Saturday | October 3, 2026 |

ಹಿಂದುಳಿದ ಸಮುದಾಯ ಅಭಿವೃದ್ಧಿ ನಿಗಮಗಳಿಗೆ 473.41 ಕೋಟಿ ಅನುದಾನ ಹಂಚಿಕೆ; ನಾಲ್ಕೂವರೆ ತಿಂಗಳಾದರೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ

ಬೆಂಗಳೂರು; ಆರ್ಥಿಕ ವರ್ಷ ಆರಂಭವಾಗಿ ನಾಲ್ಕೂವರೆ ತಿಂಗಳಾದರೂ ಸಹ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿನ ಸಮುದಾಯ ಅಭಿವೃದ್ಧಿ ನಿಗಮಗಳಿಗೆ ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಹೀಗೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯೇ ವಿಧಾನ ಪರಿಷತ್‌ನಲ್ಲಿ ಲಿಖಿತ ಉತ್ತರದ ಮೂಲಕ ಒಪ್ಪಿಕೊಂಡಿದೆ.

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ  ಚುನಾಯಿತರಾಗಿರುವ ಆರ್ ರಘು ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಶಿವರಾಜ್ ತಂಗಡಗಿ ಅವರು ಈ ಕುರಿತು ಮಾಹಿತಿ ಒದಗಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಒಟ್ಟು 17 ಸಮುದಾಯ ಅಭಿವೃದ್ಧಿ ನಿಗಮಗಳು ಕಾರ್ಯನಿರ್ವಹಿಸುತ್ತಿವೆ. 2026-27ನೇ ಸಾಲಿಗೆ ಈ 17 ಅಭಿವೃದ್ದಿ ನಿಗಮಗಳಿಗೆ ಒಟ್ಟಾರೆ 473.41 ಕೋಟಿ ರು ಅನುದಾನ ಹಂಚಿಕೆಯಾಗಿತ್ತು. ಈ ಅನುದಾನ ಹಂಚಿಕೆಯಾಗಿ ನಾಲ್ಕೂವರೆ ತಿಂಗಳಾದರೂ ಸಹ ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲ. ಹೀಗಾಗಿ ಸಮುದಾಯ ಅಭಿವೃದ್ಧಿ ನಿಗಮಗಳ ಯೋಜನೆಗಳ ಅನುಷ್ಟಾನದ ಪ್ರಕ್ರಿಯೆಗಳೇ ಕುಂಠಿತಗೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಅಲ್ಲದೇ ಡಿ ದೇವರಾಜ ಅರಸು ಕಾಯಕ ಕಿರಣ, ಸಹಜೀರಾಜೇ ಸಮೃದ್ಧಿ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ, ಜೀವಜಲ, ಜೀಜಾವು ಭಗೀರಥ ನೀರಾವರಿ ಯೋಜನೆ, ಅರಿವು ಬಸವ ಬೆಳಗು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹು ಮಹಾರಾಜ/ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಬಡ್ಡಿ ರಹಿತ ಸಾಲ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ, ಸ್ವಾತಂತ್ರ ಅಮೃತ ಮಹೋತ್ಸವ ಮುನ್ನಡೆ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಯೋಜನೆ, ಇಸ್ತ್ರಿ ಪೆಟ್ಟಿಗೆ ವಿತರಣೆ, ಮೌಲ್ಯಾಧಾರಿತ ಉತ್ಪನ್ನಗಳ ತಯಾರಿಕೆ ಯೋಜನೆಗಳ ಅನುಷ್ಠಾನಕ್ಕೆ ಸೂಕ್ತ ಕಾಲಕ್ಕೆ ಅನುದಾನ ಬಿಡುಗಡೆಯಾಗಿಲ್ಲ.

