Monday | October 5, 2026 |

ಸಿಎಂ ಆಪ್ತ ಸಹಾಯಕನನ್ನೇ ಹನಿಟ್ರ್ಯಾಪ್‌ ಬಲೆಗೆ ಕೆಡವಿತ್ತೇ, ಬಿಜೆಪಿ ಶಾಸಕಾಂಗ ಕಚೇರಿಯ ಗುತ್ತಿಗೆ ನೌಕರನ ಕೂಟ?

ಬೆಂಗಳೂರು; ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯ ಗುತ್ತಿಗೆ ನೌಕರ ಮತ್ತು ವಿಧಾನ ಪರಿಷತ್‌ ಸಚಿವಾಲಯದ ಡಿ ಗ್ರೂಪ್‌ ಮಹಿಳಾ ನೌಕರಳೊಬ್ಬಳು ಶಾಮೀಲಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಪ್ತ ಸಹಾಯಕನನ್ನೇ ಹನಿಟ್ರ್ಯಾಪ್‌ ಬಲೆಗೆ ಕೆಡವಿದ್ದರು ಎಂಬ ಸ್ಫೋಟಕ ಮಾಹಿತಿ ತಿಳಿದು ಬಂದಿದೆ.

ಮುಖ್ಯಮಂತ್ರಿಗಳ ಸಚಿವಾಲಯವು ದೀಪಾವಳಿ ಹಬ್ಬದ ಸೋಗಿನಲ್ಲಿ ಪತ್ರಕರ್ತರಿಗೆ ಸ್ವೀಟ್‌ ಬಾಕ್ಸ್‌ ಮತ್ತು ಲಕ್ಷಾಂತರ ರು. ಮೊತ್ತದ ನಗದು ಹಣವನ್ನು ನೀಡಿತ್ತು ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿ ಇಕ್ಕಟ್ಟಿನಲ್ಲಿ ಸಿಲುಕಿದೆ. ಇದೀಗ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯ ಗುತ್ತಿಗೆ ನೌಕರನೊಬ್ಬ ಡಿ ಗ್ರೂಪ್‌ ಮಹಿಳಾ ನೌಕರೊಬ್ಬಳನ್ನು ಬಳಸಿಕೊಂಡು ಮುಖ್ಯಮಂತ್ರಿಗಳ ಆಪ್ತ ಸಹಾಯಕನನ್ನೇ ಹನಿಟ್ರ್ಯಾಪ್‌ ಬಲೆಗೆ ಕೆಡವಲಾಗಿತ್ತು ಎಂಬ ಪ್ರಕರಣವು ಮುಖ್ಯಮಂತ್ರಿಗಳ ಸಚಿವಾಲಯವನ್ನು ಇನ್ನಷ್ಟು ಆಳಕ್ಕೆ ದೂಡಿದೆ.

ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯ ಗುತ್ತಿಗೆ ನೌಕರನೇ ಮುಖ್ಯಮಂತ್ರಿಗಳ ಆಪ್ತ ಸಹಾಯಕನನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಿದ್ದ ಎಂಬ   ಪ್ರಕರಣವು ಬಿಜೆಪಿ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯ ಗುತ್ತಿಗೆ ನೌಕರನು  ಹತ್ತಾರು ಹನಿಟ್ರ್ಯಾಪ್‌ ಮಾಡಿಸಿದ್ದಾನೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಹನಿಟ್ರ್ಯಾಪ್‌ ಪ್ರಕರಣವು ಗಮನಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಚಿವಾಲಯದ ಉನ್ನತ ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ದೂರು ದಾಖಲಾಗದಂತೆ ಸಂಧಾನದ ಮೂಲಕ ಇತ್ಯರ್ಥಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಗೊತ್ತಾಗಿದೆ. ಅಲ್ಲದೇ ಹನಿಟ್ರ್ಯಾಪ್‌ಗೆ ಒಳಗಾಗಿದ್ದ ಎಂದು ಹೇಳಲಾಗಿರುವ ಸಚಿವಾಲಯದ ಸಿ ಗುಂಪಿನ ನೌಕರನನ್ನು ಮುಖ್ಯಮಂತ್ರಿಗಳ ಆಪ್ತ ಸಹಾಯಕನ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ಆತ ಈಗಾಗಲೇ ಬಹುಮಹಡಿ ಕಟ್ಟಡದಲ್ಲಿರುವ ಡಿಪಿಎಆರ್‌ ಕಚೇರಿಗೆ ವರದಿ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಮತ್ತೊಂದು ಮೂಲದ ಪ್ರಕಾರ ಹನಿಟ್ರ್ಯಾಪ್‌ಗೆ ಒಳಗಾಗಿದ್ದಾನೆ ಎಂದು ಹೇಳಲಾಗಿರುವ ಮುಖ್ಯಮಂತ್ರಿಗಳ ಆಪ್ತ ಸಹಾಯಕ, ವಿಧಾನಪರಿಷತ್‌ ಸಚಿವಾಲಯದ ಡಿ ಗ್ರೂಪ್‌ ಮಹಿಳಾ ನೌಕರಳ ಹೆಸರಿನಲ್ಲಿ ಕನಕಪುರದ ಬಳಿ 13 ಎಕರೆ ಜಮೀನು ಖರೀದಿಸಿದ್ದ. ಈ ಜಮೀನಿನ ದಾಖಲೆಗಳನ್ನು ತನ್ನ ವಶಕ್ಕೆ ನೀಡಲು ಸಿಎಂ ಆಪ್ತ ಸಹಾಯಕನು ಒತ್ತಾಯಪಡಿಸಿದಾಗ ಆಕೆ ವಿಡಿಯೋ ಮತ್ತು ಆಡಿಯೋವನ್ನು ತೋರಿಸಿ ಬ್ಲಾಕ್‌ಮೇಲ್‌ ಮಾಡಿದ್ದಳು ಎಂದೂ ಹೇಳಲಾಗುತ್ತಿದೆ.

