Wednesday | September 23, 2026 |

ಜನಸೇವಾ ಟ್ರಸ್ಟ್‌ಗೆ 25 ಎಕರೆ ನೀಡಿದ್ದರೂ ಹೆಚ್ಚುವರಿ 10.33 ಎಕರೆ ಮಂಜೂರು; ಸಂಘದ ಮೋಹ ಬಿಡಲೊಲ್ಲದ ಸರ್ಕಾರ

ಬೆಂಗಳೂರು; ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಈಗಾಗಲೇ ರಾಜ್ಯ ಸರ್ಕಾರದಿಂದ 25 ಎಕರೆ ವಿಸ್ತೀರ್ಣ ಗೋಮಾಳ ಮಂಜೂರಾಗಿದ್ದರೂ 2023ರ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಹೊರಡುವ ಮುನ್ನವೇ 10.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

 

ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯ ಸರ್ವೆ ನಂಬರ್‌ 89ರಲ್ಲಿದ್ದ ಒಟ್ಟು 40.20 ಎಕರೆ ಪೈಕಿ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಜನಸೇವಾ ಟ್ರಸ್ಟ್‌ಗೆ 2022ರ ಸೆ. 13ರಂದು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಇದಾಗಿ 6 ತಿಂಗಳ ಒಳಗೇ ಇದೇ ಸರ್ವೇ ನಂಬರ್‌ನಲ್ಲಿ ಹೆಚ್ಚುವರಿಯಾಗಿ 10.33 ಎಕರೆ ಜಮೀನನ್ನು ಮಂಜೂರು ಮಾಡಿ ಆದೇಶ ಹೊರಡಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಜನಸೇವಾ ಟ್ರಸ್ಟ್‌ 25 ಎಕರೆ ಮಂಜೂರು ಮಾಡಿಸಿಕೊಂಡಿದ್ದರೂ ಪುನಃ 15 ಎಕರೆ ಹೆಚ್ಚುವರಿ ಜಮೀನಿಗೆ ಬೇಡಿಕೆ ಇಟ್ಟಿತ್ತು. ಈ ಪೈಕಿ 10.33 ಎಕರೆ ಜಮೀನನ್ನು ಮಂಜೂರು ಮಾಡಿ 2023ರ ಮಾರ್ಚ್‌ 16ರಂದು ಆದೇಶ ಹೊರಡಿಸಿದೆ. ಈ ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಜನಸೇವಾ ಟ್ರಸ್ಟ್‌ ಈಗಾಗಲೇ ಚನ್ನೇನಹಳ್ಳಿಯಲ್ಲಿ ಅಂದಾಜು 80 ಕೋಟಿ ರು. ಬೆಲೆ ಬಾಳುವ 40.07 ಎಕರೆ ಜಮೀನು ಹೊಂದಿದ್ದರೂ ಚನ್ನೇನಹಳ್ಳಿಗೆ ಹೊಂದಿಕೊಂಡಿರುವ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯಲ್ಲಿಯೂ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಮಂಜೂರು ಮಾಡಿರುವ ಬೆನ್ನಲ್ಲೇ ಹೆಚ್ಚುವರಿಯಾಗಿ 15 ಎಕರೆ ಜಮೀನು ಮಂಜೂರಾತಿಗಾಗಿ ನಿರ್ದೇಶನ ನೀಡಿತ್ತು.

 

ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯ ಸರ್ವೆ ನಂಬರ್‌ 89ರಲ್ಲಿದ್ದ ಒಟ್ಟು 40.20 ಎಕರೆ ಪೈಕಿ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಜನಸೇವಾ ಟ್ರಸ್ಟ್‌ಗೆ 2022ರ ಸೆ. 13ರಂದು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.

 

ಇದಾಗಿ 9 ದಿನಗಳ ಅಂತರದಲ್ಲೇ ಟ್ರಸ್ಟ್‌ನ ಅ ಸಾ ನಿರ್ಮಲ್‌ ಕುಮಾರ್‌ ಎಂಬುವರು 2022ರ ಸೆ.28ರಂದು ಪುನಃ 15 ಎಕರೆ ಜಮೀನು ಮಂಜೂರಾತಿಗಾಗಿ ಸರ್ಕಾರಕ್ಕೆ ಸಲ್ಲಿಸಿದ್ದ ಕೋರಿಕೆ ಆಧರಿಸಿ ಕಂದಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿಯು 2023ರ ಜನವರಿ 25ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು.

