Friday | March 6, 2026 |

ಬಡಾವಣೆ ನಕ್ಷೆ ತಿದ್ದುಪಡಿ ಆರೋಪ; ಶ್ಯಾಮ್‌ಭಟ್ ವಿರುದ್ಧ ಪ್ರಕರಣಕ್ಕೆ ಕ್ಲೀನ್‌ ಚಿಟ್‌ಗೆ ಸಿದ್ಧತೆ

Support THE-FILE

spot_img

ಬೆಂಗಳೂರು; ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಟಿ ಶ್ಯಾಮ್‌ ಭಟ್‌ ಮತ್ತಿತರರ ವಿರುದ್ಧ ಎರಡೂವರೆ ವರ್ಷದ ಹಿಂದೆ ತನಿಖೆಗೆ ಆದೇಶ ಹೊರಡಿಸಿದ್ದ ಸರ್ಕಾರವು ಇದೀಗ ಈ ಪ್ರಕರಣದಲ್ಲಿ ಪ್ರಾಧಿಕಾರಕ್ಕೆ ಯಾವುದೇ ಆರ್ಥಿಕ ನಷ್ಟವುಂಟಾಗಿಲ್ಲ ಎಂದು ತೀರ್ಮಾನ ತೆಗೆದುಕೊಳ್ಳಲು ಮುಂದಾಗಿದೆ.

 

ನಿವೇಶನದ ಮೂಲ ಹಂಚಿಕೆದಾರರ ಒಪ್ಪಿಗೆ ಪಡೆಯದೇ ಬಡಾವಣೆ ನಕ್ಷೆಯನ್ನೇ ತಿದ್ದುಪಡಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಕೆಯಾಗಿತ್ತು. ಈ ದೂರನ್ನಾಧರಿಸಿ ತನಿಖೆ ನಡೆಸಲು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ಮೊದಲ ವರ್ಷದಲ್ಲೇ ಪೂರ್ವಾನುಮತಿ ನೀಡಲಾಗಿತ್ತು. ಆದರೀಗ ಈ ಪ್ರಕರಣದಲ್ಲಿ ಯಾವುದೇ ನಷ್ಟವಾಗಿಲ್ಲ ಎಂದು ಬಿಡಿಎಯು ವರದಿ ನೀಡಿದೆ.

 

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು) ಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆಯ ಬಿಡಿಎ ಶಾಖೆಯಲ್ಲಿ ಬಾಕಿ ಇರುವ ವಿಚಾರಣೆ, ತನಿಖೆ ನಡೆಸುವ ಪ್ರಸ್ತಾವನೆಗಳಿಗೆ ಸಂಬಂಧಿಸಿದಂತೆ ನಗರಾಭಿವೃದ್ದಿ ಇಲಾಖೆಯು 2026ರ ಜನವರಿ 12ರಂದು ಸಭೆ ನಡೆಸಿತ್ತು.

 

 

ಈ ಸಭೆಯಲ್ಲಿ ಟಿ ಶ್ಯಾಮ್ ಭಟ್ ಅವರ ವಿರುದ್ಧದ ಪ್ರಕರಣಗಳ ಕುರಿತೂ ಚರ್ಚೆ ನಡೆಸಿದೆ.

 

ವಿಚಾರಣೆ ಅಗತ್ಯವಿಲ್ಲವೆಂದ ಬಿಡಿಎ ಆಯುಕ್ತರು?

 

ಸರ್ ಎಂ ವಿಶ್ವೇಶ್ವರಯ್ಯ 5ನೇ ಹಂತದ ಬಡಾವಣೆಯಲ್ಲಿ ಹಂಚಿಕೆಯಾಗಿದ್ದ ನಿವೇಶನ ಸಂಖ್ಯೆ 617ಗೆ ಬದಲಾಗಿ ಸರ್ ಎಂ ವಿಶ್ವೇಶ್ವರಯ್ಯ 5ನೇ ಹಂತದ ಬಡಾವಣೆಯಲ್ಲಿಯೇ 60/40 ಅಳೆಯ ನಿವೇಶನ ಸಂಖ್ಯೆ 1607/69ನ್ನು ಹಂಚಿಕೆ ಮಾಡಿದ್ದರ ಪ್ರಕರಣದಲ್ಲಿ ಮೂಲ ಹಂಚಿಕೆದಾರರಿಗೆ ಪ್ರಾಧಿಕಾರಕ್ಕೆ ಯಾವುದೇ ಆರ್ಥಿಕ ನಷ್ಟವುಂಟಾಗಿಲ್ಲ.

 

 

ಹೀಗಾಗಿ ಇವರ ವಿರುದ್ಧ ತನಿಖೆ, ವಿಚಾರಣೆ ನಡೆಸುವುದು ಅಗತ್ಯವಿಲ್ಲ ಎಂದು ಬಿಡಿಎ ಆಯುಕ್ತರು ವರದಿ ನೀಡಿದ್ದಾರೆ.

