Wednesday | November 4, 2026 |

ಗೆಜೆಟೆಡ್ ಪ್ರೊಬೇಷನರ್ಸ್‌ಗಳಿಗೆ ಅದೇಶ ಪತ್ರ ನೀಡಲು ಮುರುಘಾ, ಸಿದ್ದಗಂಗಾ ಮಠ ಶ್ರೀಗಳ ಮಧ್ಯ ಪ್ರವೇಶ; ಪತ್ರಗಳು ಬಹಿರಂಗ

ಬೆಂಗಳೂರು; ಗೆಜೆಟೆಡ್ ಪ್ರೊಬೇಷನರ್ಸ್‌ 2011ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ವಿಶೇಷ ಮಸೂದೆ ತರಲು ತರಳಬಾಳು ಮಠದಲ್ಲಿ ಅಂದಿನ ಮುಖ್ಯಮಂತ್ರಿ ಮತ್ತು ಸಚಿವರೊಂದಿಗೆ  ಚರ್ಚಿಸಲಾಗಿತ್ತು ಎಂದು ತರಳಬಾಳು ಪೀಠದ ಶ್ರೀಗಳು ಹೇಳಿದ್ದ ಮಾತುಗಳು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠ ಮತ್ತು ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳು ಸಹ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬರೆದಿದ್ದ  ಪತ್ರಗಳು ಬಹಿರಂಗವಾಗಿವೆ.

2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರ್ಸ್‌ ಹುದ್ದೆಗಳಿಗೆ ನಡೆದಿದ್ದ ಪರೀಕ್ಷೆಯಲ್ಲಿ  ಗಂಭೀರ ಸ್ವರೂಪದ ಅಕ್ರಮಗಳು ನಡೆದಿವೆ ಎಂದು ಸಿಐಡಿ ತನಿಖಾ ತಂಡವು ಹೊರಗೆಡವಿತ್ತು. ಹೀಗಾಗಿ ಈ ಸಾಲಿನಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ ನೇಮಕ ಆದೇಶ ಹೊರಡಿಸಿರಲಿಲ್ಲ. ಹೀಗಾಗಿ ಅಭ್ಯರ್ಥಿಗಳು ನಾಡಿನ ಪ್ರಸಿದ್ಧ ಮಠಗಳ ಮಠಾಧೀಪತಿಗಳ ಮೊರೆ ಹೊಕ್ಕಿದ್ದರು. ಮಠಾಧೀಪತಿಗಳು ಸಹ ಅಂದು ಮುಖ್ಯಮಂತ್ರಿಯಾಗಿದ್ದ ಬಿ ಎಸ್‌ ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದಿದ್ದರು.

ಈ ಎರಡೂ ಪತ್ರಗಳು ದಿ ಫೈಲ್‌ ಗೆ ಲಭ್ಯವಾಗಿವೆ.

ಮುರುಘಾ ಮಠದ ಶ್ರೀಗಳ ಪತ್ರದಲ್ಲೇನಿದೆ?

2011ನೇ ಸಾಲಿನಲ್ಲಿ 362 ಗೆಜೆಟೆಡ್‌ ಪ್ರೊಬೇಷನರ್ಸ್‌ಗಳ ಆಯ್ಕೆಗೆ ಸಂಬಂಧಿಸಿದಂತೆ ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದೆ. ಕೆಪಿಎಸ್‌ಸಿಯು ಪೂರ್ವಭಾವಿ, ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ಪರೀಕ್ಷೆ ನಡೆಸಿದೆ. 2013ರಲ್ಲಿ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಿ ಸರ್ಕಾರಕ್ಕೆ ಕಳಿಸಿದೆ. ಆದರೆ 2013ರ ಮೇ ತಿಂಗಳಿನಲ್ಲಿ ಹೊಸದಾಗಿ ಬಂದ ಸರ್ಕಾರವು 2011ರಲ್ಲಿ ಕೆಪಿಎಸ್‌ಸಿಗೆ ನೀಡಿದ್ದ ನೇಮಕಾತಿ ಪ್ರಸ್ತಾವನೆಯನ್ನು ಹಿಂಪಡೆದಿದೆ. ಅಲ್ಲದೇ 2011ನೇ ಸಾಲಿನ ಗೆಜೆಟೆಡ್‌ ಪ್ರೊಬೇ‍ಷನರ್ಸ್‌ ಆಯ್ಕೆ ಪಟ್ಟಿಯನ್ನು ವಜಾ ಮಾಡಿದೆ ಎಂದು ಯಡಿಯೂರಪ್ಪ ಅವರಿಗೆ ಬರೆದಿದ್ದ ಪತ್ರದಲ್ಲಿ ಮುರುಘಾ ಮಠದ ಶ್ರೀಗಳು ಗಮನಸೆಳೆದಿರುವುದು ತಿಳಿದು ಬಂದಿದೆ.

