ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಹೊರಗುತ್ತಿಗೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲ ಇಂಜಿನಿಯರ್‍ಗಳು ಬಿಲ್ ಮಾಡಿಸಲು ಗುತ್ತಿಗೆದಾರರ ಬಳಿ ಕಮಿಷನ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪಗಳ ಕುರಿತು ‘ದಿ ಫೈಲ್’ ವರದಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಹೊರಗುತ್ತಿಗೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಜಿನಿಯರ್ ಗಳನ್ನು ಸೇವೆಯಿಂದ ಬಿಡುಗಡೆಗೊಳಿಸಬೇಕು ಎಂದು ಸರ್ಕಾರವು ಕ್ರೈಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಿಗೆ ನಿರ್ದೇಶನ ನೀಡಿದೆ.
ಅಲ್ಲದೇ ಸಾರ್ವಜನಿಕ ಹಿತದೃಷ್ಟಿಯಿಂದ ಸದರಿ ಹೊರ ಸಂಪನ್ಮೂಲ ಸಿಬ್ಬಂದಿಗಳನ್ನು ಮುಂದುವರೆಸುವ ಅವಶ್ಯಕತೆ ಕಂಡು ಬಂದಿರುವುದಿಲ್ಲ. ಹೀಗಾಗಿ ತಕ್ಷಣವೇ ಇದಕ್ಕೆ ಕಾರಣರಾಗಿರುವ ಸಿಬ್ಬಂದಿಗಳನ್ನು ಕರ್ತವ್ಯದಿಂದ ಇಂದೇ ಬಿಡುಗಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರು ಕ್ರೈಸ್‌ನ ಇ ಡಿ ಅವರಿಗೆ 2025ರ ಜನವರಿ 8ರಂದು ಸೂಚಿಸಿದ್ದಾರೆ. ಇದರ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ.
ಮತ್ತೊಂದು ವಿಶೇಷವೆಂದರೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಳ ಹಂತದ ಅಧಿಕಾರಿಗಳು ಕೊಟ್ಟಿದ್ದ ವರದಿ ಆಧರಿಸಿ ದೂರಿನಲ್ಲಿ ಉಲ್ಲೇಖಿಸಿದ್ದ ಇಂಜಿನಿಯರ್‍ಗಳ ವಿರುದ್ಧದ ಆಪಾದನೆಯನ್ನು ಕೈಬಿಡಬಹುದು ಎಂದು ಕ್ರೈಸ್‌ನ ಕಾರ್ಯನಿರ್ವಾಹಕ ನಿರ್ದೇಶಕರು ಸರ್ಕಾರಕ್ಕೇ ಶಿಫಾರಸ್ಸು ಮಾಡಿದ್ದರು.
ಕ್ರೈಸ್‌ನ ಕಾರ್ಯನಿರ್ವಾಹಕ ನಿರ್ದೇಶಕರು ಸರ್ಕಾರಕ್ಕೆ ನೀಡಿದ್ದ ವರದಿ ಮತ್ತು ಮಾಡಿದ್ದ ಶಿಫಾರಸ್ಸುಗಳು, ಕ್ರೈಸ್‌ನಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಜಿನಿಯರ್‍ಗಳು ಮೇಲುಗೈ ಸಾಧಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆದರೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯು ಕ್ರೈಸ್‌ನ ಇ ಡಿ ಅವರು ನೀಡಿದ್ದ ವರದಿಯನ್ನು ಒಪ್ಪಿಲ್ಲ. ಬದಲಿಗೆ ಸೂಕ್ತ ಕ್ರಮ ಕೈಗೊಳ್ಳಲು ಪತ್ರದಲ್ಲಿ ನಿರ್ದೇಶಿಸಿರುವುದು ಗೊತ್ತಾಗಿದೆ.
ಪತ್ರದಲ್ಲೇನಿದೆ?
