Monday | March 30, 2026 |

ಆಮ್ಲಜನಕ ಕೊರತೆ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ ಎ ಪಾಟೀಲ್‌ ವರದಿ

Support THE-FILE

spot_img

ಬೆಂಗಳೂರು; ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಡ್‌ 19 ರೋಗಿಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ಆಮ್ಲಜನಕ ಪೂರೈಕೆಯಾಗುವಂತೆ ನೋಡಿಕೊಳ್ಳದೇ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಲ್ಲಿ ನಿರ್ದೇಶಕರು ಸೇರಿದಂತೆ ಬೋಧಕ, ಬೋಧಕತೇರ ಸಿಬ್ಬಂದಿ ವಿಫಲರಾಗಿದ್ದರು ಎಂಬ ಸಂಗತಿಯನ್ನು ನಿವೃತ್ತ ನ್ಯಾಯಮೂರ್ತಿ ಬಿ ಎ ಪಾಟೀಲ್‌ ನೇತೃತ್ವದ ನ್ಯಾಯಾಂಗ ತನಿಖಾ ಆಯೋಗವೂ ಸಾಬೀತುಪಡಿಸಿದೆ.

 

ಆಮ್ಲಜನಕ ಕೊರತೆಯಿಂದಾಗಿ ಕೋವಿಡ್‌-19 ರೋಗಿಗಳು ದಾರುಣವಾಗಿ ಮರಣ ಹೊಂದಿದ ಘಟನೆಗೆ ಸಂಬಂಧಿಸಿದಂತೆ ನೀಡಿರುವ ತನಿಖಾ ವರದಿಯಲ್ಲಿ ಚಾಮಜರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ ಸಂಜೀವ್‌ ಜಿ ಎಂ ಸೇರಿದಂತೆ ಬೋಧಕ, ಬೋಧಕೇತರ ವಿಭಾಗದ 10 ಮಂದಿ ನಿರ್ಲಕ್ಷ್ಯ ವಹಿಸಿದ್ದರು ಎಂಬುದು ಪ್ರಸ್ತಾಪವಾಗಿರುವುದು ಇದೀಗ ಮುನ್ನೆಲೆಗೆ ಬಂದಿದೆ.

 

ಅಲ್ಲದೆ ಈ ಘಟನೆಗೆ ಯಾವುದೇ ಒಬ್ಬ ವ್ಯಕ್ತಿಯ ನಿರ್ಲಕ್ಷ್ಯ ಕಾರಣವಲ್ಲ. ಒಟ್ಟು ವ್ಯವಸ್ಥೆಯಲ್ಲಿನ ಕುಂದುಕೊರತೆಗಳೇ ಕಾರಣ ಎಂದು ಚಿಮ್ಸ್‌ನ ನಿರ್ದೇಶಕರು ನೀಡಿರುವ ಸಮಜಾಯಿಷಿಯು ಆಮ್ಲಜನಕ ಪೂರೈಕೆಯಲ್ಲಿನ ವ್ಯತ್ಯಯಗಳತ್ತ ಮತ್ತೊಮ್ಮೆ ಬೊಟ್ಟು ಮಾಡಿ ತೋರಿಸಿದಂತಾಗಿದೆ. 2021ರ ಅಕ್ಟೊಬರ್‌ 4ರಂದು ನೀಡಿರುವ ತನಿಖಾ ವರದಿ ಆಧರಿಸಿ ಕ್ರಮ ಕೈಗೊಳ್ಳುವ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತಾದ ಕೆಲ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

 

ಈ ತನಿಖಾ ವರದಿಯಲ್ಲಿ ಪ್ರಸ್ತಾಪಿಸಿರುವ ಡಾ ಸಂಜೀವ್‌ ಜಿ ಎಮ್‌ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಂಬಂಧ ಜಂಟಿ ಇಲಾಖೆ ವಿಚಾರಣೆ ನಡೆಸಲು ಸಹಮತಿ ವ್ಯಕ್ತಪಡಿಸಿರುವ ವೈದ್ಯಕೀಯ ಶಿಕ್ಷಣ ಇಲಾಖೆಯು ಕೆಸಿಎಸ್‌ಆರ್‌ ನಿಯಮ 13ರ ಪ್ರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಅನಧಿಕೃತ ಟಿಪ್ಪಣಿಯನ್ನು ಹೊರಡಿಸಿದೆ.

