Sunday | October 4, 2026 |

ಎಂಟೆಕ್‌ ಕೋರ್ಸ್‌ಗೆ ಸಿಇಟಿ ಕಡ್ಡಾಯ; ಕ್ಯಾಪಿಟೇಷನ್‌ ಲಾಬಿಗೆ ಮಣಿಯದ ಸರ್ಕಾರ, ಪೋಷಕರು ನಿರಾಳ

ಬೆಂಗಳೂರು; ಸಾಮಾನ್ಯ ಪ್ರವೇಶ ಪರೀಕ್ಷೆ ರದ್ದುಗೊಳಿಸಿ ಸೆಮಿಸ್ಟರ್‍‌ಗಳಲ್ಲಿ ಗಳಿಸಿದ್ದ ಅಂಕಗಳನ್ನಾಧರಿಸಿ ಪ್ರವೇಶ ನೀಡಲು ಮುಂದಾಗಿದ್ದ ಕರ್ನಾಟಕ ಪ್ರವೇಶ ಪರೀಕ್ಷೆ ಪ್ರಾಧಿಕಾರದ ಪ್ರಸ್ತಾವನೆ  ಕುರಿತು ‘ದಿ ಫೈಲ್‌’ ಪ್ರಕಟಿಸಿದ್ದ ವರದಿ ಬೆನ್ನಲ್ಲೇ ಇದೀಗ ಸರ್ಕಾರವು ಎಚ್ಚೆತ್ತುಕೊಂಡಿದೆ.

 

ಕೆಇಎ ಪ್ರಸ್ತಾವನೆಯನ್ನು ಒಂದೊಮ್ಮೆ ಒಪ್ಪಿಕೊಂಡಲ್ಲಿ ಭ್ರಷ್ಟಾಚಾರಕ್ಕೆ ದಾರಿಮಾಡಿಕೊಟ್ಟಂತಾಗುತ್ತದೆ ಎಂದು ‘ದಿ ಫೈಲ್‌’ ವರದಿಯಲ್ಲಿ ವಿವರಿಸಿತ್ತು. ಇದೀಗ ಸರ್ಕಾರವು ಕರ್ನಾಟಕ ಪ್ರವೇಶ ಪರೀಕ್ಷೆ ಪ್ರಾಧಿಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಮತ್ತು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದೂ ಪ್ರಾಧಿಕಾರಕ್ಕೆ ತಾಕೀತು ಮಾಡಿದೆ.

 

ಈ ಸಂಬಂಧ 2024ರ ಆಗಸ್ಟ್‌ 7ರಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯು ಕೆಇಎನ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಪತ್ರದಲ್ಲೇನಿದೆ?

 

2024-25ನೇ ಸಾಲಿನಿಂದ ಎಂ ಟೆಕ್‌ ಪದವಿಯ ಸಾಮಾನ್ಯ ಪ್ರವೇಶ ಪರೀಕ್ಷೆ ರದ್ದುಗೊಳಿಸಿ ಎಂಟೆಕ್ ಪದವಿ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಅವರ ಸ್ನಾತಕ ಪದವಿಯ ಎಲ್ಲಾ ವರ್ಷಗಳ, ಸೆಮಿಸ್ಟರ್‍‌ಗಳ ಸರಾಸರಿ ಅಂಕಗಳ ಆಧಾರದ ಮೇಲೆ ಎಂ ಟೆಕ್‌ ಪದವಿಗೆ ಪ್ರವೇಶ ನೀಡುವುದು ಸೂಕ್ತ ಎಂದು ಪ್ರಸ್ತಾವನೆ ಸಲ್ಲಿಸಿತ್ತು. ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ರದ್ದುಗೊಳಿಸಿ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಕೋರಿತ್ತು.

 

ಕ್ಯಾಪಿಟೇಷನ್‌ ಶುಲ್ಕ ನಿಷೇಧ ಸಂಬಂಧ 2005ರ ಆಗಸ್ಟ್‌ 25ರಂದೇ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇದರ ಪ್ರಕಾರ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುವುದು ಕಡ್ಡಾಯವಾಗಿದೆ. ಇದರನ್ವಯ ಪ್ರಸ್ತುತ ಚಾಲ್ತಿಯಲ್ಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮುಂದುವರೆಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀಕರ್‍‌ ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶಿಸಿರುವುದು ಪತ್ರದಿಂದ ಗೊತ್ತಾಗಿದೆ.