ಹೊರ ಸಂಪನ್ಮೂಲ ಸಿಬ್ಬಂದಿಗಳ ವಿರುದ್ಧ ಸ್ವೀಕೃತವಾಗಿರುವ ಎಲ್ಲಾ ದೂರುಗಳನ್ನು ಖುದ್ದು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳದೇ ತಾವು ತಮ್ಮ ಅಧೀನ ಅಧಿಕಾರಿಯಾದ ಅಧೀಕ್ಷಕ ಅಭಿಯಂತರರ ವರದಿ ಮೇರೆಗೆ ಸದರಿ ನೌಕರರ ಮೇಲೆ ಮಾಡಿರುವ ಆಪಾದನೆಗಳನ್ನು ಕೈಬಿಡಬಹುದು ಎಂಬ ಅಭಿಪ್ರಾಯದೊಂದಿಗೆ 2024ರ ಡಿಸೆಂಬರ್ 17ರಂದು ಕಡತವನ್ನು ಸಲ್ಲಿಸಿರುವುದು ಸರ್ಕಾರದ ಹಂತದಲ್ಲಿ ಒಪ್ಪಲು ಸಾಧ್ಯವಿರುವುದಿಲ್ಲ.
ಈ ಮೂರು ಸಿಬ್ಬಂದಿಗಳ ಹಾಗೂ ಇತರೆ ಇಲಾಖಾ ಅಧಿಕಾರಿಗಳ ವಿರುದ್ಧ ಪದೇ ಪದೇ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ ಈ ರೀತಿಯ ದೂರುಗಳ ಮೇಲೆ ಕ್ರಮವಹಿಸದಿರುವುದರಿಂದ ಸರ್ಕಾರಕ್ಕೆ ಹಾಗೂ ಕ್ರೈಸ್ ಸಂಸ್ಥೆಗೆ ಕೆಟ್ಟ ಹೆಸರು ಬರಲು ಕಾರಣವಾಗುತ್ತಿದೆ.
ಮೇಲೆ ಉಲ್ಲೇಖಿಸಿರುವ ಸಿಬ್ಬಂದಿಗಳ ವಿರುದ್ಧ ಹಲವು ಸಂಘಟನೆಗಳ ಮುಖಂಡರು, ಸಾಮಾಜಿಕ ಕಾರ್ಯಕರ್ತರು, ಗುತ್ತಿಗೆದಾರರು ಸರ್ಕಾರಕ್ಕೆ ಕಳೆದ ಎರಡೂವರೆ ವರ್ಷಗಳಿಂದ ದೂರುಗಳು ಸ್ವೀಕೃತವಾಗಿರುವ ಮತ್ತು ಕೆಲವು ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿದ್ದರೂ ಸಹ ಸದರಿ ಹೊರ ಸಂಪನ್ಮೂಲಗಳ ಸಿಬ್ಬಂದಿಗಳನ್ನೇ ಮುಂದುವರೆಸುವ ಉದ್ದೇಶವೇನು ಎಂಬುದು ತಿಳಿದು ಬಂದಿರುವುದಿಲ್ಲ.
‘ಈ ಮೇಲೆ ನಮೂದಿಸಿರುವ ಎಲ್ಲಾ ಕಾರಣಗಳ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸದರಿ ಹೊರ ಸಂಪನ್ಮೂಲ ಸಿಬ್ಬಂದಿಗಳನ್ನು ಮುಂದುವರೆಸುವ ಅವಶ್ಯಕತೆ ಕಂಡು ಬಂದಿರುವುದಿಲ್ಲ. ಆದ ಕಾರಣ ತಕ್ಷಣವೇ ಸದರಿ ಸಿಬ್ಬಂದಿಗಳನ್ನು ಕರ್ತವ್ಯದಿಂದ ಇಂದೇ ಬಿಡುಗಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ವಿರುದ್ಧ ಸ್ವೀಕೃತವಾಗಿರುವ ದೂರುಗಳನ್ನು ಖುದ್ದು ಪರಿಶೀಲಿಸಿ ಇಲಾಖೆ ವಿಚಾರಣೆ ಕೈಗೊಳ್ಳಲು ಕ್ರಮ ವಹಿಸಬೇಕು. ಕೈಗೊಂಡ ಕ್ರಮದ ಬಗ್ಗೆ ಕೂಡಲೇ ವರದಿಯನ್ನು ನನ್ನ ಕಚೇರಿಗೆ ಸಲ್ಲಿಸಬೇಕು,’ ಎಂದು ನಿರ್ದೇಶಿಸಿರುವುದು ಗೊತ್ತಾಗಿದೆ.
