Thursday | June 11, 2026 |

ಕದ್ದುಮುಚ್ಚಿ ಪಿಯು ಪಠ್ಯ ಪರಿಷ್ಕರಿಸಲು ಹೊರಟಿದ್ದನ್ನು ಹೊರಗೆಳೆದಿದ್ದೇ ‘ದಿ ಫೈಲ್‌’-ವಾರ್ತಾಭಾರತಿ

ಬೆಂಗಳೂರು; ದ್ವಿತೀಯ ಪಿಯುಸಿ ಇತಿಹಾಸದ 4.2 ಅಧ್ಯಾಯದಲ್ಲಿದ್ದ ಹೊಸ ಧರ್ಮದ ಉದಯಗಳು ಎಂಬ ಪಾಠವನ್ನು ಗುಟ್ಟಾಗಿ ಪರಿಷ್ಕರಿಸಲು ರೋಹಿತ್‌ ಚಕ್ರತೀರ್ಥ ಸಮಿತಿಗೆ ವಹಿಸಲಾಗಿದೆ ಎಂದು ದಾಖಲೆ ಸಮೇತ ‘ದಿ ಫೈಲ್‌’ ಹೊರಗೆಳೆದ ನಂತರ ಇದೀಗ ಸರ್ಕಾರವು ಪಿಯು ಪಠ್ಯ ಪರಿಷ್ಕರಣೆ ನಿರ್ಧಾರವನ್ನೂ ಹಿಂಪಡೆದಿದೆ.

 

ಆರರಿಂದ ಹತ್ತನೇ ತರಗತಿಯ ಸಮಾಜ ವಿಜ್ಞಾನ ಮತ್ತು ಭಾಷಾ ವಿಷಯಗಳ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿಗೇ ಪಿಯುಸಿ ಇತಿಹಾಸ ಪಠ್ಯವನ್ನೂ ಪರಿಷ್ಕರಿಸಲು ಸದ್ದಿಲ್ಲದೇ ವಹಿಸಿತ್ತು. ಇದನ್ನು ‘ದಿ ಫೈಲ್‌’ ಮತ್ತು ವಾರ್ತಾಭಾರತಿ 2022ರ ಮೇ 23ರಂದೇ ಬಹಿರಂಗಗೊಳಿಸಿತ್ತು.

ಪಿಯು ಇತಿಹಾಸ ಪಠ್ಯಪುಸ್ತಕ ಪರಿಷ್ಕರಣೆ; ರೋಹಿತ್‌ ಚಕ್ರತೀರ್ಥ ಸಮಿತಿಗೆ ವಹಿಸಲು ಸೂಚನೆ

ಕುವೆಂಪು ಅವರ ಅವಹೇಳನ ಮತ್ತು ಬಸವೇಶ್ವರ ಕುರಿತು ತಪ್ಪು ಮಾಹಿತಿಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸಿ ಪರಿಷ್ಕರಿಸಿದ್ದ ರೋಹಿತ್‌ ಚಕ್ರತೀರ್ಥ ವಿರುದ್ಧ ಇಡೀ ರಾಜ್ಯವೇ ತಿರುಗಿ ಬಿದ್ದಿದ್ದ ಕಾರಣ ಇದೀಗ ಸಚಿವ ಬಿ ಸಿ ನಾಗೇಶ್‌ ಅವರು ಪಿಯು ಪಠ್ಯ ಪರಿಷ್ಕರಣೆಯೂ ಇಲ್ಲ ಮತ್ತು ಚಕ್ರತೀರ್ಥ ಸಮಿತಿಗೆ ನೀಡಿದ್ದ ಜವಾಬ್ದಾರಿಯನ್ನೂ ಹಿಂಪಡೆದಿದೆ ಎಂದು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.

 

ಟಿಪ್ಪಣಿಯಲ್ಲೇನಿತ್ತು?

 

ಪದವಿಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಇತಿಹಾಸ ವಿಭಾಗಕ್ಕೆ ನಿಗದಿಪಡಿಸಿದ ಭಾರತದ ಇತಿಹಾಸ (ಕರ್ನಾಟಕ ವಿಶೇಷ ಉಲ್ಲೇಖದೊಂದಿಗೆ) ಪಠ್ಯಪುಸ್ತಕದ 4.2ನೇ ಅಧ್ಯಾಯ ಹೊಸ ಧರ್ಮಗಳ ಉದಯ ಪಠ್ಯಭಾಗದಲ್ಲಿ ನಿರ್ದಿಷ್ಟ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗುವಂತಹ ವಿಷಯವಿರುವ ಬಗ್ಗೆ ದೂರು ಬಂದಿರುತ್ತದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಸಮಾಜ ಅಧ್ಯಯನ ಪಠ್ಯಪುಸ್ತಕದ ಪರಿಶೀಲನೆಗಾಗಿ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರಚನೆಯಾಗಿರುತ್ತದೆ. ದ್ವಿತೀಯ ಪಿಯುನ ಇತಿಹಾಸ ಪಠ್ಯಪುಸ್ತಕದ 4.2 ಅಧ್ಯಾಯವನ್ನು ಪರಿಶೀಲಿಸಿ ಸೂಕ್ತವಾಗಿ ಪರಿಷ್ಕರಿಸಲು ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿಗೆ ವಹಿಸಲು ಹಾಗೂ ಈ ಪರಿಷ್ಕೃತ ಪಠ್ಯಪುಸ್ತಕವನ್ನು 2022-23ನೇ ಸಾಲಿನಲ್ಲಿ ಮುದ್ರಣ ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು,’ ಎಂದು ಸಚಿವ ಬಿ ಸಿ ನಾಗೇಶ್‌ ಅವರು ಟಿಪ್ಪಣಿಯಲ್ಲಿ ಸೂಚಿಸಿದ್ದರು.

 

ವಿವಾದಿತ ಅಂಶಗಳೇ ಇಲ್ಲವೆಂದಿದ್ದ ಪಿಯು ಮಂಡಳಿ

 

ಸಚಿವರ ಸೂಚನೆಯಂತೆ ಪಿಯು ಮಂಡಳಿಯ ನಿರ್ದೇಶಕರು ದ್ವಿತೀಯ ಪಿಯುಸಿ ಇತಿಹಾಸ ಪಠ್ಯಪುಸ್ತಕದ ರಚನಾ ಸಮಿತಿಗೆ ಮಾಹಿತಿ ಸಲ್ಲಿಸಿ ಅಭಿಪ್ರಾಯವನ್ನು ಕೋರಿದ್ದರು. ಸೂಚಿತ ಅಂಶಗಳಲ್ಲಿ ಯಾವುದೇ ವಿವಾದಿತ ಅಂಶಗಳಿರುವುದಿಲ್ಲ ಹಾಗೂ ಇಲಾಖೆ ಈ ಅಂಶಗಳ ಬಗ್ಗೆ ತೆಗೆದುಕೊಳ್ಳುವ ಯಾವುದೇ ಕ್ರಮಕ್ಕೆ ಸಮಿತಿಯ ಅಭ್ಯಂತರವಿರುವುದಿಲ್ಲ ಎಂದು ದ್ವಿತೀಯ ಪಿಯು ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಅಭಿಪ್ರಾಯಿಸಿದ್ದರು ಎಂಬುದು ಪಿಯು ಮಂಡಳಿ ನಿರ್ದೇಶಕರು ಸಚಿವರ ಆಪ್ತ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ವಿವರಿಸಿದ್ದರು.

 

4.2 ಅಧ್ಯಾಯದಲ್ಲೇನಿದೆ?

 

ಪಠ್ಯಪುಸ್ತಕದ 4.2 ಅಧ್ಯಾಯದಲ್ಲಿ ಹೊಸ ಧರ್ಮಗಳ ಉದಯ-ಜೈನ ಧರ್ಮ ಮತ್ತು ಬೌದ್ಧ ಧರ್ಮ ಎಂಬ ಪಾಠಾಂಶವಿತ್ತು. ವೈದಿಕ ಧರ್ಮದಲ್ಲಿನ ಗೊಂದಲಗಳು, ಪುರೋಹಿತ ವರ್ಗದ ಪರಮಾಧಿಕಾರ, ಪ್ರಾಣಿಬಲಿ, ಮಂತ್ರಗಳ ಪಠಣ, ಜಾತಿಪದ್ಧತಿ, ಮಹಾನ್‌ ವ್ಯಕ್ತಿಗಳ ಜನನವು ಹೊಸ ಧರ್ಮಗಳ ಉದಯಕ್ಕೆ ಕಾರಣವಾದವು ಎಂಬ ಅಂಶವಿದೆ.

 

