Friday | July 10, 2026 |

ಪಿಎಸ್‌ಐ ನೇಮಕಾತಿ ಹಗರಣ; ಎಡಿಜಿಪಿ ಅಮೃತ್‌ ಪೌಲ್ ವಿರುದ್ಧ 4 ವರ್ಷಗಳ ಬಳಿಕ ಇಲಾಖೆ ವಿಚಾರಣೆ ಪ್ರಕ್ರಿಯೆಗೆ ಚಾಲನೆ, ದೋಷಾರೋಪಣೆ ಪಟ್ಟಿ ಜಾರಿ

ಬೆಂಗಳೂರು; ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪ್ರಕರಣದ ಹಗರಣದಲ್ಲಿ ಆರೋಪಿಯಾಗಿ, ಅಮಾನತುಗೊಂಡಿರುವ ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಅಮೃತ್‌ ಪೌಲ್‌ ಅವರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 4 ವರ್ಷದ ಬಳಿಕ  ಇಲಾಖೆ ವಿಚಾರಣೆ ನಡೆಸಲು ಮುಂದಾಗಿದೆ.

ಅಖಿಲ ಭಾರತ ಸೇವೆಗಳು (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969ರ ನಿಯಮ 8(4)ರ ಅನ್ವಯ ಇಲಾಖಾ ವಿಚಾರಣೆ ನಡೆಸಲು ಉದ್ದೇಶಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಅಮೃತ್ ಪೌಲ್ ಅವರಿಗೆ ದೋಷಾರೋಪಣೆ ಪಟ್ಟಿಯನ್ನು (ಅನುಬಂಧ 1ರಿಂದ 4) 2026ರ ಜುಲೈ 9ರಂದು  ಜಾರಿಗೊಳಿಸಿದೆ.

ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪ್ರಕರಣದ ಹಗರಣದಲ್ಲಿ ಆರೋಪಿಯಾಗಿ, ಅಮಾನತುಗೊಂಡಿರುವ ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಅಮೃತ್‌ ಪೌಲ್‌ ವಿರುದ್ಧ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಸಿಐಡಿ ಪೊಲೀಸರು ಸುಮಾರು 1,406 ಪುಟಗಳ ಪ್ರತ್ಯೇಕ ಆರೋಪ ಪಟ್ಟಿಯು 2022ರಲ್ಲೇ  ಸಲ್ಲಿಕೆಯಾಗಿತ್ತು. ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಕೆಯಾಗಿ 4 ವರ್ಷಗಳವರೆಗೂ ಇಲಾಖೆ ವಿಚಾರಣೆ ನಡೆದಿರಲಿಲ್ಲ.  ಇದೀಗ ರಾಜ್ಯ ಕಾಂಗ್ರೆಸ್‌ ಸರ್ಕಾರವು 2026ರಲ್ಲಿ ಇಲಾಖೆ ವಿಚಾರಣೆ ನಡೆಸಲು ಮುಂದಾಗಿದೆ. ಇಲಾಖೆ ವಿಚಾರಣೆ ನಡೆಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಚಿವರೂ ಆಗಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅನುಮೋದಿಸಿದ್ದಾರೆ ಎಂದು ತಿಳಿದು ಬಂದಿದೆ.

ಪತ್ರದಲ್ಲೇನಿದೆ?

ನಿಮ್ಮ ವಿರುದ್ಧದ ದುರ್ವರ್ತನೆ ಆರೋಪಗಳ ಸಾರಾಂಶ, ಪ್ರತ್ಯೇಕ ಮತ್ತು ನಿರ್ದಿಷ್ಟ ಆರೋಪಗಳು, ಆರೋಪಗಳಿಗೆ ಸಂಬಂಧಿಸಿದ ದುರ್ವರ್ತನೆಯ ವಿವರಗಳ ಹೇಳಿಕೆ, ಆರೋಪಗಳನ್ನು ಸಾಬೀತುಪಡಿಸಲು ಅವಲಂಬಿಸಿರುವ ದಾಖಲೆಗಳ ಪಟ್ಟಿ ಹಾಗೂ ಸಾಕ್ಷಿದಾರರ ಪಟ್ಟಿಯನ್ನು  (ಅಪರಾಧ ಸಂಖ್ಯೆ 60/2022-  ಅನುಬಂಧ-I ರಿಂದ ಅನುಬಂಧ-IV) ಜಾರಿಗೊಳಿಸಲಾಗಿದೆ.  ಈ ನೋಟಿಸ್‌ ಸ್ವೀಕರಿಸಿದ ದಿನಾಂಕದಿಂದ 30 (ಮೂವತ್ತು) ದಿನಗಳೊಳಗೆ   ಲಿಖಿತ ಸಮರ್ಥನಾ ಹೇಳಿಕೆಯನ್ನು ಸಲ್ಲಿಸಬೇಕು ಎಂದು ಅಮೃತ್ ಪೌಲ್‌ ಅವರಿಗೆ ನಿರ್ದೇಶನ ನೀಡಿರುವುದು ಪತ್ರದಿಂದ ತಿಳಿದು ಬಂದಿದೆ.