ಈ ಕುರಿತು ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರ ಬಳಿಯೂ ಮಣಿವಣ್ಣನ್ ಅವರು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರು ಕ್ರೈಸ್‌ನ ವ್ಯವಸ್ಥಾಪಕ ನಿರ್ದೇಶಕರಿಗೂ ಹಲವು ಪತ್ರಗಳನ್ನು ಬರೆದಿದ್ದರು.
‘ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಮಘದ ಕೇಂದ್ರ ಕಚೇರಿಯಲ್ಲಿ ಹೊರ ಸಂಪನ್ಮೂಲದಿಂದ ಕಿರಿಯ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಗಿರೀಶ್ ತೊನ್‌ಶ್ಯಾಳ್ ಅವರು ಕಾಮಗಾರಿಗಳಲ್ಲಿ ಭಾರೀ ಅಕ್ರಮ, ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಹಲವಾರು ದೂರುಗಳು ಸ್ವೀಕೃತವಾಗಿವೆ. ಅದರಂತೆ ಪರಿಶೀಲಿಸಿ ಅಗತ್ಯ ಕ್ರಮವಹಿಸಿ, ಕ್ರಮ ವಹಿಸಿರುವ ಬಗ್ಗೆ ವರದಿ ಸಲ್ಲಿಸಬೇಕು ಎಂದು ಹಲವಾರು ಪತ್ರಗಳನ್ನು ಬರೆಯಲಾಗಿದೆ. ಹಾಗೂ ಈ ಕುರಿತು ತನಿಖೆ ನಡೆಸಿ ಸೂಕ್ತ, ದಾಖಲಾತಿ, ಸ್ಪಷ್ಟ ಅಭಿಪ್ರಾಯದೊಂದಿಗೆ ಎರಡು ವಾರದೊಳಗಾಗಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ವಹಿಸಿರುವ ಬಗ್ಗೆ ಸರ್ಕಾರಕ್ಕೆ ವರದಿ ಸ್ವೀಕೃತವಾಗಿಲ್ಲ,’ ಎಂದು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯು ಬರೆದಿರುವ ಪತ್ರದಲ್ಲಿ ವಿವರಿಸಿದ್ದರು. ಇದನ್ನಾಧರಿಸಿ ‘ದಿ ಫೈಲ್’ 2025 ಜನವರಿ 8ರಂದು ವರದಿ ಪ್ರಕಟಿಸಿತ್ತು.
ಕಾಮಗಾರಿಗಳಲ್ಲಿ ಭಾರೀ ಭ್ರಷ್ಟಾಚಾರ; ಹೆಚ್ಚಿನ ಲಂಚಕ್ಕೆ ಬೇಡಿಕೆ, ಗುತ್ತಿಗೆದಾರರಿಂದಲೇ ದೂರು, ನಡೆಯದ ತನಿಖೆ
ಅಲ್ಲದೇ ಇಂತಹ ದೂರುಗಳನ್ನಾಧರಿಸಿ ತನಿಖೆ ನಡೆಸುವ ಸಂಬಂಧ ಒಂದೂವರೆ ವರ್ಷದಿಂದಲೂ ಸರ್ಕಾರವು ನಿರ್ದೇಶನ ನೀಡುತ್ತಿದೆ. ಆದರೆ ಕ್ರೈಸ್‌ನ ಕಾರ್ಯನಿರ್ವಾಹಕ ನಿರ್ದೇಶಕರು ಆರೋಪಿತ ಇಂಜಿನಿಯರ್‍ಗಳ ಪರ ವಕಾಲತ್ತು ವಹಿಸಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ಅಲ್ಲದೇ ‘ಹೊರ ಗುತ್ತಿಗೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಜನಿಯರ್ ಗಿರೀಶ್ ತೊನ್‌ಶ್ಯಾಳ್ ಅವರು ಇವರ ಮೇಲೆ ಮಾಡಿರುವ ಆರೋಪಗಳು ಸುಳ್ಳಾಗಿರುವುದರಿಂದ ಇವರನ್ನು ಸೇವೆಯಲ್ಲಿ ಮುಂದುವರೆಸಲಾಗಿದೆ ಅಥವಾ ಇವರ ಮೇಲೆ ಆರೋಪಗಳು ಸತ್ಯವಾಗಿರುವುದರಿಂದ ಇವರನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಲಿಖಿತವಾಗಿ 2024ರ ನವೆಂಬರ್ 25ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು,’ ಎಂದು ಸೂಚಿಸಿದ್ದರು.