 

ಈ ಮಾಹಿತಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ತಿಳಿಸಬೇಕು. ಇದಕ್ಕೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಅನುಮೋದನೆ ಪಡೆಯಲು ಕ್ರಮವಹಿಸಲಾಗುತ್ತಿದೆ ಎಂದು ಸಭೆಯಲ್ಲಿ ನಗರಾಭಿವೃದ್ದಿ ಇಲಾಖೆಯ ಅಧಿಕಾರಿಗಳು ಮಾಹಿತಿ ಒದಗಿಸಿರುವುದು ಗೊತ್ತಾಗಿದೆ.

 

 

ಇದೇ ಪ್ರಕರಣದಲ್ಲಿ  ರೇಷ್ಮೆ ಸಂಶೋಧನಾ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾಗಿದ್ದ ಐಎಎಸ್‌ ರೂಪ, ಬಿಡಿಎ ಎಕ್ಸಿಕ್ಯೂಟಿವ್ ಇಂಜಿನಿಯರ್ ಎಂ ರಾಮಕೃಷ್ಣ (ಹಾಲಿ ನಿವೃತ್ತ), ಜಿ ಕೆ ರವೀಂದ್ರ (ಹಾಲಿ ನಿವೃತ್ತ), ಬಿ ಸಿ ಪ್ರಕಾಶ್  ಅವರ ವಿರುದ್ಧ ವಿಚಾರಣೆ, ತನಿಖೆ ಕೈಗೊಳ್ಳಲು 2023ರ ಆಗಸ್ಟ್‌ 18ರಂದೇ  ಪೂರ್ವಾನುಮತಿ ನೀಡಿತ್ತು.

 

ಮೂಲ ಹಂಚಿಕೆದಾರರಿಗೆ ತೊಂದರೆಯನ್ನುಂಟು ಮಾಡಿ ಸರ್ಕಾರಿ ಅಧಿಕಾರಿಗಳು ಅಕ್ರಮವಾಗಿ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಆರೋಪ ಪ್ರಕರಣದಲ್ಲಿ ತನಿಖೆ ವಿಚಾರಣೆ ಕೈಗೊಳ್ಳಲು ಹಿಂದಿನ ಬಿಜೆಪಿ ಸರ್ಕಾರವು ಪೂರ್ವಾನುಮತಿ ನೀಡಿರಲಿಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ 100 ದಿನದೊಳಗೇ ಟಿ ಶ್ಯಾಮ್‌ ಭಟ್‌, ಐಎಎಸ್‌ ಅಧಿಕಾರಿ ರೂಪ ಅವರ ವಿರುದ್ಧ ವಿಚಾರಣೆ ಕೈಗೊಳ್ಳಲು ಪೂರ್ವಾನುಮತಿ ನೀಡಿ ಆದೇಶ ಹೊರಡಿಸಿತ್ತು.

 

ಒಮ್ಮೆ ತನಿಖೆ ನಡೆಸಲು ಪೂರ್ವಾನುಮತಿ ನೀಡಿ ನಂತರ ತನಿಖೆ ನಡೆಸುವ ಅಗತ್ಯವೇ ಇಲ್ಲವೆಂದು ಬಿಡಿಎ ಆಯುಕ್ತರು ನೀಡಿದ್ದ ವರದಿಗೆ ಮನ್ನಣೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಈ ಪ್ರಕರಣದಲ್ಲಿ ತನಿಖೆ ನಡೆಸಲು ಪೂರ್ವಾನುಮತಿ ನೀಡಬೇಕು ಎಂದು  2021ರ ಡಿಸೆಂಬರ್‌ 3ರಂದು ಭ್ರಷ್ಟಾಚಾರ ನಿಗ್ರ ದಳದ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು  ಪರಿಶೀಲಿಸಿದ್ದ  ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಬಿಡಿಎನ ಅಂದಿನ ಆಯುಕ್ತ ಟಿ ಶ್ಯಾಮ್‌ ಭಟ್‌, ಅಂದಿನ ಉಪ ಕಾರ್ಯದರ್ಶಿ ಐಎಎಸ್‌ ಅಧಿಕಾರಿ ರೂಪಾ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮಗಳನ್ನೆಸಗಿ ಸರ್ಕಾರಕ್ಕೆ ನಷ್ಟವನ್ನುಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯುವ ನಿಟ್ಟಿನಲ್ಲಿ  ತನಿಖೆ ನಡೆಸಲು ಪೂರ್ವಾನುಮತಿ ನೀಡಿತ್ತು.

 

 

ಏನಿದು ಪ್ರಕರಣ?

