Saturday | May 9, 2026 |

ಉಚಿತ ಪ್ರಯಾಣದ ‘ಶಕ್ತಿ’; ಆದಾಯ ಖೋತಾ, ಸಿಬ್ಬಂದಿ ವೇತನಕ್ಕೆ ಅಡಚಣೆ, ಪ್ರಯಾಣ ದರ ಪರಿಷ್ಕರಣೆ?

ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ಅನುಷ್ಠಾನಗೊಳಿಸಿದಲ್ಲಿ ನಗದು ಹರಿವಿನಲ್ಲಿ ಕೋಟ್ಯಂತರ ರುಪಾಯಿ ಕೊರತೆ, ಸಾರಿಗೆ ನಿಗಮಗಳಿಗೆ ಚಾಲ್ತಿಯಲ್ಲಿರುವ ಆದಾಯ ಖೋತಾದಂತಹ ವ್ಯತಿರಿಕ್ತ ಪರಿಣಾಮ ಬೀರುವುದಲ್ಲದೇ ಸಾರಿಗೆ ನಿಗಮಗಳ ಸಿಬ್ಬಂದಿಯ ವೇತನ ಪಾವತಿಗೂ ಅಡಚಣೆಯಾಗಲಿದೆ.

 

ಅದೇ ರೀತಿ ಡೀಸೆಲ್‌ ದರ, ಸಿಬ್ಬಂದಿಗೆ ಪಾವತಿಸುವ ತುಟ್ಟಿಭತ್ಯೆ ಹೆಚ್ಚಳ, ವೇತನ ಪರಿಷ್ಕರಣೆಯಿಂದಾಗಿ ವೆಚ್ಚದಲ್ಲಿ ತೀವ್ರ ಏರಿಕೆಯಾಗುವುದಲ್ಲದೇ ಪ್ರಯಾಣ ದರವನ್ನು ಪರಿಷ್ಕರಣೆ ಮಾಡುವ ಅನಿವಾರ್ಯತೆಗೂ ಸರ್ಕಾರವು ಸಿಲುಕಲಿದೆ.

 

ಇನ್ನು, ಶಕ್ತಿ ಯೋಜನೆ ಜಾರಿಯಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸಾರಿಗೆ ಬಸ್‌ಗಳಿಗೆ ಆದ್ಯತೆ ನೀಡಲಿದ್ದಾರೆ. ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುವುದರಿಂದ ಹೆಚ್ಚುವರಿ ಸೇವೆಗಳಲ್ಲಿ ಕಾರ್ಯಾಚರಿಸಬೇಕು. ಅಲ್ಲದೇ ನೆರೆ ರಾಜ್ಯದ ಗಡಿಭಾಗಗಳಲ್ಲಿ ವಾಸವಿದ್ದು ಕರ್ನಾಟಕದಲ್ಲಿ ಹೆಚ್ಚಿನ ಸಮಯ ಪ್ರಯಾಣಿಸುವ ಮಹಿಳೆಯರು ಈ ಯೋಜನೆಯ ಸೌಲಭ್ಯವನ್ನು ವಿಸ್ತರಿಸುವ ಬೇಡಿಕೆ ಇಡುವ ಸಾಧ್ಯತೆಗಳೂ ಇವೆ. ಕರ್ನಾಟಕ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ಪಾಸ್‌ ವಿತರಿಸುವುದು ಮತ್ತು ನಿರ್ವಾಹಕರು ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಯೋಜನೆಯ ನಿಬಂಧನೆಗಳನ್ನು ಪರಿಶೀಲಿಸಿ ಇಟಿಎಂ ಮೂಲಕ ಟಿಕೆಟ್‌ ವಿತರಿಸಲು ಸಮಯಾವಕಾಶದ ಅಗತ್ಯವಿದೆ ಎಂದೂ ಪ್ರಸ್ತಾವನೆಯಲ್ಲಿ ತಿಳಿಸಿದೆ.

