Wednesday | May 13, 2026 |

ಬಾಕಿ ವೇತನ ಮೊತ್ತ ಬಿಡುಗಡೆ; ಹಂಪಿ ಕನ್ನಡ ವಿವಿ ಪ್ರಸ್ತಾವನೆ ತಿರಸ್ಕರಿಸಿದ ಸರ್ಕಾರ

ಬೆಂಗಳೂರು; ಹಂಪಿಯಲ್ಲಿರುವ ಕನ್ನಡ ವಿಶ್ವವಿದ್ಯಾಲಯದ ಕೋರ್ಸ್‌ಗಳ ನಿರ್ವಹಣೆಗೆ ನೇಮಿಸಿಕೊಂಡಿದ್ದ ತಾತ್ಕಾಲಿಕ ಉಪನ್ಯಾಸಕರು, ಸಿಬ್ಬಂದಿ ಮತ್ತಿತರರಿಗೆ ನೀಡಬೇಕಿರುವ ಬಾಕಿ ಮೊತ್ತವನ್ನು ಬಿಡುಗಡೆಗೊಳಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರವು ತಿರಸ್ಕರಿಸಿದೆ.

ಬಾಕಿ ವೇತನ ಬಿಡುಗಡೆಗೊಳಿಸುವ ಪ್ರಸ್ತಾವನೆ ತಿರಸ್ಕರಿಸಲು ರಾಜ್ಯ ಸರ್ಕಾರದ ಅನುಮೋದನೆಯಿಲ್ಲದೆಯೇ ತಾತ್ಕಾಲಿಕ ಉಪನ್ಯಾಸಕರನ್ನು ನೇಮಿಸಿಕೊಂಡಿರುವುದೇ ಮೂಲ ಕಾರಣ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ 2022ರ ನವೆಂಬರ್‌ 30ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಶಿಷ್ಯವೇತನ ಸೇರಿದಂತೆ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಪ್ರತಿಭಟನೆ ನಡುವೆಯೇ ಬಾಕಿ ಮೊತ್ತವನ್ನು ಬಿಡುಗಡೆಗೊಳಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರವು ತಿರಸ್ಕರಿಸಿರುವುದು ಮುನ್ನೆಲೆಗೆ ಬಂದಿದೆ.

ಕನ್ನಡ ವಿಶ್ವವಿದ್ಯಾಲಯದಲ್ಲಿನ ತಾತ್ಕಾಲಿಕ ಸಿಬ್ಬಂದಿ ಮತ್ತು ಕಾರ್ಮಿಕರಿಗೆ 2021ರ ಏಪ್ರಿಲ್‌ನಿಂದ ಮಾರ್ಚ್‌ 2022ರವರೆಗಿನ ಬಾಕಿ ವೇತನ ಪಾವತಿಸಲು ಅನುದಾನವನ್ನು ಕೋರಿ ಹಂಪಿ ಕನ್ನಡ ವಿಶ್ವವಿದ್ಯಾಲಯವು 2022ರ ಜುಲೈ 20ರಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯು ಒಪ್ಪಿರಲಿಲ್ಲ.

