ಸುಲಿಗೆ ಆರೋಪ; ಸಾಕ್ಷ್ಯ ಇದ್ದರೂ ಎಸ್ಪಿ ಶ್ರೀನಾಥ ಜೋಷಿ ಅಮಾನತಿಗೆ ಶಿಫಾರಸ್ಸು ಮಾಡದ ಲೋಕಾಯುಕ್ತ

ಬೆಂಗಳೂರು; ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ನೌಕಕರಿಂದ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಒಳಗಾಗಿರುವ ಎಸ್ಪಿ ಶ್ರೀನಾಥ ಎಂ ಜೋಷಿ ಅವರ ವಿರುದ್ಧ ಲೋಕಾಯುಕ್ತ ಸಂಸ್ಥೆಯು ಇದುವರೆಗೂ ಯಾವುದೇ ಶಿಸ್ತು ಕ್ರಮ ಜರುಗಿಸಿಲ್ಲ.

 

ಈ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ನಿಂಗಪ್ಪ, ತನಿಖಾಧಿಕಾರಿಗಳ ಮುಂದೆ ಶ್ರೀನಾಥ ಎಂ ಜೋಷಿ ಅವರ ಹೆಸರನ್ನು ಬಾಯಿಬಿಟ್ಟಿರುವುದು, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿರುವ ವಿವರಗಳನ್ನು ಒದಗಿಸಿದ್ದ. ಆದರೂ ಸಹ ಶ್ರೀನಾಥ ಎಂ ಜೋಷಿ ಅವರನ್ನು ಅಮಾನತುಗೊಳಿಸುವ ಸಂಬಂಧ ಲೋಕಾಯುಕ್ತ ಸಂಸ್ಥೆಯು ಇದುವರೆಗೂ ಯಾವುದೇ ಕ್ರಮವನ್ನಾಗಲೀ, ಸಂಬಂಧಿಸಿದ ಸಕ್ಷಮ ಪ್ರಾಧಿಕಾರಕ್ಕೆ  ಕನಿಷ್ಠ ಪತ್ರ ವ್ಯವಹಾರವನ್ನೂ ಮಾಡಿಲ್ಲ.

 

ಬದಲಿಗೆ ಎಸ್‌ ಪಿ ಹುದ್ದೆಯ ಕರ್ತವ್ಯದಿಂದ ಬಿಡುಗಡೆಗೊಳಿಸಿ ಲೋಕಾಯುಕ್ತ ಸಂಸ್ಥೆಯು ಕೈ ತೊಳೆದುಕೊಂಡಿದೆ. ಲೋಕಾಯುಕ್ತ ಸಂಸ್ಥೆಯ ಈ ನಡೆಯು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಂತಾಗಿದೆ.

 

ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎಸ್ಪಿ ಶ್ರೀನಾಥ ಜೋಷಿ ಅವರನ್ನು ಅಬಕಾರಿ ಸಚಿವ ಆರ್‍‌ ಬಿ ತಿಮ್ಮಾಪುರ ಅವರನ್ನು ಆರೋಪಿ ನಿಂಗಪ್ಪ ಭೇಟಿ ಮಾಡಿಸಿದ್ದ.

 

ಲೋಕಾ ಎಸ್ಪಿ ಜೋಷಿ, ನಿಂಗಪ್ಪನೊಂದಿಗೆ ಅಬಕಾರಿ ಸಚಿವ ತಿಮ್ಮಾಪುರ ನಂಟು; ಐಷಾರಾಮಿ ಹೋಟೆಲ್‌ನಲ್ಲಿ ಭೇಟಿ?

 

ಆರೋಪಿ ನಿಂಗಪ್ಪ, ಎಸ್‌ ಪಿ ಶ್ರೀನಾಥ ಜೋಷಿ ಅವರನ್ನು ಕಳೆದ 2 ವರ್ಷದಲ್ಲಿ 7-8 ಬಾರಿ ಅವರ ಕಚೇರಿಯಲ್ಲಿಯೇ ಭೇಟಿ ಮಾಡಿದ್ದ ಎಂಬುದಕ್ಕೆ ತನಿಖಾಧಿಕಾರಿಗಳು ಸಾಕ್ಷ್ಯವನ್ನು ಸಂಗ್ರಹಿಸಿದ್ದಾರೆ ಎಂದು ಗೊತ್ತಾಗಿದೆ.