 

ಪ್ರಕರಣದ ಹಿನ್ನೆಲೆ

 

ಸಾಮಾನ್ಯ ಪ್ರವೇಶ ಪರೀಕ್ಷೆ ಬದಲಿಗೆ ಸೆಮಿಸ್ಟರ್‌ಗಳಲ್ಲಿ ಗಳಿಸಿದ ಅಂಕಗಳನ್ನಾಧರಿಸಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಪ್ರವೇಶಾತಿಗೆ ಅವಕಾಶ ಕಲ್ಪಿಸಬೇಕು ಎಂದು ಪ್ರಸ್ತಾವಿಸುವ ಮೂಲಕ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿರುವುದು ಇದೀಗ ಬಹಿರಂಗವಾಗಿದೆ.

 

ಪ್ರವೇಶ ಪರೀಕ್ಷೆಗೆ ನೋಂದಣಿ ಕುಸಿತಗೊಂಡಿದೆ ಎಂಬ ಕಾರಣವನ್ನು ಮುಂದಿರಿಸಿರುವ ಕರ್ನಾಟಕ ಪ್ರವೇಶ ಪ್ರಾಧಿಕಾರವು ಪ್ರವೇಶ ಪರೀಕ್ಷೆಯನ್ನೇ ರದ್ದುಗೊಳಿಸಬೇಕು ಎಂದು ಸಲ್ಲಿಸಿರುವ ಪ್ರಸ್ತಾವನೆಯು ಶೈಕ್ಷಣಿಕ ಹಿತದೃಷ್ಟಿಯನ್ನೇ ಬದಿಗೊತ್ತಿತ್ತು.

 

ಇದಕ್ಕೆ ಸಂಬಂಧಿಸಿದಂತೆ ಟಿಪ್ಪಣಿ ಹಾಳೆಗಳು (ಕಡತ ಸಂಖ್ಯೆ; ED/498/TEC/2023 Computer number 1254637) ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಪಾಲಿಮರ್‌ ಸೈನ್ಸ್‌, ಟೆಕ್ಸ್‌ಟೈಲ್‌ ಟೆಕ್ನಾಲಜಿ, ಕೆಮಿಕಲ್‌ ಇಂಜಿನಿಯರಿಂಗ್‌, ಪರಿಸರ ಇಂಜಿನಿಯರಿಂಗ್‌, ಬಯೋ ಟೆಕ್ನಾಲಜಿ, ವಾಸ್ತುಶಿಲ್ಪ, ಮೆಕ್ಯಾನಿಕಲ್‌ ಸೈನ್ಸ್‌, ಎಲೆಕ್ಟ್ರಿಕಲ್‌ ಸೈನ್ಸ್‌, ಕಂಪ್ಯೂಟರ್‌ ಸೈನ್ಸ್‌ ಇಂಜಿನಿಯರಿಂಗ್‌ ಮತ್ತು ಸಿವಿಲ್‌ ಇಂಜಿನಿಯರಿಂಗ್‌ಗೆ 2022-23ನೇ ಸಾಲಿನಲ್ಲಿ ಒಟ್ಟು 7,056 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 2023-24ರಲ್ಲಿ 6,427 ವಿದ್ಯಾರ್ಥಿಗಳು ನೋಂದಾಯಿಸಿದ್ದರು.

 

ಈ ಅಂಕಿ ಅಂಶದ ಪ್ರಕಾರ ಕಳೆದ ವರ್ಷಕ್ಕೆ ಹೋಲಿಸಿದರೇ ಒಂದೇ ವರ್ಷದಲ್ಲಿ 629 ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಈ ಅಂಶವನ್ನೇ ಮುಂದಿರಿಸಿಕೊಂಡಿರುವ ಕೆಇಎಯು ಪ್ರವೇಶ ಪರೀಕ್ಷೆ ಬದಲಿಗೆ ಸೆಮಿಸ್ಟರ್‌ನಲ್ಲಿ ಗಳಿಸಿರುವ ಅಂಕಗಳನ್ನಾಧರಿಸಿ ಪ್ರವೇಶ ಕಲ್ಪಿಸಬೇಕು ಎಂದು ಪ್ರತಿಪಾದಿಸಿರುವ ಕ್ರಮಕ್ಕೆ ಶಿಕ್ಷಣ ಇಲಾಖೆಯಲ್ಲಿಯೇ ಆಕ್ಷೇಪ ವ್ಯಕ್ತವಾಗಿದ್ದವು.

