Friday | May 1, 2026 |

ಶಕ್ತಿ ಯೋಜನೆ; ವಾರದಲ್ಲಿ 3.12 ಕೋಟಿ ಮಹಿಳೆಯರ ಪ್ರಯಾಣ, ಟಿಕೆಟ್‌ ಮೌಲ್ಯ 70.28 ಕೋಟಿ ರು.

ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ಅನುಷ್ಠಾನಗೊಂಡ ಒಂದು ವಾರದಲ್ಲಿ  ರಾಜ್ಯದ ವಿವಿಧ ಸಾರಿಗೆ ನಿಗಮಗಳ ಮೂಲಕ 3,12,21,241 ಮಹಿಳೆಯರು ಪ್ರಯಾಣಿಸಿದ್ದಾರೆ. 3.12 ಕೋಟಿ ಮಹಿಳೆಯರು ಪ್ರಯಾಣಿಸಿರುವ ಪ್ರಯಾಣ ಮೌಲ್ಯ ಒಟ್ಟಾರೆ  70.28 ಕೋಟಿ ರು. ನಷ್ಟು ಎಂದು ಸಾರಿಗೆ ನಿಗಮಗಳು ಲೆಕ್ಕ ಹಾಕಿವೆ.

 

ಯೋಜನೆ ಆರಂಭಗೊಂಡ ದಿನದಂದೇ (ಜೂನ್‌ 11) 5,71,023 ಮಹಿಳಾ ಪ್ರಯಾಣಿಕರು ಉಚಿತ ಯೋಜನೆಯಡಿಯಲ್ಲಿ ಪ್ರಯಾಣಿಸಿದ್ದರು. ಪ್ರಯಾಣ ಮೌಲ್ಯವು 1,40,22,878 ರು. ನಷ್ಟಾಗಿತ್ತು. ಕ್ರಮೇಣ ಮಹಿಳಾ ಪ್ರಯಾಣಿಕರ ಸಂಖ್ಯೆ ದಿನದಿಂದ ಹೆಚ್ಚಳಗೊಳ್ಳುತ್ತಿದೆ. ಜೂನ್‌ 12ರಂದು 41,34,726  ಪ್ರಯಾಣಿಕರ ಪ್ರಯಾಣದ ಮೌಲ್ಯ 8,83,53,434 ರು., ಜೂನ್‌ 13ರಂದು 511,52,769 ಪ್ರಯಾಣಿಕರ ಪ್ರಯಾಣ ಮೌಲ್ಯ 10,82,02,191 ರು., ಜೂನ್‌ 14ರಂದು 50,17,174 ಪ್ರಯಾಣಿಕರ ಪ್ರಯಾಣ ಮೌಲ್ಯ 11,51,08,324 ರು., ಜೂನ್‌ 15ರಂದು 54,05,629 ಪ್ರಯಾಣಿಕರ ಪ್ರಯಾಣ ಮೌಲ್ಯ 12,37,89,585 ರು., ಜೂನ್‌ 16ರಂದು 55,09,770 ಪ್ರಯಾಣಿಕರ ಪ್ರಯಾಣ ಮೌಲ್ಯ 12,45,19,262 ರು., ಜೂನ್‌ 17ರಂದು 54,30,150 ಪ್ರಯಾಣಿಕರ ಪ್ರಯಾಣ ಮೌಲ್ಯ 12,88,81,618 ರು ಎಂದು ಸಾರಿಗೆ ನಿಗಮಗಳು ಲೆಕ್ಕ ಹಾಕಿರುವುದು ತಿಳಿದು ಬಂದಿದೆ.