ಮಂಜೂರಾಗಿದ್ದ ವೃಂದ ಬಲಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಹಲವು ವರ್ಷಗಳಿಂದಲೂ ತಾತ್ಕಾಲಿಕ ನೌಕರರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ನೇಮಿಸಿಕೊಳ್ಳಲಾಗಿದೆ. ಇದೊಂದು ವಿಶೇಷ ಪ್ರಕರಣವೆಂದು ಹೇಳಲಾಗಿದ್ದರೂ ಅನುಮೋದನೆ ಇಲ್ಲದೆಯೇ ನೇಮಿಸಿಕೊಂಡಿರುವ ತಾತ್ಕಾಲಿಕ ನೌಕರರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದು ಸರ್ಕಾರವು (ED 145 UNE 2021 DATED 06-04-2021) ಸೂಚಿಸಿತ್ತು. ಆದರೆ ವಿಶ್ವವಿದ್ಯಾಲಯವು ಈ ಎಲ್ಲಾ ನೌಕರರನ್ನು ಮುಂದುವರೆಸುವ ಮೂಲಕ ಅಶಿಸ್ತನ್ನು ಪ್ರೋತ್ಸಾಹಿಸಿದೆ ಎಂದು ಆರ್ಥಿಕ ಇಲಾಖೆಯು ಹೊರಡಿಸಿದ್ದ ಟಿಪ್ಪಣಿ (ED 679 ವೆಚ್ಚ-8/2022 ದಿನಾಂಕ 25-11-2022)ಯನ್ನು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಆರ್ಥಿಕ ಪರಿಣಾಮಗಳಿದ್ದರೂ ವಿಶ್ವವಿದ್ಯಾಲಯಗಳು ಮಂಜೂರಾಗಿರುವ ವೃಂದ ಬಲಕ್ಕಿಂತಲೂ ಹೆಚ್ಚಿನ ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿವೆ. ಈ ನೇಮಕಾತಿಗಳಿಗೆ ಆಡಳಿತ ಇಲಾಖೆ ಮತ್ತು ಆರ್ಥಿಕ ಇಲಾಖೆ ಹಾಗೂ ಸರ್ಕಾರದ ಅನುಮೋದನೆಯನ್ನೂ ಪಡೆದುಕೊಳ್ಳುತ್ತಿಲ್ಲ. ತಮ್ಮ ಹಂತದಲ್ಲೇ ನೇಮಕ ಮಾಡಿಕೊಳ್ಳುವ ಉದ್ಯೋಗಿಗಳಿಗೆ ಆಂತರಿಕ ಸಂಪನ್ಮೂಲದಿಂದಲೇ ವೇತನ, ಪಿಂಚಣಿಯನ್ನು ಭರಿಸಬೇಕು. ಅನುಮೋದನೆಯಿಲ್ಲದೆಯೇ ನೇಮಕ ಮಾಡಿಕೊಂಡು ಆ ನಂತರ ವೇತನ, ಪಿಂಚಣಿಗೆ ಅನುದಾನ ಕೋರುವ ಮೂಲಕ ಸರ್ಕಾರದ ಮೇಲೆ ಹೊರೆ ಹೊರಿಸುತ್ತಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ವಿಶ್ವವಿದ್ಯಾಲಯಗಳಲ್ಲಿ ಖಾಯಂ ಆಗಿ ನೇಮಕಗೊಂಡಿರುವವರಿಗಷ್ಟೇ ವೇತನ, ಪಿಂಚಣಿಯನ್ನು ರಾಜ್ಯ ಸರ್ಕಾರವು ಭರಿಸುತ್ತದೆ. ಅತಿಥಿ ಉಪನ್ಯಾಸಕರೂ ಮತ್ತು ತಾತ್ಕಾಲಿಕ ಸಿಬ್ಬಂದಿ ನೇಮಕ ಮಾಡಿಕೊಳ್ಳುತ್ತಿರುವ ವಿಶ್ವವಿದ್ಯಾಲಯಗಳು ತಮ್ಮದೇ ಆಂತರಿಕ ಸಂಪನ್ಮೂಲದಿಂದ ವೇತನ ಮತ್ತು ಪಿಂಚಣಿ ಮೊತ್ತವನ್ನು ಪಾವತಿಸಬೇಕು ಮತ್ತು ಇದು ವಿಶ್ವವಿದ್ಯಾಲಯಗಳ ಜವಾಬ್ದಾರಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯಮಂತ್ರಿ ಅವರ ವಿವೇಚನಾ ನಿಧಿಯಡಿ ಹಂಪಿ ವಿಶ್ವವಿದ್ಯಾಲಯದ ವಿವಿಧ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು 20 ಕೋಟಿ ರು.ಗಳ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಇದರಲ್ಲಿ ತಾತ್ಕಾಲಿಕ ಬೋಧಕ ಸಿಬ್ಬಂದಿಗಳ 14 ತಿಂಗಳ ಮತ್ತು ಬೋಧಕೇತರ ಸಿಬ್ಬಂದಿಗಳ 9 ತಿಂಗಳ ಬಾಕಿ ಇರುವ ವೇತನ ಒಟ್ಟು 251.72 ಲಕ್ಷ ಹಾಗೂ ವಿ ವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಬಾಕಿ ಇರುವ ಮಾಸಿಕ ಆರ್ಥಿಕ ನೆರವಿನ ಮೊತ್ತ 1189.61 ಲಕ್ಷ ಹಾಗೂ ಲ್ಯಾಪ್‌ ಟಾಪ್‌ ಖರೀದಿಗೆ 117.00 ಲಕ್ಷ ರು.ಗಳನ್ನು ಅನುಮತಿ ನೀಡಲು ವಿಶ್ವವಿದ್ಯಾಲಯವು ಕೋರಿತ್ತು ಎಂದು ಗೊತ್ತಾಗಿದೆ.

ಈ ಪೈಕಿ ತಾತ್ಕಾಲಿಕ ಬೋಧಕ ಸಿಬ್ಬಂದಿಗಳ 14 ತಿಂಗಳ ಮತ್ತು ಬೋಧಕೇತರ ಸಿಬ್ಬಂದಿಯ 9 ತಿಂಗಳ ಬಾಕಿ ಇರುವ 251.72 ಲಕ್ಷ ರು., ಪ ಜಾತಿ ಮತ್ತು ಪ ಪಂಗಡ ಸಂಶೋಧನಾ ವಿದ್ಯಾರ್ಥಿಗಳಿಗೆ ಬಾಕಿ ಇರುವ 1189.61 ಲಕ್ಷ ರು. , ಲ್ಯಾಪ್‌ ಟಾಪ್‌ ಖರೀದಿಗೆ 117.00 ಲಕ್ಷ ರು. ಸೇರಿದಂತೆ ಒಟ್ಟು 15.58 ಕೋಟಿ ರು.ಗಳನ್ನು ನೀಡಲು 2022ರ ನವೆಂಬರ್‌ 21ರಂದು ಆದೇಶ ಹೊರಡಿಸಿದೆ.

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!