Tuesday | July 7, 2026 |

ನರೇಗಾ ದುರ್ಬಳಕೆ; ಅರಣ್ಯಾಧಿಕಾರಿ ಪತ್ನಿ, ಮಕ್ಕಳಿಗೂ ಜಾಬ್‌ ಕಾರ್ಡ್‌

ಬೆಂಗಳೂರು; ಲಾಕ್‌ಡೌನ್‌ನಿಂದಾಗಿ ಸ್ವಂತ ಸ್ಥಳಗಳಿಗೆ ತೆರಳಿರುವ ವಲಸಿಗ ಕಾರ್ಮಿಕರಿಗೆ ನರೇಗಾದಡಿಯಲ್ಲಿ ಉದ್ಯೋಗ ಅವಕಾಶ ಕಲ್ಪಿಸಬೇಕಿದ್ದ ಅಧಿಕಾರಿಗಳು, ತಮ್ಮ ಕುಟುಂಬ ಸದಸ್ಯರ ಹೆಸರಿಗೆ ಜಾಬ್‌ ಕಾರ್ಡ್‌ ನೀಡಿ ಕೂಲಿ ಹಣ ಲೂಟಿ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಬಾಗಲಕೋಟೆಯ ಉಪ ವಲಯ ಅರಣ್ಯಾಧಿಕಾರಿ ಟಿ ಬಿ ಬಲವಂತನವರ ತಮ್ಮ ಪತ್ನಿ ಮತ್ತು ಮಕ್ಕಳ ಹೆಸರಿನಲ್ಲಿ ಜಾಬ್‌ ಕಾರ್ಡ್‌ ನೀಡಿರುವುದು ದಾಖಲೆಯಿಂದ ತಿಳಿದು ಬಂದಿದೆ. ಈ ಸಂಬಂಧ ಮಲ್ಲಿಕಾರ್ಜುನ ಎಸ್‌ ರಾಂಪೂರ ಎಂಬುವರು ಪ್ರಧಾನ ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿ ಸಂಜಯ್‌ ಮೋಹನ್‌ ಅವರಿಗೆ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ. ಈ ದೂರಿನ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಬಾಗಲಕೋಟೆಯ ಹುನಗಂದ ಪ್ರಾದೇಶಿಕ ವಲಯದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಟಿ ಬಿ ಬಲವಂತನವರ ಅವರು ಪತ್ನಿ ಶಾರದಾ ತಿಪ್ಪಣ್ಣ ಬಲವಂತನವರ, ಮಗ ನಾಗರಾಜ, ನವೀನಕುಮಾರ ಮತ್ತು ಮಗಳು ನಂದಿನಿ ಹೆಸರಿನಲ್ಲಿ ಅಮರಾವತಿ ಗ್ರಾಮ ಪಂಚಾಯ್ತಿಯ ಅಮರಾವತಿ ಗ್ರಾಮದಲ್ಲಿ ಜಾಬ್‌ ಕಾರ್ಡ್‌(ಕೆಎನ್‌-01-004-018-003/325) ಪಡೆದಿರುವುದು ದಾಖಲೆಯಿಂದ ಗೊತ್ತಾಗಿದೆ.

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಉದ್ಯೋಗ ಕಾರ್ಡ್‌ ಪಡೆದಿರುವ ಟಿ ಬಿ ಬಲವಂತನವರ ಅವರ ಕುಟುಂಬ ಸದಸ್ಯರ ಖಾತೆಗೆ ಕೂಲಿ ಹಣವೂ ಜಮಾ ಆಗಿರುವುದು ನರೇಗಾದ ಅಧಿಕೃತ ಜಾಲ ತಾಣದಿಂದ ತಿಳಿದು ಬಂದಿದೆ.
ಆರೋಪಿತ ಐಎಫ್‌ಎಸ್‌ ಅಧಿಕಾರಿ ಪತ್ನಿ ಮತ್ತು ಮೂವರು ಮಕ್ಕಳು ಅಮರಾವತಿ ಗ್ರಾಮದಲ್ಲಿ ಸಂಗಮಕ್ಕೆ ಹೋಗುವ ಒಳ ರಸ್ತೆ ಬದಿ ಕಾಮಗಾರಿ, ಅಮರಾವತಿ ಚೆಕ್‌ ಡ್ಯಾಂ ಹೂಳು ತೆಗೆಯುವುದು, ರೈತರ ಹೊಲಗಳ ಬದುಗಳಲ್ಲಿ ಜೈವಿಕ ಇಂಧನ ಸಸಿ ನೆಡುವುದು, ರೈತರ ಹೊಲದಲ್ಲಿ ಜೈವಿಕ ನೆಡುತೋಪು ಬೆಳೆಸುವುದು, ರಸ್ತೆ ಮತ್ತು ಬ್ಲಾಕ್‌ಗಳಲ್ಲಿ ಸಸಿ ನೆಡುವುದು ಸೇರಿದಂತೆ ಮತ್ತಿತರ ಕಾಮಗಾರಿಗಳಲ್ಲಿ ದುಡಿದು ಕೂಲಿ ಹಣ ಪಡೆದಿರುವುದು ಲಭ್ಯ ಇರುವ ಜಾಬ್‌ ಕಾರ್ಡ್‌ನಿಂದ ತಿಳಿದು ಬಂದಿದೆ.

