Saturday | June 27, 2026 |

ಪ್ರವೇಶ ಶುಲ್ಕ ವಸೂಲಿ; ಬೇನಾಮಿ ಖಾತೆಗಳಿಗೆ ಲಕ್ಷಾಂತರ ರು ಜಮೆ, ಅಥ್ಲೆಟಿಕ್‌ ಅಸೋಸಿಯೇಷನ್‌ಗೆ ಅಪಾರ ನಷ್ಟ?

ಬೆಂಗಳೂರು; ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಅಧ್ಯಕ್ಷರಾಗಿರುವ ಕರ್ನಾಟಕ ಅಥ್ಲೆಟಿಕ್‌ ಅಸೋಸಿಯೇಷನ್‌, ವಿವಿಧ ಕ್ರೀಡೆಗಳ ಸ್ಪರ್ಧೆ ಹೆಸರಿನಲ್ಲಿ ಸಂಗ್ರಹಿಸುತ್ತಿರುವ ಲಕ್ಷಾಂತರ ರು ಮೊತ್ತದ ಪ್ರವೇಶ ಶುಲ್ಕವನ್ನು ಬೇನಾಮಿ ಖಾತೆಗಳಿಗೆ ಜಮೆ ಮಾಡಿಸುತ್ತಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ.

 

ಅಥ್ಲೆಟಿಕ್‌ ತರಬೇತುದಾರ ಮತ್ತು ಮಾಜಿ ಸೈನಿಕರೂ ಆಗಿರುವ ಯತೀಶ್‌ಕುಮಾರ್‍‌ ಎಂಬುವರು ಈ ಸಂಬಂಧ ಮುಖ್ಯಮಂತ್ರಿ, ಸಂಘದ ಅಧ್ಯಕ್ಷ ಡಾ ಜಿ ಪರಮೇಶ್ವರ, ಮುಖ್ಯ ಕಾರ್ಯದರ್ಶಿ ಸೇರಿದಂತೆ ಸಕ್ಷಮ ಪ್ರಾಧಿಕಾರಗಳಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಅಲ್ಲದೇ ಬೇನಾಮಿ ಖಾತೆಗಳಿಗೆ ಜಮೆ ಮಾಡುತ್ತಿರುವ ಕುರಿತಾದ ಸಾಕ್ಷ್ಯ, ಪುರಾವೆಗಳನ್ನೂ ಒದಗಿಸಿದ್ದಾರೆ. ಈ ಎಲ್ಲಾ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾದೊಂದಿಗೆ ಸಂಯೋಜಿತವಾಗಿದೆ ಕರ್ನಾಟಕ ಅಥ್ಲೆಟಿಕ್‌ ಅಸೋಸಿಯೇಷನ್‌ನಲ್ಲಿ ಹಣಕಾಸು ವ್ಯವಹಾರಗಳು ಪಾರದರ್ಶಕವಾಗಿಲ್ಲ. ನಿಯಮಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಇದರಿಂದ ಅಸೋಸಿಯೇಷನ್‌ಗೆ ಆರ್ಥಿಕ ನಷ್ಟವಾಗುತ್ತಿದೆ. ಅಲ್ಲದೇ ಕ್ರೀಡಾ ಸ್ಪರ್ಧಾಳುಗಳಿಂದ ಸಂಗ್ರಹಿಸುತ್ತಿರುವ ಶುಲ್ಕವನ್ನು ಅಸೋಸಿಯೇಷನ್‌ಗೆ ಜಮೆ ಮಾಡುತ್ತಿಲ್ಲ. ಬದಲಿಗೆ ಬೇನಾಮಿ ಖಾತೆಗಳಿಗೆ ಹಣ ಜಮೆ ಮಾಡುತ್ತಿದೆ ಎಂದು ಯತೀಶ್‌ಕುಮಾರ್‍‌ ಅವರು ದೂರಿನಲ್ಲಿ ವಿವರಿಸಿದ್ದಾರೆ.