 

ಆಮ್ಲಜನಕ ಕೊರತೆಯಿಂದಾಗಿ ಚಾಮರಾಜನಗರದಲ್ಲಿ ಸಾವನ್ನಪ್ಪಿದವರ ನೈಜ ಸಂಖ್ಯೆಯನ್ನು ಸರ್ಕಾರವು ಮುಚ್ಚಿಟ್ಟಿರುವ ಬೆನ್ನಲ್ಲೇ ಸರ್ಕಾರ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಬಿ ಎ ಪಾಟೀಲ್‌ ನೇತೃತ್ವದ ಆಯೋಗದ ತನಿಖಾ ವರದಿಯು ಮುನ್ನೆಲೆಗೆ ಬಂದಿದೆ.

 

’10 ಮಂದಿಯ ಪೈಕಿ ಚಿಮ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ 6 ಮಂದಿ ಖಾಯಂ ನೌಕರರಾಗಿದ್ದರೆ ಉಳಿದ 04 ಮಂದಿ ಗುತ್ತಿಗೆ/ತಾತ್ಕಾಲಿಕ ನೌಕರರಾಗಿದ್ದಾರೆ. ಇವರೆಲ್ಲರೂ ಸಂಸ್ಥೆಯ ಸೇವೆಯಿಂದ ಬಿಡುಗಡೆಗೊಂಡಿದ್ದಾರೆ. ಸಂಸ್ಥೆಯಿಂದ ರಾಜೀನಾಮೆ/ಅವಧಿ ಪೂರ್ಣಗೊಂಡು ಬಿಡುಗಡೆ ಹೊಂದಿರುವ ಗುತ್ತಿಗೆ/ತಾತ್ಕಾಲಿಕ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಕಷ್ಟಸಾಧ್ಯವೆಂದು,’ ಚಿಮ್ಸ್‌ನ ನಿರ್ದೇಶಕರು ಸರ್ಕಾರಕ್ಕೆ ತಿಳಿಸಿದ್ದಾರೆ ಎಂಬುದು ಗೊತ್ತಾಗಿದೆ.

 

ಒಬ್ಬ ವ್ಯಕ್ತಿಯ ನಿರ್ಲಕ್ಷ್ಯವಲ್ಲ

 

ಈ ದುರಂತದ ಬಗ್ಗೆ ತನಿಖಾ ಆಯೋಗವು ನೀಡಿದ್ದ ವರದಿ ಆಧರಿಸಿ ಚಾಮರಾಜನಗರ ವೈದ್ಯಕೀಯ ಸಂಸ್ಥೆಯ ನಿರ್ದೇಶಕರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯು ನೋಟೀಸ್‌ ಜಾರಿಗೊಳಿಸಿತ್ತು. ಇದಕ್ಕೆ ಉತ್ತರಿಸಿದ್ದ ನಿರ್ದೇಶಕ ಡಾ ಸಂಜೀವ್‌ ಜಿ ಎಂ ಅವರು ಈ ಘಟನೆಗೆ ತಾವೊಬ್ಬರೇ ಕಾರಣರಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.
‘ಸದರಿ ಘಟನೆ ಯಾವುದೇ ಒಬ್ಬ ವ್ಯಕ್ತಿಯ ನಿರ್ಲಕ್ಷ್ಯತೆಯಿಂದ ಜರುಗಿದ ಘಟನೆಯಲ್ಲ. ಒಟ್ಟು ವ್ಯವಸ್ಥೆಯಲ್ಲಿನ ಕುಂದುಕೊರತೆಗಳಿಂದಾಗಿ ಅನಿರೀಕ್ಷಿತವಾಗಿ ದುರದೃಷ್ಟವಶಾತ್‌ ಜರುಗಿದೆ. ನಾನು ನನ್ನ ಕೆಲಸವನ್ನು ಪ್ರಾಮಾಣಿಕತೆಯಿಂದ ಮತ್ತು ಸದ್ಭಾವನೆಯಿಂದ ನಿರ್ವಹಿಸಿರುತ್ತೇನೆ. ಸಂಸ್ಥೆಯ ಮುಖ್ಯಸ್ಥನಾಗಿದ್ದೇನೆ ಎನ್ನುವ ಒಂದೆ ಕಾರಣಕ್ಕಾಗಿ ನನ್ನನ್ನೇ ಪೂರ್ಣ ಹೊಣೆಗಾರನ್ನಾಗಿಸಿವುದು ನ್ಯಾಯಸಮ್ಮತವಲ್ಲ,’ ಎಂದು ತಮ್ಮ ವಿರುದ್ಧ ಆರೋಪಗಳನ್ನು ಅಲ್ಲಗಳೆದು 2022ರ ಏಪ್ರಿಲ್‌ 26 ರಂದು ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