 

ಇದಕ್ಕಾಗಿ 4,028 ಹೊಸ ವಾಹನಗಳು ಮತ್ತು 13,793 ಸಿಬ್ಬಂದಿಯನ್ನು ಹೊಸದಾಗಿ ನೇಮಕ ಮಾಡಿಕೊಳ್ಳಬೇಕಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಿದಲ್ಲಿ ಸಾರಿಗೆ ಸೇವಾ ವರ್ಗವಾರು, ನಿಗಮವಾರು ಉಂಟಾಗುವ ಆರ್ಥಿಕ ವೆಚ್ಚವನ್ನು ಪ್ರಸ್ತಕ ಆದಾಯದ ಶೇ.50ರಂತೆ ಅಂದಾಜಿಸಿರುವ (ಏಪ್ರಿಲ್‌ 2023ರಲ್ಲಿದ್ದಂತೆ) ನಿಗಮವು ವಾರ್ಷಿಕವಾಗಿ ಒಟ್ಟಾರೆ 4,220.88 ಕೋಟಿ ರು. ಆರ್ಥಿಕ ವೆಚ್ಚವಾಗಲಿದೆ ಎಂದು ಎಂದು ಸಾರಿಗೆ ಇಲಾಖೆಯು ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ವಿವರಿಸಲಾಗಿದೆ.

 

ವಿಧಾನಸಭೆ ಚುನಾವಣೆ ವೇಳೆಯಲ್ಲಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆಯ ಭಾಗವಾಗಿ ಗ್ಯಾರಂಟಿ ಕಾರ್ಡ್‌ ವಿತರಿಸಿದ್ದ ಕಾಂಗ್ರೆಸ್‌ ಇದೀಗ ಸಾರಿಗೆ ನಿಗಮಗಳು ಈಗಾಗಲೇ ಅನುಭವಿಸುತ್ತಿರುವ ನಷ್ಟ ಮತ್ತು ಉಚಿತ ಪ್ರಯಾಣದ ಶಕ್ತಿ ಯೋಜನೆ ಅನುಷ್ಠಾನದಿಂದ ಹೊಸ ಬಸ್‌ಗಳ ಖರೀದಿ, ಸಿಬ್ಬಂದಿ ನೇಮಕಾತಿ, ವೇತನ, ಇನ್ನಿತರೆ ಸೌಲಭ್ಯಗಳಿಗೂ ಹಣ ಹೊಂದಿಸಬೇಕಿದೆ. ಈ ಸಂಬಂಧ ಸಾರಿಗೆ ಇಲಾಖೆಯು ಸಲ್ಲಿಸಿರುವ ಪ್ರಸ್ತಾವನೆಯು ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕೆಎಸ್‌ಆರ್‍‌ಟಿಸಿಗೆ ವಾರ್ಷಿಕವಾಗಿ 1,608.24 ಕೋಟಿ ರು., ಬಿಎಂಟಿಸಿಗೆ 770.16 ಕೋಟಿ ರು., ವಾಯುವ್ಯ ಕರ್ನಾಟಕಕ್ಕೆ 954.12 ಕೋಟಿ ರು., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 888.36 ಕೋಟಿ ರು. ಆರ್ಥಿಕ ವೆಚ್ಚವಾಗಲಿದೆ.

 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 1,823, ವಾಯುವ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ 1,445, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 760 ಸೇರಿದಂತೆ ಒಟ್ಟು 4,028 ಹೊಸ ವಾಹನಗಳನ್ನು ಖರೀದಿಸಬೇಕು. ಅದೇ ರೀತಿ ಕರ್ನಾಟಕ ಸಾರಿಗೆ ನಿಗಮಕ್ಕೆ 5,178, ವಾಯುವ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ 2,415, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 2,425, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 3,775 ಸೇರಿ ಒಟ್ಟಾರೆ 13,793 ಸಿಬ್ಬಂದಿ ನೇಮಕಕ್ಕೆ ಸರ್ಕಾರವು ಸಹಾಯ ಹಸ್ತ ಚಾಚಬೇಕಿದೆ ಎಂಬ ಮಾಹಿತಿಯು ಪ್ರಸ್ತಾವನೆಯಿಂದ ತಿಳಿದು ಬಂದಿದೆ.

