Saturday | October 3, 2026 |

ಕಾನೂನು ವಿವಿ; ಸರ್ಕಾರದ ಶಿಫಾರಸ್ಸು ಬದಿಗಿರಿಸಿ ಕುಲಪತಿ ನೇಮಕಗೊಳಿಸಿದ ರಾಜ್ಯಪಾಲರು

ಬೆಂಗಳೂರು; ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಕುಲಪತಿಗಳನ್ನಾಗಿ ನೇಮಕ ಮಾಡುವ ಸಂಬಂಧ ಕಾನೂನು ಮತ್ತು ಸಂಸದೀಯ ಸಚಿವರು ಮತ್ತು ರಾಜ್ಯ ಸರ್ಕಾರವು ಮಾಡಿದ್ದ ಶಿಫಾರಸ್ಸನ್ನು ಬದಿಗಿರಿಸಿದ್ದ ರಾಜ್ಯಪಾಲರು ಸರ್ಕಾರವು ಶಿಫಾರಸ್ಸು ಮಾಡದೇ ಇದ್ದ ಅಭ್ಯರ್ಥಿಯನ್ನು ಕುಲಪತಿಯನ್ನಾಗಿ ನೇಮಕ ಮಾಡಿದ್ದರು ಎಂಬುದು ಇದೀಗ ದಾಖಲೆ ಸಹಿತ ಬಹಿರಂಗವಾಗಿದೆ.

ಕುಲಪತಿಗಳ ನೇಮಕಕ್ಕೆ 6-7 ಕೋಟಿ ಹಣದ ವ್ಯವಹಾರ ನಡೆದಿದೆ ಎಂಬ ಗುರುತರವಾದ ಆರೋಪವನ್ನು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರು ಆಡಿದ್ದ ಮಾತುಗಳು ವಿಶ್ವವಿದ್ಯಾಲಯ ಮತ್ತು ಶೈಕ್ಷಣಿಕ ವಲಯದಲ್ಲಿ ಹೆಚ್ಚು ಚರ್ಚೆಗಳಾಗುತ್ತಿರುವ ಹೊತ್ತಿನಲ್ಲಿಯೇ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಕುಲಪತಿ ಹುದ್ದೆಗೆ ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸ್ಸನ್ನು ರಾಜ್ಯಪಾಲರು ಬದಿಗಿರಿಸಿದ್ದರು ಎಂಬುದು ಇದೀಗ  ಮುನ್ನೆಲೆಗೆ ಬಂದಿದೆ. ಈ ಸಂಬಂಧ ‘ದಿ ಫೈಲ್‌’ಗೆ ಕೆಲ ದಾಖಲೆಗಳು ಲಭ್ಯವಾಗಿವೆ.

ಕುಲಪತಿ ಹುದ್ದೆಗೆ ನೇಮಕ ಮಾಡುವ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಸಮಾಲೋಚನೆ ನಡೆಸಬೇಕು ಎಂಬ ಅಧಿನಿಯಮವಿದ್ದರೂ ಶೋಧನಾ ಸಮಿತಿಯು ಮಾಡಿದ್ದ  ಆಯ್ಕೆಪಟ್ಟಿಯಲ್ಲಿ ರಾಜ್ಯ ಸರ್ಕಾರವು ಮಾಡಿದ್ದ ಶಿಫಾರಸ್ಸನ್ನು ರಾಜ್ಯಪಾಲರು ಪುರಸ್ಕರಿಸದಿರುವುದೂ ಚರ್ಚೆಗೆ ಗ್ರಾಸವಾಗಿದೆ.

ಭೂಪಾಲ್‌ನಲ್ಲಿರುವ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಡಾ ವಿ ವಿಜಯಕುಮಾರ್‌ ಅಧ್ಯಕ್ಷತೆಯಲ್ಲಿ ರಚಿತವಾಗಿದ್ದ ಶೋಧನಾ ಸಮಿತಿಯು ಅಶೋಕ್‌ ರಾಮಪ್ಪ ಪಾಟೀಲ್, ಡಾ ಬಸವರಾಜು ಸಿ, ಪ್ರೊ ನಂದಿಮಠ ಓಂಪ್ರಕಾಶ್‌ ವೀರಯ್ಯ ಅವರನ್ನೊಳಗೊಂಡ ಆಯ್ಕೆಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.

ಶೋಧನಾ ಸಮಿತಿ ಮಾಡಿದ್ದ ಶಿಫಾರಸ್ಸು ಪ್ರತಿ

ಈ ಪೈಕಿ ಆರ್ಹತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯ ತತ್ವದಡಿಯಲ್ಲಿ ಕಾನೂನು ಸಂಸದೀಯ ಸಚಿವ ಜೆ ಸಿ ಮಾಧುಸ್ವಾಮಿ ಅವರು ಪ್ರೊ ನಂದಿಮಠ ಓಂಪ್ರಕಾಶ್‌ ವೀರಯ್ಯ ಅವರನ್ನು ಕುಲಪತಿ ಹುದ್ದೆಗೆ ಶಿಫಾರಸ್ಸು ಮಾಡಿದ್ದರು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಅನುಮೋದಿಸಿದ್ದರು ಎಂಬುದು ದಾಖಲೆಯಿಂದ (NO LAW 55 KLM 2022) ತಿಳಿದು ಬಂದಿದೆ.