 

ಶಕ್ತಿ ಯೋಜನೆ ಜಾರಿಯಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸಾರಿಗೆ ಬಸ್‌ಗಳಿಗೆ ಆದ್ಯತೆ ನೀಡಲಿದ್ದಾರೆ. ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುವುದರಿಂದ ಹೆಚ್ಚುವರಿ ಸೇವೆಗಳಲ್ಲಿ ಕಾರ್ಯಾಚರಿಸಬೇಕು. ಅಲ್ಲದೇ ನೆರೆ ರಾಜ್ಯದ ಗಡಿಭಾಗಗಳಲ್ಲಿ ವಾಸವಿದ್ದು ಕರ್ನಾಟಕದಲ್ಲಿ ಹೆಚ್ಚಿನ ಸಮಯ ಪ್ರಯಾಣಿಸುವ ಮಹಿಳೆಯರು ಈ ಯೋಜನೆಯ ಸೌಲಭ್ಯವನ್ನು ವಿಸ್ತರಿಸುವ ಬೇಡಿಕೆ ಇಡುವ ಸಾಧ್ಯತೆಗಳೂ ಇವೆ  ಎಂದೂ ಪ್ರಸ್ತಾವನೆಯಲ್ಲಿ ತಿಳಿಸಿತ್ತು.

 

ಇದರಿಂದಾಗಿ  ನಗದು ಹರಿವಿನಲ್ಲಿ ಕೋಟ್ಯಂತರ ರುಪಾಯಿ ಕೊರತೆ, ಸಾರಿಗೆ ನಿಗಮಗಳಿಗೆ ಚಾಲ್ತಿಯಲ್ಲಿರುವ ಆದಾಯ ಖೋತಾದಂತಹ ವ್ಯತಿರಿಕ್ತ ಪರಿಣಾಮ ಬೀರುವುದಲ್ಲದೇ ಸಾರಿಗೆ ನಿಗಮಗಳ ಸಿಬ್ಬಂದಿಯ ವೇತನ ಪಾವತಿಗೂ ಅಡಚಣೆಯಾಗಲಿದೆ. ಅದೇ ರೀತಿ ಡೀಸೆಲ್‌ ದರ, ಸಿಬ್ಬಂದಿಗೆ ಪಾವತಿಸುವ ತುಟ್ಟಿಭತ್ಯೆ ಹೆಚ್ಚಳ, ವೇತನ ಪರಿಷ್ಕರಣೆಯಿಂದಾಗಿ ವೆಚ್ಚದಲ್ಲಿ ತೀವ್ರ ಏರಿಕೆಯಾಗುವುದಲ್ಲದೇ ಪ್ರಯಾಣ ದರವನ್ನು ಪರಿಷ್ಕರಣೆ ಮಾಡುವ ಅನಿವಾರ್ಯತೆಗೂ ಸರ್ಕಾರವು ಸಿಲುಕಲಿದೆ  ಎಂದು ಸರ್ಕಾರಕ್ಕೆ ವಿವರಿಸಿತ್ತು.

 

ಇದಕ್ಕಾಗಿ 4,028 ಹೊಸ ವಾಹನಗಳು ಮತ್ತು 13,793 ಸಿಬ್ಬಂದಿಯನ್ನು ಹೊಸದಾಗಿ ನೇಮಕ ಮಾಡಿಕೊಳ್ಳಬೇಕಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಿದಲ್ಲಿ ಸಾರಿಗೆ ಸೇವಾ ವರ್ಗವಾರು, ನಿಗಮವಾರು ಉಂಟಾಗುವ ಆರ್ಥಿಕ ವೆಚ್ಚವನ್ನು ಪ್ರಸ್ತಕ ಆದಾಯದ ಶೇ.50ರಂತೆ ಅಂದಾಜಿಸಿರುವ (ಏಪ್ರಿಲ್‌ 2023ರಲ್ಲಿದ್ದಂತೆ) ನಿಗಮವು ವಾರ್ಷಿಕವಾಗಿ ಒಟ್ಟಾರೆ 4,220.88 ಕೋಟಿ ರು. ಆರ್ಥಿಕ ವೆಚ್ಚವಾಗಲಿದೆ ಎಂದು ಎಂದು ಸಾರಿಗೆ ಇಲಾಖೆಯು ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ವಿವರಿಸಲಾಗಿದೆ.