ಬಿಲ್ ಮಾಡಿಸಲು ಗುತ್ತಿಗೆದಾರರಿಂದ 6 ಪರ್ಸೆಂಟ್ ಕಮಿಷನ್ ವಸೂಲಿ; ಕ್ರೈಸ್‌ನಲ್ಲಿ ಲಂಚಾವತಾರ ಆರೋಪ
ಗಿರೀಶ್ ತೋನ್ಸಾಳ್ ಅವರು ಸುಮಾರು 15 ವರ್ಷಗಳಿಂದಲೂ ಹೊರ ಸಂಪನ್ಮೂಲ ಅಡಿಯಲ್ಲಿ ಸಹಾಯಕ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಂಘದ ಅಧೀನದಲ್ಲಿ ನಡೆಯುವ ಕಾಮಗಾರಿಗಳ ಗುತ್ತಿಗೆದಾರರಿಗೆ ವರ್ಕ್ ಆರ್ಡರ್, ಬಿಲ್, ಇಐಆರ್‍ಎಲ್ ವರ್ಕ್ ಸ್ಲಿಪ್, ಬಿಲ್‌ಗಳಿಗೆ ಸಹಿ ಮಾಡಿಸಲು ಪ್ರತಿ ಗುತ್ತಿಗೆದಾರರ ಬಳಿ 5ರಿಂದ 6 ಪರ್ಸೆಂಟ್ ನಂತೆ ಹಣ ಪಡೆಯುತ್ತಿದ್ದಾರೆ. 2010ರಿಂದ 2022ರವರೆಗೆ ಹಣ ವಸೂಲು ಮಾಡಿದ್ದಾರೆ ಎಂದು ದೂರಿನಲ್ಲಿ ಆಪಾದಿಸಿದ್ದರು.
ದೂರಿನಲ್ಲೇನಿತ್ತು?
ಬೀದರ್ ಜಿಲ್ಲಾ ಕೇಂದ್ರ ಮುಖ್ಯ ಗ್ರಂಥಾಲಯದ ಪ್ರಭಾರಿ ಅಧಿಕಾರಿಯಾದ ಸಿದ್ಧಾರ್ಥ ಬಾವಿಕಟ್ಟಿ ಅವರು ಕಳೆದ 10 ವರ್ಷಗಳಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ಏನೇ ಮಾಡಿದರೂ ನನಗೆ ಇಲ್ಲಿಂದ ಯಾರೂ ಕೂಡ ಅಲುಗಾಡಿಸಲು ಸಾಧ್ಯವಿಲ್ಲ ಎಂಬ ಮನೋಧೋರಣೆ ಹೊಂದಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ, ಲಂಚ ಪಡೆಯುವ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಇದಕ್ಕೆ ನಾನೇ ಸಾಕ್ಷಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಸಿಎಸ್‌ಆರ್ ಫಂಡ್‌ಗೂ ಶೇ.50ರಷ್ಟು ಲಂಚ!; ಶಿಕ್ಷಣ ಸಚಿವರ ಪಿಎ ವಿರುದ್ಧವೇ ಆರೋಪ
2,000 ಗ್ರಾಮ ಪಂಚಾಯ್ತಿಗಳಲ್ಲಿ ಸಿಎಸ್‌ಆರ್ ಫಂಡ್ ಅಡಿ ಮಾದರಿ ಶಾಲೆ ನಿರ್ಮಾಣ ಮಾಡಲು 03 ಪಂಚಾಯ್ತಿಗಳಿಗೆ ಒಂದು ಮಾದರಿ ಶಾಲೆಯಂತೆ 1,000 ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಲು ಸರ್ಕಾರವು ಉದ್ದೇಶಿಸಿದೆ. ಇದಕ್ಕೆ ಬೇಕಾಗಿರುವ ಅನುದಾನವನ್ನು ಕಾರ್ಪೋರೇಟ್ ಕಂಪನಿಗಳ ಮೂಲಕ ಒದಗಿಸಲು ಕಾರ್ಯ ಯೋಜನೆ ರೂಪಿಸಿರುವುದನ್ನು ಸ್ಮರಿಸಬಹುದು.