Wednesday | September 16, 2026 |

ಹಸಿವು ಮುಕ್ತ ಸೇರಿ ಸುಸ್ಥಿರ ಅಭಿವೃದ್ಧಿ ಗುರಿ ಮುಟ್ಟುವಲ್ಲಿ ವಿಫಲ; ನೆರೆರಾಜ್ಯಗಳಿಗೆ ಹೋಲಿಸಿದರೆ ಕಳಪೆ

ಬೆಂಗಳೂರು; ಬಡತನ ಮುಕ್ತ, ಹಸಿವುಮುಕ್ತ, ಗುಣಮಟ್ಟದ ಶಿಕ್ಷಣ, ಅಸಮಾನತೆಗಳ ಇಳಿಕೆ, ಶುದ್ಧ ನೀರು ಮತ್ತು ನೈರ್ಮಲ್ಯ ಸೇರಿದಂತೆ ಇನ್ನಿತರ ವಲಯಗಳಲ್ಲಿನ ಸುಸ್ಥಿರ ಅಭಿವೃದ್ದಿ ಗುರಿಗಳು ಭಾರತ ಸೂಚ್ಯಂಕ ವರದಿ 2020-21ರ ಪ್ರಕಾರ ದೇಶದ ಹಲವು ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕವು ಹಿಂದುಳಿದಿದೆ ಎಂಬ ಸಂಗತಿಯನ್ನು ಕರ್ನಾಟಕ ಆರ್ಥಿಕ ಸಮೀಕ್ಷೆ (2022-23)ಬಹಿರಂಗಪಡಿಸಿದೆ.

 

ಸುಸ್ಥಿರ ಅಭಿವೃದ್ಧಿ ಗುರಿಯಲ್ಲಿ ರಾಜ್ಯ ಸರ್ಕಾರವು ಮುಂಚೂಣಿಯಲ್ಲಿದೆ ಎಂದು ಇತ್ತೀಚೆಗಷ್ಟೇ ರಾಜ್ಯ ಬಿಜೆಪಿ ಸರ್ಕಾರವು ಭರ್ಜರಿ ಪ್ರಚಾರ ಪಡೆದುಕೊಂಡಿದ್ದರ ಬೆನ್ನಲ್ಲೇ ಕರ್ನಾಟಕ ಆರ್ಥಿಕ ಸಮೀಕ್ಷೆಯು ನೀಡಿರುವ ವರದಿಯು ಮುನ್ನೆಲೆಗೆ ಬಂದಿದೆ.

 

ವಾಜಪೇಯಿ ನಗರ ವಸತಿ ಯೋಜನೆ, ಪ್ರಧಾನಮಂತ್ರಿ ಆವಾಸ್‌, ಡಿ ದೇವರಾಜ ಅರಸು ವಸತಿ, ಡಾ ಬಿ ಆರ್‌ ಅಂಬೇಡ್ಕರ್‌ ನಿವಾಸ್‌, ಪೂರಕ ಪೌಷ್ಠಿಂಕಾಂಶ, ಮಾತೃವಂದನ, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ, ಸಮಗ್ರ ಶಿಕ್ಷಣ, ರಾಷ್ಟ್ರೀಯ ಉಚ್ಛತರ ಶಿಕ್ಷಾ ಅಭಿಯಾನ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಸೇಫ್‌ ಸಿಟಿ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಅಭಿವೃದ್ಧಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ, ಮುಖ್ಯಮಂತ್ರಿ ನೈರ್ಮಲ್ಯ ಯೋಜನೆ, ವಾಯುಮಾಲಿನ್ಯ ಸೇರಿದಂತೆ ಇನ್ನಿತರೆ ವಲಯಗಳಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಸುಸ್ಥಿರ ಅಭಿವೃದ್ಧಿ ಸಾಧಿಸಲು ಗುರಿ ನಿಗದಿಪಡಿಸಿತ್ತು.