‘ಆರಂಭದಲ್ಲಿ ವೈದಿಕ ಧರ್ಮ ಯಾವುದೇ ಜಟಿಲತೆಗಳಿಲ್ಲದೆ ಸರಳವಾಗಿತ್ತು. ನಂತರ ಪುರೋಹಿತರ ಪ್ರಭಾವದಿಂದಾಗಿ ಬಹಳಷ್ಟು ಕಠೋರತೆಗಳು ಧರ್ಮದೊಳಗೆ ನುಸುಳಿದವು. ಜನರು ಅಸಂತುಷ್ಟರಾದರು ಮತ್ತು ಬದಲಾವಣೆಯನ್ನು ಬಯಸಿದ್ದ ಅವರು ಅದನ್ನು ಹೊಸಧರ್ಮಗಳಲ್ಲಿ ಕಂಡುಕೊಂಡರು. ಬ್ರಾಹ್ಮಣರು ಇತರ ಜಾತಿಗಳ ಮೇಲೆ ಪರಮಾಧಿಕಾರ ಸ್ಥಾಪಿಸಿದರು. ಜನರಿಗೆ ಪುರೋಹಿತರಿಲ್ಲದೆ ಯಜ್ಞಗಳನ್ನು ಮಾಡುವುದು ಅಸಾಧ್ಯವಾಗಿತ್ತು. ಬ್ರಾಹ್ಮಣರು ಅನೇಕ ವಿಶೇಷ ಸೌಲಭ್ಯಗಳನ್ನುಅನುಭವಿಸುತ್ತಿದ್ದರು ಮತ್ತು ತಮ್ಮನ್ನು ಎಲ್ಲರಿಗಿಂತ ಶ್ರೇಷ್ಠರೆಂದು ತಿಳಿದಿದ್ದರು.

 

ಪ್ರಾಣಿ ಬಲಿ, ಶಾಸ್ತ್ರ ವಿಧಿಗಳೊಂದು ಭಾಗವಾಗಿತ್ತು ಮತ್ತು ಇವುಗಳ ಆಚರಣೆ ದುಬಾರಿಯಾಯಿತು.ಹೀಗಾಗಿ ಜನರು ಅಸ್ತಿತ್ವದಲ್ಲಿದ್ದ ಧರ್ಮದಲ್ಲಿನ ನಂಬಿಕೆ ಕಳೆದುಕೊಂಡರು. ಋಗ್ವೇದದ ಕಾಲದ ಧಾರ್ಮಿಕ ವಿಧಿ ಮತ್ತು ಧರ್ಮಾಚರಣೆ ಉತ್ತರ ವೇದ ಕಾಲದಲ್ಲಿ ಸಂಕೀರ್ಣವಾದವು. ಸಂಸ್ಕೃತದಲ್ಲಿದ್ದ ವೈದಿಕ ಸಾಹಿತ್ಯದ ಮೇಲೆ ಪುರೋಹಿತರ ಪ್ರಭುತ್ವವಿತ್ತು. ಜನಸಾಮಾನ್ಯರಿಗೆ ಅವುಗಳನ್ನು ಅರ್ಥಮಾಡಿಕೊಳ್ಳುವುದು ಸಾಧ್ಯವಿರಲಿಲ್ಲ.

 

ಸ್ಪಷ್ಟ ತಿಳಿವಳಿಕೆಯ ಕೊರತೆಯಿಂದ ಜನರು ಮಂತ್ರ ಪಠಣೆಯಲ್ಲಿ ನಂಬಿಕೆ ಕಳೆದುಕೊಂಡರು. ಜಾತಿ ಪದ್ಧತಿಯು ಸಾಮಾಜಿಕ ವ್ಯವಸ್ಥೆಯ ಜಟಿಲವಾಗಿತ್ತು. ಬೇರೆ ಬೇರೆ ಜಾತಿಗಳ ಮಧ್ಯೆ ಬೇಧಭಾವವಿತ್ತು. ಬ್ರಾಹ್ಮಣರು ಉನ್ನತ ಸ್ಥಾನವನ್ನು ಹೊಂದಿದ್ದರು. ಸಮಾಜದಲ್ಲಿನ ಅಸಮಾನತೆಯಿಂದಾಗಿ ಜನರು ಅತೃಪ್ತರಾಗಿದ್ದರು. ಶೂದ್ರರು ಹೇಳಿಕೊಳ್ಳಲಾಗದ ಸಂಕಷ್ಟಗಳಿಗೆ ಗುರಿಯಾದರು.

 

ಜನರು ಅಸಂತುಷ್ಟರು ಮತ್ತು ಅತೃಪ್ತರಾಗಿದ್ದಾಗ ಮಹಾವೀರ ಮತ್ತು ಗೌತಮ ಬುದ್ಧನಂತಹ ಇಬ್ಬರು ಮಹಾನ್‌ ವ್ಯಕ್ತಿಗಳು ಜನಿಸಿದರು. ಅವರು ಸರಳವಾದ ತತ್ವಗಳನ್ನು ಜನರಾಡುವ ಭಾಷೆಯಲ್ಲಿ ಬೋಧಿಸಿದರು. ಹೊಸ ಧರ್ಮಗಳು ಬೋಧಿಸಿದ ಸರಳ ಮುಕ್ತಿ ಮಾರ್ಗದಿಂದಾಗಿ ಸಾಮಾನ್ಯರು ಹೊಸ ಧರ್ಮಗಳತ್ತ ಆಕರ್ಷಿಸಲ್ಪಟ್ಟರು ಎಂಬ ಸಾಲುಗಳಿವೆ.

Hot this week

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

Related Articles

Popular Categories

error: Content is protected !!