Monday | September 21, 2026 |

ಮುಕ್ತ ವಿ.ವಿ. ಅಕ್ರಮ; ಸಿಬಿಐ ತನಿಖೆಯತ್ತ ಅಧೀನ ಶಾಸನ ರಚನಾ ಸಮಿತಿ ಒಲವು?

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಸೇರಿದಂತೆ ಇನ್ನಿತರ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆ ಹಿಂಜರಿಯುತ್ತಿದೆ. ಇದರ ಬೆನ್ನಲ್ಲೇ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಅಕ್ರಮ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕೇ ಬೇಡವೇ ಎಂಬ ಕುರಿತು ಕರ್ನಾಟಕ ವಿಧಾನಸಭೆಯ ಅಧೀನ ಶಾಸನ ರಚನಾ ಸಮಿತಿ ಚರ್ಚಿಸಿದೆ. 

ವಿಶ್ವವಿದ್ಯಾಲಯದ ಅಕ್ರಮ ಪ್ರಕರಣಗಳ ಕುರಿತು ತನಿಖಾ ಸಂಸ್ಥೆ ಮತ್ತು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯ ವಿಚಾರಣೆ ಸಮಿತಿ ಆರೋಪಿತರ ವಿರುದ್ಧ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿರುವವರ ಪೈಕಿ ರಾಜಕೀಯ ಹಿನ್ನೆಲೆಯ ಆರೋಪಿತ ಅಧಿಕಾರಿಗಳು ತೆರೆಮರೆಯಲ್ಲಿ ಸರ್ಕಾರದ ಮಟ್ಟದಲ್ಲಿ ಸರಿದೂಗಿಸುತ್ತಿರುವ ಬೆನ್ನಲ್ಲೇ ಅಧೀನ ಶಾಸನ ರಚನಾ ಸಮಿತಿಯೂ  ಬಿರುಸಿನ ಚರ್ಚೆ ನಡೆಸಿರುವುದು ವಿಶ್ವವಿದ್ಯಾಲಯ ಮತ್ತು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. 

ಶಾಸಕ ಎಸ್‌ ಎ ರಾಮದಾಸ್‌ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ವಿಧಾನಸಭೆ ಅಧೀನ ಶಾಸನಾ ರಚನೆ ಸಮಿತಿ 2020 ರ ಜನವರಿ 14ರಂದು ನಡೆಸಿದ್ದ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲ ದಾಖಲೆಗಳು ‘ದಿ ಫೈಲ್‌’ ಗೆ ಲಭ್ಯವಾಗಿವೆ.  

ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಅಕ್ರಮ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿ  ಬಿ ಐ  ತನಿಖೆ  ಕುರಿತು ಸಮರ್ಥಿಸಿಕೊಂಡಂತಿರುವ ಸಮಿತಿ ಅಧ್ಯಕ್ಷ ಎಸ್‌ ಎ ರಾಮದಾಸ್‌  ಈ ಪ್ರಕರಣವು ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಅನ್ಯ ರಾಜ್ಯಗಳು  ಮತ್ತು ಅನ್ಯ ರಾಷ್ಟ್ರಗಳಲ್ಲಿಯೂ  ಸಂಯೋಜನೆ  ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳು ಇರುವ ಕಾರಣ ಅಂತರರಾಜ್ಯ ಮತ್ತು  ಅಂತಾರಾಷ್ಟ್ರೀಯ ವ್ಯವಹಾರಗಳನ್ನು ತನಿಖೆ ಮಾಡಲು ರಾಜ್ಯದ ಯಾವುದೇ ತನಿಖಾ ಸಮಿತಿಗೂ ಕಷ್ಟವಾಗುತ್ತದೆ. ಆದ್ದರಿಂದ ಇದನ್ನು ಸಿಬಿಐಗೆ ವಹಿಸಲಾಗುತ್ತದೆ ಎಂದು ವರದಿಯೊಂದನ್ನು ಉಲ್ಲೇಖಿಸಿ  ಸಮಿತಿಯಲ್ಲಿ  ಚರ್ಚಿಸಿರುವುದು ದಾಖಲೆಗಳಿಂದ  ತಿಳಿದು ಬಂದಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಕೆ.ಎಸ್‌.ರಂಗಪ್ಪ ಅವರು ಕುಲಪತಿ ಆಗಿದ್ದಾಗ ಖಾಸಗಿ ಸಂಸ್ಥೆಗಳೊಂದಿಗೆ ಅಕ್ರಮ ಒಪ್ಪಂದ ಆರೋಪ, ಕಟ್ಟಡ ಕಾಮಗಾರಿ ಮತ್ತು  ಅಕ್ರಮ ನೇಮಕಾತಿ ಹಗರಣ ನಡೆದಿದೆ ಎಂದು ನಿವೃತ್ತ ನ್ಯಾಯಾಧೀಶರ  ನೇತೃತ್ವದ ತನಿಖಾ ಸಮಿತಿ ಹೊರಗೆಡವಿತ್ತು. 