‘ನೀವು ಒಪ್ಪದಿರುವ ಆರೋಪಗಳ ಕುರಿತು ಮಾತ್ರ ಇಲಾಖಾ ವಿಚಾರಣೆ ನಡೆಸಲಾಗುವುದು ಎಂದು ನಿಮಗೆ ತಿಳಿಸಲಾಗುತ್ತದೆ. ಆದ್ದರಿಂದ, ಪ್ರತಿಯೊಂದು ಆರೋಪವನ್ನೂ ನೀವು ಸ್ಪಷ್ಟವಾಗಿ ಒಪ್ಪುತ್ತೀರಾ ಅಥವಾ ನಿರಾಕರಿಸುತ್ತೀರಾ ಎಂಬುದನ್ನು ಪ್ರತ್ಯೇಕವಾಗಿ ತಿಳಿಸಬೇಕು. ನಿಗದಿತ ಅವಧಿಯೊಳಗೆ ನಿಮ್ಮ ಲಿಖಿತ ಸಮರ್ಥನಾ ಹೇಳಿಕೆಯನ್ನು ಸಲ್ಲಿಸದಿದ್ದಲ್ಲಿ, ನಿಮ್ಮ ಪರವಾಗಿ ಯಾವುದೇ ಸಮರ್ಥನೆ ಇಲ್ಲವೆಂದು ಪರಿಗಣಿಸಲಾಗುವುದು ಹಾಗೂ ನಂತರದ ಕ್ರಮವನ್ನು ಅಖಿಲ ಭಾರತ ಸೇವೆಗಳು (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969ರ ಪ್ರಕಾರ ಕೈಗೊಳ್ಳಲಾಗುವುದು,’ ಎಂದು ಪತ್ರದಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪ್ರಕರಣವು ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಅಮೃತ್ ಪೌಲ್ ಅವರು  ಎಡಿಜಿಪಿ (ನೇಮಕಾತಿ) ಹುದ್ದೆಯಲ್ಲಿದ್ದಾಗ, ಪರೀಕ್ಷಾ ಅಭ್ಯರ್ಥಿಗಳಿಂದ ಕೋಟ್ಯಂತರ ರೂಪಾಯಿ ಲಂಚ ಪಡೆದು ಓಎಂಆರ್ (OMR) ಶೀಟ್‌ಗಳನ್ನು ತಿರುಚಲು ಸಹಕರಿಸಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿದ್ದಾರೆ.  ಈ ಹಗರಣದಲ್ಲಿ ಸಿಸಿಐಡಿ (CID) ಪೊಲೀಸರು ಇವರನ್ನು 2022 ಜುಲೈ ಬಂಧಿಸಿದ್ದರು.