 

2025ರ ಜನವರಿ 1ರಂದು ಹೊಸ ವರ್ಷದ ಪ್ರಯುಕ್ತ ಜೋಷಿ ಅವರನ್ನು ಅವರ ಕಚೇರಿಯಲ್ಲಿಯೇ ಭೇಟಿಯಾಗಿದ್ದ. ಹಾಗೂ ನಿಂಗಪ್ಪ ತನ್ನ ಹುಟ್ಟು ಹಬ್ಬದಂದು (ಜುಲೈ 10) ಭೇಟಿ ಆಗಿದ್ದ. ಅಲ್ಲದೇ ನಿಂಗಪ್ಪ, ಒಂದು ಬಾರಿ ಶ್ರೀನಾಥ ಜೋಷಿ ಅವರ ಮನೆಯಲ್ಲಿಯೂ ಭೇಟಿ ಆಗಿದ್ದ.

 

ಅಲ್ಲದೇ ಆರೋಪಿ ನಿಂಗಪ್ಪ, ಎಸ್‌ ಪಿ ಜೋಷಿ ಅವರಿಗೆ ಸಿಸಿಬಿಯಲ್ಲಿ ಡಿಸಿಪಿ ಹುದ್ದೆಗೆ ವರ್ಗಾವಣೆ ಮಾಡಿಸಲೂ ಆಹ್ವಾನ ನೀಡಿದ್ದ.  ಆದರೆ ಜೋಷಿ ಅವರು ಡಿಸಿಪಿ-1 ಹುದ್ದೆ ಕೊಡಿಸಿದರೇ ಬರಲು ಸಿದ್ಧ ಎಂದು ಆರೋಪಿ ನಿಂಗಪ್ಪನಿಗೆ ತಿಳಿಸಿದ್ದರು.

 

ಆರೋಪಿ ನಿಂಗಪ್ಪನೊಂದಿಗೆ ಶ್ರೀನಾಥ ಎಂ ಜೋಷಿ ಅವರು ನಿರಂತರ ಸಂಪರ್ಕ ಮತ್ತು ವ್ಯವಹಾರಿಕ ಸಂಬಂಧ  ಹೊಂದಿರುವುದಕ್ಕೆ ತನಿಖಾಧಿಕಾರಿಗಳು ಪ್ರಬಲ ಸಾಕ್ಷ್ಯ, ಪುರಾವೆ, ಹೂಡಿಕೆ ವಿವರಗಳನ್ನು ಹೊಂದಿದ್ದಾರೆ. ಆದರೂ ಲೋಕಾಯುಕ್ತರು,  ಪೊಲೀಸ್ ವಿಭಾಗದ ಎಡಿಜಿಪಿ, ಐಜಿ ಶ್ರೀನಾಥ ಎಂ ಜೋಷಿ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳದಿರುವುದು ಹಲವು ಶಂಕೆಗಳಿಗೆ ಕಾರಣವಾಗಿದೆ.

 

ಈ ಪ್ರಕರಣದಲ್ಲಿ ತನಿಖೆಗೆ ಹಾಜರಾಗಬೇಕು ಎಂದು ಸೂಚಿಸಿ ಶ್ರೀನಾಥ್ ಎಂ ಜೋಷಿ ಅವರಿಗೆ ಜಾರಿ ಮಾಡಿದ್ದ ನೋಟಿಸ್‌ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿತ್ತು. ನಿಂಗಪ್ಪ ಅವರು 35 ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದ.  ಶ್ರೀನಾಥ್‌ ಜೋಶಿ ಅವರಿಗೆ ನೀಡಿರುವ ನೋಟಿಸ್‌ಗೆ ತಡೆ ನೀಡಿದರೆ ತನಿಖೆಗೆ ಸಮಸ್ಯೆಯಾಗಲಿದೆ. ಹೀಗಾಗಿ, ತನಿಖೆಗೆ ಅನುಮತಿಸಬೇಕು ಎಂದು ಕೋರಿದ್ದರು.   ಪ್ರಕರಣದಲ್ಲಿ ನಿಂಗಪ್ಪ ಉಲ್ಲೇಖಿಸಿರುವ ಇತರೆ 35 ಅಧಿಕಾರಿಗಳ ವಿರುದ್ಧ ತನಿಖೆ ಮುಂದುವರಿಯಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು.  ವಿಚಾರಣೆಯು ಇದೇ ಜೂನ್‌ 30ರಂದು ನಡೆಯಲಿದೆ.

