Monday | October 5, 2026 |

ಲೈಂಗಿಕ ದೌರ್ಜನ್ಯ; ಪೊಲೀಸ್‌ ಇಲಾಖೆ ಮೀನಮೇಷ, ಎನ್‌ಸಿಪಿಆರ್‌ನಿಂದ ಸ್ವಯಂ ಪ್ರೇರಿತ ಪ್ರಕರಣ

ಬೆಂಗಳೂರು; ಪೋಕ್ಸೋ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಮೊಕದ್ದಮೆ ದಾಖಲಾಗಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಪೊಲೀಸ್‌ ಇಲಾಖೆಯು ಮೀನಮೇಷ ಎಣಿಸುತ್ತಿದ್ದರೆ ಅತ್ತ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗವು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ.

ಲೈಂಗಿಕ ಕಿರುಕುಳ ನೀಡಿದ ಆರೋಪ ಕುರಿತಂತೆ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಮುರುಘಾ ಮಠದ ಶಿವಮೂರ್ತಿ ಶರಣರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿರುವ ಬೆನ್ನಲ್ಲೇ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ನೀಡಿರುವ ನೋಟೀಸ್‌ ಮುನ್ನೆಲೆಗೆ ಬಂದಿದೆ.

ಪ್ರಕರಣ ಕುರಿತಂತೆ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗವು ಚಿತ್ರದುರ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪರಶುರಾಮ್‌ ಅವರಿಗೆ ನೋಟೀಸ್‌ ನೀಡಿದೆ. ಎಫ್‌ಐಆರ್‌ ದಾಖಲಾದ ದಿನದಿಂದ ಇಲ್ಲಿಯವರೆಗೆ ಕೈಗೊಂಡಿರುವ ಕ್ರಮಗಳ ಕುರಿತು 7 ದಿನದೊಳಗೆ ವಿವರವಾದ ಮಾಹಿತಿಯೊಂದಿಗೆ ಉತ್ತರಿಸಬೇಕು ಎಂದು ನೋಟೀಸ್‌ನಲ್ಲಿ ಸೂಚಿಸಿದೆ.

ಲೈಂಗಿಕ ದೌರ್ಜನಕ್ಕೆ ಒಳಗಾಗಿದ್ದಾರೆ ಎನ್ನಲಾಗಿರುವ ಅಪ್ತಾಪ್ತ ಬಾಲಕಿಯರಿಂದ ಸಿಆರ್‌ಪಿಸಿ 164 ಅಡಿ ಹೇಳಿಕೆ ದಾಖಲಿಸಿಕೊಳ್ಳುವಲ್ಲಿ ಜಿಲ್ಲಾ ಪೊಲೀಸರು ವಿಳಂಬ ಮಾಡಿದ್ದರು. ಎಫ್‌ಐಆರ್‌ ದಾಖಲಾಗಿ 48 ಗಂಟೆಗಳ ನಂತರ ಹೇಳಿಕೆ ದಾಖಲಿಸಿಕೊಂಡಿದ್ದರು. ಈ ಬೆಳವಣಿಗೆ ನಡುವೆಯೇ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ನೀಡಿರುವ ನೋಟೀಸ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಚಾಟಿ ಬೀಸಿದಂತಾಗಿದೆ.

ಅಪ್ರಾಪ್ತ ಮಕ್ಕಳ ಮೇಲೆ ತೀವ್ರ ರೀತಿಯ ಲೈಂಗಿಕ ದೌರ್ಜನ್ಯ ಎಸಗಿರುವ ಗುರುತರ ಆರೋಪಗಳಿದ್ದರೂ ಪ್ರಕರಣದ ಒಂದನೆ ಆರೋಪಿ ಮುರುಘಾ ಶರಣರನ್ನು ಬಂಧಿಸುವಲ್ಲಿನ ವೈಫಲ್ಯತೆ ಮಾತ್ರವಲ್ಲದೇ ನ್ಯಾಯವನ್ನು ಅತಿ ಕೆಟ್ಟದಾಗಿ ಅವಹೇಳನ ಮಾಡಿರುವ ಗಂಭೀರ ಆರೋಪಕ್ಕೆ ಚಿತ್ರದುರ್ಗ ಜಿಲ್ಲಾ ಪೊಲೀಸರು ಗುರಿಯಾಗಿದ್ದರು.

