Wednesday | June 24, 2026 |

ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ 8.96 ಕೋಟಿ ವೆಚ್ಚದ ಪ್ರಸ್ತಾವನೆ;ಸರ್ಕಾರದ ಹಣದಿಂದ ಬಿಜೆಪಿ ಶಕ್ತಿ ಪ್ರದರ್ಶನ

ಬೆಂಗಳೂರು; ಹಕ್ಕುಪತ್ರ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ನಗದು, ಪ್ರಮಾಣ ಪತ್ರ ವಿತರಣೆ ಮಾಡುವ ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ಮತಬ್ಯಾಂಕ್‌ ಆಗಿ ಮತ್ತು ಬಲಪ್ರದರ್ಶನಕ್ಕೆ ಬಳಸಿಕೊಳ್ಳುತ್ತಿದೆ ಎಂಬ ಆರೋಪಗಳು ಕೇಳಿ ಬಂದಿರುವ ನಡುವೆಯೇ ರಾಜ್ಯ ಬಿಜೆಪಿ ಸರ್ಕಾರವು ಇದಕ್ಕಾಗಿ ಆಯೋಜಿಸುತ್ತಿರುವ ಒಂದು ದಿನದ ಕಾರ್ಯಕ್ರಮ, ಕೆಲವೇ ಗಂಟೆಗಳ ಕಾರ್ಯಕ್ರಮಕ್ಕೆ ಸರ್ಕಾರಿ ಬೊಕ್ಕಸದಿಂದ ಕೋಟ್ಯಂತರ ರುಪಾಯಿಗಳನ್ನು ವ್ಯಯಿಸುತ್ತಿದೆ.

 

ಯಾದಗಿರಿ ಜಿಲ್ಲೆಯ ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮದ ಭಾಗವಾಗಿ ಪರಿವರ್ತಿಸಿ ಅಲ್ಲಿಯ ನಿವಾಸಿಗಳಿಗೆ ವಾಸದ ಹಕ್ಕು ದಾಖಲೆ ವಿತರಿಸುವ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರ್ಕಾರವು 8.96 ಕೋಟಿ ವೆಚ್ಚ ಮಾಡಲು ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ 2022ರ ಅಕ್ಟೋಬರ್‌ 28ರಂದು ಯಾದಗಿರಿ ಜಿಲ್ಲಾಧಿಕಾರಿ ಪ್ರಸ್ತಾವನೆ (ಸಂ/ಕಂ/ಭೂಮಂ/01/2021-22) ಸಲ್ಲಿಸಿದ್ದಾರೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಬೆಂಗಳೂರು ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಪ್ರಧಾನಿ ಮೋದಿ ಅವರು ಭಾಗವಹಿಸಿದ್ದ ಕೆಲವೇ ಗಂಟೆಗಳ ಕಾರ್ಯಕ್ರಮಕ್ಕೆ ಅಂದಾಜು 48 ಕೋಟಿ ರು. ಖರ್ಚಾಗಿದ್ದರ ಬೆನ್ನಲ್ಲೇ ಯಾದಗಿರಿ ಜಿಲ್ಲೆಯಲ್ಲಿಯೂ ಕೆಲವೇ ಗಂಟೆಗಳ ಕಾರ್ಯಕ್ರಮಕ್ಕೆ 8.96 ಕೋಟಿ ರು. ಖರ್ಚು ಮಾಡಲು ಮುಂದಾಗಿರುವುದು ತೆರಿಗೆದಾರರ ಹಣವು  ದುಂದುವೆಚ್ಚಕ್ಕೆ ಕಾರಣವಾದಂತಿದೆ.  ಸದ್ಯ ಈ ಕಡತವನ್ನು ಕಂದಾಯ ಇಲಾಖೆಯು ಆರ್ಥಿಕ ಇಲಾಖೆಗೆ  ರವಾನಿಸಿದೆ. ಅಲ್ಲದೇ ಇದಕ್ಕೆ ಕೆಟಿಪಿಪಿ ಕಾಯ್ದೆ 4(ಜಿ)  ವಿನಾಯಿತಿ ನೀಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಂಡಿಸಲಾಗಿದೆ ಎಂದು ತಿಳಿದು ಬಂದಿದೆ.

 

ಇದೇ ನವೆಂಬರ್‌ (2022) ಕೊನೆಯಲ್ಲಿ ಯಾದಗಿರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಯಾದಗಿರಿ, ಬೀದರ್‌, ಕಲ್ಬುರ್ಗಿ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಗುರುತಿಸಿರುವ ಜನವಸತಿ ಪ್ರದೇಶದಲ್ಲಿನ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡಲು ಸರ್ಕಾರವು ತೀರ್ಮಾನಿಸಿದೆ.