 

ಜೋಶಿ ಪರ ವಕೀಲ ಸಿ ಎನ್‌ ಮಹದೇಶ್ವರನ್‌ ಅವರು ಜೋಶಿ ಅವರು ಚಿತ್ರದುರ್ಗದಲ್ಲಿ ಐದು ವರ್ಷಗಳ ಹಿಂದೆ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದಾಗ ಸಹೋದ್ಯೋಗಿಯಾಗಿದ್ದರು. ಆನಂತರ ಜೋಶಿಗೂ ನಿಂಗಪ್ಪಗೂ ಯಾವುದೇ ಸಂಪರ್ಕವಿಲ್ಲ. ಜೋಶಿ ಅವರ ಸೇವಾ ದಾಖಲೆಗಳಿಗೆ ಸಮಸ್ಯೆ ಮಾಡಲು ತಪ್ಪಾಗಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ  ಎಂದಿದ್ದರು.

 

ಜೂನ್‌ 15ರಂದು ಜೋಶಿ ಅವರ ಮನೆಯಲ್ಲಿ ಶೋಧ ನಡೆಸಿ, ಬಿಎನ್‌ಎಸ್‌ಎಸ್‌ ಸೆಕ್ಷನ್‌ 35(ಎ) ನೋಟಿಸ್‌ ಜಾರಿ ಮಾಡಲಾಗಿದೆ. ಜೂನ್‌ 16ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು.    ಕಾರಣವನ್ನು ಬಹಿರಂಗಪಡಿಸಿಲ್ಲ. ನೋಟಿಸ್‌ ಜೊತೆಗೆ ದೂರು ಅಥವಾ ಎಫ್‌ಐಆರ್‌ ಲಗತ್ತಿಸಿಲ್ಲ. ಎಫ್‌ಐಆರ್‌ ಅಥವಾ ದೂರಿನಲ್ಲಿ ಜೋಶಿ ಅವರ ಹೆಸರು ಉಲ್ಲೇಖಿಸಿಲ್ಲ.

ನಿಂಗಪ್ಪನಿಗೆ ಅಬಕಾರಿ, ಬಿಬಿಎಂಪಿ ಅಧಿಕಾರಿಗಳೇ ಗುರಿ; ಎಫ್‌ಐಆರ್‍‌ನಲ್ಲಿಲ್ಲ ಎಸ್ಪಿ ಜೋಷಿ ಹೆಸರು

 

ನಿಂಗಪ್ಪ ವಿರುದ್ಧ ದೂರು ದಾಖಲಾಗಿರುವುದನ್ನು ತಿಳಿಸದೇ ಜೋಶಿ ಅವರನ್ನು ತನಿಖೆಗೆ ಬರುವಂತೆ ಸೂಚಿಸಿರುವುದು ಲೋಕಾಯುಕ್ತ ಪೊಲೀಸರ ಮೇಲೆ ಗಂಭೀರ ಅನುಮಾನಕ್ಕೆ ಕಾರಣವಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿತ್ತು.

 

ಈ ಪ್ರಕರಣದ ಪ್ರಮುಖ ಆರೋಪಿ ನಿಂಗಪ್ಪ,  ಕಾಂಗ್ರೆಸ್‌ ಪಕ್ಷದ ಸಂಘಟನೆಯಲ್ಲಿದ್ದ. ಹೀಗಾಗಿಯೇ ಸರ್ಕಾರದ ಯಾರೊಬ್ಬರೂ ಸಹ ಈ ಪ್ರಕರಣದ ಬಗ್ಗೆ ಬಾಯಿಬಿಡುತ್ತಿಲ್ಲ. ಪ್ರಕರಣದ ತನಿಖೆಯು ಆಳಕ್ಕೆ ಇಳಿದಂತೆಲ್ಲಾ ಇದು ನೇರವಾಗಿ ಕಾಂಗ್ರೆಸ್‌ ಪಕ್ಷದ ಬುಡಕ್ಕೆ ನೇರವಾಗಿ ಬರುತ್ತಿದೆ!

 

ಲೋಕಾ ಹೆಸರಿನಲ್ಲಿ ಹಣ ವಸೂಲಿ ಪ್ರಕರಣ; ಕಾಂಗ್ರೆಸ್‌ ಪಕ್ಷದ ಬುಡಕ್ಕೆ ಬರಲಿದೆಯೇ, ಹವಾಲಾ ನಂಟಿದೆಯೇ?