 

 

ತನಿಖಾ ವರದಿಯಲ್ಲಿ ಪ್ರಸ್ತಾಪಿಸಲಾಗಿದ್ದ ಕೋವಿಡ್‌ 19 ರೋಗಿಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ಆಮ್ಲಜನಕ ಪೂರೈಕೆಯಾಗುವಂತೆ ನೋಡಿಕೊಳ್ಳದೇ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಲ್ಲಿ ವಿಫಲರಾಗಿರುವ ಬಗ್ಗೆ ಸಂಸ್ಥೆಯ ನಿರ್ದೇಶಕ ಡಾ ಸಂಜೀವ್‌ ಜಿ ಎಂ ಅವರಿಗೆ ಕಾರಣ ಕೇಳುವ ನೋಟೀಸ್‌ ಹೊರಡಿಸಿತ್ತು.

 

ಇದೇ ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ರಿಟ್‌ ಅರ್ಜಿ (ಸಂಖ್ಯೆ 8773/2021)ಗೆ ಸಂಬಂಧಿಸಿದಂತೆ ಮರಣ ಹೊಂದಿದ ವ್ಯಕ್ತಿಗಳ ವಾರಸುದಾರರಿಗೆ 15.00 ಲಕ್ಷ ರು. ಪರಿಹಾರ ಹಾಗೂ ಆ ಕುಟುಂಬದ ಅರ್ಹ ವ್ಯಕ್ತಿಗೆ ಉದ್ಯೋಗ ನೀಡುವ ಕುರಿತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ ಮತ್ತು ಸಂಬಂಧಪಟ್ಟ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೊತ್ತಾಗಿದೆ.

 

 

 

ಚಾಮರಾಜನಗರ ದುರ್ಘಟನೆ ಬಗ್ಗೆ ಐದು ಬಗೆಯ ತನಿಖೆಗಳು ಆರಂಭವಾಗಿವೆ. ಐಎಎಸ್‌ ಅಧಿಕಾರಿ ಶಿವಯೋಗಿ ಸಿ. ಕಳಸದ ಪ್ರಾಥಮಿಕ ತನಿಖೆ ನಡೆಸಿದ್ದರು. ಆರೋಗ್ಯ ಇಲಾಖೆ ಆಂತರಿಕ ತನಿಖೆ ನಡೆಸಿತ್ತು.  ರಾಜ್ಯ ಮಾನವ ಹಕ್ಕುಗಳ ಆಯೋಗವು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ತನ್ನದೇ ಪೊಲೀಸ್‌ ವಿಭಾಗಕ್ಕೆ ತನಿಖೆಯ ಹೊಣೆ ಒಪ್ಪಿಸಲಾಗಿತ್ತು.  ಆಕ್ಸಿಜನ್ ಕೊರತೆಯಿಂದ ಮೂವರು ಮಾತ್ರ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ಅವರು ಹೇಳಿಕೆ ನೀಡಿದ್ದನ್ನು ಸ್ಮರಿಸಬಹುದು.

Hot this week

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

Topics

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Related Articles

Popular Categories

error: Content is protected !!