 

ಕರ್ನಾಟಕ ಅಥ್ಲೆಟಿಕ್‌ ಅಸೋಸಿಯೇಷನ್‌ 2023ರ ಜುಲೈನಿಂದ 2024ರ ಇದುವರೆಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದೆ. ಈ ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಿರುವ ಪ್ರತೀ ಸ್ಪರ್ಧಾಳುವಿನಿಂದ ತಲಾ 200 ರು. ಲೆಕ್ಕದಲ್ಲಿ ಹಣವನ್ನು ವಸೂಲಿ ಮಾಡಿದೆ. ಈ ರೀತಿ ವಸೂಲಿ ಮಾಡಿರುವ ಹಣವು ಅಸೋಸಿಯೇಷನ್‌ನ ಅಧಿಕೃತ ಖಾತೆಗೆ ಜಮಾ ಆಗುತ್ತಿಲ್ಲ. ಬದಲಿಗೆ ಖಾಸಗಿ ವ್ಯಕ್ತಿಗಳ ಹೆಸರಿನ ಖಾತೆಗಳಿಗೆ ಜಮೆ ಆಗುತ್ತಿದೆ ಎಂದು ಯತೀಶ್‌ಕುಮಾರ್‍‌ ಅವರು ದೂರಿನಲ್ಲಿ ತಿಳಿಸಿದ್ದಾರೆ.

 

ನಿದರ್ಶನ, ಎನ್‌ ಸ್ಪೋರ್ಟ್ಸ್‌,

 

 

ಸುನೀಲ್‌ ಕೆ ಜಿ,

 

 

ಮತ್ತು ರೋಚಿಸ್‌ ಎಂಟರ್‍‌ಪ್ರೈಸೆಸ್‌ ಹೆಸರಿನ ಖಾತೆಗಳಿಗೆ ಹಣ ಜಮೆ ಆಗುತ್ತಿರುವ ಕುರಿತು ಯತೀಶ್‌ಕುಮಾರ್ ಅವರು ಒದಗಿಸಿರುವ ಪುರಾವೆಗಳಿಂದ ಗೊತ್ತಾಗಿದೆ.

 

 

ವಿವಿಧ ವಯೋಮಾನ ಬಾಲಕ ಮತ್ತು ಬಾಲಕಿಯರಿಗೆ ಲಾಂಗ್‌ ಜಂಪ್‌, ಹೈ ಜಂಪ್‌, ಶಾಟ್‌ಪುಟ್‌, 100 ಮೀಟರ್‍‌ ಓಟ, 1,000 ಮೀಟರ್‍‌ ಓಟ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ.

 

‘ಈ ಸ್ಪರ್ಧೆಗೆ ಭಾಗವಹಿಸುವ ಕ್ರೀಡಾಪಟುಗಳಿಂದ ಪ್ರವೇಶ ಶುಲ್ಕವನ್ನು ಹಲವು ವರ್ಷಗಳಿಂದಲೂ ವಸೂಲಿ ಮಾಡುತ್ತಿದೆ. ಆದರೆ ಈ ಯಾವ ಶುಲ್ಕವೂ ಸಂಘದ ಹೆಸರಿನಲ್ಲಿರುವ ಅಧಿಕೃತ ಖಾತೆಗೆ ಜಮೆ ಆಗುತ್ತಿಲ್ಲ. ಬದಲಿಗೆ ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿರುವ ಖಾತೆಗಳಿಗೆ ಫೋನ್‌ ಪೇ, ಗೂಗಲ್‌ ಪೇ ಮೂಲಕ ಜಮೆ ಮಾಡಿಸುತ್ತಿದೆ,’ ಎಂದು ಆರೋಪಿಸುತ್ತಾರೆ ಯತೀಶ್‌ಕುಮಾರ್‍‌.

