Thursday | April 16, 2026 |

465 ಕೋಟಿ ಕಾಮಗಾರಿ ಗುತ್ತಿಗೆ; ನಿಯಮ ಉಲ್ಲಂಘಿಸಿರುವ ಅಧಿಕಾರಿಗಳ ಪಟ್ಟಿ ಒದಗಿಸದ ನಿಗಮ

ಬೆಂಗಳೂರು; ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ವಿಸ್ತರಣೆ, ನವೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಂದಾಜಿಸಿದ್ದ ಯೋಜನಾ ಮೊತ್ತಕ್ಕೆ ಸರ್ಕಾರದ ಅನುಮೋದನೆ ಪಡೆಯದೇ ಮತ್ತು ನಿಯಮ ಉಲ್ಲಂಘಿಸಿ 465 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಗುತ್ತಿಗೆ ನೀಡಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ಪಟ್ಟಿಯನ್ನು ಕೃಷ್ಣಭಾಗ್ಯ ಜಲನಿಗಮ ಒದಗಿಸಿಲ್ಲ. ಪಟ್ಟಿ ಒದಗಿಸಬೇಕು ಎಂದು ಆರ್ಥಿಕ ಇಲಾಖೆಯ ನಿರ್ದೇಶನವನ್ನೂ ನಿಗಮವು ಉಲ್ಲಂಘಿಸಿದೆ.

ಹಾಗೆಯೇ ನಿಗಮದ ಅಧಿಕಾರಿಗಳು ನೀಡಿದ್ದ ಸಮಜಾಯಿಷಿಯನ್ನು ಆರ್ಥಿಕ ಇಲಾಖೆಯು ಒಪ್ಪಿಲ್ಲ. ಅಲ್ಲದೇ ಸಚಿವ ಸಂಪುಟದ ಅನುಮೋದನೆಯನ್ನೇ ಪಡೆಯದೇ ಟೆಂಡರ್‌ ಆಹ್ವಾನಿಸಿದ್ದಲ್ಲದೇ ಕಾಮಗಾರಿಯನ್ನೂ ಕೈಗೆತ್ತಿಕೊಂಡಿರುವುದನ್ನು ‘ದಿ ಫೈಲ್‌’ ಇದೀಗ ದಾಖಲೆ ಸಹಿತ ಬಹಿರಂಗಗೊಳಿಸುತ್ತಿದೆ. ಈ ಕುರಿತು ‘ದಿ ಫೈಲ್‌’ 500 ಕ್ಕೂ ಹೆಚ್ಚು ಪುಟಗಳನ್ನೊಳಗೊಂಡಿರುವ ಸಮಗ್ರ ಕಡತವನ್ನು ಆರ್‌ಟಿಐ ಅಡಿಯಲ್ಲಿ ಪಡೆದುಕೊಂಡಿದೆ.

465 ಕೋಟಿ ರು ಮೊತ್ತದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಿಯಮಗಳ ಉಲ್ಲಂಘನೆ ಕುರಿತು ಕೃಷ್ಣಭಾಗ್ಯ ಜಲನಿಗಮದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದರು. ‘ ಕಾಮಗಾರಿಗೆ ಸಂಬಂಧಿಸಿದಂತೆ ಕೃಷ್ಣಭಾಗ್ಯ ಜಲನಿಗಮ ನಿಯಮಿತದ ನಿರ್ದೇಶಕರ ಮಂಡಳಿ ಸಭೆಯು ಅನುಮೋದನೆಗಳಿಗೆ ಸಕ್ಷಮ ಪ್ರಾಧಿಕಾರವಾಗಿದ್ದು ಸದರಿ ಮಂಡಳಿ ಅನುಮೋದನೆಯಂತೆ ಅಧಿಕಾರಿಗಳು ಕಾರ್ಯನಿರ್ವಹಿಸಿರುತ್ತಾರೆ. ಹಾಗೂ ಇದರಲ್ಲಿ ಯಾವುದೇ ಲೋಪದೋಷವಾಗಿರುವುದಿಲ್ಲ. ಇದಕ್ಕೆ ಯಾವುದೇ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡುವ ಪ್ರಮೇಯ ಉದ್ಭವಿಸುವುದಿಲ್ಲ,’ ಎಂದು ಆರ್ಥಿಕ ಇಲಾಖೆಗೆ ಸಮಜಾಯಿಷಿ ನೀಡಿತ್ತು.