 

ಪ್ರಸ್ತಾವನೆ ಪ್ರಕಾರ ಕೆಎಸ್‌ಆರ್‍‌ಟಿಸಿಗೆ ವಾರ್ಷಿಕವಾಗಿ 1,608.24 ಕೋಟಿ ರು., ಬಿಎಂಟಿಸಿಗೆ 770.16 ಕೋಟಿ ರು., ವಾಯುವ್ಯ ಕರ್ನಾಟಕಕ್ಕೆ 954.12 ಕೋಟಿ ರು., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 888.36 ಕೋಟಿ ರು. ಆರ್ಥಿಕ ವೆಚ್ಚವಾಗಲಿದೆ. ಈ ಕುರಿತು ‘ದಿ ಫೈಲ್‌’ 2023ರ ಮೇ 31ರಂದೇ ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

 

ಉಚಿತ ಪ್ರಯಾಣದ ‘ಶಕ್ತಿ’; ಆದಾಯ ಖೋತಾ, ಸಿಬ್ಬಂದಿ ವೇತನಕ್ಕೆ ಅಡಚಣೆ, ಪ್ರಯಾಣ ದರ ಪರಿಷ್ಕರಣೆ?

 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 1,823, ವಾಯುವ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ 1,445, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 760 ಸೇರಿದಂತೆ ಒಟ್ಟು 4,028 ಹೊಸ ವಾಹನಗಳನ್ನು ಖರೀದಿಸಬೇಕು. ಅದೇ ರೀತಿ ಕರ್ನಾಟಕ ಸಾರಿಗೆ ನಿಗಮಕ್ಕೆ 5,178, ವಾಯುವ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ 2,415, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 2,425, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 3,775 ಸೇರಿ ಒಟ್ಟಾರೆ 13,793 ಸಿಬ್ಬಂದಿ ನೇಮಕಕ್ಕೆ ಸರ್ಕಾರವು ಸಹಾಯ ಹಸ್ತ ಚಾಚಬೇಕಿದೆ ಎಂಬ ಮಾಹಿತಿಯು ಪ್ರಸ್ತಾವನೆಯಿಂದ ತಿಳಿದು ಬಂದಿದೆ.

 

ಅದೇ ರೀತಿ ವಾಹನಗಳ ಕಾರ್ಯಾಚರಣೆಗೆ ಅಗತ್ಯವಿರುವ ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಅನುಮೋದನೆ ಮತ್ತು ಮುಂಬರುವ ದಿನಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ವಿತರಿಸಲಿರುವ ಸ್ಮಾರ್ಟ್‌ ಕಾರ್ಡ್‌ಗಳಿಗೆ ತಗಲುವ ವೆಚ್ಚವನ್ನು ಸರ್ಕಾರವೇ ಒದಗಿಸಬೇಕು ಎಂದು ನಿಗಮಗಳು ಪ್ರಸ್ತಾವನೆಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ದರ ಪರಿಷ್ಕರಣೆಯಾಗುವುದೇ?

 

‘ಹಿಂದಿನ ಪ್ರಯಾಣ ದರ ಪರಿಷ್ಕರಣೆಗೊಂಡಾಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಡೀಸೆಲ್‌ ದರ 46.24 ರು. ಇದ್ದು ಇತರೆ ಸಾರಿಗೆ ಸಂಸ್ಥೆಗಳಲ್ಲಿ 60.98 ರು. ಇದೆ. ಪ್ರಸ್ತುತ ಅದು 84.84 ರು.ಗೇರಿದೆ. ಹಾಗೂ ಸಿಬ್ಬಂದಿಗಳಿಗೆ ಪಾವತಿಸುವ ತುಟ್ಟಿಭತ್ಯೆ ಹೆಚ್ಚಳ ಹಾಗೂ ವೇತನ ಪರಿಷ್ಕರಣೆಯಿಂದಾಗಿ ವೆಚ್ಚದಲ್ಲಿ ತೀವ್ರ ಹೆಚ್ಚಳವಾಗುವುದರಿಂದ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಬೇಕಿದೆ,’ ಎಂದು ನಿಗಮಗಳು ಪ್ರಸ್ತಾವನೆಯಲ್ಲಿ ವಿವರಿಸಿತ್ತು.