 

‘ಜನಸೇವಾ ಟ್ರಸ್ಟ್‌ಗೆ 15 ಎಕರೆ ಜಮೀನನ್ನು ಮಾರ್ಗಸೂಚಿ ಮೌಲ್ಯದ ಶೇ. 5ರಷ್ಟು ನಿಗದಿಪಡಿಸಿ ಮಂಜೂರು ಮಾಡಬೇಕು ಎಂದು ಕೋರಿರುತ್ತಾರೆ. ಈ ಪತ್ರದಲ್ಲಿ ತಿಳಿಸಿರುವ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು,’ ಎಂದು ಸರ್ಕಾರದ ಕಾರ್ಯದರ್ಶಿಯು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ನಿರ್ದೇಶಿಸಿದ್ದರು.

 

ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯ ಸರ್ವೆ ನಂಬರ್‌ 89ರಲ್ಲಿದ್ದ ಒಟ್ಟು 40.20 ಎಕರೆ ಪೈಕಿ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನಲ್ಲಿ ಸುಮಾರು 40 ಕ್ಕೂ ಹೆಚ್ಚಿನ ಭೂ ಭಾಗದಲ್ಲಿ ಕಲ್ಲು ಬಂಡೆಗಳಿವೆ. ಎತ್ತರ ಮತ್ತು ತಗ್ಗು ಪ್ರದೇಶದಿಂದ ಕೂಡಿದೆ. ಉದ್ದೇಶಿತ ಕಟ್ಟಡಗಳನ್ನು ನಿರ್ಮಾಣ ಮಾಢುವ ಸಂದರ್ಭದಲ್ಲಿ ಅಪಾರ ಪ್ರಮಾಣದ ಹಣವನ್ನು ಭರಿಸಬೇಕಾಗುತ್ತದೆ. ಮತ್ತು ಉದ್ದೇಶಿತ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ತರಲು ಈಗ ಮಂಜೂರಾದ 25 ಎಕರೆ ಭೂಮಿಯ ಜತೆಗೆ ಇದೇ ಸರ್ವೇ ನಂಬರ್‌ನಲ್ಲಿರುವ ಇನ್ನೂ 15 ಎಕರೆ ಭೂಮಿಯ ಅವಶ್ಯಕತೆ ಇದೆ ಎಂದು ಜನಸೇವಾ ಟ್ರಸ್ಟ್‌ನ ಅ ಸ ನಿರ್ಮಲಕುಮಾರ್‌ ಅವರು ಸರ್ಕಾರಕ್ಕೆ ಸಲ್ಲಿಸಿರುವ ಕೋರಿಕೆಯಲ್ಲಿ ವಿವರಿಸಿದ್ದರು.

 

ಕುರುಬರಹಳ್ಳಿಯಲ್ಲಿ ಪ್ರತಿ ಎಕರೆಗೆ ಮಾರುಕಟ್ಟೆ ಬೆಲೆಯು 2 ಕೋಟಿ ರು. ಇದೆ. ಇದರ ಪ್ರಕಾರ 25 ಎಕರೆಗೆ 50 ಕೋಟಿ ರು. ಬೆಲೆ ಇದೆ. ಸರ್ಕಾರವು ಆದೇಶದಲ್ಲಿ ನಮೂದಿಸಿರುವ ಮಾರ್ಗಸೂಚಿ ದರದ ಪ್ರಕಾರ ಪ್ರತಿ ಎಕರೆಗೆ 1.20 ಕೋಟಿ ರು. ಇದೆ. ಆದರೆ ಜನಸೇವಾ ಟ್ರಸ್ಟ್‌ಗೆ ಮಾರ್ಗಸೂಚಿ ಮೌಲ್ಯದ ಶೇ.25ರಷ್ಟು ದರದಲ್ಲಿ 25 ಎಕರೆಯನ್ನು ಈಗಾಗಲೇ ಮಂಜೂರು ಮಾಡಿರುವ ಸರ್ಕಾರವು ಬೊಕ್ಕಸಕ್ಕೆ 20 ಕೋಟಿ ನಷ್ಟವನ್ನು ಹೊತ್ತುಕೊಂಡಿದೆ.

 

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಸರ್ವೆ ನಂ 89ರಲ್ಲಿ ಲಭ್ಯವಿರುವ ಜಮೀನನ್ನು ಜನಸೇವಾ ಟ್ರಸ್ಟ್‌ಗೆ ಮಂಜೂರು ಮಾಡುವ ಪ್ರಸ್ತಾವನೆಯನ್ನು ಪರಿಶೀಲಿಸಿದ್ದ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಿ ಬಲರಾಮ್‌ ಅವರು ‘ ಈ ಭೂಮಿಯು ಅತಿ ಅಮೂಲ್ಯವಾದ ಭೂಮಿಯಾಗಿರುವುದರಿಂದ ಈ ಸಂಸ್ಥೆಗೆ ನೀಡುವುದು ಸರಿಯಲ್ಲ. ಆದ್ದರಿಂದ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ತಿಳಿಸಲು ನಿರ್ದೇಶಿತನಾಗಿದ್ದೇನೆ,’ ಎಂದು 2022ರ ಮೇ 4ರಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗೆ ಪತ್ರವನ್ನೂ ಬರೆದಿದ್ದರು.