‘ಬಿಜೆಪಿ ಶಾಸಕಾಂಗದ ಪಕ್ಷದ ಕಚೇರಿಯ ಗುತ್ತಿಗೆ ನೌಕರನೇ ಮುಖ್ಯಮಂತ್ರಿಗಳ ಆಪ್ತ ಸಹಾಯಕನನ್ನು ಹನಿಟ್ರ್ಯಾಪ್‌ ಮಾಡಿಸಿರುವುದು ನಿಜಕ್ಕೂ ಬೆಚ್ಚಿ ಬೀಳಿಸುವಂತದ್ದು. ವಿಧಾನಸೌಧದ ಕಟ್ಟಡದಲ್ಲೇ ಇಂತಹ ತಂಡವೊಂದು ಕಾರ್ಯಾಚರಿಸುತ್ತಿರುವುದು ನಿಜಕ್ಕೂ ಗಾಬರಿಬೀಳಿಸುವಂತಿದೆ. ಈ ಪ್ರಕರಣವನ್ನು ತನಿಖೆಗೊಳಪಡಿಸಿದ್ದರೆ ಇನ್ನಷ್ಟು ಪ್ರಕರಣಗಳು ಹೊರಬೀಳುತ್ತಿದ್ದವು. ಆದರೆ ದೂರು ದಾಖಲಾಗದಂತೆ ಉನ್ನತ ಅಧಿಕಾರಿಗಳು ನೋಡಿಕೊಂಡಿರುವುದರ ಹಿಂದೆ ಅವರೂ ಸಹ ಈ ಬಲೆಗೆ ಬಿದ್ದಿದ್ದಾರೆ ಎಂದೆನಿಸುತ್ತದೆ,’ ಎನ್ನುತ್ತಾರೆ ಮುಖ್ಯಮಂತ್ರಿಗಳ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು.

ಈ ಕುರಿತು ಪ್ರತಿಕ್ರಿಯೆಗಾಗಿ  ಮುಖ್ಯಮಂತ್ರಿಗಳ ಆಪ್ತ ಸಹಾಯಕನಿಗೆ  ‘ದಿ ಫೈಲ್‌’ ವಾಟ್ಸಾಪ್‌ ಮೂಲಕ ಸಂಪರ್ಕಿಸಿದೆ. ಪ್ರತಿಕ್ರಿಯೆ ನೀಡಿದ ನಂತರ ಅದನ್ನು ವರದಿಯಲ್ಲಿ ಸೇರ್ಪಡೆಗೊಳಿಸಿ ಅಪ್‌ಡೇಟ್‌ ಮಾಡಲಾಗುವುದು.

Hot this week

21 ಪ್ಯಾಕೇಜ್‌ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪ; ಅಂಜುಂ ಪರ್ವೇಝ್ ಸಮಿತಿ ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು; ಹಸಿ ತ್ಯಾಜ್ಯ, ಒಣ ತಾಜ್ಯ, ನೈರ್ಮಲ್ಯ ತ್ಯಾಜ್ಯ, ರಸ್ತೆ ಗುಡಿಸುವಿಕೆ,...

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮನವಿ; ಸ್ಪಷ್ಟ ಅಭಿಪ್ರಾಯ ಸಲ್ಲಿಸಲು ಡಿಜಿಐಜಿಪಿಗೆ ನಿರ್ದೇಶನ

ಬೆಂಗಳೂರು;   ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧದ ಪ್ರಕರಣದಲ್ಲಿ ಸಿಐಡಿ ವಿಶೇಷ ವಿಚಾರಣೆ...

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...
Please Scan to make Your Contribution

Topics

ವಿಮಾ ಕಂಪನಿಯಿಂದ ಹಣ ಬಂದಿದೆ, ಆದರೆ ರೈತರ ಖಾತೆಗಳಿಗೆ ಜಮೆಯೇ ಆಗಿಲ್ಲ; ಬರಗಾಲದ ನಡುವೆಯೇ ರೈತರಿಗೆ ಮತ್ತೊಂದು ಬರೆ

ಬೆಂಗಳೂರು;  ರಾಜ್ಯದಾದ್ಯಂತ ತೀವ್ರ ಬರಗಾಲ ಎದುರಾಗಿರುವ ನಡುವೆಯೇ  2025-26ನೇ ಮುಂಗಾರು ಹಂಗಾಮಿನ...

ಪ್ರಿಂಟರ್, ಸ್ಕ್ಯಾನರ್ ಕೂಡ ಲಭ್ಯವಿಲ್ಲ, ಇ-ಮೇಲ್‌ ಮಾಡಲೂ ಕಷ್ಟಸಾಧ್ಯ; ಸರ್ಕಾರದ ಆರ್ಥಿಕ ಪರಿಸ್ಥಿತಿ ತೆರೆದಿಟ್ಟ ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ

ಬೆಂಗಳೂರು; ಚಾಲ್ತಿಯಲ್ಲಿರುವ ಮತ್ತು ಹೊಸ ಯೋಜನೆಗಳಿಗೆ ಅನುದಾನ ಹೊಂದಿಸಲು ಏದುಸಿರು ಬಿಡುತ್ತಿರುವ...

Related Articles

Popular Categories

error: Content is protected !!