2011ನೇ ಸಾಲಿನ ತಂಡದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯಲ್ಲಿ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ನಿರ್ಧಾರವನ್ನು ಆಡಳಿತ ನ್ಯಾಯಮಂಡಳಿಯು ಕೂಲಂಕುಷವಾಗಿ ಪರಿಶೀಲಿಸಿದೆ. ಅಲ್ಲದೇ ಕರ್ನಾಟಕ ಸರ್ಕಾರವು ಮಾಡಿದ್ದ ಆದೇಶವನ್ನು ವಜಾಗೊಳಿಸಿದೆ. 362 ಅಭ್ಯರ್ಥಿಗಳಿಗೆ ಉದ್ಯೋಗದ ಆದೇಶ ಪತ್ರವನ್ನು ಎರಡು ತಿಂಗಳ ಒಳಗಾಗಿ ನೀಡಬೇಕು ಎಂದು ನಿರ್ದೇಶನ ನೀಡಿದೆ ಎಂದು ಪತ್ರದಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

 

ಕರ್ನಾಟಕ ಆಡಳಿತ ನ್ಯಾಯಮಂಡಳಿಯ ಆದೇಶವನ್ನು ಪಾಲಿಸಿ  ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ. ಈ ಅಭ್ಯರ್ಥಿಗಳು 10 ತಿಂಗಳು ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿರುತ್ತಾರೆ. ನಂತ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿ ಮೊಕದ್ದಮೆ ಹೂಡಿದ್ದಾರೆ. ಇದಾದ ನಂತರ ಕರ್ನಾಟಕ ಹೈಕೋರ್ಟ್‌ ಕೂಡ ಕರ್ನಾಟಕ ಆಡಳಿತ ನ್ಯಾಯಮಂಡಳಿಯ ಆದೇಶವನ್ನು ವಜಾಗೊಳಿಸಿದೆ ಎಂದು ಮುರುಘಾ ಮಠವು ಸರ್ಕಾರದ ಗಮನಸೆಳೆದಿರುವುದು ತಿಳಿದು ಬಂದಿದೆ.

ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಆಯ್ಕೆಯಾದ ಕೆಲವು ಅಭ್ಯರ್ಥಿಗಳು ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಆ ಅರ್ಜಿಯು ತಾಂತ್ರಿಕ ಕಾರಣಗಳಿಂದ ಅಲ್ಲಿಯೂ ತಿರಸ್ಕೃತವಾಗಿದೆ. ‘ಆದ್ದರಿಂದ ತಾವುಗಳು 2011ನೇ ಸಾಲಿನಲ್ಲಿ ಗೆಜೆಟೆಡ್‌ ಪ್ರೊಬೇಷನರ್ಸ್‌ಗಳಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿಯ ಆದೇಶದಂತೆ ಕಾನೂನಾತ್ಮಕವಾಗಿ ಮತ್ತು ಸಂವಿಧಾನಾತ್ಮಕವಾಗಿ ಪರಿಶೀಲನೆ ಮಾಡಬೇಕು. ಮತ್ತು ನೊಂದ ಅಭ್ಯರ್ಥಿಗಳಿಗೆ ಶೀಘ್ರವಾಗಿ ನೇಮಕಾತಿ ಆದೇಶ ನೀಡಬೇಕು,’ ಎಂದು ಮುರುಘಾ ಮಠದ ಶ್ರೀಗಳು ಕೋರಿರುವುದು ಪತ್ರದಿಂದ ಗೊತ್ತಾಗಿದೆ.

 

 

ಅದೇ ರೀತಿ ಸಿದ್ದಗಂಗಾ ಮಠದ ಶ್ರೀಗಳು ಸಹ ಅಂದು ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಕಾನೂನು ಸಚಿವರಾಗಿದ್ದ ಜೆ ಸಿ ಮಾಧುಸ್ವಾಮಿ ಅವರಿಗೂ ಪತ್ರ ಬರೆದಿದ್ದರು.

ಸಿದ್ದಗಂಗಾ ಮಠದ ಶ್ರೀಗಳ ಪತ್ರದಲ್ಲೇನಿದೆ?