 

ಬೆಂಗಳೂರು ಆಭಿವೃದ್ಧಿ ಪ್ರಾಧಿಕಾರವು ನಿರ್ಮಿಸಿದ್ದ ಸರ್‌ ಎಂ ವಿಶ್ವೇಶ್ವರಯ್ಯ 5ನೇ ಬಡಾವಣೆಯಲ್ಲಿನ ಭಾಸ್ಕರ್‌ ರೆಡ್ಡಿ ಎಂಬುವರಿಗೆ 60*40 ಅಳತೆಯ ನಿವೇಶನವನ್ನು (ಸಂಖ್ಯೆ 617) ಹಂಚಿಕೆ ಮಾಡಿತ್ತು. ನಂತರ ಭಾಸ್ಕರ್‌ ರೆಡ್ಡಿ ಅವರಿಗೆ ಈ ನಿವೇಶನಕ್ಕೆ ಬದಲಾಗಿ ಸರ್‌ ಎಸ್‌ ವಿಶ್ವೇಶ್ವರಯ್ಯ 5ನೇ ಬಡಾವಣೆಯಲ್ಲಿಯೇ 1607/69 ಕ್ರಮಾಂಕದಲ್ಲಿದ್ದ ನಿವೇಶನವನ್ನು ಹಂಚಿಕೆ ಮಾಡಿ ಹಂಚಿಕೆ ಪತ್ರ ನೀಡಿತ್ತು. ಅಲ್ಲದೇ ಬಿಡಿಎ ಉಪ ಕಾರ್ಯದರ್ಶಿಯಾಗಿದ್ದ ಐಎಎಸ್‌ ಅಧಿಕಾರಿ ರೂಪ ಎಂಬುವರು ಶುದ್ಧ ಕ್ರಯ ಪತ್ರವನ್ನೂ (ದಸ್ತಾವೇಸು ಸಂಖ್ಯೆ; 4505/2005-06) ಮಾಡಿಕೊಟ್ಟಿದ್ದರು.

 

2012ರಲ್ಲಿ ಭಾಸ್ಕರ್‌ ರೆಡ್ಡಿ ಮತ್ತು ಇತರರಿಗೆ ಹಂಚಿಕೆಯಾಗಿದ್ದ 60*40 ಅಳತೆಯ ನಿವೇಶನವನ್ನು ಬಿಡಿಎ ಆಯುಕ್ತರ ಆದೇಶದಂತೆ 30*40 ಅಳತೆ ನಿವೇಶನಗಳನ್ನಾಗಿ ಪರಿವರ್ತಿಸಿ ಒಟ್ಟು 12 ನಿವೇಶನಗಳನ್ನಾಗಿ ವಿಂಗಡಿಸಿ ನಿವೇಶನ ಸಂಖ್ಯೆಗಳನ್ನು ನೀಡಲಾಗಿತ್ತು. ಆದರೆ ಈ ಪ್ರಕ್ರಿಯೆ ಸಂಬಂಧ 60*40 ಅಳತೆಯ ನಿವೇಶನದ ಮೂಲ ಹಂಚಿಕೆದಾರರ ಒಪ್ಪಿಗೆಯನ್ನು ಸಹ ಪಡೆಯದೇ ಬಡಾವಣೆ ನಕ್ಷೆ ತಿದ್ದುಪಡಿ ಮಾಡಲಾಗಿತ್ತು. ಇದಕ್ಕೆ ಅಭಿಯಂತರರ ವಿಭಾಗ ಮತ್ತು ಆಡಳಿತ ವಿಭಾಗದ ಅಧಿಕಾರಿ ಸಿಬ್ಬಂದಿ ಅಧಿಕಾರ ದುರುಪಯೋಗವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಆದೇಶದಲ್ಲಿ ವಿವರಿಸಿತ್ತು.

 

