Thursday | April 30, 2026 |

ಅನುಭವ ಮಂಟಪ ಕಾಮಗಾರಿಗೆ 74 ಕೋಟಿ ಬಾಕಿ; ಸಚಿವರಿಂದಲೇ ವಿಳಂಬ, ಕಾಮಗಾರಿ ಸ್ಥಗಿತವಾಗಲಿದೆಯೇ?

ಬೆಂಗಳೂರು; ಶೇಕಡ 63ರಷ್ಟು ಕಾಮಗಾರಿ ಪೂರ್ಣಗೊಂಡಿರುವ ಅನುಭವ ಮಂಟಪವನ್ನು 2026ರ ಮೇ ಒಳಗೇ ಉದ್ಘಾಟಿಸಲು ತುದಿಗಾಲಲ್ಲಿ ನಿಂತಿರುವ ಕಾಂಗ್ರೆಸ್‌ ಸರ್ಕಾರವು, ಈ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರ ಕಂಪನಿಗೆ ಕಳೆದ 4 ತಿಂಗಳಿನಿಂದ ಹಣವನ್ನೇ ಪಾವತಿಸಿಲ್ಲ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.

 

ಗುತ್ತಿಗೆದಾರ ಕಂಪನಿಯಾಗಿರುವ ಶಿರ್ಕೆ ಸಮೂಹಕ್ಕೆ ಹಣ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯು ಈಗಾಗಲೇ ಅನುಮೋದನೆ ನೀಡಿದೆ. ಆದರೆ ಕಂದಾಯ ಇಲಾಖೆಯು ಹಣವನ್ನು ಪಾವತಿಸದೇ ಬಾಕಿ ಉಳಿಸಿಕೊಂಡಿದೆ. ಅಲ್ಲದೇ ಈ ಸಂಬಂಧಿತ ಕಡತವು ಸಚಿವ ಕೃಷ್ಣ ಬೈರೇಗೌಡ ಅವರ ಲಾಗಿನ್‌ನಲ್ಲೇ ಹಲವು ತಿಂಗಳುಗಳಿಂದ ಇರುವುದು ಗೊತ್ತಾಗಿದೆ.

 

ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಬಸವ ಕಲ್ಯಾಣದಲ್ಲಿ 25 ಎಕರೆಯಲ್ಲಿ ನಿರ್ಮಾಣವಾಗುತ್ತಿರುವ ಅನುಭವ ಮಂಟಪ ಕಾಮಗಾರಿಯು ಸ್ಥಗಿತಗೊಳ್ಳುವ ಸಾಧ್ಯತೆಯೂ ಇದೆ. ನಿರ್ಮಾಣ ಕಾಮಗಾರಿಗೆ ಅಗತ್ಯವಾದ ಸರಕು ಸಾಮಗ್ರಿಗಳ ಪೂರೈಕೆದಾರರು ‘ಕೈ’ ಎತ್ತಿದ್ದಾರೆ ಎಂದು ತಿಳಿದು ಬಂದಿದೆ.

 

ಈಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅನುಭವ ಮಂಟಪ ನಿರ್ಮಾಣ ಮಾಡುತ್ತಿರುವ ಗುತ್ತಿಗೆದಾರ ಕಂಪನಿ ಶಿರ್ಕೆ ಸಮೂಹದ ಪ್ರತಿನಿಧಿಯು, ಲಿಖಿತ ಪತ್ರವನ್ನೂ ನೀಡಿದ್ದಾರೆ ಎಂದು ವಿಶ್ವಸನೀಯ ಮೂಲಗಳು ‘ದಿ ಫೈಲ್‌’ಗೆ ಖಚಿತಪಡಿಸಿವೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಪತ್ರದಲ್ಲೇನಿದೆ?

