Thursday | August 20, 2026 |

ಗ್ಯಾರಂಟಿ ಯೋಜನೆಗಳ ಸಮಾವೇಶಕ್ಕೆ 46.5 ಕೋಟಿ ರು. ವೆಚ್ಚ; ಪಿಡಿ ಖಾತೆಗೆ ಕೈ ಹಾಕಿದ ಸರ್ಕಾರ

ಬೆಂಗಳೂರು; ಗ್ಯಾರಂಟಿ ಯೋಜನೆಗಳ ಸಮೀಕ್ಷೆ, ಅಧ್ಯಯನ ಮಾಡಲು ಕೋಟ್ಯಂತರ ರುಪಾಯಿ ಸುರಿಯುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಇವೇ ಗ್ಯಾರಂಟಿ ಯೋಜನೆಗಳ ಕುರಿತು ಜಿಲ್ಲಾ, ತಾಲೂಕು ಮತ್ತು ಹೋಬಳಿ ಮಟ್ಟದ ಸಮಾವೇಶ ನಡೆಸಲು ಮುಂದಾಗಿದೆ. ಈ ಸಮಾವೇಶಗಳಿಗೆ  ಒಟ್ಟಾರೆ  46.5 ಕೋಟಿ ರು. ವೆಚ್ಚವಾಗಲಿದೆ. ಈ ಸಮಾವೇಶಗಳನ್ನು ನಡೆಸಲು ಪ್ರತ್ಯೇಕ ಅನುದಾನವಿಲ್ಲ. ಹೀಗಾಗಿ ಜಿಲ್ಲಾಧಿಕಾರಿ, ತಹಶೀಲ್ದಾರ್‍‌ಗಳ ಪಿಡಿ ಖಾತೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು  ಕೈ ಹಾಕಿರುವುದು ಇದೀಗ ಬಹಿರಂಗವಾಗಿದೆ.

 

ಲೋಕಸಭೆ ಚುನಾವಣೆಗೆ ಮಾರ್ಚ್‌ನಲ್ಲಿ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆಯಿದೆ. ಹೀಗಾಗಿ  ಪಕ್ಷದ ಪ್ರಚಾರಕ್ಕೆ  ಗ್ಯಾರಂಟಿ ಯೋಜನೆಗಳ ಸಮಾವೇಶಗಳನ್ನೂ ಬಳಕೆ ಮಾಡಿಕೊಳ್ಳುವ ಉದ್ದೇಶವೂ ಇದರಲ್ಲಿ ಅಡಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸರ್ಕಾರದ ಈ ನಡೆಯು ಪ್ರತಿಪಕ್ಷಗಳ ಕೈಗೆ ಮತ್ತೊಂದು ಅಸ್ತ್ರವೊಂದನ್ನು ಕೊಟ್ಟಂತಾಗಿದೆ.

 

ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‍‌ಗಳ ಪಿಡಿ ಖಾತೆಯಲ್ಲಿ ಸದ್ಯ ಲಭ್ಯವಿರುವ 861.32 ಕೋಟಿ ರು.ನಲ್ಲಿ 46.5 ಕೋಟಿ ರು.ಗಳು ಗ್ಯಾರಂಟಿ ಸಮಾವೇಶಗಳಿಗೆ ವೆಚ್ಚವಾಗಲಿದೆ. ಉಳಿದ 818.82 ಕೋಟಿ ರು.ನಲ್ಲಿ ಬರಪರಿಹಾರ ಸೇರಿದಂತೆ ಇನ್ನಿತರೆ ತುರ್ತು ಕಾಮಗಾರಿ ನಡೆಸಲು ಬಳಸಲಿದೆ.

 

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಸಾಂಸ್ಥಿಕ ಕಾರ್ಯವಿಧಾನ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಸಚಿವ ಸಂತೋಷ್‌ ಲಾಡ್‌ ಸೇರಿದಂತೆ ಹಲವು ಶಾಸಕರು, ಸಚಿವರು  ಹೆಚ್ಚುವರಿ ಅನುದಾನ ಕೋರಿದ್ದರು.  ಆದರೆ ಸಮಾವೇಶಗಳಿಗೆಂದೇ ಪ್ರತ್ಯೇಕ ಅನುದಾನವನ್ನು ಪ್ರಸಕ್ತ ಆಯವ್ಯಯದಲ್ಲಿ ನಿಗದಿಪಡಿಸಿರಲಿಲ್ಲ. ಹೀಗಾಗಿ ಜಿಲ್ಲಾಧಿಕಾರಿ, ತಹಶೀಲ್ದಾರ್‍‌ಗಳ ಪಿಡಿ ಖಾತೆಯಲ್ಲಿರುವ ಅನುದಾನವನ್ನೇ ಬಳಸಿಕೊಳ್ಳಲು ಮುಂದಾಗಿರುವುದು ಗೊತ್ತಾಗಿದೆ.

