Saturday | July 11, 2026 |

ರಸ್ತೆ ಕಾಮಗಾರಿಯಲ್ಲಿ ಲೋಪ, ಗುತ್ತಿಗೆದಾರನಿಗೆ ಅಕ್ರಮ ಲಾಭ, ಪಾಲಿಕೆಗೆ ನಷ್ಟ; ತಪಾಸಣೆ ನಡೆದ ದಿನದಂದೇ ಎಇ ಅಮಾನತು

ಬೆಂಗಳೂರು; ಆರ್ಟಿಲಿಯಲ್ ಮತ್ತು ಸಬ್‌ ಆರ್ಟೀಲಿಯಲ್ ರಸ್ತೆಗಳಲ್ಲಿ   ಕೈಗೊಂಡಿರುವ ಆಸ್ಪಾಲ್ಟಿಂಗ್‌ನಲ್ಲಿ ಕಳಪೆ ಕಾಮಗಾರಿಯನ್ನು ತಡೆಯದೇ ಬೇಜವಾಬ್ದಾರಿಯಿಂದ ವರ್ತಿಸಿ ಪಾಲಿಕೆಗೆ ಆರ್ಥಿಕ ನಷ್ಟವುಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍‌ ಪೂಜಾರಪ್ಪ ಎಂಬುವರನ್ನು ಸೇವೆಯಿಂದ ಅಮಾನತುಗೊಳಿಸಿದೆ.

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರು 2026ರ ಜೂನ್‌ 20ರಂದು ಶಿವಾಜಿ ನಗರ ವಿಧಾನಸಭೆ ಕ್ಷೇತ್ರದಲ್ಲಿ  ತಪಾಸಣೆ ಕೈಗೊಂಡ ನಂತರ ಈ ಅಮಾನತು ಆದೇಶವನ್ನು ಹೊರಡಿಸಲಾಗಿದೆ. ವಿಶೇಷವೆಂದರೇ ಕಾಮಗಾರಿ ಸ್ಥಳ ತಪಾಸಣೆ ನಡೆಸಿದ ದಿನದಂದೇ ಲೋಪವನ್ನು ಪತ್ತೆ  ಹಚ್ಚಿ ತತ್‌ಕ್ಷಣವೇ ಅಮಾನತು ಆದೇಶ ಹೊರಡಿಸಿದ್ದಾರೆ.

ಕೃಷ್ಣಬೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಈಚೆಗಷ್ಟೇ  ಅಧಿಕಾರ ವಹಿಸಿಕೊಂಡಿದ್ದರು. ರಸ್ತೆ ನಿರ್ಮಾಣ ಮಾಡಲು ರಾಕೇಟ್‌ ಸೈನ್ಸ್‌ ಬೇಕೆ ಎಂದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಇದರ ಬೆನ್ನಲ್ಲೇ ಪೂಜಾರಪ್ಪ ಅವರ ಅಮಾನತುಗೊಳಿಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

2026ರ ಜೂನ್ 20ರಂದು ಹೊರಡಿಸಿರುವ ಅಮಾನತು ಆದೇಶ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಬೆಂಗಳೂರು ಕೇಂದ್ರ ನಗರಪಾಲಿಕೆ ವ್ಯಾಪ್ತಿಯ ಶಿವಾಜಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ವಸಂತ ನಗರ ಉಪ ವಿಭಾಗದ ವಾರ್ಡ್‌ ಸಂಖ್ಯೆ 110ರ ಸಂಪಂಗಿರಾಮನಗರ ವ್ಯಾಪ್ತಿಯಲ್ಲಿ ಇನ್ಫ್ರಾಸ್ಟಕ್ಚರ್ ಪ್ರೋಗ್ರಾಮ್‌ ಅಡಿಯಲ್ಲಿ ಆರ್ಟಿಲಿಯಲ್ ಮತ್ತು ಸಬ್‌ ಆರ್ಟಿಲಿಯಲ್ ರಸ್ತೆಗಳಲ್ಲಿ ಆಸ್ಪಾಟಲಿಂಗ್‌ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ಈ ಕಾಮಗಾರಿಗಳನ್ನು ನಿರ್ವಹಣೆ ಸಂಬಂಧ ಆಯುಕ್ತರು 2026ರ ಜೂನ್‌ 20ರಂದು ತಪಾಸಣೆ ಕೈಗೊಂಡಿದ್ದರು.