 

ನಗದು ಹರಿವು ಕೊರತೆ, ವೇತನ ಪಾವತಿಗೆ ಅಡಚಣೆ

 

ಶಕ್ತಿ ಯೋಜನೆ ಅಳವಡಿಸಿದ್ದಲ್ಲಿ ಸಾಮಾನ್ಯ, ನಗರ, ವೇಗದೂತ ಸೇವೆಗಳಲ್ಲಿ ಮತ್ತು ವಿವಿಧ ರಿಯಾಯಿತಿ ಪಾಸುಗಳ ಬಾಬ್ತು ನಿಗಮಗಳಿಗೆ ಸಂದಾಯವಾಗುವ ಆದಾಯಗಳಲ್ಲಿ 351.74 ಕೋಟಿ ರು. ಕಡಿಮೆಯಾಗಲಿದೆ. ನಿಗಮಗಳು ಪ್ರತಿ ಮಾಹೆ ಒಂದನೇ ದಿನಾಂಕದಂದು ಸಿಬ್ಬಂದಿಗಳಿಗೆ ವೇತನ ಪಾವತಿ ಮಾಡುತ್ತಿದೆ. ಶಕ್ತಿ ಯೋಜನೆ ಅನುಷ್ಠಾನವಾದಲ್ಲಿ ನಗದು ಹರಿವಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊರತೆಯುಂಟಾಗಿ ವೇತನ ಪಾವತಿಗೆ ಅಡಚಣೆಯುಂಟಾಗಲಿದೆ ಎಂಬುದು ಪ್ರಸ್ತಾವನೆಯಲ್ಲಿ ಹೇಳಲಾಗಿದೆ.

 

ಕರ್ನಾಟಕ ಸಾರಿಗೆ ನಿಗಮ, ಬಿಎಂಟಿಸಿ, ವಾಯುವ್ಯ ಕರ್ನಾಠಕ ಸಾರಿಗೆ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ ಸದ್ಯ 1,079.82 ಕೋಟಿ ರು. ಪಾವತಿಯಾಗುತ್ತಿದೆ. ಶಕ್ತಿ ಯೋಜನೆ ಅನುಷ್ಠಾನದಿಂದಾಗಿ ಈ ಮೊತ್ತದಲ್ಲಿ 702.88 ಕೋಟಿ ರು. ಕೊರತೆಯಾಗಲಿದೆ.

 

ಕೆಎಸ್‌ಆರ್‍‌ಟಿಸಿಯಲ್ಲಿ ಪಾವತಿಯಾಗುತ್ತಿರುವ 386.77 ಕೋಟಿ ರು.ನಲ್ಲಿ 221.79 ಕೋಟಿ ರು. ಕೊರತೆಯಾಗಲಿದೆ. ಬಿಎಂಟಿಸಿಯಲ್ಲಿ 287.81 ಕೋಟಿ ರು.ನಲ್ಲಿ 206.31 ಕೋಟಿ ರು., ವಾಯುವ್ಯ ಕರ್ನಾಟಕ ಸಾರಿಗೆ ನಿಗಮದಲ್ಲಿ 213.04 ಕೋಟಿ ರು.ನಲ್ಲಿ 146.55 ಕೋಟಿ ರು., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 192.2 ಕೋಟಿ ರು.ನಲ್ಲಿ 128.23 ಕೋಟಿ ರು ಸೇರಿ ಒಟ್ಟಾರೆ 702.88 ಕೋಟಿ ರು. ಕೊರತೆಯಾಗಲಿದೆ ಎಂದು ಪ್ರಸ್ತಾವನೆಯಿಂದ ಗೊತ್ತಾಗಿದೆ.