 

‘ಈ ಕಾರ್ಯಕ್ರಮವು ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು ಈ ಕಾರ್ಯಕ್ರಮಕ್ಕೆ ಐದು ಜಿಲ್ಲೆಗಳಿಂದ ಸುಮಾರು 1.30 ಲಕ್ಷಕ್ಕೂ ಹೆಚ್ಚು ಜನ ಸೇರುವುದಾಗಿ ನಿರೀಕ್ಷಿಸಲಾಗಿದೆ. ಈ ಕಾರ್ಯಕ್ರಮವನ್ನು ಅತೀ ವಿಜೃಂಭಣೆಯಿಂದ ಹಾಗೂ ಯಶಸ್ವಿಯಾಗಿ ಆಯೋಜಿಸಲು ಕಂದಾಯ ಸಚಿವರು ಸೂಚಿಸಿರುತ್ತಾರೆ. ಈ ಕಾರ್ಯಕ್ರಮಕ್ಕೆ 8.96 ಕೋಟಿ ರು. ವೆಚ್ಚವಾಗಲಿದೆ. ಈ ಅನುದಾನವನ್ನು ಬಿಡುಗಡೆಗೊಳಿಸಬೇಕು,’ ಎಂದು ಯಾದಗಿರಿ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ವಿವರಿಸಿದ್ದಾರೆ.

 

ವೇದಿಕೆ, ಪೈಪ್‌ ಪೆಂಡಾಲ್‌, ಸ್ಟೇಜ್‌ ಕಾರ್ಪೆಟ್‌, ಎಕ್ಸಿಕ್ಯೂಟಿವ್‌ ಚೇರ್ಸ್‌, ಬ್ಯಾರಿಕೇಡ್‌, ವಿಐಪಿ ಚೇರ್ಸ್‌, ವಿಐಪಿಗಳಿಗೆ ಕಾರ್ಪೆಟ್‌, ಮಾಧ್ಯಮ ವಿಭಾಗ, ಎಲೆಕ್ಟ್ರಾನಿಕ್‌ ಮೀಡಿಯಾ ವಿಭಾಗ, ವಿಐಪಿಗಳಿಗೆ ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ, ಎಲ್‌ಇಡಿ ವಾಲ್‌, ಸಭಿಕರಿಗೆ ಎಲ್‌ಇಡಿ, ಫೈಬರ್‌ ಚೇರ್ಸ್‌, ಸಾರ್ವಜನಿಕರಿಗೆ ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ, ಪೋಡಿಯಂ, ಹೂವಿನ ಅಲಂಕಾರ, ಟೀ ಕಪ್ಪುಗಳು ಸೇರಿದಂತೆ ಒಟ್ಟು 23 ಉಪಕರಣಗಳಿಗೆ 3 ಕೋಟಿ ರು. ವೆಚ್ಚವಾಗಲಿದೆ.

 

ಬೀದರ್‌, ಕಲ್ಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಸುತ್ತಮುತ್ತ 10,064 ಕಿ ಮೀ ಗಳಿಂದ ಫಲಾನುಭವಿಗಳನ್ನು ಕರೆತರಲು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಸುಮಾರು 2,900 ಬಸ್‌ ವ್ಯವಸ್ಥೆ ಮಾಡಬೇಕಿದೆ. ಇದಕ್ಕಾಗಿ 300 ಕಿ ಮೀ ಗೆ 12,650 ರು. ಲೆಕ್ಕದಲ್ಲಿ ಒಟ್ಟು 3,66,85,000 ರು., ಸಾರ್ವಜನಿಕರಿಗೆ ತಿಂಡಿ ಮತ್ತು ನೀರಿನ ವ್ಯವಸ್ಥೆಗೆ 30,00,000 ರು. ಖರ್ಚಾಗಲಿದೆ. ಅದೇ ರೀತಿ 1.35 ಲಕ್ಷ ಮಂದಿಗೆ ಊಟೋಪಚಾರ, ರಸ್ತೆ ಕಾಮಗಾರಿ, ಪಾರ್ಕಿಂಗ್‌, ಸಿಸಿಟಿವಿ,ಹೆಲ್ಪ್‌ ಸೆಂಟರ್‌, ವಾಹನಗಳಿಗೆ ಡೀಸೆಲ್‌ ಸೇರಿದಂತೆ ಒಟ್ಟು 2.00 ಕೋಟಿ ರು. ವೆಚ್ಚವಾಗಲಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಅಂದಾಜು ಪಟ್ಟಿಯನ್ನು ಒದಗಿಸಿರುವುದು ತಿಳಿದು ಬಂದಿದೆ.

Hot this week

ಸುರಂಗ ಮಾರ್ಗ; ಸಂಚಾರ ದಟ್ಟಣೆ ಕಡಿಮೆಯಾದರೂ 40 ವರ್ಷಕ್ಕೆ ಗುತ್ತಿಗೆ ವಿಸ್ತರಣೆಗೆ ಪ್ರಸ್ತಾವ, ಅದಾನಿ ಎಂಟರ್ ಪ್ರೈಸೆಸ್‌ಗೆ ಡಿ ಕೆ ಸರ್ಕಾರದಿಂದ 10 ವರ್ಷ ಅವಧಿಯ ಗಿಫ್ಟ್‌!