ಕ್ರಿಯಾ ಯೋಜನೆ ಅನುಸಾರ ಸರಿಯಾದ ಪ್ರಮಾಣದ ಹಾಗೂ ದಪ್ಪ ಆಸ್ಪಾಟಲಿಂಗ್‌ ಮಾಡದೇ ಕಡಿಮೆ ಪ್ರಮಾಣದಲ್ಲಿ ಆಸ್ಪಾಲ್ಟಿಂಗ್‌ ಮಾಡಿರುವುದನ್ನು ಆಯುಕ್ತರು ತಪಾಸಣೆ ವೇಳೆ ಪತ್ತೆ ಹಚ್ಚಿದ್ದರು. ಇದರಿಂದ ಪಾಲಿಕೆಗೆ ಆರ್ಥಿಕ ನಷ್ಟವುಂಟಾಗಿರುವುದನ್ನು ಬಯಲು ಮಾಡಿದ್ದರು.

 

 

‘ಒಬ್ಬ ಜವಾಬ್ದಾರಿಯುತ ಅಧಿಕಾರಿಯಾದ ತಾವು ಆಸ್ಪಾಲ್ಟಿಂಗ್‌ ಸ್ಥಳದಲ್ಲಿ ಖುದ್ದು ಹಾಜರಿದ್ದು ಕ್ರಿಯಾಯೋಜನೆ ಅನುಸಾರ ಸರಿಯಾದ ಪ್ರಮಾಣದ ಹಾಗೂ ದಪ್ಪ ಆಸ್ಪಾಲ್ಟಿಂಗ್‌ ಕಾಮಗಾರಿಯನ್ನು ಮಾಡಿಸದೇ ತಮಗೆ ವಹಿಸಿರುವ ಕೆಲಸ ಕಾರ್ಯಗಳನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದೀರಿ.  ಕರ್ತವ್ಯದಲ್ಲಿ ಬೇಜವಾಬ್ದಾರಿತನ, ಅಸಡ್ಡೆ ಮನೋಭಾವ ತೋರಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ,’ ಎಂದು ಆಯುಕ್ತರು ಹೊರಡಿಸಿರುವ ಕಚೇರಿ ಆದೇಶದಲ್ಲಿ  ವಿವರಿಸಿರುವುದು ತಿಳಿದು ಬಂದಿದೆ.

ಅಲ್ಲದೇ ಸಹಾಯಕ ಅಭಿಯಂತರರಾದ ಪೂಜಾರಪ್ಪ ಅವರು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಅವರೊಂದಿಗೆ ಸಹಕರಿಸಿ ಆಸ್ಪಾಲ್ಟಿಂಗ್‌ ಕಾಮಗಾರಿಯಲ್ಲಿ ಕ್ರಿಯಾಯೋಜನೆ ಅನುಸಾರ ಸರಿಯಾದ ಪ್ರಮಾಣದ ಹಾಗೂ ದಪ್ಪ ಆಸ್ಪಾಲ್ಟಿಂಗ್‌ ಮಾಡದೇ ಕಡಿಮೆ ಪ್ರಮಾಣದಲ್ಲಿ ಕಾಮಗಾರಿ ಮಾಡಿಸಿದ್ದಾರೆ. ಇದರಿಂದ ಪಾಲಿಕೆಗೆ ಆರ್ಥಿಕ ನಷ್ಟ ಉಂಟಾಗಿದೆ ಎಂದು ಹೇಳಲಾಗಿದೆ.

ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೃಷ್ಣ ಬೈರೇಗೌಡ ಅವರು ಮೊದಲ ದಿನವೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಹಿರಿಯ ಅಧಿಕಾರಿಗಳೊಂದಿಗೆ ಬಿಬಿಎಂಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು. ನಗರದ ಪ್ರಮುಖ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದರು.  ನಗರದಲ್ಲಿ ರಸ್ತೆ ಗುಂಡಿಗಳ ಹಾವಳಿಯನ್ನು ತಕ್ಷಣವೇ ತಡೆಗಟ್ಟಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು.  ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳನ್ನು ನಿಭಾಯಿಸಲು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದ್ದರು. 

‘ಇಂತಹ ಕಠಿಣ ಕ್ರಮಗಳಿಗೆ ಆಗಾಗ್ಗೆ ಮುಂದಾಗಬೇಕಾಗಿಲ್ಲ ಎಂದು ಭಾವಿಸುತ್ತೇನೆ. ಆದರೆ, ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕೇಳದಿದ್ದರೆ ಮತ್ತು ತಮ್ಮ ಕೆಲಸವನ್ನು ಸರಿಯಾಗಿ ಮಾಡದಿದ್ದರೆ, ದುರದೃಷ್ಟವಶಾತ್ ನಾನು ಇಂತಹ ಕ್ರಮಗಳ ಜಾರಿಗೆ ಒತ್ತಾಯಿಸಲ್ಪಡುತ್ತೇನೆ. ಹೀಗಾಗಿ ಅವರು ತಮ್ಮ ಕೆಲಸವನ್ನು ಸರಿಯಾಗಿ ಮಾಡುವಂತೆ ನಾನು ಮನವಿ ಮಾಡುತ್ತೇನೆ,’ ಎಂದು ಸಚಿವ ಕೃಷ್ಣಬೈರೇಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಅಲ್ಲದೇ  ‘ಇಂದು, ನಾನು ಆಕಸ್ಮಿಕವಾಗಿ ಪ್ರಗತಿಯಲ್ಲಿರುವ ಡಾಂಬರು ಕೆಲಸವನ್ನು ಗಮನಿಸಿದೆ. ಗುಣಮಟ್ಟದ ಬಗ್ಗೆ ನನಗೆ ಸಂದೇಹವಿತ್ತು. ಈ ಡಾಂಬರು ಕೆಲಸವನ್ನು ಪರಿಶೀಲಿಸುವಂತೆ ಆಯುಕ್ತರನ್ನು ಕೇಳಿದೆ. ವಾಸ್ತವವಾಗಿ, ಕೆಲಸವು ಕಳಪೆ ಗುಣಮಟ್ಟದ್ದಾಗಿರುವುದು ಕಂಡುಬಂದಿದ್ದು ಸಂಬಂಧಿತ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಮತ್ತು ಗುತ್ತಿಗೆದಾರರಿಗೆ ದಂಡ ವಿಧಿಸಲಾಗಿದೆ,’ ಎಂದು ವಿವರಿಸಿದ್ದಾರೆ.

 

‘ರಸ್ತೆ ನಿರ್ಮಾಣ ಮಾಡುವುದು ರಾಕೆಟ್ ಸೈನ್ಸ್ ಅಲ್ಲ. ಇದು ಕೇವಲ ಉತ್ತಮ ಯೋಜನಾಬದ್ಧತೆ ಮತ್ತು ಜವಾಬ್ದಾರಿಯ ಕೊರತೆಯಾಗಿದೆ. ನೆರೆ ರಾಜ್ಯಗಳಂತೆ ಬೆಂಗಳೂರಿನಲ್ಲಿಯೂ ಸಹ ಗುಂಡಿಮುಕ್ತ ಮತ್ತು ಸುಸಜ್ಜಿತ ರಸ್ತೆಗಳನ್ನು ನಿರ್ಮಿಸುವುದು ಸಾಧ್ಯವಿದೆ,’ ಎಂದು ಇತ್ತೀಚೆಗೆ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