 

ಕೇಂದ್ರ ಪುರಸ್ಕೃತ ಮತ್ತು ರಾಜ್ಯ ವಲಯ ಯೋಜನೆಗಳ ವ್ಯಾಪ್ತಿಯಲ್ಲಿ ಕಚ್ಛಾ ಮನೆಗಳು, ಬೆಳವಣಿಗೆ ಕುಂಠಿತವಾಗಿರುವುದು ಮತ್ತು ತೂಕ ಕಡಿಮೆ ಇರುವ ಮಕ್ಕಳು, ಗರ್ಭಿಣಿಯರಲ್ಲಿ ರಕ್ತಹೀನತ ಹೊಂದಿರುವುದು, ತಾಯಂದಿರ ಮರಣ ಪ್ರಮಾಣ ಕನಿಷ್ಠ ಮಾಧ್ಯಮಿಕ ಶಿಕ್ಷಣ, ಪುರುಷ ಕಾರ್ಮಿಕರ ಭಾಗವಹಿಸುವಿಕೆಯ ದರಕ್ಕೆ ಮಹಿಳಾ ಕಾರ್ಮಿಕ ಶಕ್ತಿಯ ಭಾಗವಹಿಸುವಿಕೆ ದರ, ಮಹಿಳಾ ಜನಸಂಖ್ಯೆಗೆ ಅನುಗುಣವಾಗಿ ಮಹಿಳೆಯರ ಮೇಲಿನ ಅಪರಾಧಗಳ ಪ್ರಮಾಣ, ಕೊಳವೆ ನೀರು ಸರಬರಾಜಿನ ಮೂಲಕ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರು ಪಡೆಯುವುದು, ನಿರುದ್ಯೋಗ ಪ್ರಮಾಣ, ಕಾರ್ಮಿಕ ಬಲದ ಭಾಗವಹಿಸುವಿಕೆ, ಪ್ರತಿ ಲಕ್ಷ ಜನಸಂಖ್ಯೆಗೆ ಪರಿಶಿಷ್ಟ ಪಂಗಡ ಮತ್ತು ಜಾತಿಗಳ ವಿರುದ್ಧದ ಅಪರಾಧಗಳು, ಒಳಚರಂಡಿ ಸೇರಿದಂತೆ 46 ವಲಯಗಳಲ್ಲಿ ದೇಶದ ಹಲವು ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕವು ಸುಸ್ಥಿರ ಅಭಿವೃದ್ಧಿ ಗುರಿ ಮುಟ್ಟುವಲ್ಲಿ ಹಿಂದುಳಿದಿದೆ ಎಂಬ ಸಂಗತಿಯು ಆರ್ಥಿಕ ಸಮೀಕ್ಷೆಯಿಂದ ತಿಳಿದು ಬಂದಿದೆ.

 

ಕೇರಳ, ಗೋವಾ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಅರುಣಾಚಲ ಪ್ರದೇಶ, ಛತ್ತೀಸ್‌ ಘಡ್‌, ಹಿಮಾಚಲ ಪ್ರದೇಶ,ಗುಜರಾತ್‌, ಜಮ್ಮು ಕಾಶ್ಮೀರ್‌, ಪಶ್ಚಿಮಬಂಗಾಳ, ಮಧ್ಯ ಪ್ರದೇಶ, ರಾಜಸ್ಥಾನ, ಹರ್ಯಾಣ, ಮಹಾರಾಷ್ಟ್ರ ರಾಜ್ಯಗಳು ಈ ವಲಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೆ, ಕರ್ನಾಟಕವು ಹಿಂದುಳಿದಿದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದೆ.