 

ಸಾರಿಗೆ ನಿಗಮಗಳು ಸಲ್ಲಿಸಿರುವ ಪ್ರಸ್ತಾವನೆ ಪ್ರತಿ

 

ಮಾಸಿಕ- ವಾರ್ಷಿಕ ವೆಚ್ಚವೆಷ್ಟು?

 

ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಿದಲ್ಲಿ ಸಾರಿಗೆ ವರ್ಗವಾರು, ನಿಗಮವಾರು ಉಂಟಾಗುವ ಆರ್ಥಿಕ ವೆಚ್ಚವನ್ನು ಪ್ರಸಕ್ತ ಆದಾಯದ ಶೇ. 50ರಂತೆ ಅಂದಾಜಿಸಿದೆ. ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳಲ್ಲಿ ನಗರ ಸೇವಾ ವರ್ಗದಲ್ಲಿ 4.83 ಕೋಟಿ ರು. ಆರ್ಥಿಕ ವೆಚ್ಚವಾಗಲಿದೆ.

 

ಬಿಎಂಟಿಸಿಯಲ್ಲಿ 55.50 ಕೋಟಿ, ವಾಯುವ್ಯ ಕರ್ನಾಟಕ ಸಾರಿಗೆ ನಿಗಮದಲ್ಲಿ 5.77 ಕೋಟಿ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 0.93 ಕೋಟಿ ರು. ಸೇರಿ ಮಾಸಿಕ ಒಟ್ಟಾರೆ 67.03 ಕೋಟಿ ರು. ವೆಚ್ಚವಾಗಲಿದೆ. ಸಾಮಾನ್ಯ ವರ್ಗದಲ್ಲಿ ಕೆಎಸ್‌ಆರ್‍‌ಟಿಸಿಗೆ 31.45 ಕೋಟಿ, ಬಿಎಂಟಿಸಿಗೆ 0.00, ವಾಯುವ್ಯ ಕರ್ನಾಟಕ ಸಾರಿಗೆಯಲ್ಲಿ 22.69 ಕೋಟಿ ರು., ಕಲ್ಯಾಣ ಕರ್ನಾಟಕ ಸಾರಿಗ ನಿಗಮದಲ್ಲಿ 17.17 ಕೋಟಿ ರು., ಸೇರಿ ಒಟ್ಟು 71.31 ಕೋಟಿ ರು. ವೆಚ್ಚವಾಗಲಿದೆ.

 

ರಿಯಾಯಿತಿ ಪಾಸ್‌ಗಳ ವರ್ಗದಲ್ಲಿ ಕೆಎಸ್‌ಆರ್‍‌ಟಿಸಿಗೆ 19.35 ಕೋಟಿ ರು., ಬಿಎಂಟಿಸಿಯಲ್ಲಿ 8.68 ಕೋಟಿ, ವಾಯುವ್ಯ ಕರ್ನಾಟಕದಲ್ಲಿ 15.32 ಕೋಟಿ ರು., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 10.94 ಕೋಟಿ ರು. ಸೇರಿ ಒಟ್ಟು 54.29 ಕೋಟಿ ರು. ಆಗಲಿದೆ. ಈ ಮೂರೂ ವರ್ಗಗಳಲ್ಲಿ ಕೆಎಸ್‌ಆರ್‍‌ಟಿಸಿಗೆ ಮಾಸಿಕ 55.63 ಕೋಟಿ ರು., ಬಿಎಂಟಿಸಿಗೆ 64.18 ಕೋಟಿ, ವಾಯುವ್ಯ ಕರ್ನಾಟಕಕ್ಕೆ 43.78 ಕೋಟಿ, ಕಲ್ಯಾಣ ಕರ್ನಾಟಕಕ್ಕೆ 29.04 ಕೋಟಿ ಸೇರಿ ಒಟ್ಟಾರೆ 192.63 ಕೋಟಿ ರು. ವೆಚ್ಚವಾಗಲಿದೆ.