 

ಆದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್‌ ಆಶೋಕ್‌ ಅವರು ಈ ಪ್ರಕರಣದಲ್ಲಿ ಅತ್ಯಾಸಕ್ತಿ ವಹಿಸಿದ ಪರಿಣಾಮ ವರ್ಷದಲ್ಲೇ ಜನಸೇವಾ ಟ್ರಸ್ಟ್‌ಗೆ 35 ಎಕರೆ ಗೋಮಾಳ ಕಡಿಮೆ ಬೆಲೆಗೆ ದೊರೆತಿದೆ. ಅಲ್ಲದೇ ಬೊಕ್ಕಸಕ್ಕೆ ಕೋಟ್ಯಂತರ ರುಪಾಯಿ ನಷ್ಟವಾದಂತಾಗಿದೆ.

Hot this week

ಮೂಲಸೌಕರ್ಯಗಳ ಕೊರತೆ; ಸಂಭಾವ್ಯ ಹೂಡಿಕೆದಾರರನ್ನು ಹಿಮ್ಮೆಟ್ಟಿಸಿದ್ದ ಮಂಡಳಿ, ಬಳಕೆಯಾಗದ 281.34 ಕೋಟಿ

ಬೆಂಗಳೂರು; ದೇವನಹಳ್ಳಿಯಲ್ಲಿರುವ ಏರೋಸ್ಪೇಸ್‌ ಪಾರ್ಕ್ ಸೇರಿದಂತೆ ಇನ್ನಿತರೆ ಕೈಗಾರಿಕೆ ಪ್ರದೇಶಗಳಲ್ಲಿ ಮೂಲಭೂತ...

ರಸ್ತೆ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲೇ ಲೋಪ; 483 ಕಾಮಗಾರಿಗಳಲ್ಲಿ 72.01 ಕೋಟಿಯಷ್ಟು ಹೆಚ್ಚುವರಿ ಹೊರೆ, ಪಿಡಬ್ಲ್ಯೂಡಿಯ ಕಾರ್ಯವೈಖರಿ ಬಯಲು ಮಾಡಿದ ಸಿಎಜಿ

ಬೆಂಗಳೂರು;  ರಸ್ತೆ ಕಾಮಗಾರಿಗಳಲ್ಲಿ  ಸಬ್‌ ಬೇಸ್‌ ದಪ್ಪವನ್ನು ಕಡಿಮೆ ಮಾಡದಿರುವುದು ಸೇರಿದಂತೆ...

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಆದೇಶ; ಮುನ್ನೆಲೆಗೆ ಬಂದ ದಿ ಫೈಲ್‌ ನ 10 ವರದಿಗಳು

ಬೆಂಗಳೂರು;  ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ...

ಖರ್ಗೆ ಕುಟುಂಬ ಸದಸ್ಯರ ಸಿದ್ದಾರ್ಥ ವಿಹಾರ ಟ್ರಸ್ಟ್‌; ಪ್ರಕರಣ ಮುಂದುವರಿಕೆ, ಲೋಕಾಯುಕ್ತ ಎಸ್‌ಪಿ ಗೆ ನೋಟೀಸ್‌ ನೀಡಿದ ನ್ಯಾಯಾಲಯ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ,...
Please Scan to make Your Contribution

Topics

ಮೂಲಸೌಕರ್ಯಗಳ ಕೊರತೆ; ಸಂಭಾವ್ಯ ಹೂಡಿಕೆದಾರರನ್ನು ಹಿಮ್ಮೆಟ್ಟಿಸಿದ್ದ ಮಂಡಳಿ, ಬಳಕೆಯಾಗದ 281.34 ಕೋಟಿ

ಬೆಂಗಳೂರು; ದೇವನಹಳ್ಳಿಯಲ್ಲಿರುವ ಏರೋಸ್ಪೇಸ್‌ ಪಾರ್ಕ್ ಸೇರಿದಂತೆ ಇನ್ನಿತರೆ ಕೈಗಾರಿಕೆ ಪ್ರದೇಶಗಳಲ್ಲಿ ಮೂಲಭೂತ...

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಆದೇಶ; ಮುನ್ನೆಲೆಗೆ ಬಂದ ದಿ ಫೈಲ್‌ ನ 10 ವರದಿಗಳು

ಬೆಂಗಳೂರು;  ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ...

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

Related Articles

Popular Categories

error: Content is protected !!