 

ವಾಜಪೇಯಿ ನಗರ ವಸತಿ ಯೋಜನೆ, ಪ್ರಧಾನಮಂತ್ರಿ ಆವಾಸ್‌ ಯೋಜನೆ ಸೇರಿದಂತೆ ಇನ್ನಿತರೆ ವಸತಿ ಯೋಜನೆಗಳಲ್ಲಿ ಕರ್ನಾಟಕವು 2.00 ಸೂಚ್ಯಂಕದಲ್ಲಿದೆ. . ಪೂರಕ ಪೌಷ್ಠಿಕಾಂಶ (ಬೆಳವಣಿಗೆ ಕುಂಠಿತವಾಗಿರುವ ಶೇಕಡವಾರು ಮಕ್ಕಳು) ಕಾರ್ಯಕ್ರಮದಲ್ಲಿ 32.50, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಲ್ಲಿ (ತಾಯಂದಿರ ಮರಣ ಪ್ರಮಾಣ) 92.00, ಸಮಗ್ರ ಶಿಕ್ಷಣ ಅಭಿಯಾನ (ಕನಿಷ್ಠ ಮಾಧ್ಯಮಿಕ ಶಿಕ್ಷಣ)ದಲ್ಲಿ 1.07, ಉನ್ನತ ಶಿಕ್ಷಣದಲ್ಲಿ ಒಟ್ಟು ದಾಖಲಾತಿಯಲ್ಲಿ 10.80, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿಯಲ್ಲಿ 0.59, ಪರಿಶಿಷ್ಟರ ಮೇಲಿನ ದೌರ್ಜನ್ಯದಲ್ಲಿ 7.70, ಸೇಫ್‌ ಸಿಟಿ ಯೋಜನೆಯಡಿಯಲ್ಲಿ 2.82, ಮಕ್ಕಳ ವಿರುದ್ಧ ಗುರುತಿಸಬಹುದಾದ ಅಪರಾಧಗಳಲ್ಲಿ 32.20ರಷ್ಟು ಸೂಚ್ಯಂಕ ಹೊಂದಿದೆ. ಇದೇ ವಿಭಾಗದಲ್ಲಿ ಅನ್ಯ ರಾಜ್ಯಗಳು ಉತ್ತಮ ಮತ್ತು ಅತ್ಯುತ್ತಮ ಪ್ರದರ್ಶನ ತೋರಿರುವುದು ಸಮೀಕ್ಷೆ ವರದಿಯಿಂದ ಗೊತ್ತಾಗಿದೆ.

 

ಅಲ್ಲದೇ ಇದೇ ವಿಭಾಗದ ಒಟ್ಟು 16 ವಲಯಗಳಲ್ಲಿ ಸುಸ್ಥಿರ ಅಭಿವೃದ್ಧಿ ಗುರಿ ಸಾಧಿಸಲು 2023-24ನೇ ಸಾಲಿಗೆ 13,180.53 ಕೋಟಿ ರು.ಗಳನ್ನು ಪ್ರಸ್ತಾವಿಸಿದೆ. ಕಳೆದ ಆರ್ಥಿಕ ವರ್ಷ (2022-23)ದಲ್ಲಿ ಇದೇ ಉದ್ದೇಶಕ್ಕೆ ಆಯವ್ಯಯದಲ್ಲಿ 23,586.21 ಕೋಟಿ ರು. ಗಳನ್ನು ಹಂಚಿಕೆ ಮಾಡಲಾಗಿತ್ತು.

 

ಕಳೆದ ವರ್ಷದ ಹಂಚಿಕೆಯೂ ಸೇರಿದಂತೆ ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಒಟ್ಟಾರೆ 36,766.74 ಕೋಟಿ ರು. ಪ್ರಸ್ತಾಪಿಸಿದಂತಾಗಿದೆ. ಈ ಸಂಬಂಧ ಯೋಜನಾ ಇಲಾಖೆಯು ಮಂಡಿಸಿರುವ ಪ್ರಸ್ತಾವನೆ ಮತ್ತು ಅಂಕಿ ಅಂಶಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

Hot this week

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

ಅದಾನಿ ಎಸಿಸಿ ಸಮೂಹಕ್ಕೆ ವಿಧಿಸಿದ್ದ 482.69 ಕೋಟಿ ರು ದಂಡದ ಬೇಡಿಕೆ ರದ್ದು; ರಾಜ್ಯದ ಅರ್ಜಿಯೂ ವಜಾ, ಪರಿಣಾಮಕಾರಿಯಾಗಿ ವಾದ ಮಂಡಿಸುವಲ್ಲಿ ವಿಫಲವಾಯಿತೇ ರಾಜ್ಯ?