 

ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ​​ಕರ್ನಾಟಕದಲ್ಲಿ ಅಥ್ಲೆಟಿಕ್ಸ್ ನಡೆಸುವ ಮತ್ತು ಈ ಚಟುವಟಿಕೆಗಳನ್ನು ನಿರ್ವಹಿಸುವ ಅಧಿಕೃತ ಸಂಸ್ಥೆಯಾಗಿದೆ. ಮತ್ತು ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾದೊಂದಿಗೆ ಸಂಯೋಜಿತವಾಗಿದೆ. ​​ರಾಜ್ಯ ಚಾಂಪಿಯನ್‌ಶಿಪ್ ಅನ್ನು ಆಯೋಜಿಸುವ ಈ ಸಂಘವು ಭಾರತದಾದ್ಯಂತ ನಡೆಯುವ ವಿವಿಧ ರಾಷ್ಟ್ರೀಯ ಸ್ಪರ್ಧೆಗಳಿಗೆ ಕ್ರೀಡಾಪಟುಗಳಿಗೆ ತರಬೇತಿ ನೀಡುತ್ತದೆ.

 

ಕೆಎಎಯು ವಿವಿಧ ರಾಷ್ಟ್ರೀಯ ಸ್ಪರ್ಧೆಗಳಿಗೆ ರಾಜ್ಯ ಅಥ್ಲೆಟಿಕ್ಸ್ ತಂಡಗಳನ್ನು ಆಯ್ಕೆ ಮಾಡುತ್ತದೆ ಮತ್ತು ವಿವಿಧ ವಯಸ್ಸಿನ ವಿಭಾಗಗಳಿಗೆ ರಾಜ್ಯ ಚಾಂಪಿಯನ್‌ಶಿಪ್‌ಗಳನ್ನು ನಡೆಸುತ್ತದೆ. ಇದು ವಿವಿಧ ರಾಷ್ಟ್ರೀಯ ಮಟ್ಟದ ಚಾಂಪಿಯನ್‌ಶಿಪ್‌ಗಳನ್ನು ನಡೆಸಿದೆ. ಜೊತೆಗೆ, ಕ್ರೀಡೆಯನ್ನು ಉತ್ತೇಜಿಸಲು ಮತ್ತು ಜನರಲ್ಲಿ ಅದನ್ನು ಜನಪ್ರಿಯಗೊಳಿಸಲು ಮತ್ತು ಕ್ರೀಡಾಪಟು ಮತ್ತು ಕ್ರೀಡೆಯ ಮತ್ತಷ್ಟು ಬೆಳವಣಿಗೆಗಾಗಿ ಅಥ್ಲೆಟಿಕ್ಸ್‌ನ್ನು ವಾಣಿಜ್ಯಿಕವಾಗಿ ಆಕರ್ಷಕವಾಗಿಸಲು ವಿವಿಧ ಸಭೆಗಳನ್ನು ನಡೆಸುತ್ತಿದೆ.

 

ಆದರೂ ಈ ಸಂಘವು ಮಾಹಿತಿ ಹಕ್ಕಿನಡಿಯಲ್ಲಿ ಸಲ್ಲಿಸುವ ಯಾವುದೇ ಅರ್ಜಿಗಳಿಗೆ ಮಾಹಿತಿಯನ್ನೇ ನೀಡುವುದಿಲ್ಲ ಎಂದು ಯತೀಶ್‌ಕುಮಾರ್‍‌ ಅವರು ದೂರಿನಲ್ಲಿ ಆಪಾದಿಸಿದ್ದಾರೆ. ಕರ್ನಾಟಕ ಅಥ್ಲೆಟಿಕ್‌ ಅಸೋಸಿಯೇಷನ್‌ ಸಂಸ್ಥೆಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರವು ಮಾನ್ಯತೆ ಮತ್ತು ಧನ ಸಹಾಯ ನೀಡುತ್ತಿದೆ. ಆದರೂ ಈ ಸಂಸ್ಥೆಯು ಮಾಹಿತಿ ಹಕ್ಕು ಅಧಿನಿಯಮ 2005ರ ವ್ಯಾಪ್ತಿಗೆ ಒಳಪಟ್ಟಿಲ್ಲ.