‘ವರ್ಷಪೂರ್ತಿ ರಸ್ತೆ ಗುಂಡಿಗಳನ್ನು ಮುಚ್ಚುವುದೇ ಕೆಲಸವಾಗಿದೆ. ಇತರ ನಗರಗಳಲ್ಲಿ ಸಾಧ್ಯವಿರುವಾಗ ಬೆಂಗಳೂರಿನಲ್ಲಿ ಯಾಕೆ ಉತ್ತಮ ರಸ್ತೆ ನಿರ್ಮಿಸಲು ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದರು. ರಸ್ತೆಯಲ್ಲಿ ಗುಂಡಿ ಯಾಕೆ ಬೀಳುತ್ತೆ? ರಸ್ತೆ ನಿರ್ಮಾಣ ಮಾಡೋದು ರಾಕೆಟ್ ಸೈನ್ಸಾ? ರಸ್ತೆ ಗುಂಡಿ ದುರಸ್ತಿ ಮಾಡೋದೆ ವರ್ಷಪೂರ್ತಿ ಅಂತಾರೆ ಪಾಟ್‌ಹೋಲ್ ಇಲ್ಲದೆ ರಸ್ತೆ ಮಾಡಲು ಆಗಲ್ವಾ,’  ಎಂದು ಅಧಿಕಾರಿಗಳನ್ನ ಸಚಿವರು ಖಾರವಾಗಿ ತರಾಟೆಗೆ ತೆಗೆದುಕೊಂಡಿದ್ದರು.

ಬೆಂಗಳೂರು ನಗರದಲ್ಲಿ ವಾಸಿಸುವ 1.5 ಕೋಟಿ ಜನರ ಜೀವನ ಗುಣಮಟ್ಟವನ್ನು ಸುಧಾರಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.  ‘ಸುಮಾರು 1.5 ಕೋಟಿ ಜನರಿಗೆ ಆಶ್ರಯ ತಾಣವಾಗಿರುವ ಈ ನಗರವು ಉದ್ಯೋಗ, ಶಿಕ್ಷಣ ಹಾಗೂ ಉತ್ತಮ ಜೀವನಕ್ಕೆ ಅವಕಾಶ ಕಲ್ಪಿಸುತ್ತಿದೆ. ಬೆಂಗಳೂರು ನಮ್ಮ ರಾಜ್ಯ ಹಾಗೂ ದೇಶದ ಅಮೂಲ್ಯ ಆಸ್ತಿಯಾಗಿದ್ದು, ವಿಶ್ವದ ವಿವಿಧ ಭಾಗಗಳ ಜನರು ಹಾಗೂ ಅನೇಕ ಸಂಸ್ಥೆಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜಿಬಿಎ ಆಡಳಿತವನ್ನು ಸುಧಾರಣೆ ಮಾಡುವ ದ್ಯೇಯೆಯೊಂದಿಗೆ ಕಾರ್ಯನಿರ್ವಹಿಸಲಾಗುವುದು.,’ ಎಂದು ತಿಳಿಸಿದ್ದರು.

ನಗರದಲ್ಲಿ ರಸ್ತೆ, ಬೀದಿ ದೀಪಗಳ ನಿರ್ವಹಣೆ, ಸಂಚಾರ ದಟ್ಟಣೆ, ಸ್ವಚ್ಛತೆ, ಸೌಂದರ್ಯೀಕರಣ, ಜಲಾವೃತ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ಪುನರ್‌ರಚಿಸಲಾಗಿದೆ. ಜಿಬಿಎ ಅಡಿಯಲ್ಲಿ 5 ನಗರ ಪಾಲಿಕೆಗಳನ್ನು ರಚಿಸಿ, ಆಯುಕ್ತರಿಗೆ ಸಂಪೂರ್ಣ ಜವಾಬ್ದಾರಿ ನೀಡುವ ಮೂಲಕ ಸ್ಥಳೀಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ವಿವರಿಸಿದ್ದರು.

ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಅಗತ್ಯ ಅನುದಾನ ಲಭ್ಯವಿದೆ. ವ್ಯವಸ್ಥಿತವಾಗಿ ಹಾಗೂ ಗುಣಮಟ್ಟದೊಂದಿಗೆ ಗುಂಡಿ ಮುಚ್ಚುವ ಕಾಮಗಾರಿಗಳನ್ನು ಕೈಗೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಉಂಟಾಗುವ ಸಮಸ್ಯೆಗಳನ್ನು ತಡೆಯಲು ಸಾಧ್ಯವಾಗುತ್ತದೆ. ರಸ್ತೆ ಕಾಮಗಾರಿಗಳ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದನ್ನು ಸ್ಮರಿಸಬಹುದು.