 

ಎಂ ಟೆಕ್‌ ಪದವಿಯ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ರದ್ದುಗೊಳಿಸಿ ಎಂ ಟೆಕ್‌ ಪದವಿ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಅವರ ಸ್ನಾತಕ ಪದವಿಯ ಎಲ್ಲಾ ವರ್ಷಗಳ ಸೆಮಿಸ್ಟರ್‌ ಗಳ ಸರಾಸರಿ ಅಂಕಗಳ ಆಧಾರದ ಮೇಲೆ ಎಂ ಟೆಕ್‌ ಪದವಿಗೆ ಪ್ರವೇಶ ನೀಡುವುದು ಸೂಕ್ತ ಎಂದು ಪ್ರಾಧಿಕಾರವು ತನ್ನ ಪ್ರಸ್ತಾವನೆಯಲ್ಲಿ ವಿವರಿಸಿತ್ತು.

 

ಕೆಇಎ ಯು ತನ್ನ ಪ್ರಸ್ತಾವನೆಯಲ್ಲಿ 10 ವಿಷಯಗಳಿಗೆ ಪ್ರವೇಶ ಪರೀಕ್ಷೆ ಮಾಡುವುದರಿಂದ ಪ್ರಾಧಿಕಾರಕ್ಕೆ ಆರ್ಥಿಕ ನಷ್ಟವುಂಟಾಗುತ್ತಿದೆ. ಅಲ್ಲದೇ ಮಾನವ ಸಂಪನ್ಮೂಲದ ಮೇಲೆ ಅನಾವಶ್ಯಕ ಕಾರ್ಯ ಒತ್ತಡ ಉಂಟಾಗುತ್ತಿದೆ. ಹೀಗಾಗಿ ಎಂ ಟೆಕ್‌ ಕೋರ್ಸ್‌ಗೆ ಪ್ರವೇಶ ಪರೀಕ್ಷೆ ರದ್ದುಪಡಿಸಬೇಕು ಎಂದು ಪ್ರಾಧಿಕಾರವು ತನ್ನ ಪ್ರಸ್ತಾವನೆಯಲ್ಲಿ ಹೇಳಿತ್ತು.

 

‘ಕೆಇಎಯು ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿ ಕರ್ತವ್ಯ ನಿರ್ವಹಿಸುವ ಪ್ರಾಧಿಕಾರವಾಗಿದೆ. ಇದು ಸರ್ಕಾರದ ಒಂದು ಭಾಗವಾಗಿರುತ್ತದೆ. ಸರ್ಕಾರದ ಉದ್ದೇಶವು ಲಾಭ ಗಳಿಸುವ ಉದ್ದೇಶ ಆಗಬಾರದು. ಸರ್ಕಾರಕ್ಕೆ ಸೇವಾಭಾವನೆ ಇರಬೇಕಾಗುತ್ತದೆ. ಆದ್ದರಿಂದ ಎಂಟೆಕ್‌ ಕೋರ್ಸ್‌ಗಳಿಗೆ ಕೆಇಎಯಿಂದ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ನಡೆಸಿ ಸೀಟುಗಳನ್ನು ಭರ್ತಿ ಮಾಡುವ ಕ್ರಮವು ಸರಿ ಇರುತ್ತದೆ.

ಎಂಟೆಕ್‌ ಕೋರ್ಸ್‌ಗಳಿಗೆ ಸಿಇಟಿ ರದ್ದುಗೊಳಿಸಲು ಪ್ರಸ್ತಾವ; ಭ್ರಷ್ಟಾಚಾರಕ್ಕೆ ದಾರಿಮಾಡಿಕೊಟ್ಟ ಕೆಇಎ

ಸೆಮಿಸ್ಟರ್‌ಗಳಲ್ಲಿ ಪಡೆಯುವ ಅಂಕಗಳ ಆಧಾರದ ಮೇಲೆ ಪ್ರವೇಶಾತಿ ನೀಡುವ ಕ್ರಮವ ಸರಿ ಇರುವುದಿಲ್ಲ. ಒಂದು ವೇಳೆ ಸೆಮಿಸ್ಟರ್‌ಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಪ್ರವೇಶಾತಿ ನೀಡಿದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಆದ್ದರಿಂದ ಕೆಇಎ ಪ್ರಸ್ತಾವನೆಯನ್ನು ಕೈ ಬಿಡಬಹುದಾಗಿದೆ,’ ಎಂದು ಶಾಖಾಧಿಕಾರಿ ಶಾಂತಪ್ಪ ದನ್ನೇನವರ್‌ ಅವರು ಟಿಪ್ಪಣಿಯಲ್ಲಿ ದಾಖಲಿಸಿದ್ದರು.

