Tuesday | August 25, 2026 |

ಕೋವಿಡ್‌ ಅವಧಿಯಲ್ಲಿ ವ್ಯಾಪಕ ಅರಣ್ಯನಾಶ; ಸಮೀಕ್ಷಾ ವರದಿಯನ್ನೇ ಮುಚ್ಚಿಟ್ಟ ಜೀವವೈವಿಧ್ಯ ಮಂಡಳಿ

ಬೆಂಗಳೂರು; ಕರೋನಾ ಸಂದರ್ಭದಲ್ಲಿ ಮಲೆನಾಡಿನಲ್ಲಿ ವ್ಯಾಪಕವಾಗಿ ಅರಣ್ಯ ನಾಶ, ಅತಿಕ್ರಮಣ, ಮರಗಳ್ಳತನ ಹೆಚ್ಚಾಗಿರುವ ಕುರಿತಂತೆ ಸಲ್ಲಿಕೆಯಾಗಿದ್ದ ಸಮೀಕ್ಷಾ ವರದಿಯನ್ನೇ ಕರ್ನಾಟಕ ಜೀವವೈವಿಧ್ಯ ಮಂಡಳಿಯು ಮುಚ್ಚಿ ಹಾಕಿದೆ.

ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ಸಮೀಕ್ಷೆ ವರದಿಗಾಗಿ ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ 2022ರ ಆಗಸ್ಟ್‌ 26ರಂದು ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ಸರ್ಕಾರಕ್ಕೆ ಯಾವುದೇ ಸಮೀಕ್ಷೆ ವರದಿಯನ್ನು ಸಲ್ಲಿಸಿಲ್ಲ ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿಯು ಲಿಖಿತ ಮಾಹಿತಿ ನೀಡಿದೆ.

ಕರೋನಾ ಸಂದರ್ಭದಲ್ಲಿ ಮಲೆನಾಡಿನಲ್ಲಿ ವ್ಯಾಪಕ ಅರಣ್ಯ ನಾಶ, ಅತಿಕ್ರಮಣ, ಮರಗಳ್ಳತನ ಹೆಚ್ಚಾಗಿರುವ ಕುರಿತಂತೆ ಕರ್ನಾಟಕ ಜೀವ ವೈವಿಧ್ಯ ಮಂಡಳಿಯು ಸರ್ಕಾರಕ್ಕೆ ಸಮೀಕ್ಷೆ ವರದಿ ಸಲ್ಲಿಸಿತ್ತು. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯು ಅರಣ್ಯಪಡೆಯ ಮುಖ್ಯಸ್ಥರಿಗೆ 2021ರ ಅಕ್ಟೋಬರ್‌ 21 ರಂದೇ ಪತ್ರ ಬರೆದಿದ್ದರು. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಪತ್ರದಲ್ಲೇನಿದೆ?

‘ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೆಖಿತ ಪತ್ರದೊಂದಿಗೆ ಅಧ್ಯಕ್ಷರು, ಜೀವ ವೈವಿಧ್ಯ ಮಂಡಳಿ ಬೆಂಗಳೂರು ಇವರ ಪತ್ರ ಮತ್ತು ಸಮೀಕ್ಷಾ ವರದಿಯನ್ನು ಲಗತ್ತಿಸಿ ಕರೋನಾ ಲಾಕ್‌ ಡೌನ್‌ ಸಂದರ್ಭದಲ್ಲಿ ಮಲೆನಾಡಿನಲ್ಲಿ ವ್ಯಾಪಕ ಅರಣ್ಯನಾಶ, ಅತಿಕ್ರಮಣ, ಮರಗಳ್ಳತನ ಹೆಚ್ಚಾಗಿರುವ ಕುರಿತುಸಲ್ಲಿಸಿರುವ ವರದಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಲಾಗಿತ್ತು. ಆದ್ದರಿಂದ ಸದರಿ ವರದಿ ಮೇಲೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಒದಗಿಸಬೇಕು,’ ಎಂದು ಅರಣ್ಯ ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ 2021ರ ಅಕ್ಟೋಬರ್‌ 21ರಂದು ಬರೆದಿದ್ದ ಪತ್ರದಲ್ಲಿ ನಿರ್ದೇಶಿಸಿದ್ದರು.

ಈ ಪತ್ರವನ್ನಾಧರಿಸಿ ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಗೆ 2 ತಿಂಗಳ ನಂತರ ಮಾಹಿತಿ ಒದಗಿಸಿರುವ ಕರ್ನಾಟಕ ಜೀವಿವೈವಿಧ್ಯ ಮಂಡಳಿಯು ‘ ಕರ್ನಾಟಕ ಜೀವಿವೈವಿಧ್ಯ ಮಂಡಳಿಯು ಯಾವುದೇ ಸಮೀಕ್ಷೆ ವರದಿ ಸಲ್ಲಿಸಿರುವುದಿಲ್ಲ,’ ಎಂದು ಮಾಹಿತಿ ಹಕ್ಕು 2005ರಡಿ ಅರ್ಜಿಯನ್ನು ವಿಲೇ ಮಾಡಿದೆ.

2021ರ ಅಕ್ಟೋಬರ್‌ 21ರಂದು ಅರಣ್ಯ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೇ ಸಮೀಕ್ಷಾ ವರದಿ ಆಧರಿಸಿ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶಿಸಿದ್ದರೂ ಸರ್ಕಾರಕ್ಕೆ ಯಾವುದೇ ಸಮೀಕ್ಷೆ ವರದಿಯನ್ನೇ ಸಲ್ಲಿಸಿಲ್ಲ ಎಂದು ಮಂಡಳಿಯು ಉತ್ತರ ನೀಡಿರುವುದರ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ.

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!