Sunday | September 6, 2026 |

ಅನುಮೋದನೆಯಿಲ್ಲದೇ ಕಾನೂನು ಅಧಿಕಾರಿಗಳ ಹುದ್ದೆ ಸೃಜನೆ; ಕಡತ ಹಿಂದಿರುಗಿಸಿದ ಆರ್ಥಿಕ ಇಲಾಖೆ

ಬೆಂಗಳೂರು; ರಾಜ್ಯದ ಅಡ್ವೋಕೇಟ್‌ ಜನರಲ್‌ ಅವರ ಕಚೇರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌ ರ ಅನುಮೋದನೆಯಿಲ್ಲದೆಯೇ ಹೊಸದಾಗಿ ಕಾನೂನು ಅಧಿಕಾರಿಗಳ ಹುದ್ದೆಗಳನ್ನು ಸೃಜಿಸಿರುವುದು ಇದೀಗ ಬಹಿರಂಗವಾಗಿದೆ.

ರಾಜ್ಯದ ಅಡ್ವೋಕೇಟ್‌ ಜನರಲ್‌ ಕಚೇರಿಗೆ 20 ಜನ ಹೆಚ್ಚುವರಿ ಅಡ್ವೊಕೇಟ್ ಜನರಲ್​ಗಳನ್ನು ನೇಮಕ ಮಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಮತ್ತು ಕಾನೂನು ಸಚಿವರ ಅನುಮೋದನೆಯಿಲ್ಲದೆಯೇ ಕಾನೂನು ಅಧಿಕಾರಿಗಳನ್ನು ಸೃಜಿಸಿರುವುದು ಮುನ್ನೆಲೆಗೆ ಬಂದಿದೆ.

ಅನುಮೋದನೆಯಿಲ್ಲದೆಯೇ ಕಾನೂನು ಅಧಿಕಾರಿಗಳ ಹುದ್ದೆ ಸೃಜಿಸಿದ್ದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯು ಆರ್ಥಿಕ ಇಲಾಖೆಯಿಂದ ಘಟನೋತ್ತರ ಅನುಮೋದನೆ ಕೋರಿತ್ತು. ಈ ಸಂಬಂಧ ಪ್ರಸ್ತಾವನೆಯನ್ನು ಪರಿಶೀಲಿಸಿದ್ದ ಆರ್ಥಿಕ ಇಲಾಖೆಯು ಮುಖ್ಯಮಂತ್ರಿ ಮತ್ತು ಕಾನೂನು ಸಚಿವರ ಅನುಮೋದನೆ ಪಡೆದು ನಂತರ ಪರಿಶೀಲನೆಗೆ ಸಲ್ಲಿಸಿ ಎಂದು ಕಡತವನ್ನು (ಸಂಖ್ಯೆ ; ಆಇ 315 ವೆಚ್ಚ-10/2023 (ಇ) No LAW 20 LAG 023 (E) ಹಿಂದಿರುಗಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯು ಬರೆದಿರುವ ಪತ್ರವು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಆರ್ಥಿಕ ಇಲಾಖೆಯ ಪತ್ರದಲ್ಲೇನಿದೆ?

ಕಾನೂನು ಅಧಿಕಾರಿಗಳ ಹುದ್ದೆಗಳನ್ನು ಹೊಸದಾಗಿ ಸೃಜಿಸಿರುವುದಕ್ಕೆ ಘಟನೋತ್ತರ ಅನುಮೋದನೆ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. ಅಡ್ವೋಕೇಟ್‌ ಜನರಲ್‌ ಅವರ ಕಚೇರಿಗೆ 04 ಕಾನೂನು ಅಧಿಕಾರಿಗಳ ಹುದ್ದೆಗಳನ್ನು ಸೃಜಿಸುವ ಪ್ರಸ್ತಾವನೆಗೆ ಮೊದಲಿಗೆ ಕಾನೂನು ಸಚಿವರ ಹಾಗೂ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ನಂತರ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಪರಿಶೀಲನೆಗೆ ಸಲ್ಲಿಸಬೇಕು ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯು 2023ರ ಸೆ.12ರಂದು ಕಡತ ಹಿಂದಿರಿಗಿಸಿರುವುದು ಗೊತ್ತಾಗಿದೆ.