ಕಾನೂನು ವಿವಿ ಕುಲಪತಿ ಹುದ್ದೆಗೆ ಹೆಸರು ಶಿಫಾರಸ್ಸು ಮಾಡಿ ಕಾನೂನು ಇಲಾಖೆ ಬರೆದಿದ್ದ ಪತ್ರದ ಪ್ರತಿ

ಆದರೆ ರಾಜ್ಯಪಾಲರು ಪ್ರೊ ನಂದಿಮಠ ಓಂಪ್ರಕಾಶ್‌ ವೀರಯ್ಯ ಅವರ ಬದಲಿಗೆ ಡಾ ಸಿ ಬಸವರಾಜು ಎಂಬುವರನ್ನು ನೇಮಕಗೊಳಿಸಿದ್ದರು.

ಕುಲಪತಿ ಹುದ್ದೆಗೆ ನೇಮಕ ಮಾಡುವಾಗ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರು ಅರ್ಹತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವವನ್ನು ಅನುಸರಿಸಬೇಕು. ಇದನ್ನು ರಾಜ್ಯ ಸರ್ಕಾರದೊಂದಿಗೆ ಸಮಾಲೋಚನೆ ಮತ್ತು ಒಪ್ಪಿಗೆಯನ್ನೂ ಪಡೆಯಬೇಕು. ಆದರೆ ಕಾನೂನು ವಿಶ್ವವಿದ್ಯಾಲಯ ಕುಲಪತಿ ಹುದ್ದೆಗೆ ನೇಮಕ ಪ್ರಕ್ರಿಯೆ ಸಂದರ್ಭದಲ್ಲಿ ಈ ಪ್ರಕ್ರಿಯೆಗಳು ನಡೆದಿಲ್ಲ ಎಂಬುದು ಲಭ್ಯವಿರುವ ದಾಖಲೆಯಿಂದ ತಿಳಿದು ಬಂದಿದೆ.

ಪ್ರೊ ಡಾ ಜಿ ಆರ್‌ ಜಗದೀಶ್‌, ಪ್ರೊ ಎಸ್‌ ಯು ಕೆ ಪಾಟೀಲ್‌, ಪ್ರೊ ಬಿ ಎಸ್ ರೆಡ್ಡಿ, ಡಾ ರಮೇಶ್‌, ಶರತ್‌ ಬಾಬು, ಡಾ ಶಿವಾನಂದ ಹೆಚ್‌, ಪ್ರೊ ವೆಂಕಟಚಲಾ ಜಿ ಹೆಗ್ಡೆ ಅವರು ಸೇರಿದಂತೆ ಒಟ್ಟು 10 ಮಂದಿ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು.

Hot this week

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮನವಿ; ಸ್ಪಷ್ಟ ಅಭಿಪ್ರಾಯ ಸಲ್ಲಿಸಲು ಡಿಜಿಐಜಿಪಿಗೆ ನಿರ್ದೇಶನ

ಬೆಂಗಳೂರು;   ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧದ ಪ್ರಕರಣದಲ್ಲಿ ಸಿಐಡಿ ವಿಶೇಷ ವಿಚಾರಣೆ...

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...
Please Scan to make Your Contribution

Topics

ವಿಮಾ ಕಂಪನಿಯಿಂದ ಹಣ ಬಂದಿದೆ, ಆದರೆ ರೈತರ ಖಾತೆಗಳಿಗೆ ಜಮೆಯೇ ಆಗಿಲ್ಲ; ಬರಗಾಲದ ನಡುವೆಯೇ ರೈತರಿಗೆ ಮತ್ತೊಂದು ಬರೆ

ಬೆಂಗಳೂರು;  ರಾಜ್ಯದಾದ್ಯಂತ ತೀವ್ರ ಬರಗಾಲ ಎದುರಾಗಿರುವ ನಡುವೆಯೇ  2025-26ನೇ ಮುಂಗಾರು ಹಂಗಾಮಿನ...

ಪ್ರಿಂಟರ್, ಸ್ಕ್ಯಾನರ್ ಕೂಡ ಲಭ್ಯವಿಲ್ಲ, ಇ-ಮೇಲ್‌ ಮಾಡಲೂ ಕಷ್ಟಸಾಧ್ಯ; ಸರ್ಕಾರದ ಆರ್ಥಿಕ ಪರಿಸ್ಥಿತಿ ತೆರೆದಿಟ್ಟ ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ

ಬೆಂಗಳೂರು; ಚಾಲ್ತಿಯಲ್ಲಿರುವ ಮತ್ತು ಹೊಸ ಯೋಜನೆಗಳಿಗೆ ಅನುದಾನ ಹೊಂದಿಸಲು ಏದುಸಿರು ಬಿಡುತ್ತಿರುವ...

Related Articles

Popular Categories

error: Content is protected !!