 

ಅದೇ ರೀತಿ ವಾಹನಗಳ ಕಾರ್ಯಾಚರಣೆಗೆ ಅಗತ್ಯವಿರುವ ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಅನುಮೋದನೆ ಮತ್ತು ಮುಂಬರುವ ದಿನಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ವಿತರಿಸಲಿರುವ ಸ್ಮಾರ್ಟ್‌ ಕಾರ್ಡ್‌ಗಳಿಗೆ ತಗಲುವ ವೆಚ್ಚವನ್ನು ಸರ್ಕಾರವೇ ಒದಗಿಸಬೇಕು ಎಂದು ನಿಗಮಗಳು ಪ್ರಸ್ತಾವನೆಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ದರ ಪರಿಷ್ಕರಣೆಯಾಗುವುದೇ?

 

‘ಹಿಂದಿನ ಪ್ರಯಾಣ ದರ ಪರಿಷ್ಕರಣೆಗೊಂಡಾಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಡೀಸೆಲ್‌ ದರ 46.24 ರು. ಇದ್ದು ಇತರೆ ಸಾರಿಗೆ ಸಂಸ್ಥೆಗಳಲ್ಲಿ 60.98 ರು. ಇದೆ. ಪ್ರಸ್ತುತ ಅದು 84.84 ರು.ಗೇರಿದೆ. ಹಾಗೂ ಸಿಬ್ಬಂದಿಗಳಿಗೆ ಪಾವತಿಸುವ ತುಟ್ಟಿಭತ್ಯೆ ಹೆಚ್ಚಳ ಹಾಗೂ ವೇತನ ಪರಿಷ್ಕರಣೆಯಿಂದಾಗಿ ವೆಚ್ಚದಲ್ಲಿ ತೀವ್ರ ಹೆಚ್ಚಳವಾಗುವುದರಿಂದ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಬೇಕಿದೆ,’ ಎಂದು ನಿಗಮಗಳು ಪ್ರಸ್ತಾವನೆಯಲ್ಲಿ ವಿವರಿಸಿದೆ.

 

ನಗದು ಹರಿವು ಕೊರತೆ, ವೇತನ ಪಾವತಿಗೆ ಅಡಚಣೆ

 

ಶಕ್ತಿ ಯೋಜನೆ ಅಳವಡಿಸಿದ್ದಲ್ಲಿ ಸಾಮಾನ್ಯ, ನಗರ, ವೇಗದೂತ ಸೇವೆಗಳಲ್ಲಿ ಮತ್ತು ವಿವಿಧ ರಿಯಾಯಿತಿ ಪಾಸುಗಳ ಬಾಬ್ತು ನಿಗಮಗಳಿಗೆ ಸಂದಾಯವಾಗುವ ಆದಾಯಗಳಲ್ಲಿ 351.74 ಕೋಟಿ ರು. ಕಡಿಮೆಯಾಗಲಿದೆ. ನಿಗಮಗಳು ಪ್ರತಿ ಮಾಹೆ ಒಂದನೇ ದಿನಾಂಕದಂದು ಸಿಬ್ಬಂದಿಗಳಿಗೆ ವೇತನ ಪಾವತಿ ಮಾಡುತ್ತಿದೆ. ಶಕ್ತಿ ಯೋಜನೆ ಅನುಷ್ಠಾನವಾದಲ್ಲಿ ನಗದು ಹರಿವಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊರತೆಯುಂಟಾಗಿ ವೇತನ ಪಾವತಿಗೆ ಅಡಚಣೆಯುಂಟಾಗಲಿದೆ ಎಂಬುದು ಪ್ರಸ್ತಾವನೆಯಿಂದ ಗೊತ್ತಾಗಿದೆ.

 

ಕರ್ನಾಟಕ ಸಾರಿಗೆ ನಿಗಮ, ಬಿಎಂಟಿಸಿ, ವಾಯುವ್ಯ ಕರ್ನಾಠಕ ಸಾರಿಗೆ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ ಸದ್ಯ 1,079.82 ಕೋಟಿ ರು. ಪಾವತಿಯಾಗುತ್ತಿದೆ. ಶಕ್ತಿ ಯೋಜನೆ ಅನುಷ್ಠಾನದಿಂದಾಗಿ ಈ ಮೊತ್ತದಲ್ಲಿ 702.88 ಕೋಟಿ ರು. ಕೊರತೆಯಾಗಲಿದೆ.