 

ಈ ಸಂಬಂಧ ಯುವ ಸಬಲೀಕರಣ ಕ್ರೀಡಾಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ದೂರು ಸಲ್ಲಿಸಿದ್ದಾರೆ. ಆದರೂ ಈ ಸಂಬಂಧ ಸಕಾರಾತ್ಮಕವಾದ ಪ್ರತಿಕ್ರಿಯೆ ಬಾರದ ಕಾರಣ ಯತೀಶ್‌ಕುಮಾರ್‍‌ ಅವರು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನೂ ದಾಖಲಿಸಿರುವುದು ಗೊತ್ತಾಗಿದೆ.

Hot this week

ಕೆಟಿಪಿಪಿ ಉಲ್ಲಂಘನೆ, ಅಧಿಕಾರ ದುರ್ಬಳಕೆ, 60 ಲಕ್ಷ ರು ದುರುಪಯೋಗ ಆರೋಪ; ಚೀಫ್‌ ಇಂಜಿನಿಯರ್ ವಿರುದ್ಧ ಚಾರ್ಜ್‌ಶೀಟ್‌

ಬೆಂಗಳೂರು; ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಮತ್ತು ಅಧಿಕಾರ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ...

ಗೃಹಲಕ್ಷ್ಮಿ; ಒಂದೇ ತಿಂಗಳಲ್ಲಿ ಒಂದು ಫಲಾನುಭವಿಗೆ ಒಂದಕ್ಕಿಂತ ಹೆಚ್ಚು ಖಾತೆಗೆ ಹಣ ಜಮೆಯಾಗಿಲ್ಲ, ಬ್ಯಾಂಕ್‌ನ ತಾಂತ್ರಿಕ ದೋಷವೇ ಕಾರಣ, ಸಿಎಜಿ ಆಕ್ಷೇಪಣೆ ತಳ್ಳಿ ಹಾಕಿದ ಸರ್ಕಾರ

ಬೆಂಗಳೂರು; ಗೃಹಲಕ್ಷ್ಮಿ ಯೋಜನೆಯಡಿ ಧನಸಹಾಯ ಪಾವತಿ ಪ್ರಕ್ರಿಯೆಯು ಎಬಿಪಿಎಸ್‌ ಆಗಿರುವುದರಿಂದ ಫಲಾನುಭವಿಗಳಿಗೆ...
Please Scan to make Your Contribution

Topics

ಕೆಟಿಪಿಪಿ ಉಲ್ಲಂಘನೆ, ಅಧಿಕಾರ ದುರ್ಬಳಕೆ, 60 ಲಕ್ಷ ರು ದುರುಪಯೋಗ ಆರೋಪ; ಚೀಫ್‌ ಇಂಜಿನಿಯರ್ ವಿರುದ್ಧ ಚಾರ್ಜ್‌ಶೀಟ್‌

ಬೆಂಗಳೂರು; ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಮತ್ತು ಅಧಿಕಾರ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ...

ಮೆಟ್ರೋ ರೈಲು 3ನೇ ಹಂತಕ್ಕೆ 7.02 ಎಕರೆ ಭೂಮಿ; 203.76 ಕೋಟಿ ರುಪಾಯಿ ಭೂ ಪರಿಹಾರ ಕೇಳಿದ ರಕ್ಷಣಾ ಇಲಾಖೆ, ಸರ್ಕಾರದ ನಿಲುವೇನು?

ಬೆಂಗಳೂರು: ಮೆಟ್ರೋ ರೈಲು ಯೋಜನೆಯ ಮೂರನೇ ಹಂತದ ಅನುಷ್ಠಾನಕ್ಕಾಗಿ ಅಗತ್ಯವಿರುವ 7.02...

Related Articles

Popular Categories

error: Content is protected !!