಿತ್ತು ಹೀಗಾಗಿ ಶಿಷ್ಟಾಚಾರ ಉಲ್ಲಂಘಿಸಿದ ಕಾರಣಕ್ಕೆ ಕಾರ್ಯಕ್ರಮ ರದ್ದುಗೊಳಿಸಲು ರಾಜ್ಯ ಸರ್ಕಾರವು ಆದೇಶಿಸಿತ್ತು. ಅದನ್ನು ಕುಲಪತಿ ಶರಣಪ್ಪ ಹಲಸೆ ಅವರು ಧಿಕ್ಕರಿಸಿದ್ದರು. ಕಾರ್ಯಕ್ರಮಕ್ಕೆ ಸಹಕಾರ ನೀಡಿದ್ದರ. ಇದಾದ ನಂತರ ಕುಲಪತಿಗೆ ಕಾರಣ ಕೇಳಿ ನೋಟೀಸ್‌ ನೀಡಿದ್ದರು.

ವಿಶ್ವವಿದ್ಯಾಲಯವ ಸ್ಥಳವನ್ನು ಬಾಡಿಗೆ ಆಧಾರದಲ್ಲಿ ನೀಡಿದೆ ಎಂದು ಕುಲಪತಿ ಅವರ ಉತ್ತರಿಸಿದ್ದರು. ಆದರೂ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿತ್ತು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ವಿರುದ್ಧ ಕ್ರಮ ಮತ್ತು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಸಂಬಂಧ ಉನ್ನತ ಶಿಕ್ಷಣ ಖಾತೆಯ ಹಿಂದಿನ ಸಚಿವ ಎಂ ಸಿ ಸುಧಾಕರ್ ಅವರಿಗೆ ರಾಜ್ಯಪಾಲರು 2026ರ ಏಪ್ರಿಲ್‌ 8ರಂದು ಪತ್ರ ಬರೆದಿದ್ದರು. ಮಾರ್ಚ್‌ 24ರಂದು ಕೆಎಸ್‌ಒಯು ಖಾತೆಗಳನ್ನು ಸ್ಥಗಿತಗೊಳಿಸಲು ಎಚ್‌ಡಿಎಫ್‌ಸಿ ಬ್ಯಾಂಕ್‌ ಸೇರಿದಂತೆ ಕೆಲ ಬ್ಯಾಂಕ್‌ಗಳಿಗೆ ಕಳಿಸಿದ್ದ ಪತ್ರವನ್ನು ಹಿಂಪಡೆಯಬೇಕು. ವಿಶ್ವವಿದ್ಯಾಲಯದ ಕಾನೂನುಬದ್ಧ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿದ್ದರು.

ವಿಶ್ವವಿದ್ಯಾಲಯಗಳ ಅಕ್ರಮಗಳ ಬಗ್ಗೆ ಮಾಹಿತಿ ಇದ್ದರೇ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು. ಕಾನೂನುಬದ್ಧ ವ್ಯವಸ್ಥೆ ಮತ್ತು ಸಂವಿಧಾನಾತ್ಮಕ ಮಿತಿಗಳ ಒಳಗೆ ಕಾರ್ಯನಿರ್ವಹಿಸಬೇಕು. ವಿಶ್ವವಿದ್ಯಾಲಯ ಮತ್ತು ಕುಲಪತಿಗಳ ಮೇಲೆ ಪರೋಕ್ಷ ಒತ್ತಡ ಹೇರುವ ಪ್ರಯತ್ನ ಮಾಡಬಾರದು ಇಂತಹ ಕ್ರಮಗಳಿಂದ ವಿಶ್ವವಿದ್ಯಾಲಯ ಹಾಗೂ ನೌಕರರ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ. ಇದೇ ಧೋರಣೆ ಮುಂದುವರೆದರೆ ಉದ್ದೇಶಪೂರ್ವಕ ಹಸ್ತಕ್ಷೇಪ ಎಂದು ಪರಿಗಣಿಸಲಾಗುವುದು. ಈ ಕುರಿತು ಕೈಗೊಂಡ ಕ್ರಮಗಳ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ಪತ್ರದಲ್ಲಿ ಸೂಚಿಸಿದ್ದರು.

ಆದರೂ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಲು ಇಲಾಖೆಯ ಪತ್ರ ಬರೆದಿತ್ತು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (KSOU) ಬ್ಯಾಂಕ್ ಖಾತೆಗಳನ್ನು ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ಸ್ಥಗಿತಗೊಳಿಸಿತ್ತು. ವಿವಾದಾತ್ಮಕ ಕಾರ್ಯಕ್ರಮ ಆಯೋಜನೆ ಮತ್ತು ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ರಾಜ್ಯಪಾಲರು ಈ ಆದೇಶವನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ಸೂಚನೆ ನೀಡಿದ್ದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಕುಲಪತಿ ಶರಣಪ್ಪ ವಿ. ಹಲಸೆ ಅವರು, ವಿಶ್ವವಿದ್ಯಾನಿಲಯದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮದ ಕುರಿತು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರೊಂದಿಗೆ ಸಮಾಲೋಚಿಸಿದ್ದರು.