 

ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿರುವ ಒಟ್ಟು ಹಣದ ಪೈಕಿ   1.00 ಕೋಟಿ ರು. ಬಳಸಿಕೊಂಡು ಜಿಲ್ಲಾ ಮಟ್ಟದ ಸಮಾವೇಶ ನಡೆಸಲಿದೆ. ಅದೇ ರೀತಿ ತಾಲೂಕು, ಹೋಬಳಿ ಸಮಾವೇಶಕ್ಕೆ 50.00 ಲಕ್ಷ ರು. ಸೇರಿ ಒಟ್ಟಾರೆ 1.50 ಕೋಟಿ ರು.ಗಳನ್ನು ಹೆಚ್ಚುವರಿಯಾಗಿ ಅನುದಾನ ಒದಗಿಸಲಿದೆ. ಪಿಡಿ ಖಾತೆಯಲ್ಲಿರುವ ಹಣವನ್ನು ಬಳಸಿಕೊಂಡು ಸಮಾವೇಶ ನಡೆಸಲು ಆರ್ಥಿಕ ಇಲಾಖೆಯೂ ಸಹಮತಿ ವ್ಯಕ್ತಪಡಿಸಿದೆ (ಆಇ 189/ವೆಚ್ಚ-7/2024, ದಿನಾಂಕ 26.02.2024) ಎಂದು ತಿಳಿದು ಬಂದಿದೆ.

 

2024ರ ಫೆ.23ರ ಅಂತ್ಯಕ್ಕೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 725.92 ಕೋಟಿ ರು. ಹಾಗೂ ತಾಲೂಕು ತಹಶೀಲ್ದಾರ್‍‌ಗಳ ಪಿಡಿ ಖಾತೆಯಲ್ಲಿ  135.40 ಕೋಟಿ ರು. ಸೇರಿದಂತೆ 861.32 ಕೋಟಿ ರು ಅನುದಾನವು ಬರ ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಲಭ್ಯವಿದೆ ಎಂದು ಗೊತ್ತಾಗಿದೆ.

 

ಐದು ಗ್ಯಾರಂಟಿ ಯೋಜನೆಗಳನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಇತರೆ ಇಲಾಖೆಗಳ ಸಿಬ್ಬಂದಿಗಳ ಮೂಲಕವೂ ಸಮೀಕ್ಷೆ ನಡೆಸಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ಹೊರಟಿದೆ. ಇದಕ್ಕಾಗಿ ಬರೋಬ್ಬರಿ 12 ಕೋಟಿ ರು. ವೆಚ್ಚ ಮಾಡಲಿದೆ.

 

ಎಂ2ಎಂ ಮಾಧ್ಯಮ ಸಂಸ್ಥೆಗೆ ಸಮೀಕ್ಷೆ ನಡೆಸಲು 1 ಕೋಟಿ ರು, ಮುಂಬೈ ಮೂಲದ ಎಕ್ಸ್‌ ಕೆಡಿಆರ್‍‌ ಸಂಸ್ಥೆಗೆ ಅಧ್ಯಯನದ ಹೆಸರಿನಲ್ಲಿ 1.03 ಕೋಟಿ ರು.ಗಳನ್ನು ನೀಡಿದೆ. ಈ ಎರಡೂ ಸಂಸ್ಥೆಗಳು ಈಗಾಗಲೇ ಮುಂಗಡ ಹಣ ಪಡೆದು ಸಮೀಕ್ಷೆ ಕಾರ್ಯವನ್ನೂ ಕೈಗೆತ್ತಿಕೊಂಡಿದೆ. ಈ ಎರಡೂ ಖಾಸಗಿ ಸಂಸ್ಥೆಗಳು ಈಗಾಗಲೇ ಸಮೀಕ್ಷೆ ಮತ್ತು ಅಧ್ಯಯನ ನಡೆಸುತ್ತಿರುವಾಗಲೇ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಮೂಲಕ ನಡೆಸಲಿರುವ  ಸಮೀಕ್ಷೆಗೆ 12 ಕೋಟಿ ರು ವೆಚ್ಚ ಮಾಡುತ್ತಿರುವುದು ದುಂದುವೆಚ್ಚಕ್ಕೆ ದಾರಿಮಾಡಿಕೊಟ್ಟಂತಾಗಿದೆ.