ತನಿಖಾಧಿಕಾರಿ ಡಿವೈಎಸ್‌ಪಿ ಬಿ ಕೆ ಶೇಖರ್‌ ಅವರ ನೇತೃತ್ವದ ತಂಡವು ಒಂದನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನ್ಯಾಯಾಧೀಶರಾದ ಆನಂದ್‌ ಟಿ. ಚವ್ಹಾಣ್‌ ಅವರ ನೇತೃತ್ವದ ಪೀಠಕ್ಕೆ ಆರೋಪ ಪಟ್ಟಿಯ ಜೊತೆಗೆ ಕೆಲವು ದಾಖಲೆಗಳನ್ನು ಸಲ್ಲಿಸಿತ್ತು. ಈ ಆರೋಪ ಪಟ್ಟಿಯು  ಸುಮಾರು 1,406 ಪುಟಗಳನ್ನು ಒಳಗೊಂಡಿತ್ತು. ಅಲ್ಲದೇ ಈ   ಆರೋಪ ಪಟ್ಟಿಯು 78 ಪ್ರಮುಖ ದಾಖಲೆಗಳು, 38 ಸಾಕ್ಷ್ಯ ಹಾಗೂ 7 ಸಂಪುಟಗಳನ್ನು  ಹೊಂದಿತ್ತು.  ಇದಕ್ಕೂ ಮೊದಲು ಸಿಐಡಿ ಅಧಿಕಾರಿಗಳು   ಸುಮಾರು 3 ಸಾವಿರಕ್ಕೂ ಹೆಚ್ಚು ಪುಟಗಳ ಮೊದಲ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಆದರೆ ಈ  ಪ್ರಕರಣದ 35ನೇ ಆರೋಪಿಯಾಗಿರುವ ಅಮೃತ್‌ ಪೌಲ್‌ ಅವರ ಪಾತ್ರದ ಬಗ್ಗೆ ಪ್ರಸ್ತಾಪಿಸಿರಲಿಲ್ಲ. ಜುಲೈ 4ರಂದು ಪೌಲ್‌ ಬಂಧನವಾಗಿದ್ದು, ಆರಂಭದಲ್ಲಿ  14 ದಿನ ಅವರನ್ನು ತನಿಖೆಗಾಗಿ ಪೊಲೀಸ್‌ ಕಸ್ಟಡಿಗೆ ನ್ಯಾಯಾಲಯ ನೀಡಿತ್ತು. ಆನಂತರ ನ್ಯಾಯಾಂಗ ಬಂಧನದಲ್ಲಿದ್ದ ಪೌಲ್‌ ಅವರನ್ನು ಬೆಂಗಳೂರಿನ ರಾಮಮೂರ್ತಿ ನಗರ ಠಾಣೆಯಲ್ಲಿ ಪಿಎಸ್‌ಐ ಹಗರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ ಸೆಪ್ಟೆಂಬರ್‌ 5ರಿಂದ 12ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿತ್ತು. ಅಲ್ಲದೇ  ಪೌಲ್‌ ನ್ಯಾಯಾಂಗ ಬಂಧನದಲ್ಲಿದ್ದರು.

ಹಿರಿಯ ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ ತಮ್ಮ ವಿರುದ್ಧದ ಒಟ್ಟು ಏಳು ಆರೋಪ ಪಟ್ಟಿಗಳನ್ನು ವಜಾ ಮಾಡುವಂತೆ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.  ಅದೇ ರೀತಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಮತ್ತು ಸತ್ರ ನ್ಯಾಯಾಲಯಗಳು ಈಗಾಗಲೇ ಪೌಲ್‌ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ್ದವು.

ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ ಪಿ ನರಸಿಂಹ ಮೂರ್ತಿ ಅವರ ದೂರಿನ ಮೇರೆಗೆ ಐಪಿಸಿ ಸೆಕ್ಷನ್‌ 120B (ಕ್ರಿಮಿನಲ್‌ ಪಿತೂರಿ), 420 (ವಂಚನೆ), 465 (ನಕಲು), 468 (ವಂಚನೆಗೆ ವಿದ್ಯುನ್ಮಾನ ಸಾಧನ ಬಳಕೆ), 471 (ನಕಲಿ ದಾಖಲೆಯನ್ನು ನೈಜ ಎಂದು ಬಿಂಬಿಸುವುದು) ಜೊತೆಗೆ 34ರ (ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿ) ಅಡಿ ಆರೋಪಿಗಳ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು.  ಇದಕ್ಕೆ ಸಂಬಂಧಿಸಿದಂತೆ ಈಗ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು.

545 ಪಿಎಸ್‌ಐ ಹುದ್ದೆ ನೇಮಕಾತಿಗೆ ನಡೆದ ಪರೀಕ್ಷೆಯನ್ನು 54,287 ಅಭ್ಯರ್ಥಿಗಳು ಎದುರಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯು ಹಲವು ಮಂದಿಯನ್ನು ಬಂಧಿಸಿದೆ. ಹಗರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯ ಚೌಕ್‌ ಮತ್ತು ಸ್ಟೇಷನ್‌ ಬಜಾರ್‌ ಠಾಣೆ, ಬೆಂಗಳೂರಿನ ಹೈಗ್ರೌಂಡ್ಸ್‌ ಸೇರಿದಂತೆ ಹಲವು ಕಡೆ ಆರೋಪಿಗಳ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಮೃತ್‌ ಪೌಲ್‌ ಅವರು ಪ್ರಕರಣದಲ್ಲಿ 35ನೇ ಆರೋಪಿಯಾಗಿದ್ದಾರೆ. ಓಎಂಆರ್‌ ಶೀಟುಗಳನ್ನು ತಿರುಚುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂಬ ಆರೋಪಕ್ಕೆ ಗುರಿಯಾಗಿದ್ದ  ಡಿವೈಎಸ್‌ಪಿ ಶಾಂತಕುಮಾರ್‌, ಹಲವು ಪಿಎಸ್‌ಐಗಳು, ಮಧ್ಯವರ್ತಿಗಳು, ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಪಾತ್ರದ ಕುರಿತು ಆರೋಪಪಟ್ಟಿಯಲ್ಲಿ ವಿವರಿಸಿತ್ತು.

ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ ಪಿ ನರಸಿಂಹ ಮೂರ್ತಿ ಅವರ ದೂರಿನ ಮೇರೆಗೆ ಐಪಿಸಿ ಸೆಕ್ಷನ್‌ 120B (ಕ್ರಿಮಿನಲ್‌ ಪಿತೂರಿ), 420 (ವಂಚನೆ), 465 (ನಕಲು), 468 (ವಂಚನೆಗೆ ವಿದ್ಯುನ್ಮಾನ ಸಾಧನ ಬಳಕೆ), 471 (ನಕಲಿ ದಾಖಲೆಯನ್ನು ನೈಜ ಎಂದು ಬಿಂಬಿಸುವುದು) ಜೊತೆಗೆ 34ರ (ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿ) ಅಡಿ ಆರೋಪಿಗಳ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆಯೂ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು.

545 ಪಿಎಸ್‌ಐ ಹುದ್ದೆ ನೇಮಕಾತಿಗೆ ನಡೆದ ಪರೀಕ್ಷೆಯನ್ನು 54,287 ಅಭ್ಯರ್ಥಿಗಳು ಎದುರಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯು ಹಲವು ಮಂದಿಯನ್ನು ಬಂಧಿಸಿದೆ. ಹಗರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯ ಚೌಕ್‌ ಮತ್ತು ಸ್ಟೇಷನ್‌ ಬಜಾರ್‌ ಠಾಣೆ, ಬೆಂಗಳೂರಿನ ಹೈಗ್ರೌಂಡ್ಸ್‌ ಸೇರಿದಂತೆ ಹಲವು ಕಡೆ ಆರೋಪಿಗಳ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಲಾಗಿದೆ.

ಕಲಬುರ್ಗಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ವಿಚಾರಣಾಧೀನ ನ್ಯಾಯಾಲಯಕ್ಕೆ ಸುಮಾರು 2 ಸಾವಿರ ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದರು.

ಪಿಎಸ್‌ಐ ಹಗರಣದಲ್ಲಿ 35ನೇ ಆರೋಪಿಯಾಗಿರುವ ಒಎಂಆಎರ್‌ ಶೀಟುಗಳನ್ನು ತಿರುಚಲು ನೆರವಾದ ಆರೋಪ ಎದುರಿಸುತ್ತಿರುವ ಅಮೃತ್‌ ಪೌಲ್‌ ತಮ್ಮ ವಿರುದ್ಧದ ಒಂದು ಪ್ರಾಥಮಿಕ ಆರೋಪ ಪಟ್ಟಿ ಮತ್ತು ಆರು ಹೆಚ್ಚುವರಿ ಆರೋಪ ಪಟ್ಟಿ, ಎಫ್‌ಐಆರ್‌ ಹಾಗೂ ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆ ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದ್ದರು.  ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿತ್ತು.

ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ ಪಿ ನರಸಿಂಹ ಮೂರ್ತಿ ಅವರ ದೂರಿನ ಮೇರೆಗೆ ಅಮೃತ್‌ ಪೌಲ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 120(ಬಿ), 36, 37, 119, 409, 420, 465, 468, 471, 201 ಜೊತೆಗೆ ಸೆಕ್ಷನ್‌ 34 ಹಾಗೂ ಭ್ರಷ್ಟಾಚಾರ ನಿಷೇಧ ಕಾಯಿದೆ ಸೆಕ್ಷನ್‌ಗಳಾದ 7(ಎ) (ಸಿ), 7ಎ, 8, 13(1)(ಎ) ಜೊತೆಗೆ 13(2) ಅಡಿ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಪ್ರಕರಣದ ಸಂಬಂಧ 2022ರ ಜುಲೈ 4ರಂದು ಬಂಧಿತರಾಗಿದ್ದ ಪೌಲ್‌ ಅವರಿಗೆ ಹೈಕೋರ್ಟ್‌ 2023ರ ಸೆಪ್ಟೆಂಬರ್‌ 25ರಂದು ಜಾಮೀನು ಮಂಜೂರು ಮಾಡಿತ್ತು. ಈ ಮಧ್ಯೆ, ಹಗರಣಕ್ಕೆ ಸಂಬಂಧಿಸಿದಂತೆ 2023ರ ಜುಲೈನ ಕೊನೆಯ ವಾರದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಪುಟಗಳ ಮೊದಲ ಆರೋಪ ಪಟ್ಟಿಯನ್ನು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