ರಾಜ್ಯದಲ್ಲಿ ಮೊದಲು ಒಬ್ಬರು ಇಬ್ಬರು ಅಥವಾ ಮೂವರು ಇಲ್ಲವೇ 5 ಜನ ಹೆಚ್ಚುವರಿ ಅಡ್ವೊಕೇಟ್ ಜನರಲ್​ಗಳನ್ನು ನೇಮಕ ಮಾಡುವ ಪರಿಪಾಠ ಜಾರಿಯಲ್ಲಿತ್ತು. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರವು 20 ಜನ (15 ಜನ ಹೈಕೋರ್ಟ್, 5 ಜನ ಸುಪ್ರೀಂ ಕೋರ್ಟ್) ಹೆಚ್ಚುವರಿ ಅಡ್ವೊಕೇಟ್ ಜನರಲ್​ಗಳನ್ನು ನೇಮಿಸಿತ್ತು. ಇದು ನ್ಯಾಯಾಂಗದ ವಲಯದಲ್ಲಿ ಪರ – ವಿರೋಧ ಚರ್ಚೆಗೆ ಕಾರಣವಾಗಿತ್ತು.

ಕರ್ನಾಟಕದ ಅಡ್ವೊಕೇಟ್ ಜನರಲ್ ಅವರು ಎಲ್ಲಾ ಆಡಳಿತಾತ್ಮಕ ಮತ್ತು ಆರ್ಥಿಕ ಅಧಿಕಾರವನ್ನು ಹೊಂದಿದ್ದಾರೆ ಏಕೆಂದರೆ ಅವರು ರಾಜ್ಯದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರಿಗೆ ಮಾರ್ಗದರ್ಶನ ಮತ್ತು ಮೇಲ್ವಿಚಾರಣೆ ಮಾಡಬಹುದು. ಹೆಚ್ಚುವರಿ ಅಡ್ವೊಕೇಟ್ ಜನರಲ್ ಸರ್ಕಾರಿ ವಕೀಲರು, ರಾಜ್ಯ ಸಾರ್ವಜನಿಕ ಅಭಿಯೋಜಕರು, ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕರು, ಹೆಚ್ಚುವರಿ ಸರ್ಕಾರಿ ವಕೀಲರು ಮತ್ತು ಹೈಕೋರ್ಟ್ ಸರ್ಕಾರಿ ವಕೀಲರಂತಹ ಕಾನೂನು ಅಧಿಕಾರಿಗಳ ತಂಡವನ್ನು ಒಳಗೊಂಡಿದೆ.

ಹರ್ಯಾಣದಲ್ಲಿ ಕಾನೂನು ಅಧಿಕಾರಿಗಳ ಆಯ್ಕೆಯಲ್ಲಿನ ಸ್ವಜನಪಕ್ಷಪಾತ ಮತ್ತು ಅಕ್ರಮಗಳ ವಿರುದ್ಧ ವಿವರವಾದ ದೂರನ್ನು ಸಲ್ಲಿಸಲಾಗಿತ್ತು. ಆದರೆ ಅದರ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ನರೈನ್‌ಘರ್‌ನ ಗುರುದೇವ್ ಸಿಂಗ್ ಮನವಿ ಸಲ್ಲಿಸಿದ್ದರು. ಸಲ್ಲಿಸಿದ ಮನವಿಯಲ್ಲಿ ನ್ಯಾಯಮೂರ್ತಿ ವಿನೋದ್ ಎಸ್ ಭಾರದ್ವಾಜ್ ಅವರ ಹೈಕೋರ್ಟ್ ಜನವರಿ 24 ರೊಳಗೆ ಪ್ರತಿಕ್ರಿಯೆ ಕೇಳಿತ್ತು.

ಅಡ್ವೊಕೇಟ್ ಜನರಲ್ (ಎಜಿ) ಕಛೇರಿಯಲ್ಲಿ ಕಾನೂನು ಅಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮಗಳು/ಸ್ವಜನಪಕ್ಷಪಾತದ ಆರೋಪದ ಕುರಿತು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ (ಎಚ್‌ಸಿ) ಕೇಂದ್ರ ಮತ್ತು ಹರಿಯಾಣ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿರುವುದನ್ನು ಸ್ಮರಿಸಬಹುದು.

Hot this week

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಬುಕ್ ಬ್ರಹ್ಮ ಸಾಹಿತ್ಯ ಉತ್ಸವಕ್ಕೆ 5 ಲಕ್ಷ ರು ಅನುದಾನ; ನೋಂದಣಿಯಾಗಿ 3 ವ‍ರ್ಷ ಪೂರೈಸದ ಬುಕ್‌ ಬ್ರಹ್ಮ ಫೌಂಡೇಷನ್‌ಗೆ ಒಂದು ಬಾರಿ ವಿನಾಯಿತಿ

ಬೆಂಗಳೂರು;  ಅನುದಾನ ಪಡೆಯುವ ಸಂಘ, ಸಂಸ್ಥೆಗಳು ನೋಂದಣಿಯಾಗಿ  3 ವರ್ಷಗಳನ್ನು ಪೂರೈಸಿರಬೇಕು...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...
Please Scan to make Your Contribution

Topics

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...

Related Articles

Popular Categories

error: Content is protected !!