 

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಗ್ಯಾರಂಟಿ ಸಮೀಕ್ಷೆಗೆ 12 ಕೋಟಿ; ದುಂದುವೆಚ್ಚಕ್ಕೆ ದಾರಿ

 

 

ಗೃಹಲಕ್ಷ್ಮಿ ಸೇರಿದಂತೆ 4 ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್‌ ವರ್ಕ್‌ ಕಂಪನಿಗೆ  4(ಜಿ) ವಿನಾಯಿತಿ ನೀಡುವ ಮುನ್ನ ಆರ್ಥಿಕ ಇಲಾಖೆಯ ಅಧಿಕಾರಿಗಳು  ಆಡಳಿತಾತ್ಮಕ  ಪ್ರಕ್ರಿಯೆಗಳನ್ನೇ ನಡೆಸಿರಲಿಲ್ಲ.

ಕೋಟಿ ರು.ವೆಚ್ಚದ ಸಮೀಕ್ಷೆ; ಇಲಾಖೆಗಳ ಪ್ರಸ್ತಾವನೆಯಿಲ್ಲ, ಅಭಿಪ್ರಾಯವೂ ಇಲ್ಲ, ನೇರ ಮಾರ್ಗದಲ್ಲೇ 4(ಜಿ)

 

2023ರ ವಿಧಾನಸಭೆ ಚುನಾವಣೆಯಲ್ಲಿ  ಕಾಂಗ್ರೆಸ್‌ಗೆ ಪೂರ್ಣ ಬಹುಮತ ಬರಲಿದೆ ಎಂದು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಯ ಈದಿನ.ಕಾಮ್‌ ವೆಬ್‌ಸೈಟ್‌ ಚುನಾವಣೆ ಪೂರ್ವ ಸಮೀಕ್ಷೆ ಹೇಳಿತ್ತು. ಕಾಂಗ್ರೆಸ್‌ ಪಕ್ಷವು ಸರ್ಕಾರ ರಚಿಸಿದ ಎರಡೇ ಎರಡು ತಿಂಗಳಲ್ಲಿ ಇದೇ ಕಂಪನಿಗೇ 58 ಸಾವಿರ ಕೋಟಿ ರು. ವೆಚ್ಚದ ಗ್ಯಾರಂಟಿಗಳ ಸಮೀಕ್ಷೆ ನಡೆಸಲು 1 ಕೋಟಿ ರು. ನೀಡಿದ್ದು  ಚರ್ಚೆಗೆ ಗ್ರಾಸವಾಗಿತ್ತು.

ಗ್ಯಾರಂಟಿಗಳ ಸಮೀಕ್ಷೆ; ಮಾಧ್ಯಮ ಸಂಸ್ಥೆಗೆ ಕೋಟಿ ರು ಕೊಟ್ಟ ಸರ್ಕಾರ

 

ಗ್ಯಾರಂಟಿಗಳ ಕುರಿತಾಗಿ ಐಸೆಕ್‌, ಮೌಲ್ಯಮಾಪನ ಪ್ರಾಧಿಕಾರಗಳಿಂದ ಸಮೀಕ್ಷೆ ನಡೆಸಬೇಕಿತ್ತು ಎಂದು ಪ್ರತಿಪಾದಿಸಿರುವ ಹಲವು ಅಧಿಕಾರಿಗಳು, ಕೇವಲ ಪ್ರಕಾಶನ, ಮುದ್ರಣದಂತಹ ಸೇವೆಗಳನ್ನು ಒದಗಿಸುತ್ತಿರುವ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಗೆ ವಹಿಸಿರುವುದಕ್ಕೆ ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದರು.

 

ಸರ್ವೆ ಕಾರ್ಯಕ್ಕೆ ಸರ್ಕಾರದ ಬೆನ್ನು ಬಿದ್ದಿದ್ದ ಎಂ2ಎಂ ಮೀಡಿಯಾ ನೆಟ್‌ವರ್ಕ್ ಕಂಪನಿ; ದಾಖಲೆ ಬಹಿರಂಗ

 