ಈ ಅಪರಾಧಗಳು ಜಾಮೀನುರಹಿತವಾದ ಸಂಜ್ಞೇಯ ಅಪರಾಧಗಳಾಗಿವೆ. ಅಲ್ಲದೆ ಮಕ್ಕಳು ಬಹಳ ಕಾಲ ಆರೋಪಿಗಳ ಅಧೀನದಲ್ಲಿದ್ದು ಅವರಿಂದ ಬೆದರಿಕೆಗೆ ಒಳಗಾಗುವ ಸ್ಥಿತಿಯಲ್ಲಿದ್ದಾರೆ, ಆರೋಪಿಗಳು ಸಾಕ್ಷ್ಯಗಳನ್ನು ನಾಶ ಮಾಡಬಲ್ಲ ಪ್ರಭಾವಿಗಳಾಗಿದ್ದಾರೂ ಆರೋಪಿಗಳನ್ನು ಬಂಧಿಸದೇ ಇರುವುದಕ್ಕೆ ಜನವಾದಿ ಸೇರಿದಂತೆ ಇನ್ನಿತರೆ ಮಹಿಳಾ ಸಂಘಟನೆಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಜಂಟಿ ಮನವಿ ಸಲ್ಲಿಸಿದ್ದಾರೆ.

‘ಮೈನರ್ ಮಕ್ಕಳ ಮೇಲೆ ತೀವ್ರ ರೀತಿಯ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಅವರ ಮೇಲೆ ಇದ್ದಾಗ್ಯೂ ಸಹ ಅವರನ್ನು ಬಂಧಿಸಲು ಪೊಲೀಸರು ವಿಫಲರಾಗಿರುವುದು ನ್ಯಾಯದ ಅತಿಕೆಟ್ಟ ಅವಹೇಳನವಾಗಿದೆ. ಈ ಅಪರಾಧಗಳು ಜಾಮೀನುರಹಿತವಾದ ಸಂಜ್ಞೇಯ ಅಪರಾಧಗಳಾಗಿವೆ; ಮಕ್ಕಳು ಬಹಳ ಕಾಲ ಆರೋಪಿಗಳ ಅಧೀನದಲ್ಲಿದ್ದು ಅವರಿಂದ ಬೆದರಿಕೆಗೆ ಒಳಗಾಗುವ ಸ್ಥಿತಿಯಲ್ಲಿದ್ದಾರೆ, ಆರೋಪಿಗಳು ಸಾಕ್ಷ್ಯಗಳನ್ನು ನಾಶ ಮಾಡಬಲ್ಲ ಪ್ರಭಾವಿಗಳಾಗಿದ್ದಾರೆ,’ ಎಂದು ಮನವಿಯಲ್ಲಿ ಸಂಘಟನೆಗಳು ಪ್ರಸ್ತಾಪಿಸಿರುವುದನ್ನು ಸ್ಮರಿಸಬಹುದು.

Hot this week

120 ಎಕರೆ ಅರಣ್ಯ ಪ್ರದೇಶದಲ್ಲಿ ಇಂಡಸ್ಟ್ರಿಯಲ್ ಪಾರ್ಕ್‌; ಕಂದಾಯ ಇಲಾಖೆ ನಡೆಸಿರುವ ಸಭೆಯ ಮಾಹಿತಿಯೇ ಅರಣ್ಯ ಇಲಾಖೆ ಬಳಿ ಇಲ್ಲ!

ಬೆಂಗಳೂರು; ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿ ಹೋಬಳಿಯ ಕಾಡುಗೋಡಿ ಪ್ಲಾಂಟೇಷನ್‌ನ ಸರ್ವೆ...

21 ಪ್ಯಾಕೇಜ್‌ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪ; ಅಂಜುಂ ಪರ್ವೇಝ್ ಸಮಿತಿ ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು; ಹಸಿ ತ್ಯಾಜ್ಯ, ಒಣ ತಾಜ್ಯ, ನೈರ್ಮಲ್ಯ ತ್ಯಾಜ್ಯ, ರಸ್ತೆ ಗುಡಿಸುವಿಕೆ,...

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮನವಿ; ಸ್ಪಷ್ಟ ಅಭಿಪ್ರಾಯ ಸಲ್ಲಿಸಲು ಡಿಜಿಐಜಿಪಿಗೆ ನಿರ್ದೇಶನ

ಬೆಂಗಳೂರು;   ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧದ ಪ್ರಕರಣದಲ್ಲಿ ಸಿಐಡಿ ವಿಶೇಷ ವಿಚಾರಣೆ...

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...
Please Scan to make Your Contribution

Topics

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...

ವಿಮಾ ಕಂಪನಿಯಿಂದ ಹಣ ಬಂದಿದೆ, ಆದರೆ ರೈತರ ಖಾತೆಗಳಿಗೆ ಜಮೆಯೇ ಆಗಿಲ್ಲ; ಬರಗಾಲದ ನಡುವೆಯೇ ರೈತರಿಗೆ ಮತ್ತೊಂದು ಬರೆ

ಬೆಂಗಳೂರು;  ರಾಜ್ಯದಾದ್ಯಂತ ತೀವ್ರ ಬರಗಾಲ ಎದುರಾಗಿರುವ ನಡುವೆಯೇ  2025-26ನೇ ಮುಂಗಾರು ಹಂಗಾಮಿನ...

Related Articles

Popular Categories

error: Content is protected !!