 

ಪ್ರತಿಷ್ಠಿತ ಯೋಜನೆಯಾಗಿರುವ ಅನುಭವ ಮಂಟಪ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಕಂಪನಿಗೆ ಹಣ ಪಾವತಿಯಲ್ಲಿ ಅಗಾಧವಾಗಿ ವಿಳಂಬವಾಗಿದೆ. ಕಾಮಗಾರಿಯು ಚಾಲ್ತಿಯಲ್ಲಿದ್ದರೂ ಸಹ ಬಿಲ್‌ಗಳನ್ನು ನೀಡಿಲ್ಲ. ಕಳೆದ ನಾಲ್ಕು ತಿಂಗಳಿನಿಂದ ಹಣ ಪಾವತಿಯಾಗಿಲ್ಲ. 2025ರ ಮಾರ್ಚ್‌ನಲ್ಲಿ ಹಣ ನೀಡಿರುವುದನ್ನು ಬಿಟ್ಟರೇ ಇನ್ನೂ 74 ಕೋಟಿ ರುಪಾಯಿ ಪಾವತಿಸಿಲ್ಲ ಎಂದು ಮುಖ್ಯಮಂತ್ರಿ ಗಮನಕ್ಕೆ ತಂದಿರುವುದು ಗೊತ್ತಾಗಿದೆ.

 

‘ಕಾಮಗಾರಿ ಬಿಲ್‌ ಪಾವತಿಸಲು ವಿಳಂಬವಾಗಿರುವುದರಿಂದ ಪೂರೈಕೆದಾರರು ಸರಕು ಸಾಮಾಗ್ರಿಗಳನ್ನು ಸರಬರಾಜು ಮಾಡುವುದನ್ನು ನಿಲ್ಲಿಸಲಿದ್ದಾರೆ. ಸರಬರಾಜುದಾರರಿಗೂ ಹಣ ಪಾವತಿಸಬೇಕಿದೆ. ಇದರಿಂದ ಗುತ್ತಿಗೆದಾರ ಕಂಪನಿ ಮೇಲೆ ಅಪಾರವಾದ ಹೊಣೆಗಾರಿಕೆ ಇದೆ. ಇದು ಕಾಮಗಾರಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ,’ ಎಂದು ಕಂಪನಿಯು ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಟ್ಟಿರುವುದು ತಿಳಿದು ಬಂದಿದೆ.

 

ಗುತ್ತಿಗೆದಾರ ಕಂಪನಿಯಾಗಿರುವ ಶಿರ್ಕೆ ಸಮೂಹವು ಈ ಕಾಮಗಾರಿ ಪೂರ್ಣಗೊಳಿಸಲು ವಿವಿಧ ಬ್ಯಾಂಕ್‌ಗಳಿಂದ ಅತ್ಯಧಿಕ ಬಡ್ಡಿ ದರದಲ್ಲಿ ಸಾಲವನ್ನು ಪಡೆದಿದೆ. ಆದರೆ ಮುಂದಿನ ದಿನಗಳಲ್ಲಿ ಇದೇ ರೀತಿಯ ಅತ್ಯಧಿಕ ಬಡ್ಡಿ ದರದಲ್ಲಿ ಸಾಲವನ್ನು ಪಡೆಯುವುದು ಅತ್ಯಂತ ಕಷ್ಟಕರವಾಗಲಿದೆ. ಈ ಕುರಿತು 2025ರ ಜುಲೈ 7ರಂದು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ತರಲಾಗಿದೆ. ಅಲ್ಲದೇ 2025ರ ಜುಲೈ 31ಕ್ಕೆ ಬಸವ ಕಲ್ಯಾಣ ಅಭಿವೃದ್ಧಿ ನಿಗಮದ ಆಯುಕ್ತರಿಗೂ ಪತ್ರ ಬರೆದಿದೆ ಎಂದು ಹೇಳಿರುವುದು ಗೊತ್ತಾಗಿದೆ.