ದೇಶ ಮತ್ತು ವಿದೇಶಗಳಲ್ಲಿ ದೊಡ್ಡ ಮಟ್ಟದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪಾಲುದಾರಿಕೆಯಲ್ಲಿ ವಿವಿಧ ಕೋರ್ಸ್‌ಗಳನ್ನು ಅಕ್ರಮವಾಗಿ ಆರಂಭಿಸಿದ ಆರೋಪಕ್ಕೆ ಗುರಿಯಾಗಿದ್ದರು. ಇಂತಹ ಆರೋಪಗಳು ಕೆ ಎಸ್ ರಂಗಪ್ಪ ಅವರ ನಂತರ ಕುಲಪತಿ ಆಗಿದ್ದ ಪ್ರೊ.ಎಂ.ಜಿ.ಕೃಷ್ಣನ್ ಅವರ ವಿರುದ್ಧವೂ ಕೇಳಿ ಬಂದಿತ್ತು. 

230ಕ್ಕೂ ಹೆಚ್ಚು ಖಾಸಗಿ ಸಂಸ್ಥೆಗಳ ಜತೆ ಕೆಎಸ್‌ಒಯು ಒಡಂಬಡಿಕೆ ಮಾಡಿಕೊಂಡಿತ್ತಲ್ಲದೆ ಈ ಸಂಸ್ಥೆಗಳು ದೇಶದಾದ್ಯಂತ 5 ಸಾವಿರಕ್ಕೂ ಹೆಚ್ಚು ಅಧ್ಯಯನ ಕೇಂದ್ರಗಳನ್ನು ತೆರೆದಿದ್ದವು. ಈ ಹಿನ್ನೆಲೆಯಲ್ಲಿ ಯುಜಿಸಿ ಮುಕ್ತ ವಿ.ವಿ.ಯ ಮಾನ್ಯತೆ ರದ್ದುಪಡಿಸಿತ್ತು.

ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ ಪ್ರೊ ಕೆ ಎಸ್‌ ರಂಗಪ್ಪ ಮತ್ತು ಪ್ರೊ  ಎಂ ಜಿ ಕೃಷ್ಣನ್‌  ಅವರ ವಿರುದ್ಧ ಕೇಳಿ ಬಂದಿದ್ದ ಒಟ್ಟು 14 ಆರೋಪಗಳ ಬಗ್ಗೆ ತನಿಖೆಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಡಾ.ಕೆ ಭಕ್ತವತ್ಸಲ ಸಮಿತಿ ರಚಿಸಿದ್ದರು. ಈ ಸಮಿತಿಯು 2 ಸಂಪುಟಗಳಲ್ಲಿ, 612 ಪುಟಗಳನ್ನು ಒಳಗೊಂಡ ವರದಿ ಸಲ್ಲಿಸಿದೆ.

ಅಲ್ಲದೆ ಕಂಪ್ಯೂಟರ್‌ ಮತ್ತಿತರ ಉಪಕರಣಗಳ ಖರೀದಿಗಾಗಿ ಮುಂಬೈ ಮೂಲದ ಕಂಪನಿ ಜತೆ ಅಕ್ರಮ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೂ  ಪ್ರೊ.ಕೆ.ಎಸ್.ರಂಗಪ್ಪ ಗುರಿಯಾಗಿದ್ದರು. ಈ ಆರೋಪದ ಕುರಿತು ತನಿಖೆಗೆ ರಾಜ್ಯಪಾಲರು ನೇಮಿಸಿದ್ದ ಪ್ರತ್ಯೇಕ ಸಮಿತಿ ವಿಚಾರಣೆ ನಡೆಸಿ ₹ 54 ಲಕ್ಷದ ಅಕ್ರಮ ನಡೆದಿದೆ ಎಂದು ವರದಿಯಲ್ಲಿ ಹೇಳಿತ್ತು. ಆದರೆ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಚ್‌ ಡಿ ಕುಮಾರಸ್ವಾಮಿ ಅವಧಿಯಲ್ಲಿ ವರದಿ ಆಧರಿಸಿ ಕ್ರಮ ಕೈಗೊಂಡಿರಲಿಲ್ಲ.

ಅಲ್ಲದೆ ಮುಕ್ತ ವಿಶ್ವವಿದ್ಯಾಲಯದಲ್ಲಿ ಸರಣಿ ರೂಪದಲ್ಲಿ ನಡೆದಿದೆ ಎನ್ನಲಾಗಿರುವ ವಿವಿಧ ಅಕ್ರಮಗಳ  ಕುರಿತು ವಿಧಾನಪರಿಷತ್‌ನ ಸದಸ್ಯರಾಗಿದ್ದ ಗೋ ಮಧುಸೂದನ್‌ ಅವರು ಸದನದ  ಒಳಗೆ ಮತ್ತು ಹೊರಗೆ ಆರೋಪಿಸಿದ್ದರು. ಈ ಸಂಬಂಧ ಪ್ರೊ ಕೆ ಎಸ್ ರಂಗಪ್ಪ ಮತ್ತು ಗೋ ಮಧುಸೂದನ್‌ ನಡುವೆ ಆರೋಪ, ಪ್ರತ್ಯಾರೋಪಗಳು ಕೇಳಿ ಬಂದಿದ್ದವು.

Hot this week

ಖರ್ಗೆ ಕುಟುಂಬ ಸದಸ್ಯರ ಸಿದ್ದಾರ್ಥ ವಿಹಾರ ಟ್ರಸ್ಟ್‌; ಪ್ರಕರಣ ಮುಂದುವರಿಕೆ, ಲೋಕಾಯುಕ್ತ ಎಸ್‌ಪಿ ಗೆ ನೋಟೀಸ್‌ ನೀಡಿದ ನ್ಯಾಯಾಲಯ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ,...

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...
Please Scan to make Your Contribution

Topics

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

Related Articles

Popular Categories

error: Content is protected !!