 

ಆರೋಪಿ ನಿಂಗಪ್ಪ,  ಕಾಂಗ್ರೆಸ್‌ ಪಕ್ಷದ ಸಂಘಟನೆಯಲ್ಲಿದ್ದುಕೊಂಡು  ಮತ್ತು ಹವಾಲಾ ವ್ಯವಹಾರದ ನಂಟು ಹೊಂದಿರುವ ಸಂಗತಿಯೂ ಸಹ ಕುತೂಹಲ ಮೂಡಿಸಿದೆ.

 

ಪಿಎಲ್‌ಸಿ ಅಲ್ಟಿಮಾ ಎಂಬ ಕಾಯಿನ್ ಪ್ರಾಜೆಕ್ಟ್‌ನಲ್ಲಿ ಹೂಡಿಕೆ ಮಾಡಿದರೆ 2-3 ವರ್ಷದಲ್ಲಿ 2-3 ಕೋಟಿ ರು ಆಗಲಿದೆ ಎಂದು ಶ್ರೀನಾಥ್‌ ಜೋಷಿ ಅವರನ್ನು ನಂಬಿಸಿದ್ದ. ಈ ವ್ಯವಹಾರಕ್ಕಾಗಿ ಆರೋಪಿ ನಿಂಗಪ್ಪ, ಶ್ರೀನಾಥ ಜೋಷಿ ಅವರಿಂದ 14 ಲಕ್ಷ ರು.ಗಳನ್ನು ನಗದು ರೂಪದಲ್ಲಿ ಪಡೆದಿದ್ದ. ನಂತರ ಇದೇ 14 ಲಕ್ಷ ರು.ಗಳನ್ನು ಅಲ್ಟಿಮಾ ಕಾಯಿನ್‌ ಪ್ರಾಜೆಕ್ಟ್‌ನಲ್ಲಿ ಹೂಡಿಕೆ ಮಾಡಿದ್ದ ಎಂದು ತಿಳಿದು ಬಂದಿದೆ.

 

ನಿಂಗಪ್ಪನಿಗೆ ಕಪ್ಪ ಕೊಟ್ಟ ಅಧಿಕಾರಿಗಳೊಂದಿಗೆ ಸಿಎಂ ಸಲಹೆಗಾರರು, ಮೈಸೂರಿನ ಸಚಿವರ ನಂಟು?

 

 

ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದ್ದರಿಂದ ಆರೋಪಿ ನಿಂಗಪ್ಪನಿಗೆ ಪಿಎಲ್‌ಸಿ ಕಂಪನಿಯೇ ದುಬೈ ಪ್ರವಾಸವನ್ನು ಪ್ರಾಯೋಜಿಸಿತ್ತು.  2024ರ ಏಪ್ರಿಲ್‌ ಮೊದಲನೇ ವಾರದಲ್ಲಿ 7 ದಿನಗಳ ಕಾಲ ದುಬೈ ಪ್ರವಾಸ ಕೈಗೊಂಡಿದ್ದ ಎಂದು ಗೊತ್ತಾಗಿದೆ.

 

ಲೋಕಾಯುಕ್ತರೇ ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣದ ಆರೋಪಿಗಳ ಬೆನ್ನೆತ್ತಿದ್ದ ಆರೋಪಿ ನಿಂಗಪ್ಪ?

 

ಆರೋಪಿ ನಿಂಗಪ್ಪ, ಹಣ ವಸೂಲಿಗೆ ಕೋಡ್‌ ವರ್ಡ್‌ ಬಳಸುತ್ತಿದ್ದ.

 

 

ತಿಂಗಳಿಗೆ 3 ಲಕ್ಷಕ್ಕೆ ಬೇಡಿಕೆ, ಹಣದ ಮೌಲ್ಯಕ್ಕೆ ‘ಕೆ ಜಿ’ ಕೋಡ್‌ವರ್ಡ್‌; ಅಧಿಕಾರಿಗಳ ಹೆಸರು ಬಾಯ್ಬಿಟ್ಟ ನಿಂಗಪ್ಪ

 

ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ  ಆರೋಪಿ ನಿಂಗಪ್ಪ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳಿಂದ ಕಳೆದ 6 ತಿಂಗಳಿನಿಂದಲೂ  ಹಣವನ್ನು ವಸೂಲಿ ಮಾಡಿರುವುದಾಗಿ ಒಪ್ಪಿಕೊಂಡಿದ್ದ ಎಂದು  ಲೋಕಾಯುಕ್ತ ಪೊಲೀಸ್‌ ವಿಭಾಗವು ಇದೀಗ ಅಧಿಕೃತವಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿತ್ತು.

