Sunday | August 23, 2026 |

ಚಕ್ರತೀರ್ಥ ಸಮಿತಿ ಒಂದೇ ಒಂದು ಸಭೆ ನಡೆಸಿಲ್ಲ, ಕಾರ್ಯಾಗಾರದ ಮಾಹಿತಿಯನ್ನೂ ನೀಡಲಿಲ್ಲ

ಬೆಂಗಳೂರು; ಆರರಿಂದ ಹತ್ತನೇ ತರಗತಿಯ ಸಮಾಜ ವಿಜ್ಞಾನ ಮತ್ತು ಭಾಷಾ ವಿಷಯಗಳ ಪಠ್ಯಪುಸ್ತಕ ಪರಿಶೀಲನೆ ಮಾಡಲು ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯು ರಚನೆಯಾದ ದಿನದಿಂದ ವರದಿ ಸಲ್ಲಿಸುವವರೆಗೂ ಒಂದೇ ಒಂದು ಸಭೆಯನ್ನು ನಡೆಸಿಲ್ಲ.

ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಸಾಹಿತಿ ಬರಗೂರು ರಾಮಚಂದ್ರಪ್ಪ, ಮುಡಂಬಡಿತ್ತಾಯ ಮತ್ತು ಪಠ್ಯ ಪುಸ್ತಕ ಪರಿಶೀಲನೆ ನಡೆಸಲು ರಚನೆಯಾಗಿದ್ದ ರೋಹಿತ್‌ ಚಕ್ರತೀರ್ಥ ಸಮಿತಿಗೆ ಪಾವತಿಯಾಗಿರುವ ಗೌರವ ಸಂಭಾವನೆ ಕುರಿತಾದ ಮಾಹಿತಿಯು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಈ ಸಮಿತಿಯು ಸಭೆಗಳನ್ನು ನಡೆಸದಿರುವುದು ಮುನ್ನೆಲೆಗೆ ಬಂದಿದೆ.

ರೋಹಿತ್‌ ಚಕ್ರತೀರ್ಥ ಸಮಿತಿಯು ರಚನೆಯಾದ ದಿನದಿಂದ ವರದಿ ಸಲ್ಲಿಸುವವರೆಗೂ ನಡೆಸಿರುವ ಸಭೆ, ನಡವಳಿ, ಪಾವತಿಸಿರುವ ಸಂಭಾವನೆ ಕುರಿತು ಮಾಹಿತಿ ಪಡೆಯಲು ‘ದಿ ಫೈಲ್‌’ 2022ರ ಜೂನ್‌ 13ರಂದು ಆರ್‌ಟಿಐ ಅಡಿಯಲ್ಲಿ ಸಲ್ಲಿಸಿದ್ದ ಅರ್ಜಿಗೆ ಕರ್ನಾಟಕ ಪಠ್ಯ ಪುಸ್ತಕ ಸಂಘವು ಮಾಹಿತಿ ನೀಡಿದೆ.

‘ಸಮಿತಿಯು ಕಾರ್ಯಾಗಾರಗಳನ್ನು ಪಠ್ಯಪುಸ್ತಕ ಸಂಘದ ಕಚೇರಿಯಲ್ಲಿ ಹಮ್ಮಿಕೊಂಡಿದೆ. ಯಾವುದೇ ಸಭೆಗಳನ್ನು ನಡೆಸಿರುವುದಿಲ್ಲ .ಆದ್ದರಿಂದ ಸಭೆಯ ನಡವಳಿ ಲಭ್ಯವಿರುವುದಿಲ್ಲ,’ ಎಂದು ಎಂದು ಉತ್ತರಿಸಿದೆ. ಆದರೆ ಯಾವ ಯಾವ ದಿನಾಂಕದಲ್ಲಿ ಕಾರ್ಯಾಗಾರಗಳು ನಡೆಸಲಾಗಿದೆ, ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸಂಪನ್ಮೂಲ ವ್ಯಕ್ತಿಗಳು ಸೇರಿದಂತೆ ಇನ್ನಿತರೆ ವಿವರಗಳನ್ನು ಹಂಚಿಕೊಂಡಿಲ್ಲ. ಬದಲಿಗೆ ಸಮಿತಿ ಸದಸ್ಯರಿಗೆ ಪಾವತಿಸಿರುವ ಉಪಸ್ಥಿತಿ, ಸ್ಥಳೀಯ, ಪ್ರಯಾಣ, ದಿನ ಭತ್ಯೆಗಳ ವಿವರಗಳನ್ನಷ್ಟೇ ಒದಗಿಸಿದೆ.