 

ಎಡಿಜಿಪಿ ಅಮೃತ್‌ಪೌಲ್‌, ಐಎಎಸ್‌ ಮಂಜುನಾಥ್‌ ಅಮಾನತು; ಬಂಧನದ ಬೆನ್ನಲ್ಲೇ ಹೊರಬಿದ್ದ ಆದೇಶ

 

ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆ ನೇಮಕಾತಿಗೆ ನಡೆದ ಪರೀಕ್ಷೆಯನ್ನು 54,287 ಅಭ್ಯರ್ಥಿಗಳು ಎದುರಿಸಿದ್ದರು. ಇಲ್ಲಿ ಪ್ರಾವಿಷನಲ್‌ ಆಯ್ಕೆ ಪಟ್ಟಿಯಲ್ಲಿ ಹೆಸರು ಹೊಂದಿದ್ದ ಹಲವು ಅಭ್ಯರ್ಥಿಗಳು ವಿದ್ಯುನ್ಮಾನ ಸಾಧನಗಳು, ಆನಂತರ ಒಎಂಆರ್‌ ತಿರುಚುವ ಮೂಲಕ ಅನುಕೂಲ ಪಡೆದಿದ್ದರು ಎಂದು ಆರೋಪಿಸಲಾಗಿತ್ತು.

 

ಕ್ರೈಮ್‌ ಆಫೀಸರ್‌ ಹುದ್ದೆಗಳ ನೇಮಕಾತಿಯಲ್ಲೂ ಅಕ್ರಮ!; ಪೌಲ್‌ ಬಂಧನದ ಬೆನ್ನಲ್ಲೇ ಆಯ್ಕೆಪಟ್ಟಿ ಬಹಿರಂಗ

 

ಅಮೃತ್‌ ಪೌಲ್‌ ಅವರಿಗೆ 5 ಕೋಟಿ ರೂಪಾಯಿ ನೀಡಿದ್ದು,  ಹೀಗಾಗಿ ಅವರು ಪಿಎಸ್‌ಐ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಒಎಂಆರ್‌ ಕಿಟ್‌ಬಾಕ್ಸ್‌ಗಳನ್ನು ಇರಿಸಿದ್ದ ಅಲ್ಮೇರಾಗಳ ಕೀಗಳನ್ನು ನೀಡಿದ್ದು, ಇದನ್ನು ಬಳಸಿ ಒಎಂಆರ್‌ ತಿರುಚಿರುವುದಾಗಿ ಪೊಲೀಸ್‌ ನೇಮಕಾತಿ ವಿಭಾಗದಲ್ಲಿ ಉಪ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದ ಬಂಧಿತರಾಗಿ ಅಮಾನತುಗೊಂಡಿರುವ 31ನೇ ಆರೋಪಿ ಶಾಂತಕುಮಾರ್‌ ಹೇಳಿಕೆ ನೀಡಿದ್ದನ್ನು ಸ್ಮರಿಸಬಹುದು.

ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ನೇಮಕಾತಿ ಹಗರಣವನ್ನು ಬಹಿರಂಗಪಡಿಸುವಲ್ಲಿ ಮತ್ತು ಆಗಿನ ಬಿಜೆಪಿ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸುವಲ್ಲಿ ಕಾಂಗ್ರೆಸ್ ನಾಯಕರಾಗಿದ್ದ ಪ್ರಿಯಾಂಕ್ ಖರ್ಗೆ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಅವರು ಹಗರಣದ ಅಕ್ರಮಗಳ ಬಗ್ಗೆ ದಾಖಲೆಗಳು, ಆಡಿಯೋ ಕ್ಲಿಪ್‌ಗಳನ್ನು ಬಿಡುಗಡೆ ಮಾಡಿ, ನ್ಯಾಯಾಂಗ ತನಿಖೆಗೆ ಪಟ್ಟು ಹಿಡಿದಿದ್ದರು.  ಪಿಎಸ್‌ಐ ಪರೀಕ್ಷೆಯಲ್ಲಿ ಬೃಹತ್ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದ ಪ್ರಿಯಾಂಕ್ ಖರ್ಗೆ, ಅಭ್ಯರ್ಥಿಗಳು ಮತ್ತು ದಲ್ಲಾಳಿಗಳ ನಡುವಿನ ಆಡಿಯೋ ಸಂಭಾಷಣೆಗಳನ್ನು ಬಿಡುಗಡೆ ಮಾಡಿದ್ದರು. ಸುಮಾರು 300ಕ್ಕೂ ಹೆಚ್ಚು ಅಭ್ಯರ್ಥಿಗಳು ಲಕ್ಷಾಂತರ ರೂಪಾಯಿ ಲಂಚ ನೀಡಿ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ ಎಂದು ದೂರಿದ್ದರು.

ಪಿಎಸ್‌ಐ ನೇಮಕ ಹಗರಣ; ಡಿವೈಎಸ್ಪಿ ಶಾಂತಕುಮಾರ್ ಸೇರಿ ನಾಲ್ವರ ಅಮಾನತು ತೆರವುಗೊಳಿಸಿದ ಕಾಂಗ್ರೆಸ್‌ ಸರ್ಕಾರ

 

ಆದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಡಿವೈಎಸ್ಪಿ ಶಾಂತ ಕುಮಾರ್ ಅವರ ಅಮಾನತು ಆದೇಶವನ್ನು ತೆರವುಗೊಳಿಸಿದ್ದನ್ನು ಸ್ಮರಿಸಬಹುದು.

Hot this week

ಸುರಂಗ ಮಾರ್ಗ; ಅದಾನಿ ಎಂಟರ್ ಪ್ರೈಸೆಸ್‌ಗೆ ಬಿಟ್ಟಿ ರಿಯಲ್‌ ಎಸ್ಟೇಟ್‌ ಆದಾಯ ಭಾಗ್ಯ ಕರುಣಿಸಲಿದೆಯೇ ಸರ್ಕಾರ?

ಬೆಂಗಳೂರು; ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗೆ ಉದ್ದೇಶಿತ  ಸುರಂಗ ಮಾರ್ಗ ನಿರ್ಮಾಣದ ಹೆಸರಿನಲ್ಲಿ...

ಈಶಾ ಎಜುಕೇಷನ್, ಈಶಾ ಯೋಗ ಸೆಂಟರ್‍‌ಗೆ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆ, ದ್ರೋಹ ಆರೋಪ; ದಿ ಫೈಲ್ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಸರ್ಕಾರ

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...
Please Scan to make Your Contribution

Topics

ಸುರಂಗ ಮಾರ್ಗ; ಅದಾನಿ ಎಂಟರ್ ಪ್ರೈಸೆಸ್‌ಗೆ ಬಿಟ್ಟಿ ರಿಯಲ್‌ ಎಸ್ಟೇಟ್‌ ಆದಾಯ ಭಾಗ್ಯ ಕರುಣಿಸಲಿದೆಯೇ ಸರ್ಕಾರ?

ಬೆಂಗಳೂರು; ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗೆ ಉದ್ದೇಶಿತ  ಸುರಂಗ ಮಾರ್ಗ ನಿರ್ಮಾಣದ ಹೆಸರಿನಲ್ಲಿ...

ಈಶಾ ಎಜುಕೇಷನ್, ಈಶಾ ಯೋಗ ಸೆಂಟರ್‍‌ಗೆ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆ, ದ್ರೋಹ ಆರೋಪ; ದಿ ಫೈಲ್ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಸರ್ಕಾರ

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...

ಏತ ನೀರಾವರಿ ಯೋಜನೆಗೆ ಭೂ ಸ್ವಾಧೀನ; ಅಭಿವೃದ್ಧಿ ಹೊಂದಿದ ಜಮೀನುಗಳ ಸರ್ವೇ ನಂಬರ್‍‌ ವಿವರಣೆ ನೀಡದ ಅಧಿಕಾರಿವರ್ಗ

ಬೆಂಗಳೂರು; ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗುತ್ತಿಹೊಳೆ ಗ್ರಾಮದಲ್ಲಿ ವೀರಭದ್ರೇಶ್ವರ ಏತ...

Related Articles

Popular Categories

error: Content is protected !!