 

ಅಲ್ಲದೇ ಇಲಾಖೆಯ ಅಧೀನ ಕಾರ್ಯದರ್ಶಿ ಮಹಾಂತಪ್ಪ ಎಸ್‌ ತುರಕನೂರು ಅವರೂ ಸಹ ಶಾಖಾಧಿಕಾರಿಯ ಅಭಿಪ್ರಾಯವನ್ನೇ ಎತ್ತಿ ಹಿಡಿದಿದ್ದರು.

 

‘ಎಂಟೆಕ್‌ ಕೋರ್ಸ್‌ಗಳಿಗೆ ಪ್ರವೇಶಾತಿಗೆ ಸಂಬಂಧಿಸಿದಂತೆ 2005ರಲ್ಲಿ ನಿಯಮವು ಜಾರಿಗೆ ಬಂದಿದೆ. ಇದರಿಂದಾಗಿ ಎಂಇ/ಎಂ ಟೆಕ್‌ ಸ್ನಾತಕೋತ್ತರ ಕೋರ್ಸ್‌ನ ಪ್ರವೇಶಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೈಗೊಳ್ಳಲು ಸಾಧ್ಯವಾಗಿರುತ್ತದೆ. ಅಲ್ಲದೇ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಪ್ರವೇಶಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೈಗೊಳ್ಳಲು 2024-25ನೇ ಸಾಲಿನಿಂದ ಸಾಮಾನ್ಯ ಪ್ರವೇಶ ಪರೀಕ್ಷೆ ರದ್ದುಗೊಳಿಸದೆಯೇ ಹಾಲಿ ಚಾಲ್ತಿಯಲ್ಲಿರುವ ನಿಯಮಾವಳಿಗಳಂತೆ ಪ್ರವೇಶಾತಿ ಪ್ರಕ್ರಿಯೆ ಮುಂದುವರೆಸುವುದು ಸೂಕ್ತ,’ ಎಂದು ಅಭಿಪ್ರಾಯಿಸಿದ್ದರು.

 

ಎಲೆಕ್ಟ್ರಿಕಲ್‌ ಸೈನ್ಸ್‌ ಇಂಜಿನಿಯರಿಂಗ್‌, ಕಂಪ್ಯೂಟರ್‌ ಸೈನ್ಸ್‌ ಇಂಜಿನಿಯರಿಂಗ್‌, ಸಿವಿಲ್‌ ಇಂಜಿನಿಯರಿಂಗ್‌ ವಿಷಯಗಳನ್ನು ಹೊರತುಪಡಿಸಿದರೇ ಉಳಿದ 7 ವಿಷಯಗಳಿಗೆ ಸಾವಿರಕ್ಕಿಂತ ಕಡಿಮೆ ಅಭ್ಯರ್ಥಿಗಳು ಎಂ ಟೆಕ್‌ ಸಾಮಾನ್ಯ ಪ್ರವೇಶ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ ಹಲವು ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. ಇನ್ನೂ ಕೆಲವು ವಿದ್ಯಾರ್ಥಿಗಳಿಗೆ ಸೀಟ್‌ ದೊರೆತಿದ್ದರೂ ಎಂ ಟೆಕ್‌ ಕೋರ್ಸ್‌ಗೆ ದಾಖಲಾತಿಯನ್ನೇ ಪಡೆದಿಲ್ಲ ಎಂಬುದು ಕೆಇಎಯು ತನ್ನ ಪ್ರಸ್ತಾವನೆಯಲ್ಲಿ ವಿವರಿಸಿತ್ತು.