ಕರ್ನಾಟಕ ಪಠ್ಯಪುಸ್ತಕ ಸಂಘ ಆರ್‌ಟಿಐ ಅಡಿಯಲ್ಲಿ ನೀಡಿರುವ ಮಾಹಿತಿ ಪ್ರತಿ

ಕರ್ನಾಟಕ ಪಠ್ಯಪುಸ್ತಕ ಸಂಘವು ನೀಡಿರುವ ಮಾಹಿತಿ ಪ್ರಕಾರ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಮತ್ತು ಸದಸ್ಯರಿಗೆ ಉಪಸ್ಥಿತಿ, ಸ್ಥಳೀಯ, ಪ್ರಯಾಣ ಭತ್ಯೆ ಎಂದು ಒಟ್ಟು 2,42, 980 ರು.ಗಳನ್ನು ಪಾವತಿಸಿದೆ.
ಉಪಸ್ಥಿತಿ ಭತ್ಯೆಯೆಂದು 1,61,000 ರು., ಸ್ಥಳೀಯ ಭತ್ಯೆ 66,300 ರು., ಪ್ರಯಾಣ ಭತ್ಯೆ 9,980, ದಿನಭತ್ಯೆ 5,700 ರು. ಪಾವತಿಸಿದೆ. ಆದರೆ ಸಮಿತಿ ಸದಸ್ಯರು ಎಲ್ಲಿ ಉಪಸ್ಥಿತರಿದ್ದರು, ಎಲ್ಲಿಂದ ಎಲ್ಲಿಗೆ ಪ್ರಯಾಣ ಬೆಳೆಸಿದ್ದರು ಎಂಬ ಮಾಹಿತಿಯನ್ನು ಒದಗಿಸಿಲ್ಲ.

ಪಠ್ಯಪುಸ್ತಕಗಳಲ್ಲಿ ಬಸವಣ್ಣ, ಅಂಬೇಡ್ಕರ್‌ ಸೇರಿದಂತೆ ಹಲವು ದಾರ್ಶನಿಕರಿಗೆ ಅವಮಾನವಾಗುವಂತೆ ಪರಿಷ್ಕರಿಸಿ ನೈಜ ಸಂಗತಿಗಳನ್ನು ಮರೆಮಾಚಿ, ಸುಳ್ಳುಗಳಿಂದ ಕೂಡಿರುವ ಅಂಶಗಳನ್ನು ತುರುಕುವ ಮೂಲಕ ಇದೇ ಸಮಿತಿಯು ವರದಿಯ ಪೀಠಿಕೆಯಲ್ಲಿನ ಆಶಯಗಳನ್ನು ಉಲ್ಲಂಘಿಸಿತ್ತು.

ಪಠ್ಯ ಪರಿಷ್ಕರಿಸಿದ ರೋಹಿತ್‌ ಚಕ್ರತೀರ್ಥ ವರದಿ ಸುತ್ತ ‘ದಿ ಫೈಲ್‌’ನ 10 ವರದಿಗಳು

ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿದ್ದ ಸಮಿತಿಯು ಪರಿಷ್ಕರಿಸಿದ್ದ 83 ಶೀ‍ರ್ಷಿಕೆಗಳ ಪಠ್ಯಪುಸ್ತಕಗಳು ಅನುಪಯುಕ್ತ ಎಂದು ಕರ್ನಾಟಕ ಪಠ್ಯಪುಸ್ತಕ ಸಂಘವು ತೀರ್ಮಾನಿಸಿದ್ದ ಪಠ್ಯಪುಸ್ತಕಗಳು ಓದುಗರ ಕೈ ಸೇರಬಾರದು ಎಂದು ಸರ್ಕಾರವು ಕ್ರಮಕೈಗೊಂಡಿರುವುದನ್ನು ಸ್ಮರಿಸಬಹುದು.

Hot this week

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...
Please Scan to make Your Contribution

Topics

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

Related Articles

Popular Categories

error: Content is protected !!