 

ಹಣ ವಸೂಲಿ, ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಬಿಡುಗಡೆಯಾದ ಪತ್ರಿಕಾ ಹೇಳಿಕೆ

 

ಅಲ್ಲದೇ ಈ ಪ್ರಕರಣದಲ್ಲಿ ಸಚಿವರ ಮೂವರು ಆಪ್ತ ಕಾರ್ಯದರ್ಶಿಗಳ ಹೆಸರೂ ಸಹ ತಳಕು ಹಾಕಿಕೊಂಡಿತ್ತು.

 

 

 

 

ಲೋಕಾ ಹೆಸರಿನಲ್ಲಿ ವಸೂಲಿ; ಬಂಧಿತ ಆರೋಪಿಯೊಂದಿಗೆ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳ ನಂಟು?

 

ಆರೋಪಿ ನಿಂಗಪ್ಪ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳಿಂದ ಕಳೆದ 6 ತಿಂಗಳಿನಿಂದ ಹಣವನ್ನು ವಸೂಲಿ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈ ರೀತಿ ವಸೂಲಿ ಮಾಡಿದ ಹಣವನ್ನು ತನ್ನ ಹಾಗೂ ತನ್ನಸಂಬಂಧಿಕರುಗಳ ಹೆಸರಿನಲ್ಲಿ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿರುತ್ತೇನೆಂದು ಒಪ್ಪಿಕೊಂಡಿರುತ್ತಾನೆ ಎಂದು ಹೇಳಲಾಗಿದೆ.

 

ಕೋಟ್ಯಂತರ ರು. ಕಪ್ಪುಹಣ ವರ್ಗಾವಣೆ; ಅಶ್ವಿನ್‌ ಕುಕೃತ್ಯದ ಬಗ್ಗೆ ಸಾಕ್ಷ್ಯ ನುಡಿದ ಇ ಡಿ ಉಪ ನಿರ್ದೇಶಕ

 

ನಿಂಗಪ್ಪನ ಹೇಳಿಕೆ ಆಧರಿಸಿ ಲೋಕಾಯುಕ್ತ ಪೊಲೀಸರು ಎಸ್ಪಿ ಜೋಷಿ ಅವರ ಮನೆಯ ಮೇಲೆ ದಾಳಿ ನಡೆಸಿತ್ತು.

 

ಲೋಕಾ ಪೊಲೀಸರ ಶೋಧ; ಬರಿಗೈಯಲ್ಲಿ ಮರಳಿದ ಪೊಲೀಸರು, ತಲೆಮರೆಸಿಕೊಂಡಿದ್ದಾರೆಯೇ ಜೋಷಿ?

 

ವಿಶೇಷವೆಂದರೇ ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿಯೂ ಲೋಕಾಯುಕ್ತರಾಗಿದ್ದ ಭಾಸ್ಕರರಾವ್‌ ಅವರ ಪುತ್ರ ಮತ್ತು ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ಹಲವರಿಂದ ಹಣಕ್ಕಾಗಿ ಬೇಡಿಕೆ ಇರಿಸಿದ್ದರು. ಆ ಸಂದರ್ಭದಲ್ಲಿ ಲೋಕಾಯುಕ್ತ ಎಸ್ಪಿಯಾಗಿದ್ದ ಸೋನಿಯಾ ನಾರಂಗ್ ಅವರು ಈ ಪ್ರಕರಣವನ್ನು ಬಹಿರಂಗಪಡಿಸಿದ್ದರು. ಅಲ್ಲದೇ ಲೋಕಾಯುಕ್ತ ಹುದ್ದೆಗೆ ಭಾಸ್ಕರರಾವ್‌ ಅವರು ರಾಜೀನಾಮೆ ನೀಡಿದ್ದರು. ಹಾಗೂ ಅವರ ಪುತ್ರ ಅಶ್ವಿನ್‌ ರಾವ್‌ ಸಹ ಪೊಲೀಸರ ಬಂಧನಕ್ಕೆ ಒಳಗಾಗಿದ್ದನ್ನು ಸ್ಮರಿಸಬಹುದು.

SUPPORT THE FILE

Latest News

Related Posts