ಸಮಜಾಯಿಷಿ ಒಪ್ಪದ ಆರ್ಥಿಕ ಇಲಾಖೆ

‘ಕರ್ನಾಟಕ ಸರ್ಕಾರ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು 1977ರ ಮೊದಲನೆ ಅನುಸೂಚಿಯ 15(iii) ಪ್ರಕಾರ ಮೂಲ ಅಂದಾಜು 10.00 ಕೋಟಿ ಮೀರಿದಲ್ಲಿ ಮತ್ತು ಪರಿಷ್ಕೃತ ಅಂದಾಜುಗಳು ಮೂಲ ಅಂದಾಜುಗಳಿಗಿಂತ ಶೇ.25ರಷ್ಟು ಅಥವಾ 10.00 ಕೋಟಿಗಳಷ್ಟು ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟನ್ನು ಮೀರಿದರೇ ಅದನ್ನು ಮತ್ತೆ ಸಚಿವ ಸಂಪುಟದ ಮುಂದೆ ಮಂಡಿಸಿ ಆಡಳಿತಾತ್ಮಕ ಅನುಮೋದನೆ ಪಡೆಯಬೇಕಾಗಿರುತ್ತದೆ. ಆದ್ದರಿಂದ ಇಲಾಖೆಯು ನೀಡಿರುವ ಸ್ಪಷ್ಟೀಕರಣವನ್ನು ಒಪ್ಪಲು ಸಾಧ್ಯವಿರುವುದಿಲ್ಲ,’ ಎಂದು ಆರ್ಥಿಕ ಇಲಾಖೆಯ ವಿಶೇಷ ಅಧಿಕಾರಿ ವೈ ಬಿ ಹೊನ್ನಲಿಂಗಪ್ಪ ಅವರು ಟಿಪ್ಪಣಿಯಲ್ಲಿ ದಾಖಲಿಸಿದ್ದಾರೆ.

ಅಡಳಿತ ಇಲಾಖೆಯು ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೇ, ಅರ್ಥಿಕ ಇಲಾಖೆಯ ಗಮನಕ್ಕೂ ತರದೇ ರೂ 465.00 ಕೋಟಿ ರು.ಗಳ ಕಾಮಗಾರಿಗಳಿಗೆ ಗುತ್ತಿಗೆ ನೀಡಿ ಕೈಗೆತ್ತಿಕೊಂಡಿರುವುದು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆರ್ಥಿಕ ಇಲಾಖೆಯು ಬಲವಾದ ಆಕ್ಷೇಪ ಎತ್ತಿತ್ತು.

ಈ ಸಂಬಂಧ ಸದರಿ ಪ್ರಕ್ರಿಯೆಯಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಹಾಗೂ ಸದರಿ ಪ್ರಸ್ತಾವನೆಗೆ ವೆಚ್ಚ ಭರಿಸಲು ಇಲಾಖೆಯಡಿ ಯಾವ non-grounded ಕಾಮಗಾರಿಗಳನ್ನು ಕಡಿತಗೊಳಿಸಲಾಗುವುದು ಎಂಬ ಬಗ್ಗೆ ಮಾಹಿತಿ ನೀಡಬೇಕು ಎಂದು ಅರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ ಗಾಯಿತ್ರಿ ಅವರು 2022ರ ಸೆಪ್ಟಂಬರ್‌ 13ರಂದು ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದನ್ನು ಸ್ಮರಿಸಬಹುದು.

Hot this week

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

Topics

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Related Articles

Popular Categories

error: Content is protected !!