 

ಕೆಎಸ್‌ಆರ್‍‌ಟಿಸಿಯಲ್ಲಿ ಪಾವತಿಯಾಗುತ್ತಿರುವ 386.77 ಕೋಟಿ ರು.ನಲ್ಲಿ 221.79 ಕೋಟಿ ರು. ಕೊರತೆಯಾಗಲಿದೆ. ಬಿಎಂಟಿಸಿಯಲ್ಲಿ 287.81 ಕೋಟಿ ರು.ನಲ್ಲಿ 206.31 ಕೋಟಿ ರು., ವಾಯುವ್ಯ ಕರ್ನಾಟಕ ಸಾರಿಗೆ ನಿಗಮದಲ್ಲಿ 213.04 ಕೋಟಿ ರು.ನಲ್ಲಿ 146.55 ಕೋಟಿ ರು., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 192.2 ಕೋಟಿ ರು.ನಲ್ಲಿ 128.23 ಕೋಟಿ ರು ಸೇರಿ ಒಟ್ಟಾರೆ 702.88 ಕೋಟಿ ರು. ಕೊರತೆಯಾಗಲಿದೆ ಎಂದು ಪ್ರಸ್ತಾವನೆಯಿಂದ ಗೊತ್ತಾಗಿದೆ.

 

ಸಾರಿಗೆ ನಿಗಮಗಳು ಸಲ್ಲಿಸಿರುವ ಪ್ರಸ್ತಾವನೆ ಪ್ರತಿ

 

ಮಾಸಿಕ- ವಾರ್ಷಿಕ ವೆಚ್ಚವೆಷ್ಟು?

 

ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಿದಲ್ಲಿ ಸಾರಿಗೆ ವರ್ಗವಾರು, ನಿಗಮವಾರು ಉಂಟಾಗುವ ಆರ್ಥಿಕ ವೆಚ್ಚವನ್ನು ಪ್ರಸಕ್ತ ಆದಾಯದ ಶೇ. 50ರಂತೆ ಅಂದಾಜಿಸಿದೆ. ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳಲ್ಲಿ ನಗರ ಸೇವಾ ವರ್ಗದಲ್ಲಿ 4.83 ಕೋಟಿ ರು. ಆರ್ಥಿಕ ವೆಚ್ಚವಾಗಲಿದೆ.

 

ಬಿಎಂಟಿಸಿಯಲ್ಲಿ 55.50 ಕೋಟಿ, ವಾಯುವ್ಯ ಕರ್ನಾಟಕ ಸಾರಿಗೆ ನಿಗಮದಲ್ಲಿ 5.77 ಕೋಟಿ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 0.93 ಕೋಟಿ ರು. ಸೇರಿ ಮಾಸಿಕ ಒಟ್ಟಾರೆ 67.03 ಕೋಟಿ ರು. ವೆಚ್ಚವಾಗಲಿದೆ. ಸಾಮಾನ್ಯ ವರ್ಗದಲ್ಲಿ ಕೆಎಸ್‌ಆರ್‍‌ಟಿಸಿಗೆ 31.45 ಕೋಟಿ, ಬಿಎಂಟಿಸಿಗೆ 0.00, ವಾಯುವ್ಯ ಕರ್ನಾಟಕ ಸಾರಿಗೆಯಲ್ಲಿ 22.69 ಕೋಟಿ ರು., ಕಲ್ಯಾಣ ಕರ್ನಾಟಕ ಸಾರಿಗ ನಿಗಮದಲ್ಲಿ 17.17 ಕೋಟಿ ರು., ಸೇರಿ ಒಟ್ಟು 71.31 ಕೋಟಿ ರು. ವೆಚ್ಚವಾಗಲಿದೆ.