ಬೆಂಗಳೂರು; ಗ್ರೇಟರ್‌ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಹೆಬ್ಬಾಳ (ಎಸ್ಟಿಮ್‌ಮಾಲ್) ಜಂಕ್ಷನ್‌ನಿಂದ ಹೆಚ್‌.ಎಸ್‌.ಆರ್‌ ಲೇಔಟ್‌...

ದಲಿತರ ಜಮೀನು ಭೂ ಪರಿವರ್ತನೆ; ಜಿಲ್ಲಾಧಿಕಾರಿಯಿಂದ ವಾಸ್ತವಾಂಶ ವರದಿ, ಪ್ರಕರಣವನ್ನೇ ಮುಚ್ಚಿ ಹಾಕಿತೇ?

ಬೆಂಗಳೂರು;  ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಸಾದಲಿ ಹೋಬಳಿಯ ಪುರ ಬೈರನಹಳ್ಳಿ...

ಜಿಬಿಎ 5 ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣ; 992.00 ಕೋಟಿ ರು ವೆಚ್ಚ , 749 ಕಿಮೀ ಉದ್ದದಲ್ಲಿ 88 ಕಿ ಮೀ ಮಾತ್ರ ಪೂರ್ಣ

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 5 ನಗರಪಾಲಿಕೆಗಳು ಮುಖ್ಯಮಂತ್ರಿಗಳ ಮೂಲ...
Please Scan to make Your Contribution

Topics

ಸುರಂಗ ಮಾರ್ಗ; ಸಂಚಾರ ದಟ್ಟಣೆ ಕಡಿಮೆಯಾದರೂ 40 ವರ್ಷಕ್ಕೆ ಗುತ್ತಿಗೆ ವಿಸ್ತರಣೆಗೆ ಪ್ರಸ್ತಾವ, ಅದಾನಿ ಎಂಟರ್ ಪ್ರೈಸೆಸ್‌ಗೆ ಡಿ ಕೆ ಸರ್ಕಾರದಿಂದ 10 ವರ್ಷ ಅವಧಿಯ ಗಿಫ್ಟ್‌!

ಬೆಂಗಳೂರು; ಗ್ರೇಟರ್‌ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಹೆಬ್ಬಾಳ (ಎಸ್ಟಿಮ್‌ಮಾಲ್) ಜಂಕ್ಷನ್‌ನಿಂದ ಹೆಚ್‌.ಎಸ್‌.ಆರ್‌ ಲೇಔಟ್‌...

ದಲಿತರ ಜಮೀನು ಭೂ ಪರಿವರ್ತನೆ; ಜಿಲ್ಲಾಧಿಕಾರಿಯಿಂದ ವಾಸ್ತವಾಂಶ ವರದಿ, ಪ್ರಕರಣವನ್ನೇ ಮುಚ್ಚಿ ಹಾಕಿತೇ?

ಬೆಂಗಳೂರು;  ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಸಾದಲಿ ಹೋಬಳಿಯ ಪುರ ಬೈರನಹಳ್ಳಿ...

ಜಿಬಿಎ 5 ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣ; 992.00 ಕೋಟಿ ರು ವೆಚ್ಚ , 749 ಕಿಮೀ ಉದ್ದದಲ್ಲಿ 88 ಕಿ ಮೀ ಮಾತ್ರ ಪೂರ್ಣ

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 5 ನಗರಪಾಲಿಕೆಗಳು ಮುಖ್ಯಮಂತ್ರಿಗಳ ಮೂಲ...

ರಸ್ತೆ ಕಾಮಗಾರಿಯಲ್ಲಿ ಲೋಪ, ಗುತ್ತಿಗೆದಾರನಿಗೆ ಅಕ್ರಮ ಲಾಭ, ಪಾಲಿಕೆಗೆ ನಷ್ಟ; ತಪಾಸಣೆ ನಡೆದ ದಿನದಂದೇ ಎಇ ಅಮಾನತು

ಬೆಂಗಳೂರು; ಆರ್ಟಿಲಿಯಲ್ ಮತ್ತು ಸಬ್‌ ಆರ್ಟೀಲಿಯಲ್ ರಸ್ತೆಗಳಲ್ಲಿ   ಕೈಗೊಂಡಿರುವ ಆಸ್ಪಾಲ್ಟಿಂಗ್‌ನಲ್ಲಿ ಕಳಪೆ...

ಕೆಎಸ್‌ಒಯು ಬ್ಯಾಂಕ್‌ ಖಾತೆ ಸ್ಥಗಿತ; ಬ್ಯಾಂಕ್‌ ಕಾರ್ಯಾಚರಣೆ ನಿರ್ಬಂಧಿಸಲು ರಾಜ್ಯ ಸರ್ಕಾರಕ್ಕೆ ಯಾವ ಕಾನೂನುಬದ್ಧ ಅಧಿಕಾರವಿದೆ?

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬ್ಯಾಂಕ್‌ ಖಾತೆಗಳ ಸ್ಥಗಿತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ...

Related Articles

Popular Categories

error: Content is protected !!