Friday | August 28, 2026 |

ಮತದಾರರಿಗೆ ಲಂಚ, ಆಮಿಷ ಆರೋಪ; ಡಾ ಕೆ ಸುಧಾಕರ್‍‌ ವಿರುದ್ಧ ಎಫ್‌ಐಆರ್‍‌, 4.8 ಕೋಟಿ ನಗದು ವಶ

ಬೆಂಗಳೂರು; ಮತದಾರರಿಗೆ ಲಂಚ, ಆಮಿಷ ಮತ್ತು ಪ್ರಭಾವ ಬೀರಿದ್ದಾರೆ ಎಂಬ ಆರೋಪದಡಿಯಲ್ಲಿ ಚಿಕ್ಕಬಳ್ಳಾಪುರ ಸಂಸದೀಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚಿವ ಡಾ ಕೆ ಸುಧಾಕರ್‍‌ ಅವರ ವಿರುದ್ಧ ಎಫ್‌ಐಆರ್‍‌ ದಾಖಲಾಗಿದೆ.

ಮತದಾರರಿಗೆ ಆಮಿಷ ಮತ್ತು ಅನಗತ್ಯ ಪ್ರಭಾವ ಆರೋಪಕ್ಕಾಗಿ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.

ಎಫ್‌ಐಆರ್‍‌ ಪ್ರತಿ ಮತ್ತು ಈ ಸಂಬಂಧ ಸಲ್ಲಿಕೆಯಾಗಿರುವ ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಸುಧಾಕರ್‍‌ ಅವರ ಆಪ್ತರು ಎನ್ನಲಾದ ಮಾದಾವರ ಗೋವಿಂದಪ್ಪ ನಿವಾಸದ ಮೇಲೆ ಐಟಿ ದಾಳಿ ನಡೆದಿತ್ತು. ಈ ವೇಳೆ 4.8 ಕೋಟಿ ರು. ಮೌಲ್ಯದ ನಗದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಡಾ ಕೆ ಸುಧಾಕರ್‍‌ ವಿರುದ್ದ ಆರ್‍‌ಪಿ ಕಾಯ್ದೆ 1951ರ ಅಡಿಯಲ್ಲಿ ಅನುಚಿತ ಪ್ರಭಾವ, ಲಂಚ ಮತ್ತು ಭ್ರಷ್ಟಾಚಾರದ ಪ್ರಯತ್ನಕ್ಕಾಗಿ ಕಲಂ 171 ಬಿ 171ಸಿ 171 ಇ, 171 ಎಫ್‌ ಭಾರತೀಯ ದಂಡ ಸಂಹಿತೆ ಹಾಗೂ ಕಲಂ 123 ಆರ್‍‌ಪಿ ಕಾಯ್ದೆ 1951ರ ರೀತಿ ಪ್ರಕರಣವನ್ನು ದಾಖಲಿಸಿಕೊಂಡಿರುವುದು ಎಫ್‌ಐಆರ್‍‌ನಿಂದ ತಿಳಿದು ಬಂದಿದೆ.

ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರೂ ಆಗಿರುವ ಗೋವಿಂದಪ್ಪನವರ ನೆಲಮಂಗಲದ ಮನೆಯಲ್ಲಿ ಹಣ ಇದೆ ಎಂದು ಖಚಿತಪಡಿಸಿಕೊಂಡ ನಂತರ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 10 ಮಂದಿ ಐಟಿ ಅಧಿಕಾರಿಗಳ ತಂಡ ಮನೆಯನ್ನು ಪರಿಶೀಲಿಸಿದೆ ಎಂದು ಗೊತ್ತಾಗಿದೆ.

ದಾಳಿ ವೇಳೆ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣೆ ಪತ್ತೆಯಾಗಿದೆ. ನೋಟು ಎಣಿಕೆ ವೇಳೆ ಮನೆಯಲ್ಲಿ ದಾಖಲೆ ಇಲ್ಲದೆ ಬರೋಬ್ಬರಿ 4 ಕೋಟಿ 80 ಲಕ್ಷ ರೂ. ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವುದು ತಿಳಿದು ಬಂದಿದೆ.

ಮತದಾರರಿಗೆ ಲಂಚ ನೀಡಲು ಮತ್ತು ಚುನಾವಣಾ ಸಮಯದಲ್ಲಿ ದುರುಪಯೋಗಪಡಿಸಿಕೊಳ್ಳುವುದಕ್ಕಾಗಿ 10 ಕೋಟಿ ರು.ಗಳನ್ನು ಸಂಗ್ರಹಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ನೋಡಲ್‌ ಅಧಿಕಾರಿ ಐಎಎಸ್‌ ಮುನೀಶ್‌ ಮೌದ್ಗಿಲ್‌ ಅವರ ಮೊಬೈಲ್‌ಗೆ ದೂರು ಬಂದಿತ್ತು.

ಮೌದ್ಗಿಲ್‌ ಅವರ ಸೂಚನೆ ಮೇರೆಗೆ ಫ್ಲೈಯಿಂಗ್‌ ಸ್ಕ್ಯಾಡ್‌ನ ಅಧಿಕಾರಿ ದಶರಥ್‌ ವಿ ಕುಂಬಾರ್‍‌ ಎಂಬುವರು ಸ್ಥಳವನ್ನು ಪರಿಶೀಲಿಸಿ ಮಾಹಿತಿಯನ್ನು ಖಚಿತಪಡಿಸಿದ್ದರು. ಯಲಹಂಕ ವಿಧಾನಸಭೆ ಕ್ಷೇತ್ರದ ಎಂಸಿಸಿ ನೋಡಲ್ ಅಧಿಕಾರಿಗ ಮಾಹಿತಿ ನೀಡಲಾಗಿತ್ತು.

ನಂತರ ಆದಾಯ ತೆರಿಗೆ ಅಧಿಕಾರಿಗಳ ನೆರವಿನೊಂದಿಗೆ ಶೋಧ ನಡೆಸಲಾಗಿತ್ತು. ಈ ವೇಳೆ 4.8 ಕೋಟಿ ರು.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬುದು ಎಫ್‌ಐಆರ್‍‌ನಿಂದ ಗೊತ್ತಾಗಿದೆ.

Hot this week

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...
Please Scan to make Your Contribution

Topics

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

Related Articles

Popular Categories

error: Content is protected !!