2011ರಲ್ಲಿ ನಡೆದ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈವರೆಗೆ ಹುದ್ದೆ ನೀಡಿ ಅನುಕೂಲ ಮಾಡಿಕೊಟ್ಟಿರುವುದಿಲ್ಲ ಎಂದು ಆಯ್ಕೆಯಾದ ಅಭ್ಯರ್ಥಿಗಳು ಮನವಿ ಮಾಡಿದ್ದಾರೆ. ಈ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳು ಕಳೆದ 7 ವರ್ಷಗಳಿಂದ ಸತತ ಪ್ರಯತ್ನ ಮಾಡಿದರೂ ಸಹ ಅನುಕೂಲವಾಗಿಲ್ಲ. ಹಾಗೂ ಈ ಬಗ್ಗೆ ಸರ್ಕಾರದಲ್ಲಿ ಕಡತವಿದೆ ಎಂದು ಮನವಿ ಮಾಡಿದ್ದಾರೆ. ಈ ಕಡತವನ್ನು ಪರಿಶೀಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನ್ಯಾಯಸಮ್ಮತವಾಗಿ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

 

 

‘ದಯಮಾಡಿ ಈ ಕಡತವನ್ನು ಪರಿಶೀಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಟ್ಟರೆ ತುಂಬಾ ಸಂತೋಷ,’ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮಿಗಳು ಪತ್ರದಲ್ಲಿ ಹೇಳಿರುವುದು ತಿಳಿದು ಬಂದಿದೆ.

ಇದೇ ಪತ್ರದಲ್ಲಿ ಅಂಶಗಳನ್ನು ಜೆ ಸಿ ಮಾಧುಸ್ವಾಮಿ ಅವರಿಗೆ ಬರೆದಿರುವ ಪತ್ರದಲ್ಲಿ ಪುನರುಚ್ಛರಿಸಿರುವುದು ಗೊತ್ತಾಗಿದೆ.

 

 

ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ  ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರೂ ನೇಮಕಾತಿ ಆದೇಶ ಹೊರಡಿಸಬೇಕು ಎಂದು ಟಿಪ್ಪಣಿ ಹಾಕಿದ್ದರು.

 

2011ರ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಮುನ್ನೆಲೆಗೆ ಬಂದ ಎಚ್‌ಡಿಡಿ, ಎಚ್‌ಡಿಕೆ ಟಿಪ್ಪಣಿ

 

2011ನೇ ಸಾಲಿನ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳ ಕನಸು ನುಚ್ಚು ನೂರಾಗಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಪೀಠವು ಈಚೆಗಷ್ಟೇ ಹೊರಡಿಸಿದ್ದ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿತ್ತು. ಅಲ್ಲದೇ 2021-22ರಲ್ಲಿ ಮುಖ್ಯಮಂತ್ರಿಯಾಗಿದ್ದ  ಬಸವರಾಜ ಬೊಮ್ಮಾಯಿ ಅವರು ಜಾರಿಗೊಳಿಸಿದ್ದ ವಿಶೇಷ ಮಸೂದೆಯನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿತ್ತು. ಈ ಬೆಳವಣಿಗೆ ನಡುವೆಯೇ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರೂ ಇದೇ ಸಾಲಿನಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಹೊರಡಿಸಿದ್ದ ಟಿಪ್ಪಣಿಯು ಮುನ್ನೆಲೆಗೆ ಬಂದಿದ್ದವು.

 

2011ರ ಕೆಎಎಸ್ ಅಧಿಕಾರಿಗಳ ನೇಮಕಕ್ಕೆ ವಿಶೇಷ ಕಾಯ್ದೆ; ಮಠದಲ್ಲಿ ನಡೆದಿತ್ತು 6 ಗಂಟೆ ಚರ್ಚೆ, ಚರ್ಚೆಗೆ ಗ್ರಾಸವಾದ ತರಳಬಾಳು ಶ್ರೀ ಭಾಷಣ

 

ಅಲ್ಲದೇ ತರಳಬಾಳು ಮಠದ ಸಿರಿಗೆರೆ ಶ್ರೀಗಳು ಸಹ ಆಯ್ಕೆಯಾದ ಅಭ್ಯರ್ಥಿಗಳ ರಕ್ಷಣೆಗೆ ಮುಂದಾಗಿದ್ದರು. ಅಲ್ಲದೇ ವಿಶೇಷ ಮಸೂದೆ ಹಿಂದಿನ ಬೆಳವಣಿಗೆಗಳನ್ನು ತರಳಬಾಳು ಉತ್ಸವದಲ್ಲಿ ಮಾತನಾಡಿದ್ದು ಚರ್ಚೆಗೆ ಗ್ರಾಸವಾಗಿದ್ದನ್ನು ಸ್ಮರಿಸಬಹುದು.