ಅದೇ ರೀತಿ 2026-27ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ 250 ಇಂಜಿನಿಯರಿಂಗ್‌ ಪದವೀಧರರಿಗೆ ಅವರ ತಾಂತ್ರಿಕ ಕೌಶಲ್ಯವನ್ನು  ಉತ್ಕೃಷ್ಟಗೊಳಿಸಲು ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಎನ್‌ಐಟಿ, ಐಐಟಿ, ಐಐಎಂಗಳಲ್ಲಿ ಎ ಐ ತರಬೇತಿ ಪಡೆಯಲು ತಲಾ 2 ಲಕ್ಷ ರುಗಳಂತೆ ಸಾಲ ನೀಡಲಾಗುವುದು ಎಂದು ಆಯವ್ಯಯ (ಕಂಡಿಕೆ 211)ದಲ್ಲಿ ಘೋಷಿಸಿದ್ದರು. ಅದೇ ರೀತಿ ಬೆಂಗಳೂರು ಮೈಸೂರು ನಗರದ ದೋಬಿಘಾಟ್‌ಗಳಲ್ಲಿ ಮಡಿವಾಳ ಸಮಾಜದವರಿಗೆ ವಾಷಿಂಗ್‌ ಮೆಷೀನ್, ಡ್ರೈಯರ್, ಐರನಿಂಗ್ ಮಷೀನ್ ಇತ್ಯಾದಿ ಸಾಮಗ್ರಿಗಳನ್ನು ಒಳಗೊಂಡ 75 ಲಕ್ಷ ರು ಘಟಕ ವೆಚ್ಚದಲ್ಲಿ ಆಧುನಿಕ ಲ್ಯಾಂಡ್ರಿಗಳನ್ನು ಸ್ಥಾಪಿಸಲಾಗುವುದು ಎಂದು ಆಯವ್ಯಯ (ಘೋಷಣೆ ಕಂಡಿಕೆ 208)ರಲ್ಲಿ ಘೋಷಿಸಿತ್ತು.

 

 

ಹಾಗೆಯೇ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗಕ್ಕಾಗಿ ಆಧುನಿಕ ಲ್ಯಾಂಡ್ರಿಗಳನ್ನು ಸ್ಥಾಪಿಸಲು 5 ಲಕ್ಷ ರು ಗಳನ್ನು ಶೇ. 4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು ಎಂದು ಘೋಷಿಸಿದ್ದರು. ಸವಿತಾ ಸಮಾಜದವರು ಸಲೂನ್‌ಗಳನ್ನು ತೆರೆಯಲು ಶೇ. 4ರ ಬಡ್ಡಿ ದರದಲ್ಲಿ  10 ಲಕ್ಷ ವರೆಗೆ ಸಾಲ ಮತ್ತು ಸಹಾಯಧನ ಮಂಜೂರು ಮಾಡಲಾಗುವುದು ಎಂದು ಘೋಷಿಸಿತ್ತು.

 

 

ಈ ಎಲ್ಲಾ ಯೋಜನೆಗಳಿಗೆ ಸಂಬಂಧಿಸಿದಂತೆ ನಿಗಮಗಳು ವಾರ್ಷಿಕ ಕ್ರಿಯಾ ಯೋಜನೆ ರೂಪಿಸಿ ಸರ್ಕಾರದ ಅನುಮೋದನೆಗೆ ಸಲ್ಲಿಸಿವೆ.

 

 

ಆದರೂ ಅನುದಾನದ ಪೈಕಿ ನಯಾ ಪೈಸೆಯನ್ನೂ ನೀಡಿಲ್ಲ. ಹೀಗಾಗಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯೇ ನಡೆದಿಲ್ಲ ಎಂದು ತಿಳಿದು ಬಂದಿದೆ.

 

 

ಯಾವ್ಯಾವ ನಿಗಮಕ್ಕೆ ಎಷ್ಟೆಷ್ಟು?

ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ 129.50 ಕೋಟಿ ರು., ಕರ್ನಾಟಕ ಉಪ್ಪಾರ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ 11 ಕೋಟಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ 17.88 ಕೋಟಿ, ಕರ್ನಾಟಕ ನಿಜಶರಣರ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ 6.88 ಕೋಟಿ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ 16.50 ಕೋಟಿ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ  82.50 ಕೋಟಿ, ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ 82.50 ಕೋಟಿ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮಕ್ಕೆ 6.88 ಕೋಟಿ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮಕ್ಕೆ 12.38 ಕೋಟಿ, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ  20.63 ಕೋಟಿ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ 68.75 ಕೋಟಿ, ಕರ್ನಾಟಕ ತಿಗಳ ಸಮುದಾಯ ಅಭಿವೃದ್ಧಿ ನಿಗಮಕ್ಕೆ 2 ಕೋಟಿ ರು ಅನುದಾನ ಹಂಚಿಕೆಯಾಗಿತ್ತು.

 

 

ಅದೇ ರೀತಿ ಕರ್ನಾಟಕ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮಕ್ಕೆ 2 ಕೋಟಿ, ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮಕ್ಕೆ 2 ಕೋಟಿ, ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ 10.01 ಕೋಟಿ, ಕರ್ನಾಟಕ ರಾಜ್ಯ ಕೊಡವ ಅಭಿವೃದ್ಧಿ ನಿಗಮಕ್ಕೆ 2 ಕೋಟಿ ರು ಅನುದಾನ ಹಂಚಿಕೆಯಾಗಿತ್ತು. ಒಟ್ಟು 17 ಸಮುದಾಯ ಅಭಿವೃದ್ಧಿ ನಿಗಮಗಳಿಗೆ ಒಟ್ಟಾರೆ 473.41 ಕೋಟಿ ರು ಅನುದಾನ ಹಂಚಿಕೆಯಾಗಿತ್ತು. ಇದುವರೆಗೂ ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲ.