 

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಧ್ಯ ಪ್ರವೇಶವನ್ನು ಕಂಪನಿಯು ಬಯಸಿರುವುದು ತಿಳಿದು ಬಂದಿದೆ. ಬಾಕಿ ಇರುವ 74 ಕೋಟಿ ರುಪಾಯಿಯನ್ನು ತಕ್ಷಣವೇ ಎಷ್ಟು ಸಾಧ್ಯವೋ ಅಷ್ಟು ಬೇಗ ಪಾವತಿಸಲು ಕ್ರಮಕೈಗೊಳ್ಳಬೇಕು. ಇದು ಸಾಧ್ಯವಾದಲ್ಲಿ ಕಂಪನಿಯ ಮೇಲಿರುವ ಹೊಣೆಗಾರಿಕೆಗಳು ಕಡಿಮೆಯಾಗಲಿವೆ. ಈ ಕ್ರಮ ಕೈಗೊಂಡಿದ್ದೇ ಆದಲ್ಲಿ ಸರಕು ಸಾಮಗ್ರಿ ಪೂರೈಕೆದಾರರಿಗೂ ಹಣ ಪಾವತಿಸಲು ನೆರವಾಗಲಿದೆ. ಮುಂದಿನ ಕಾಮಗಾರಿಯೂ ಪ್ರಗತಿಯಾಗಲಿದೆ ಎಂದು ತಿಳಿಸಿರುವುದು ಗೊತ್ತಾಗಿದೆ.

 

ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮೋದನೆ

 

ಬಸವ ಕಲ್ಯಾಣದಲ್ಲಿನ ಅನುಭವ ಮಂಟಪ ನಿರ್ಮಾಣ ಕಾಮಗಾರಿ ಕಂಪನಿಗೆ ಹಣ ಪಾವತಿಸುವ ಸಂಬಂಧ ಕಂದಾಯ ಇಲಾಖೆಯು ಕಡತವನ್ನು (RD/RBA/169/2025) ಆರ್ಥಿಕ ಇಲಾಖೆಗೆ ಸಲ್ಲಿಸಿತ್ತು. ಆರ್ಥಿಕ ಇಲಾಖೆಯೂ ಸಹ ಈ ಕಡತವನ್ನು ಪರಿಶೀಲಿಸುತ್ತಲ್ಲದೇ ಹಣ ಬಿಡುಗಡೆ ಮಾಡಲು ಅನುಮೋದನೆಯನ್ನೂ ನೀಡಿತ್ತು (FD/953/2023/EXP 7) ಎಂದು ತಿಳಿದು ಬಂದಿದೆ.

 

 

ಆರ್ಥಿಕ ಇಲಾಖೆಯು ಅನುಮೋದನೆ ನೀಡಿದ ಕಡತದ ಚಲನವಹಿಯನ್ನು ‘ದಿ ಫೈಲ್‌’, ಕೂಡ ಹಿಂಬಾಲಿಸಿತು. ಈ ಕಡತವು 2025ರ ಆಗಸ್ಟ್‌ 23ರಿಂದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಲಾಗಿನ್‌ನಲ್ಲೇ ಇರುವುದು ಪತ್ತೆಯಾಗಿದೆ. ಕಂದಾಯ ಸಚಿವರ ಲಾಗಿನ್‌ನಿಂದ ಕಡತವು ಕೆಳಗಿನ ಅಧಿಕಾರಿಗಳಿಗೆ ರವಾನಿಸಿಲ್ಲ ಎಂದು ಗೊತ್ತಾಗಿದೆ.

 

 

2021 ರಲ್ಲಿ ಯಡಿಯೂರಪ್ಪ ಅವರು ಅಡಿಪಾಯ ಹಾಕಿದ ನಂತರವೂ ನಿರ್ಮಾಣ ವಿಳಂಬವಾಗಿತ್ತು. 2022 ರಲ್ಲಿ ಮತ್ತೆ ಕೆಲಸ ಪ್ರಾರಂಭವಾಗಿತ್ತು. ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳ ಪ್ರಕಾರ, ಪ್ರಸ್ತುತ ನಿರ್ಮಾಣದ ಕೇವಲ ಶೇ. 50ರಷ್ಟು ಮಾತ್ರ ಪೂರ್ಣಗೊಂಡಿದೆ. ಪೂರ್ಣಗೊಳ್ಳಲು ತಾತ್ಕಾಲಿಕ ಗಡುವು ಡಿಸೆಂಬರ್ 2025 ಆಗಿದೆ. ಆದರೆ ಯೋಜನೆಯು 2026 ರವರೆಗೆ ವಿಸ್ತರಿಸುವ ನಿರೀಕ್ಷೆಯಿದೆ ಎನ್ನುತ್ತಾರೆ ಅಧಿಕಾರಿಯೊಬ್ಬರು.