Hot this week

54,059.8 ಕೋಟಿ ರು ಮೊತ್ತದ 1,962 ಯೋಜನೆ; ಮುಖ್ಯಮಂತ್ರಿ ಸಚಿವಾಲಯಕ್ಕೇ ಮಾಹಿತಿ ಒದಗಿಸದ 23 ಇಲಾಖೆಗಳು

ಬೆಂಗಳೂರು; ರಾಜ್ಯದಲ್ಲಿ ಅನುಷ್ಠಾನಗೊಂಡಿರುವ ಒಟ್ಟು 78,490.4 ಕೋಟಿ ರು ಮೊತ್ತದ  2,867...

2011ರ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಮುನ್ನೆಲೆಗೆ ಬಂದ ಎಚ್‌ಡಿಡಿ, ಎಚ್‌ಡಿಕೆ ಟಿಪ್ಪಣಿ

ಬೆಂಗಳೂರು; ಗೆಜೆಟೆಡ್ ಪ್ರೊಬೇಷನರ್ಸ್‌ 2011ನೇ ಸಾಲಿನ ನೇಮಕಾತಿಯಲ್ಲಿ ಗಂಭೀರ ಸ್ವರೂಪದ ಅಕ್ರಮಗಳು...

ಸಾರ್ವಜನಿಕರ ಕುಂದುಕೊರತೆ; ನಿಗದಿತ ಅವಧಿಯೊಳಗೆ ಇತ್ಯರ್ಥವಾಗದ 10,313 ದೂರರ್ಜಿ, ಪ್ರಜಾಸೇವೆ ಅಭಿಯಾನಕ್ಕೂ ಕಿಮ್ಮತ್ತಿಲ್ಲ, ಸಿಎಂ ಇಲಾಖೆಯಲ್ಲೇ ಗಂಭೀರ ನಿರ್ಲಕ್ಷ್ಯ

ಬೆಂಗಳೂರು; ಸರ್ಕಾರಿ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಿರುವ ವಿವಿಧ ಸೇವೆಗಳಲ್ಲಿನ ನ್ಯೂನತೆ  ಮತ್ತು...
Please Scan to make Your Contribution

Topics

54,059.8 ಕೋಟಿ ರು ಮೊತ್ತದ 1,962 ಯೋಜನೆ; ಮುಖ್ಯಮಂತ್ರಿ ಸಚಿವಾಲಯಕ್ಕೇ ಮಾಹಿತಿ ಒದಗಿಸದ 23 ಇಲಾಖೆಗಳು

ಬೆಂಗಳೂರು; ರಾಜ್ಯದಲ್ಲಿ ಅನುಷ್ಠಾನಗೊಂಡಿರುವ ಒಟ್ಟು 78,490.4 ಕೋಟಿ ರು ಮೊತ್ತದ  2,867...

2011ರ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಮುನ್ನೆಲೆಗೆ ಬಂದ ಎಚ್‌ಡಿಡಿ, ಎಚ್‌ಡಿಕೆ ಟಿಪ್ಪಣಿ

ಬೆಂಗಳೂರು; ಗೆಜೆಟೆಡ್ ಪ್ರೊಬೇಷನರ್ಸ್‌ 2011ನೇ ಸಾಲಿನ ನೇಮಕಾತಿಯಲ್ಲಿ ಗಂಭೀರ ಸ್ವರೂಪದ ಅಕ್ರಮಗಳು...

2011ರ ಕೆಎಎಸ್ ಅಧಿಕಾರಿಗಳ ನೇಮಕಕ್ಕೆ ವಿಶೇಷ ಕಾಯ್ದೆ; ಮಠದಲ್ಲಿ ನಡೆದಿತ್ತು 6 ಗಂಟೆ ಚರ್ಚೆ, ಚರ್ಚೆಗೆ ಗ್ರಾಸವಾದ ತರಳಬಾಳು ಶ್ರೀ ಭಾಷಣ

ಬೆಂಗಳೂರು;  ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ್ದ 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ...

Related Articles

Popular Categories

error: Content is protected !!