Hot this week

ಕಸದ ವಾಹನಗಳ ಇಂಧನಕ್ಕೆ ಸಾವಿರಾರು ಲೀಟರ್‌ ಪೆಟ್ರೋಲ್, ಡೀಸೆಲ್ ಬಳಕೆ; ನಗರಾಭಿವೃದ್ಧಿ ಸಚಿವರ ತವರಲ್ಲೇ ಇ ವಿ ವಾಹನಗಳ ಬಳಕೆಗೆ ಉದಾಸೀನತೆ

ಮೈಸೂರು; ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಕಸ ವಿಲೇವಾರಿ ಮಾಡುತ್ತಿರುವ ಒಟ್ಟು ವಾಹನಗಳ...

ಪಿಎಸ್‌ಐ ನೇಮಕಾತಿ ಹಗರಣ; ಎಡಿಜಿಪಿ ಅಮೃತ್‌ ಪೌಲ್ ವಿರುದ್ಧ 4 ವರ್ಷಗಳ ಬಳಿಕ ಇಲಾಖೆ ವಿಚಾರಣೆ ಪ್ರಕ್ರಿಯೆಗೆ ಚಾಲನೆ, ದೋಷಾರೋಪಣೆ ಪಟ್ಟಿ ಜಾರಿ

ಬೆಂಗಳೂರು; ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪ್ರಕರಣದ ಹಗರಣದಲ್ಲಿ ಆರೋಪಿಯಾಗಿ, ಅಮಾನತುಗೊಂಡಿರುವ ಪೊಲೀಸ್‌...

ಸುರಂಗ ಮಾರ್ಗ; ಅದಾನಿ ಎಂಟರ್ ಪ್ರೈಸೆಸ್‌ಗೆ ಬಿಟ್ಟಿ ರಿಯಲ್‌ ಎಸ್ಟೇಟ್‌ ಆದಾಯ ಭಾಗ್ಯ ಕರುಣಿಸಲಿದೆಯೇ ಸರ್ಕಾರ?

ಬೆಂಗಳೂರು; ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗೆ ಉದ್ದೇಶಿತ  ಸುರಂಗ ಮಾರ್ಗ ನಿರ್ಮಾಣದ ಹೆಸರಿನಲ್ಲಿ...
Please Scan to make Your Contribution

Topics

ಪಿಎಸ್‌ಐ ನೇಮಕಾತಿ ಹಗರಣ; ಎಡಿಜಿಪಿ ಅಮೃತ್‌ ಪೌಲ್ ವಿರುದ್ಧ 4 ವರ್ಷಗಳ ಬಳಿಕ ಇಲಾಖೆ ವಿಚಾರಣೆ ಪ್ರಕ್ರಿಯೆಗೆ ಚಾಲನೆ, ದೋಷಾರೋಪಣೆ ಪಟ್ಟಿ ಜಾರಿ

ಬೆಂಗಳೂರು; ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪ್ರಕರಣದ ಹಗರಣದಲ್ಲಿ ಆರೋಪಿಯಾಗಿ, ಅಮಾನತುಗೊಂಡಿರುವ ಪೊಲೀಸ್‌...

ಸುರಂಗ ಮಾರ್ಗ; ಅದಾನಿ ಎಂಟರ್ ಪ್ರೈಸೆಸ್‌ಗೆ ಬಿಟ್ಟಿ ರಿಯಲ್‌ ಎಸ್ಟೇಟ್‌ ಆದಾಯ ಭಾಗ್ಯ ಕರುಣಿಸಲಿದೆಯೇ ಸರ್ಕಾರ?

ಬೆಂಗಳೂರು; ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗೆ ಉದ್ದೇಶಿತ  ಸುರಂಗ ಮಾರ್ಗ ನಿರ್ಮಾಣದ ಹೆಸರಿನಲ್ಲಿ...

Related Articles

Popular Categories

error: Content is protected !!