 

ಶೇ.63ರಷ್ಟು ಕಾಮಗಾರಿ ಪೂರ್ಣ

 

ಅನುಭವ ಮಂಟಪದ ಕಾಮಗಾರಿ ಶೇ.63ರಷ್ಟು ಪೂರ್ಣಗೊಂಡಿದೆ. ಇದುವರೆಗೆ 271 ಕೋಟಿ ಖರ್ಚಾಗಿದೆ. 2026ರ ಮೇ ಒಳಗೆ ಉದ್ಘಾಟನೆ ಆಗಬೇಕು ಎಂದು ಸಚಿವ ಈಶ್ವರ್‍‌ ಖಂಡ್ರೆ ಅವರು ಹೇಳಿಕೆ ನೀಡಿದ್ದರು. ಹೀಗಾಗಿ ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ ಕಾಮಗಾರಿಗೆ ಸಿದ್ದರಾಮಯ್ಯ ಸರ್ಕಾರವು 742 ಕೋಟಿಗೆ ಹೆಚ್ಚಿಸಿತ್ತು.

 

ಅನುಭವ ಮಂಟಪದ ಕಾಮಗಾರಿ

 

ಬಸವ ಕಲ್ಯಾಣದಲ್ಲಿ 532 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ ಯೋಜನೆಗೆ ಹಿಂದಿನ ಸರ್ಕಾರವು ಒಪ್ಪಿಗೆ ನೀಡಿತ್ತು. ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ‘ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ’ ಸಭೆಯಲ್ಲಿ ಮುಂದಿನ ಮೂರು ವರ್ಷಗಳೊಳಗೆ ಅನುಭವ ಮಂಟಪ ಕಾಮಗಾರಿ ಪೂರ್ಣಗೊಳಿಸಲು ನಿರ್ಧರಿಸಿತ್ತು.

 

ಅನುಭವ ಮಂಟಪ ನಿರ್ಮಾಣದ ನೀಲ ನಕ್ಷೆ

 

12ನೇ ಶತಮಾನದಲ್ಲಿ ಶರಣರ ಸಾಮಾಜಿಕ -ಧಾರ್ಮಿಕ ಸುಧಾರಣಾ ಆಂದೋಲನದ ಕೇಂದ್ರಬಿಂದುವಾಗಿದ್ದ ಬಸವ ಕಲ್ಯಾಣದಲ್ಲಿ ತ್ರಿಪುರಾಂತಕ ಕೆರೆ ದಂಡೆಯ 25 ಎಕರೆ ಪ್ರದೇಶದಲ್ಲಿ ಆಧುನಿಕ ‘ಅನುಭವ ಮಂಟಪ’ ಮರು ನಿರ್ಮಾಣವಾಗಲಿದೆ. ಕಾಮಗಾರಿ ಪ್ರಸ್ತಾಪದ ವರದಿಯನ್ನು ತಜ್ಞರ ಸಮಿತಿಯು ಸಿಎಂ ಸಿದ್ದರಾಮಯ್ಯ ಅವರಿಗೆ ಈಚೆಗಷ್ಟೇ ಸಲ್ಲಿಸಿತ್ತು.

 

ತ್ರಿಪುರಾಂತಕ ಕೆರೆ ದಂಡೆಯಲ್ಲಿ ಮರುನಿರ್ಮಾಣ

 