ಅಲ್ಲದೇ ಈ ನಿವೇಶನಗಳನ್ನು ವಿಭಾಗ ಮಾಡಿ ನಂತರ ವಿಶೇಷ ಪ್ರೋತ್ಸಾಹ ಯೋಜನೆ ಅಡಿಯಲ್ಲಿ 30*40 ಅಳತೆ ನಿವೇಶನಗಳನ್ನು ವಿವಿಧ ವ್ಯಕ್ತಿಗಳಿಗೆ (ಫಲಾನುಭವಿಗಳಿಗೆ) ಹಂಚಿಕೆ ಮಾಡಲಾಗಿತ್ತು. ಈ ಪೈಕಿ ಭಾಸ್ಕರ್‌ ರೆಡ್ಡಿ ಅವರಿಗೆ ಹಂಚಿಕೆಯಾಗಿದ್ದ ನಿವೇಶನದಲ್ಲಿ 30*40 ಅಳತೆ ವಿಸ್ತೀರ್ಣಕ್ಕೆ ಪರಿವರ್ತಿಸಿದ್ದ ನಿವೇಶನ (ಸಂಖ್ಯೆ 1607/69 ಎ)ವನ್ನು ಪುಟ್ಟಲಕ್ಷ್ಮಮ್ಮ ಎಂಬುವರಿಗೆ ಹಂಚಿಕೆ ಮಾಡಲಾಗಿತ್ತು. ಅದೇ ರೀತಿ 1607/67 ಎ ನಿವೇಶನವನ್ನು ಗಂಗಮ್ಮ ಎಂಬುವರಿಗೆ, 1607/66 ಎ ನಿವೇಶನವನ್ನು ಕೃಷ್ಣ ಎಂಬುವರಿಗೆ, 1607/70 ಎ ನಿವೇಶನವನ್ಉ ನಾಗರತ್ನಮ್ಮ ಅವರಿಗೆ, ನಿವೇಶನ ಸಂಖ್ಯೆ 16073/71ನ್ನು ರಾಮಚಂದ್ರ ಪಣಿಕಲ್‌ ಅವರಿಗೆ ಹಂಚಿಕೆ ಮಾಡಲಾಗಿತ್ತು.

 

ಈ ರೀತಿ ಬಡಾವಣೆ ನಕ್ಷೆಯ ಮಾರ್ಪಾಡು ಮತ್ತು ನಿವೇಶನಗಳ ಅಳತೆಯ ಮಾರ್ಪಾಡಿಕೆಗೆ ಸಂಬಂಧಿಸಿದ ಪ್ರಸ್ತಾವನೆಯು ಬಿಡಿಎ ಎಕ್ಸಿಕ್ಯೂಟಿವ್ ಇಂಜಿನಿಯರ್‌ ಮೂಲಕ ಬಿಡಿಎ ಅಯುಕ್ತರಿಗೆ ಸಲ್ಲಿಕೆಯಾಗಿತ್ತು. ಮೂಲ ಬಡಾವಣೆ ನಕ್ಷೆಯಂತೆ 60*40 ಅಳತೆ ನಿವೇಶನಗಳು ಫಲಾನುಭವಿಗಳಿಗೆ ಹಂಚಿಕೆಯಾಗಿದ್ದರೂ ಸಹ ಅವರಿಗೆ ಬದಲಿ ನಿವೇಶನ ವ್ಯವಸ್ಥೆ ಮಾಡದೇ 30*40 ಅಳತೆ ನಿವೇಶನಗಳನ್ನಾಗಿ ಮಾರ್ಪಡಿಸಲಾಗಿತ್ತು ಎಂಬ ಅಂಶವು ಆದೇಶದಲ್ಲಿ ವಿವರಿಸಿತ್ತು.

 

’30*40 ಅಳತೆಯ ನಿವೇಶನಗಳ ಖಚಿತ ಅಳತೆ ವರದಿ ಪಡೆದು ಬೇರೆ ವ್ಯಕ್ತಿಗಳಿಗೆ ಹಂಚಿಕೆ ಮಾಡಲಾಗಿತ್ತು. ಇದರಿಂದ ಮೂಲ ಹಂಚಿಕೆದಾರರಿಗೆ ತೊಂದರೆಯುಂಟಾಗಿತ್ತು. ಇದರಿಂದ ಸರ್ಕಾರಿ ಅಧಿಕಾರಿಗಳು ಅಕ್ರಮವಾಗಿ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ,’ ಎಂದು ಆದೇಶದಲ್ಲಿ ಹೇಳಿತ್ತು.

 

ಈ ಪ್ರಕರಣದಲ್ಲಿ ಬಿಡಿಎ ಅಂದಿನ ಅಯುಕ್ತ ಟಿ ಶ್ಯಾಮ್‌ ಭಟ್‌, ಅಂದಿನ ಉಪ ಕಾರ್ಯದರ್ಶಿ ಐಎಎಸ್‌ ಅಧಿಕಾರಿ ರೂಪಾ ಮತ್ತು ಇತರೆ ಅಧಿಕಾರಿಗಳ ವಿರುದ್ಧ ವಿಚಾರಣೆ ಹಾಗೂ ತನಿಖೆ ಕೈಗೊಳ್ಳಲು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಕಲಂಕ 17(ಎ) ಅನ್ವಯ ಪೂರ್ವಾನುಮತಿ ನೀಡಬೇಕು ಎಂದು ಎಸಿಬಿಯು 2021ರ ಡಿಸೆಂಬರ್‌ 3ರಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ ಹಿಂದಿನ ಬಿಜೆಪಿ ಸರ್ಕಾರವು ಪೂರ್ವಾನುಮತಿ ನೀಡಿರಲಿಲ್ಲ.

Hot this week

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

Topics

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

Related Articles

Popular Categories

spot_imgspot_img
error: Content is protected !!