ಬೆಂಗಳೂರು; ಕಲಬುರಗಿ ಜಿಲ್ಲೆಯ ಇಂಗಳಗಿ ಮತ್ತು ರಾವೂರ್ ಗ್ರಾಮಗಳಲ್ಲಿ ಗಣಿಗಾರಿಕೆ ನಡೆಸುತ್ತಿದ್ದ...

ಪೆರಿಫೆರಲ್ ರಿಂಗ್‌ ರೋಡ್‌- 2; 4,500 ಕೋಟಿ ಭೂ ಪರಿಹಾರ, 15,450 ಕೋಟಿ ಅಂದಾಜು ವೆಚ್ಚ, ಸರ್ಕಾರಕ್ಕೆ ಪರಿಷ್ಕೃತ ಯೋಜನೆ ಸಲ್ಲಿಕೆ

ಬೆಂಗಳೂರು; ರೈತರು ಮತ್ತು  ಸ್ಥಳೀಯರ ವಿರೋಧದ ನಡುವೆಯೂ ಫೆರಿಫೆರಲ್ ರಿಂಗ್‌ ರಸ್ತೆ (ಭಾಗ...
Please Scan to make Your Contribution

Topics

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

ಪೆರಿಫೆರಲ್ ರಿಂಗ್‌ ರೋಡ್‌- 2; 4,500 ಕೋಟಿ ಭೂ ಪರಿಹಾರ, 15,450 ಕೋಟಿ ಅಂದಾಜು ವೆಚ್ಚ, ಸರ್ಕಾರಕ್ಕೆ ಪರಿಷ್ಕೃತ ಯೋಜನೆ ಸಲ್ಲಿಕೆ

ಬೆಂಗಳೂರು; ರೈತರು ಮತ್ತು  ಸ್ಥಳೀಯರ ವಿರೋಧದ ನಡುವೆಯೂ ಫೆರಿಫೆರಲ್ ರಿಂಗ್‌ ರಸ್ತೆ (ಭಾಗ...

ದಿ ಫೈಲ್‌ ಸಂಪಾದಕರಿಗೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ; ಅಪರಿಚಿತನ ವಿರುದ್ಧ ಕಡೆಗೂ ಎಫ್‌ಐಆರ್ ದಾಖಲಿಸಿದ ಪೊಲೀಸರು

ಬೆಂಗಳೂರು; ದಿ ಫೈಲ್‌ ಸುದ್ದಿ ಜಾಲತಾಣದಲ್ಲಿ ಪ್ರಕಟಿಸಿದ್ದ ವರದಿ ಉಲ್ಲೇಖಿಸಿ ಸಂಪಾದಕರಿಗೆ...

ಬಹು ದೊಡ್ಡ ಬರಗಾಲ; ಜಿಲ್ಲಾಧಿಕಾರಿಗಳ ಪಿ ಡಿ ಖಾತೆಗಳಲ್ಲಿ 310 ಕೋಟಿಯಷ್ಟೇ ಲಭ್ಯ

ಬೆಂಗಳೂರು; ರಾಜ್ಯದ ಇತಿಹಾಸದಲ್ಲಿ ಎರಡನೇ ಬಾರಿಗೆ ಕಾಣಿಸಿಕೊಂಡಿರುವ ಬಹುದೊಡ್ಡ ಬರಕ್ಕೆ ತುತ್ತಾಗಿರುವ...

Related Articles

Popular Categories

error: Content is protected !!