25 ಎಕರೆ ಪ್ರದೇಶದಲ್ಲಿ ಜಾಗ ಗುರುತು ಮಾಡಿತ್ತು. 600 ಕೋಟಿ ರೂ.ಗಳ ಅಂದಾಜು ವೆಚ್ಚ 100 ಅಡಿ ಸುತ್ತಳತೆಯಲ್ಲಿ ಗೋಪುರ ನಿರ್ಮಾಣವಾಗಲಿದೆ. ಇದು ಜಗತ್ತಿನಲ್ಲೇ ದೊಡ್ಡದಾದ ಲಿಂಗಾಕಾರದ ಗೋಪುರ ಎಂದು ಹೇಳಲಾಗಿದೆ. ನಿರ್ಮಾಣಗೊಳ್ಳುವ ಕಟ್ಟಡದಲ್ಲಿ ಆರು ಅಂತಸ್ತುಗಳು ಇರಲಿವೆ. 1500 ಮಂದಿ ಒಟ್ಟಿಗೇ ಊಟ ಮಾಡುವ ದಾಸೋಹ ಭವನವೂ ಇರಲಿದೆ. ಇದಕ್ಕೆ ಮಹಾಮನೆ ಕ್ಷೇತ್ರ ಎಂದು ಮರುನಾಮಕರಣಕ್ಕೆ ಶಿಫಾರಸು ಮಾಡಲಾಗಿದೆ.

 

ಅನುಭವ ಮಂಟಪ ಕಾಮಗಾರಿ ನಡೆಯುತ್ತಿರುವುದು

 

ಬಸವ ಕಲ್ಯಾಣದಲ್ಲಿ 532 ಕೋಟಿ ರೂ. ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿತ್ತು. ಬಸವೇಶ್ವರರ ಕಾಲದ ವಿಶ್ವದ ಮೊದಲ ಆಧ್ಯಾತ್ಮಿಕ ಸಂಸತ್ತಾದ ಅನುಭವ ಮಂಟಪವನ್ನು ಅವರ ಸಾಮಾಜಿಕ, ಸಾಂಸ್ಕೃತಿಕ ಕೊಡುಗೆಗಳನ್ನು ಪ್ರತಿಬಿಂಬಿಸುವಂತೆ ನಿರ್ಮಿಸಲಾಗುತ್ತಿದೆ.

 

 

ಈ ಯೋಜನೆಯನ್ನು ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಕೈಗೊಂಡಿದ್ದು, ಮೂರು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಿತ್ತು.

 

ಯೋಜನೆಯ ಉದ್ದೇಶವೇನು?

 

12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮಾದರಿಯಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣ ಬಸವೇಶ್ವರರ ಜೀವನ, ತತ್ವಗಳು ಮತ್ತು ಅವರು ಸ್ಥಾಪಿಸಿದ ಸಾಮಾಜಿಕ ಕ್ರಾಂತಿಯನ್ನು ಬಿಂಬಿಸುವುದು. ವಚನಕಾರರು ಮತ್ತು ದಾರ್ಶನಿಕರ ಕುರಿತು ಮಾಹಿತಿ ನೀಡುವ ಕಿರುಚಿತ್ರ ಪ್ರದರ್ಶನಗಳು ಇರಲಿವೆ ಎಂದು ಹೇಳಲಾಗಿತ್ತು.

 

ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಈ ಯೋಜನೆಯನ್ನು ಕೈಗೊಂಡಿದೆ. ಈ ಕಾಮಗಾರಿಯನ್ನು ಮುಂದಿನ ಮೂರು ವರ್ಷದೊಳಗೆ ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದರು.

 

2021 ರ ಏಪ್ರಿಲ್‌ನಲ್ಲಿ ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳು ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಬಿಜೆಪಿ ಪರವಾಗಿ ಲಿಂಗಾಯತ ಮತಗಳನ್ನು ಕ್ರೋಢೀಕರಿಸುವಲ್ಲಿ ಬೀದರ್‍‌ ಜಿಲ್ಲೆ ಪಾತ್ರ ವಹಿಸಿತ್ತು. ಹೀಗಾಗಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿರುವ ಹೊಸ ಅನುಭವ ಮಂಟಪ ಯೋಜನೆಯು 2023 ರ ವಿಧಾನಸಭಾ ಚುನಾವಣೆಯಲ್ಲೂ ಪಾತ್ರ ವಹಿಸುವಂತೆ ಕಾಂಗ್ರೆಸ್‌ ಸರ್ಕಾರವೂ ನೋಡಿಕೊಂಡಿತ್ತು.