 

‘ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಎಲ್ಲಾ 10 ಎಂ ಟೆಕ್‌ ವಿಷಯಗಳಿಗೆ ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆಯನ್ನು ನಡೆಸುತ್ತಿರುವುದರಿಂದ ಆರ್ಥಿಕ ನಷ್ಟವುಂಟಾಗುತ್ತಿದೆ. ಅಲ್ಲದೇ ಪ್ರಾಧಿಕಾರದ ಮಾನವ ಸಂಪನ್ಮೂಲದ ಮೇಲೆ ಅನಾವಶ್ಯಕ ಕಾರ್ಯ ಒತ್ತಡ ಉಂಟಾಗುತ್ತದೆ. ಅಭ್ಯರ್ಥಿಗಳು ಸಹ ಎಂ ಟೆಕ್‌ ಕೋರ್ಸ್‌ಗಳಿಗೆ ದಾಖಲಾತಿ ಪಡೆದುಕೊಳ್ಳಲು ಆಸಕ್ತಿ ತೋರಿಸುತ್ತಿಲ್ಲ,’ ಎಂದು ಪ್ರಸ್ತಾವನೆಯನ್ನು ಸಮರ್ಥಿಸಿಕೊಂಡಿತ್ತು.

Hot this week

21 ಪ್ಯಾಕೇಜ್‌ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪ; ಅಂಜುಂ ಪರ್ವೇಝ್ ಸಮಿತಿ ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು; ಹಸಿ ತ್ಯಾಜ್ಯ, ಒಣ ತಾಜ್ಯ, ನೈರ್ಮಲ್ಯ ತ್ಯಾಜ್ಯ, ರಸ್ತೆ ಗುಡಿಸುವಿಕೆ,...

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮನವಿ; ಸ್ಪಷ್ಟ ಅಭಿಪ್ರಾಯ ಸಲ್ಲಿಸಲು ಡಿಜಿಐಜಿಪಿಗೆ ನಿರ್ದೇಶನ

ಬೆಂಗಳೂರು;   ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧದ ಪ್ರಕರಣದಲ್ಲಿ ಸಿಐಡಿ ವಿಶೇಷ ವಿಚಾರಣೆ...

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...
Please Scan to make Your Contribution

Topics

21 ಪ್ಯಾಕೇಜ್‌ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪ; ಅಂಜುಂ ಪರ್ವೇಝ್ ಸಮಿತಿ ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು; ಹಸಿ ತ್ಯಾಜ್ಯ, ಒಣ ತಾಜ್ಯ, ನೈರ್ಮಲ್ಯ ತ್ಯಾಜ್ಯ, ರಸ್ತೆ ಗುಡಿಸುವಿಕೆ,...

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮನವಿ; ಸ್ಪಷ್ಟ ಅಭಿಪ್ರಾಯ ಸಲ್ಲಿಸಲು ಡಿಜಿಐಜಿಪಿಗೆ ನಿರ್ದೇಶನ

ಬೆಂಗಳೂರು;   ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧದ ಪ್ರಕರಣದಲ್ಲಿ ಸಿಐಡಿ ವಿಶೇಷ ವಿಚಾರಣೆ...

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...

ವಿಮಾ ಕಂಪನಿಯಿಂದ ಹಣ ಬಂದಿದೆ, ಆದರೆ ರೈತರ ಖಾತೆಗಳಿಗೆ ಜಮೆಯೇ ಆಗಿಲ್ಲ; ಬರಗಾಲದ ನಡುವೆಯೇ ರೈತರಿಗೆ ಮತ್ತೊಂದು ಬರೆ

ಬೆಂಗಳೂರು;  ರಾಜ್ಯದಾದ್ಯಂತ ತೀವ್ರ ಬರಗಾಲ ಎದುರಾಗಿರುವ ನಡುವೆಯೇ  2025-26ನೇ ಮುಂಗಾರು ಹಂಗಾಮಿನ...

ಪ್ರಿಂಟರ್, ಸ್ಕ್ಯಾನರ್ ಕೂಡ ಲಭ್ಯವಿಲ್ಲ, ಇ-ಮೇಲ್‌ ಮಾಡಲೂ ಕಷ್ಟಸಾಧ್ಯ; ಸರ್ಕಾರದ ಆರ್ಥಿಕ ಪರಿಸ್ಥಿತಿ ತೆರೆದಿಟ್ಟ ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ

ಬೆಂಗಳೂರು; ಚಾಲ್ತಿಯಲ್ಲಿರುವ ಮತ್ತು ಹೊಸ ಯೋಜನೆಗಳಿಗೆ ಅನುದಾನ ಹೊಂದಿಸಲು ಏದುಸಿರು ಬಿಡುತ್ತಿರುವ...

Related Articles

Popular Categories

error: Content is protected !!