‘ಗ್ರಾಮೀಣ ಜನತೆಯ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ನರೇಗಾ ಯೋಜನೆಯನ್ನು ಅಧಿಕಾರಶಾಹಿಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಗ್ರಾಮೀಣ ಜನತೆಯು ಉದ್ಯೋಗವಕಾಶಕ್ಕಾಗಿ ಪಟ್ಟಣ, ಇತರೆ ಔದ್ಯಮಿಕ ಕೇಂದ್ರಗಳಿಗೆ ವಲಸೆ ಹೋಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಸ್ಥಳೀಯ ಮಟ್ಟದಲ್ಲಿ ಉದ್ಯೋಗ ನೀಡುವ ದೂರದೃಷ್ಟಿಯಿಂದ ಜಾರಿಗೊಂಡಿರುವ ಈ ಯೋಜನೆಯ ಅನುದಾನವನ್ನು ಪ್ರಭಾವಿ ಅಧಿಕಾರಿಗಳು ಲೂಟಿ ಮಾಡುತ್ತಿದ್ದಾರೆ,’ ಎಂದು ಮಲ್ಲಿಕಾರ್ಜುನ ರಾಂಪೂರ ಅವರು ದೂರಿನಲ್ಲಿ ವಿವರಿಸಿದ್ದಾರೆ.

Hot this week

3 ವರ್ಷವಾದರೂ ಆರಂಭವಾಗದ ಕಟ್ಟಡ ಭಗ್ನಾವಶೇಷ ಘಟಕ; ನಗರಾಭಿವೃದ್ಧಿ ಸಚಿವರ ತವರಲ್ಲೇ ನಾಗರಿಕರಿಗೆ ದಂಡ, ರದ್ದಾಗದ ಬೈಲಾ

ಮೈಸೂರು;  ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿನ ...

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...

ಸಿಎಂ, ಡಿಸಿಎಂ ಸೇರಿ ಐವರು ಸಚಿವರ ವಸತಿಗೃಹ ನವೀಕರಣ, ದುರಸ್ತಿ, ಪೀಠೋಪಕರಣ, ಗೃಹಪಯೋಗಿ ವಸ್ತುಗಳ ಖರೀದಿ; 3 ವರ್ಷದಲ್ಲಿ 19.01 ಕೋಟಿ ರು ವೆಚ್ಚ

ಬೆಂಗಳೂರು; ಸರ್ಕಾರಿ ಶಾಲೆ, ಸರ್ಕಾರಿ ವಿದ್ಯಾರ್ಥಿ ನಿಲಯಗಳ ನಿರ್ಮಾಣ, ಇರುವ ಕೊಠಡಿಗಳ...
Please Scan to make Your Contribution

Topics

3 ವರ್ಷವಾದರೂ ಆರಂಭವಾಗದ ಕಟ್ಟಡ ಭಗ್ನಾವಶೇಷ ಘಟಕ; ನಗರಾಭಿವೃದ್ಧಿ ಸಚಿವರ ತವರಲ್ಲೇ ನಾಗರಿಕರಿಗೆ ದಂಡ, ರದ್ದಾಗದ ಬೈಲಾ

ಮೈಸೂರು;  ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿನ ...

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...

ಶಾಲಾ ಶಿಕ್ಷಣಕ್ಕಾಗಿ ಹಣಕಾಸು ಪೂರೈಕೆ; ವೆಚ್ಚ ಸಾಲದು, ಹೆಚ್ಚಿದ ಸಂಪನ್ಮೂಲ ಅಂತರ, ಬಜೆಟ್‌ನಲ್ಲಿ ಕುಸಿತ, ಖಾಸಗೀಕರಣಕ್ಕೆ ದಾರಿಯಾಗಲಿದೆಯೇ?

ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ...

Related Articles

Popular Categories

error: Content is protected !!