 

ಈ ಯೋಜನೆಗೆ 612 ಕೋಟಿ ಪರಿಷ್ಕೃತ ಅಂದಾಜಿಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿತ್ತು. 500 ಕೋಟಿ ರು. ವೆಚ್ಚದ ಅನುಭವ ಮಂಟಪ ನಿರ್ಮಾಣ ಮಾಡಲು ಮಾಜಿ ಸಿಎಂ ಯಡಿಯೂರಪ್ಪ ಅವರು ಶಂಕು ಸ್ಥಾಪನೆ ನೆರವೇರಿಸಿದ್ದರು. ಶಂಕು ಸ್ಥಾಪನೆ ನೆರವೇರಿಸಿ 7 ತಿಂಗಳಾಗಿದ್ದರೂ ಯೋಜನೆಯ ಕಾಮಗಾರಿ ಇನ್ನೂ ಆರಂಭವಾಗಿರಲಿಲ್ಲ.

 

ಎರಡು ವರ್ಷಗಳಲ್ಲಿ ಯೋಜನೆ ಪೂರ್ಣವಾಗಿ ಪ್ರಧಾನಿ ನರೇಂದ್ರ ಮೋದಿ ಕಟ್ಡ ಉದ್ಘಾಟಿಸಲಿದ್ದಾರೆ ಎಂದು ಯಡಿಯೂರಪ್ಪ ಅವರು ಭರವಸೆ ನೀಡಿದ್ದರು. ಆದರೂ ಯೋಜನೆಗೆ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಇನ್ನೂ ಸಿದ್ಧಪಡಿಸಿರಲಿಲ್ಲ ಮತ್ತು ಡಿಪಿಆರ್ ಇಲ್ಲದೆ ಕೆಲಸಕ್ಕಾಗಿ ಟೆಂಡರ್‌ಗಳನ್ನು ಕರೆಯಲಾಗುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು.

 

12 ನೇ ಶತಮಾನದ ಸುಧಾರಕ ಬಸವೇಶ್ವರರಿಂದ ಸ್ಥಾಪಿತವಾದ ಅನುಭವ ಮಂಟಪವು ಅತೀಂದ್ರಿಯತೆ, ಆಧ್ಯಾತ್ಮಿಕ ಜಾಗೃತಿ ಮತ್ತು ಧಾರ್ಮಿಕ ಪ್ರವಚನದ ನೆಲೆಯಾಗಿದೆ. ಇದನ್ನು ‘ವಿಶ್ವದ ಮೊದಲ ಸಂಸತ್ತು’ ಎಂದು ಪರಿಗಣಿಸಲಾಗಿದೆ. ಬಸವೇಶ್ವರರ ಬೋಧನೆಗಳನ್ನು ಎತ್ತಿ ತೋರಿಸುವ ಯೋಜನೆಯನ್ನು 2016 ರಲ್ಲಿ ಅಂದಿನ ಸಿದ್ದರಾಮಯ್ಯ ಸರ್ಕಾರವು ಮೊದಲು ಪ್ರಸ್ತಾಪಿಸಿತ್ತು. ಯಡಿಯೂರಪ್ಪ ಅವರು ಶಿಲಾನ್ಯಾಸ ಮಾಡಿದ್ದಾರಾದರೂ ಆರಂಭದ ದಿನಗಳಲ್ಲಿ ಈ ಯೋಜನೆಯು ಪ್ರಗತಿಯಾಗಿರಲಿಲ್ಲ.

Hot this week

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

Topics

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

ಈಜಿಪುರ ಮೇಲ್ಸೇತುವೆ ಕಾಮಗಾರಿ; ಪರಿಷ್ಕೃತ ಅಂದಾಜಿನಲ್ಲಿಯೇ ಲೋಪ ಪತ್ತೆ, 8.80 ಕೋಟಿ ಮೊತ್ತಕ್ಕೆ ಲೆಕ್ಕ ಪರಿಶೋಧಕರ ಆಕ್ಷೇಪಣೆ

ಬೆಂಗಳೂರು;  ಈಜಿಪುರ ಎಲಿವೇಟೆಡ್ ಕಾಮಗಾರಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ಮಾಡಿದ್ದ...

Related Articles

Popular Categories

error: Content is protected !!