ಮಾರ್ಚ್ 27 ರಂದು, ರಾಜ್ಯ ಸರ್ಕಾರ ಮತ್ತು ಉನ್ನತ ಶಿಕ್ಷಣ ಇಲಾಖೆಯು ಕೆಎಸ್‌ಒಯು ಮೈಸೂರಿನಲ್ಲಿ ನಡೆದ ಹಣಕಾಸಿನ ಅಕ್ರಮಗಳನ್ನು ವರದಿ ಮಾಡಿತ್ತು. ಅಲ್ಲದೇ ಕೆಎಸ್‌ಒಯುನ ಖಾತೆಗಳನ್ನು ಸ್ಥಗಿತಗೊಳಿಸಲು ಬ್ಯಾಂಕುಗಳಿಗೆ ಆದೇಶಿಸಿತ್ತು. ಅಲ್ಲದೆ, ಸಾರ್ವಜನಿಕ ಹಣವನ್ನು ರಕ್ಷಿಸಲು ಮತ್ತು ತನಿಖೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು, ವಿಶ್ವವಿದ್ಯಾಲಯದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು (ಡೆಬಿಟ್ ಫ್ರೀಜ್) ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗೆ ಸೂಚಿಸಿದ್ದನ್ನು ಸ್ಮರಿಸಬಹುದು.

Hot this week

ಡಿಸಿಎಂ ಕಚೇರಿಯಲ್ಲಿಯೇ ಧೂಳಿಡಿದಿದ್ದ ಕಡತಗಳು; ಸಚಿವ ಸಂಪುಟ ವಿಸರ್ಜನೆ ಬೆನ್ನಲ್ಲೇ 80 ಕಡತಗಳು ಇಲಾಖೆಗೆ ವಾಪಸ್‌

ಬೆಂಗಳೂರು; ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಕೋರಿದ್ದ ಮಾಹಿತಿಯ ಕಡತ,...

ಈಶಾ ಫೌಂಡೇಷನ್, ಯೋಗ ಕೇಂದ್ರಕ್ಕೆ ಜಮೀನು ಭೂ ಪರಿವರ್ತನೆಯಲ್ಲಿ ನಿಯಮ ಉಲ್ಲಂಘನೆ ಆರೋಪ; ತಹಶೀಲ್ದಾರ್‍‌ಗಳಿಂದಲೇ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆಯಾಗಿದೆಯೇ?

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...
Please Scan to make Your Contribution

Topics

ಈಶಾ ಫೌಂಡೇಷನ್, ಯೋಗ ಕೇಂದ್ರಕ್ಕೆ ಜಮೀನು ಭೂ ಪರಿವರ್ತನೆಯಲ್ಲಿ ನಿಯಮ ಉಲ್ಲಂಘನೆ ಆರೋಪ; ತಹಶೀಲ್ದಾರ್‍‌ಗಳಿಂದಲೇ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆಯಾಗಿದೆಯೇ?

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೊಸ ಹಾಸ್ಟೆಲ್‌ಗಳ ಮಂಜೂರಾತಿಗೆ ನಕಾರ; ವಿದ್ಯಾರ್ಥಿ ನಿಲಯಗಳ ವಿಲೀನಕ್ಕೆ ಮುಂದಾಯಿತೇ ಸರ್ಕಾರ?

ಬೆಂಗಳೂರು; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಹೊಸದಾಗಿ ಮೆಟ್ರಿಕ್‌ ಪೂರ್ವ...

ಮುಖ್ಯಮಂತ್ರಿ ಮೂಲಸೌಕರ್ಯ ಯೋಜನೆ ಉದ್ದೇಶಕ್ಕೆ ಧಕ್ಕೆ ; ನ್ಯಾಯಾಂಗ ಬಡಾವಣೆ ಪ್ರತಿಷ್ಠಿತರ ಒತ್ತಡಕ್ಕೆ ಮಣಿದು ಹೆಬ್ಬಾಗಿಲು ನಿರ್ಮಾಣ?

ಬೆಂಗಳೂರು; ಮುಖ್ಯಮಂತ್ರಿಗಳ ಮೂಲಸೌಕರ್ಯ ಯೋಜನೆಯಡಿ ಒದಗಿಸಿದ್ದ ಅನುದಾನವನ್ನು ಅಧಿಕಾರಿವರ್ಗವು ಪ್ರಭಾವಿಗಳ ಒತ್ತಡಕ್ಕೆ...

Related Articles

Popular Categories

error: Content is protected !!