 

ಅಧ್ಯಕ್ಷರೇ ಇಲ್ಲದ ಹಿಂದುಳಿದ ವರ್ಗಗಳ 8 ನಿಗಮಗಳಲ್ಲಿ ಬಾಕಿ ಉಳಿದಿದೆ 72.55 ಕೋಟಿ ಅನುದಾನ

 

2025ರ ಸೆಪ್ಟಂಬರ್ ಅಂತ್ಯಕ್ಕೆ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳ ಪೈಕಿ 8 ನಿಗಮಗಳಲ್ಲಿ 72.55 ಕೋಟಿ ರುಪಾಯಿ ಅನುದಾನ ಬಳಕೆಯಾಗದೇ ಹಾಗೇ ಉಳಿದಿತ್ತು. ಈ ಕುರಿತು ದಿ ಫೈಲ್‌ 2025ರ ಸೆ.11ರಂದು ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

Hot this week

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...

ವಿಮಾ ಕಂಪನಿಯಿಂದ ಹಣ ಬಂದಿದೆ, ಆದರೆ ರೈತರ ಖಾತೆಗಳಿಗೆ ಜಮೆಯೇ ಆಗಿಲ್ಲ; ಬರಗಾಲದ ನಡುವೆಯೇ ರೈತರಿಗೆ ಮತ್ತೊಂದು ಬರೆ

ಬೆಂಗಳೂರು;  ರಾಜ್ಯದಾದ್ಯಂತ ತೀವ್ರ ಬರಗಾಲ ಎದುರಾಗಿರುವ ನಡುವೆಯೇ  2025-26ನೇ ಮುಂಗಾರು ಹಂಗಾಮಿನ...
Please Scan to make Your Contribution

Topics

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...

ವಿಮಾ ಕಂಪನಿಯಿಂದ ಹಣ ಬಂದಿದೆ, ಆದರೆ ರೈತರ ಖಾತೆಗಳಿಗೆ ಜಮೆಯೇ ಆಗಿಲ್ಲ; ಬರಗಾಲದ ನಡುವೆಯೇ ರೈತರಿಗೆ ಮತ್ತೊಂದು ಬರೆ

ಬೆಂಗಳೂರು;  ರಾಜ್ಯದಾದ್ಯಂತ ತೀವ್ರ ಬರಗಾಲ ಎದುರಾಗಿರುವ ನಡುವೆಯೇ  2025-26ನೇ ಮುಂಗಾರು ಹಂಗಾಮಿನ...

ಪ್ರಿಂಟರ್, ಸ್ಕ್ಯಾನರ್ ಕೂಡ ಲಭ್ಯವಿಲ್ಲ, ಇ-ಮೇಲ್‌ ಮಾಡಲೂ ಕಷ್ಟಸಾಧ್ಯ; ಸರ್ಕಾರದ ಆರ್ಥಿಕ ಪರಿಸ್ಥಿತಿ ತೆರೆದಿಟ್ಟ ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ

ಬೆಂಗಳೂರು; ಚಾಲ್ತಿಯಲ್ಲಿರುವ ಮತ್ತು ಹೊಸ ಯೋಜನೆಗಳಿಗೆ ಅನುದಾನ ಹೊಂದಿಸಲು ಏದುಸಿರು ಬಿಡುತ್ತಿರುವ...

ಗೃಹಲಕ್ಷ್ಮಿ; 2,660.26 ಕೋಟಿ ಬಿಡುಗಡೆಗೆ ಸಹಮತಿಸಿದ್ದ ಆರ್ಥಿಕ ಇಲಾಖೆಯಲ್ಲಿ ಕಡತವೇ ಲಭ್ಯವಿಲ್ಲ, ಮುಚ್ಚಿಡಲಾಗಿದೆಯೇ, ನಾಪತ್ತೆ ಮಾಡಲಾಗಿದೆಯೇ?

ಬೆಂಗಳೂರು;  2024-25ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯ ವಲಯದ ಲೆಕ್ಕ ಶೀರ್ಷಿಕೆಯಡಿಯಲ್ಲಿ...

Related Articles

Popular Categories

error: Content is protected !!