 

ರಿಯಾಯಿತಿ ಪಾಸ್‌ಗಳ ವರ್ಗದಲ್ಲಿ ಕೆಎಸ್‌ಆರ್‍‌ಟಿಸಿಗೆ 19.35 ಕೋಟಿ ರು., ಬಿಎಂಟಿಸಿಯಲ್ಲಿ 8.68 ಕೋಟಿ, ವಾಯುವ್ಯ ಕರ್ನಾಟಕದಲ್ಲಿ 15.32 ಕೋಟಿ ರು., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 10.94 ಕೋಟಿ ರು. ಸೇರಿ ಒಟ್ಟು 54.29 ಕೋಟಿ ರು. ಆಗಲಿದೆ. ಈ ಮೂರೂ ವರ್ಗಗಳಲ್ಲಿ ಕೆಎಸ್‌ಆರ್‍‌ಟಿಸಿಗೆ ಮಾಸಿಕ 55.63 ಕೋಟಿ ರು., ಬಿಎಂಟಿಸಿಗೆ 64.18 ಕೋಟಿ, ವಾಯುವ್ಯ ಕರ್ನಾಟಕಕ್ಕೆ 43.78 ಕೋಟಿ, ಕಲ್ಯಾಣ ಕರ್ನಾಟಕಕ್ಕೆ 29.04 ಕೋಟಿ ಸೇರಿ ಒಟ್ಟಾರೆ 192.63 ಕೋಟಿ ರು. ವೆಚ್ಚವಾಗಲಿದೆ.

 

ಇದೇ ವಾರ್ಷಿಕವಾಗಿ ಈ ಮೂರು ವರ್ಗಗಳಿಗೆ ಲೆಕ್ಕ ಹಾಕಿದರೆ ಕೆಎಸ್‌ಆರ್‍‌ಟಿಸಿಗೆ 667.56 ಕೋಟಿ ರು., ಬಿಎಂಟಿಸಿಗೆ 770.16 ಕೋಟಿ ರು., ವಾಯುವ್ಯ ಕರ್ನಾಟಕಕ್ಕೆ 525.36 ಕೋಟಿ ರು., ಕಲ್ಯಾಣ ಕರ್ನಾಟಕಕ್ಕೆ 348.48 ಕೋಟಿ ರು. ಸೇರಿ ಒಟ್ಟಾರೆ ವಾರ್ಷಿಕವಾಗಿ 2,311.56 ಕೋಟಿ ರು. ವೆಚ್ಚವಾಗಲಿದೆ ಎಂದು ಪ್ರಸ್ತಾವನೆಯಲ್ಲಿರುವ ಅಂಕಿ ಅಂಶಗಳಿಂದ ಗೊತ್ತಾಗಿದೆ.

 

ಒಂದೊಮ್ಮೆ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಿದಲ್ಲಿ ಕೆಎಸ್‌ಆರ್‍‌ಟಿಸಿಗೆ ಮಾಸಿಕ 78.39 ಕೋಟಿ ರು., ವಾಯುವ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ 35.73 ಕೋಟಿ ರು., ಕಲ್ಯಾಣ ಕರ್ನಾಟಕ ನಿಗಮಕ್ಕೆ 44.99 ಕೋಟಿ ರು. ಆರ್ಥಿಕ ವೆಚ್ಚವಾಗಲಿದೆ. ನಗರ, ಸಾಮಾನ್ಯ, ವೇಗದೂತ, ರಿಯಾಯಿತಿ ಪಾಸ್‌ಗಳಿಗೆ ಲೆಕ್ಕ ಹಾಕಿರುವ ನಿಗಮಗಳು ಕೆಎಸ್‌ಆರ್‍‌ಟಿಸಿಗೆ 134.02 ಕೋಟಿ ರು., ಬಿಎಂಟಿಸಿಗೆ 64.18 ಕೋಟಿ ರು., ವಾಯುವ್ಯ ಕರ್ನಾಟಕ ನಿಗಮಕ್ಕೆ 79.51 ಕೋಟಿ ರು., ಕಲ್ಯಾಣ ಕರ್ನಾಟಕ ನಿಗಮಕ್ಕೆ 74.03 ಕೋಟಿ ರು. ಆರ್ಥಿಕ ವೆಚ್ಚವಾಗಲಿದೆ ಎಂದು ವಿವರಿಸಿದೆ.

Hot this week

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...
Please Scan to make Your Contribution

Topics

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

Related Articles

Popular Categories

error: Content is protected !!