ಗ್ಯಾರಂಟಿಗಳ ಅನುಷ್ಠಾನಕ್ಕೆ ಸಂಬಂಧಿಸಿದ ಆಡಳಿತಾತ್ಮಕ ಪ್ರಕ್ರಿಯೆಗಳು ಜೂನ್‌, ಜುಲೈವರೆಗೂ ಚಾಲ್ತಿಯಲ್ಲಿದ್ದವು. ಇದಾದ ನಂತರವೂ ಯೋಜನೆ ಅನುಷ್ಠಾನದಲ್ಲಿ ಗೊಂದಲ ಮುಂದುವರೆದಿತ್ತು. ಬಹುತೇಕ ಫಲಾನುಭವಿಗಳಿಗೆ ಹಣವೂ ಇದುದವರೆಗೂ ಪಾವತಿಯಾಗಿಲ್ಲ.  ಮಾರ್ಗಸೂಚಿಗಳ ಸಂಬಂಧ ಆಗಸ್ಟ್‌ವರೆಗೂ ತಿದ್ದುಪಡಿಗಳು ಮುಂದುವರೆದಿದ್ದವು. ಕೆಎಸ್‌ಆರ್‍‌ಟಿಸಿಯು 20 ಲಕ್ಷ ರು.ಗಳನ್ನು ನೀಡಿದ್ದರೂ ಇದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನೇ ಒದಗಿಸಿರಲಿಲ್ಲ.

ಕೋಟಿ ರು. ಸಮೀಕ್ಷೆ; 20 ಲಕ್ಷರು ಮುಂಗಡ ನೀಡಿ ದಾಖಲೆಗಳನ್ನೇ ಒದಗಿಸದ ಕೆಎಸ್‌ಆರ್‍‌ಟಿಸಿ

 

ಅಲ್ಲದೇ ಬೆಸ್ಕಾಂ ಕೂಡ  ಸಮಗ್ರ ಕಡತವನ್ನೇ ಮುಚ್ಚಿಟ್ಟಿತ್ತು.

 

ಕೋಟಿ ರು. ವೆಚ್ಚದ ಸಮೀಕ್ಷೆ; ಎಂ2ಎಂ ಕಂಪನಿಗೆ ನೀಡಿರುವ ಆದೇಶದ ಸಮಗ್ರ ಕಡತವನ್ನೇ ಮುಚ್ಚಿಟ್ಟ ಬೆಸ್ಕಾಂ

 

 

ಅದೇ ರೀತಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಸಹ ಎಂ2ಎಂ ಕಂಪನಿಯೊಂದಿಗೆ ಎಂಒಯು ಸೇರಿ ಹಲವು ದಾಖಲೆಗಳೇ ಲಭ್ಯವಿಲ್ಲ ಎಂದು ಆರ್‍‌ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿತ್ತು.

 

 

ಸಮೀಕ್ಷೆಗೆ ಕೋಟಿ ರು.; ಎಂಒಯು ಸೇರಿ ಹಲವು ವಿವರಗಳೇ ಲಭ್ಯವಿಲ್ಲವೆಂದ ಆಹಾರ ಇಲಾಖೆ

 

ಇದರ ನಡುವೆಯೇ ಸರ್ಕಾರವು ಗ್ಯಾರಂಟಿಗಳನ್ನು ಅಧ್ಯಯನ ನಡೆಸಲು ಮುಂಬೈ ಮೂಲದ ಸಂಸ್ಥೆಗೆ 1.03 ಕೋಟಿ ರು. ವೆಚ್ಚ ಮಾಡಲು 4(ಜಿ) ವಿನಾಯಿತಿ ನೀಡಿತ್ತು.

 

ಗ್ಯಾರಂಟಿ ಸಮೀಕ್ಷೆ, ಅನುಷ್ಠಾನ ಸಮಿತಿ ರಚನೆ ಬೆನ್ನಲ್ಲೇ ಈಗ ಅಧ್ಯಯನ; ಮುಂಬೈ ಸಂಸ್ಥೆಗೆ 1.03 ಕೋಟಿ ರು ನೀಡಿಕೆ

ಗ್ಯಾರಂಟಿ ಯೋಜನೆಗಳನ್ನು  ಏಕಕಾಲಕ್ಕೆ ಐದಾರು ಸಮಿತಿಗಳು ಸಮೀಕ್ಷೆ ನಡೆಸುತ್ತಿರುವುದು ಮತ್ತು ಇದಕ್ಕಾಗಿ ಕೋಟ್ಯಂತರ ರುಪಾಯಿ ವೆಚ್ಚ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆಕ್ಷೇಪಗಳು ವ್ಯಕ್ತವಾಗಿವೆ.

Hot this week

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...
Please Scan to make Your Contribution

Topics

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

Related Articles

Popular Categories

error: Content is protected !!