 

ಇದೇ ವಾರ್ಷಿಕವಾಗಿ ಈ ಮೂರು ವರ್ಗಗಳಿಗೆ ಲೆಕ್ಕ ಹಾಕಿದರೆ ಕೆಎಸ್‌ಆರ್‍‌ಟಿಸಿಗೆ 667.56 ಕೋಟಿ ರು., ಬಿಎಂಟಿಸಿಗೆ 770.16 ಕೋಟಿ ರು., ವಾಯುವ್ಯ ಕರ್ನಾಟಕಕ್ಕೆ 525.36 ಕೋಟಿ ರು., ಕಲ್ಯಾಣ ಕರ್ನಾಟಕಕ್ಕೆ 348.48 ಕೋಟಿ ರು. ಸೇರಿ ಒಟ್ಟಾರೆ ವಾರ್ಷಿಕವಾಗಿ 2,311.56 ಕೋಟಿ ರು. ವೆಚ್ಚವಾಗಲಿದೆ ಎಂದು ಪ್ರಸ್ತಾವನೆಯಲ್ಲಿರುವ ಅಂಕಿ ಅಂಶಗಳಿಂದ ಗೊತ್ತಾಗಿದೆ.

 

ಒಂದೊಮ್ಮೆ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಿದಲ್ಲಿ ಕೆಎಸ್‌ಆರ್‍‌ಟಿಸಿಗೆ ಮಾಸಿಕ 78.39 ಕೋಟಿ ರು., ವಾಯುವ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ 35.73 ಕೋಟಿ ರು., ಕಲ್ಯಾಣ ಕರ್ನಾಟಕ ನಿಗಮಕ್ಕೆ 44.99 ಕೋಟಿ ರು. ಆರ್ಥಿಕ ವೆಚ್ಚವಾಗಲಿದೆ. ನಗರ, ಸಾಮಾನ್ಯ, ವೇಗದೂತ, ರಿಯಾಯಿತಿ ಪಾಸ್‌ಗಳಿಗೆ ಲೆಕ್ಕ ಹಾಕಿರುವ ನಿಗಮಗಳು ಕೆಎಸ್‌ಆರ್‍‌ಟಿಸಿಗೆ 134.02 ಕೋಟಿ ರು., ಬಿಎಂಟಿಸಿಗೆ 64.18 ಕೋಟಿ ರು., ವಾಯುವ್ಯ ಕರ್ನಾಟಕ ನಿಗಮಕ್ಕೆ 79.51 ಕೋಟಿ ರು., ಕಲ್ಯಾಣ ಕರ್ನಾಟಕ ನಿಗಮಕ್ಕೆ 74.03 ಕೋಟಿ ರು. ಆರ್ಥಿಕ ವೆಚ್ಚವಾಗಲಿದೆ ಎಂದು ವಿವರಿಸಿದೆ.

Hot this week

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

Topics

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

ಈಜಿಪುರ ಮೇಲ್ಸೇತುವೆ ಕಾಮಗಾರಿ; ಪರಿಷ್ಕೃತ ಅಂದಾಜಿನಲ್ಲಿಯೇ ಲೋಪ ಪತ್ತೆ, 8.80 ಕೋಟಿ ಮೊತ್ತಕ್ಕೆ ಲೆಕ್ಕ ಪರಿಶೋಧಕರ ಆಕ್ಷೇಪಣೆ

ಬೆಂಗಳೂರು;  ಈಜಿಪುರ ಎಲಿವೇಟೆಡ್ ಕಾಮಗಾರಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ಮಾಡಿದ್ದ...

Related Articles

Popular Categories

error: Content is protected !!