Friday | October 16, 2026 |

ದೇಶದ್ರೋಹಿ ಘೋಷಣೆ, ದೇಶ ವಿರೋಧಿ ಚಟುವಟಿಕೆ; 24 ಪ್ರಕರಣಗಳಲ್ಲಿ 3 ಬಿ ರಿಪೋರ್ಟ್

ಬೆಂಗಳೂರು; ದೇಶದ್ರೋಹಿ ಘೋಷಣೆ ಕೂಗಿದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ  ಕಳೆದ ಮೂರು ವರ್ಷದಲ್ಲಿ 18 ಪ್ರಕರಣಗಳು ಮತ್ತು ದೇಶವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣ ಸೇರಿ ಒಟ್ಟಾರೆ 24 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ಒಟ್ಟಾರೆ 20 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮೂರು ಪ್ರಕರಣಗಳಲ್ಲಿ ಪೊಲೀಸರು  ನ್ಯಾಯಾಲಯಕ್ಕೆ  ಬಿ ರಿಪೋರ್ಟ್‌ ಸಲ್ಲಿಸಿದ್ದಾರೆ.

ಬಿಜೆಪಿ ಶಾಸಕ ಎಸ್‌ ಸುರೇಶ್‌ ಕುಮಾರ್ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಈ ಅಂಕಿ ಅಂಶಗಳನ್ನು ಸದನಕ್ಕೆ ಮಂಡಿಸಿದ್ದಾರೆ.

ದೇಶದ್ರೋಹಿ ಘೋಷಣೆ ಮತ್ತು ದೇಶವಿರೋಧಿ ಚಟುವಟಿಕೆಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ 2023ರಲ್ಲಿ 03 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ 2 ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ. 2024ರಲ್ಲಿ 12 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 04 ಪ್ರಕರಣಗಳಲ್ಲೂ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿವೆ. 2025ರಲ್ಲಿ 8 ಪ್ರಕರಣಗಳಲ್ಲಿ ದಾಖಲಾಗಿವೆ. ಈ ಪೈಕಿ ಒಂದು ಪ್ರಕರಣದಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ ಎಂದು ಅಂಕಿ ಅಂಶ ಒದಗಿಸಿರುವುದು ತಿಳಿದು ಬಂದಿದೆ.

ಪಾಕಿಸ್ತಾನ ಜಿಂದಾಬಾದ್ ಘೋಷಣೆ

2024ರ ಫೆ.27ರಂದು ವಿಧಾನಸೌಧ ಪೂರ್ವ ದ್ವಾರದ ಬಳಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಐಪಿಸಿ ಅಡಿಯಲ್ಲಿ ಪ್ರಕರಣ (ಮೊಕದ್ದಮೆ ಸಂಖ್ಯೆ; 20/2024) ದಾಖಲಾಗಿತ್ತು. ಈ ಪ್ರಕರಣದಲ್ಲಿ ಗೃಹ ಇಲಾಖೆಯು ಎಫ್‌ಎಸ್‌ಎಲ್‌ ವರದಿಗಳನ್ನು ಸ್ವೀಕರಿಸಿದೆ. ಆದರೆ ತನಿಖೆಯು ಇನ್ನೂ ಪೂರ್ಣಗೊಂಡಿಲ್ಲ. ಸದ್ಯದಲ್ಲಿ ನ್ಯಾಯಾಲಯದಲ್ಲಿ ಅಂತಿಮ ವರದಿ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಸದನಕ್ಕೆ ತಿಳಿಸಿದ್ದಾರೆ.

20 ಮಂದಿ ಆರೋಪಿಗಳ  ಬಂಧನ

ದೇಶವಿರೋಧಿ ಘೋಷಣೆ ಮತ್ತು ದೇಶದ್ರೋಹ ಚಟುವಟಿಕೆಗಳ ಅಪರಾಧಗಳನ್ನು ಎಸಗಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿದ್ದ ಒಟ್ಟು 24 ಪ್ರಕರಣಗಳಲ್ಲಿ 20 ಆರೋಪಿಗಳನ್ನು ಬಂಧಿಸಲಾಗಿದೆ. 2023ರಲ್ಲಿ 3, 2024ರಲ್ಲಿ 13, 2025ರಲ್ಲಿ 2 ಮತ್ತು 2026ರಲ್ಲಿ  ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿರುವುದು ತಿಳಿದು ಬಂದಿದೆ.

ಆರೋಪಿಗಳಿಗೆ ಶಿಕ್ಷೆಯಾಗಿಲ್ಲ

ಈ ಪ್ರಕರಣಗಳಲ್ಲಿ ಬಂಧಿತರಾಗಿರುವ ಒಟ್ಟು 20 ಮಂದಿ ವಿರುದ್ಧದ ಪ್ರಕರಣಗಳು ಇನ್ನು ತನಿಖೆ ಹಂತದಲ್ಲಿವೆ. ಕೆಲವು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಈ ಹಂತದಲ್ಲಿ ಯಾವೊಬ್ಬ ಆರೋಪಿಗೂ ಶಿಕ್ಷೆಯಾಗಿಲ್ಲ. ಇದರಲ್ಲಿ ಪೊಲೀಸರ ವೈಫಲ್ಯ ಕಂಡು ಬಂದಿಲ್ಲ ಎಂದು ಸಚಿವ ಡಾ ಜಿ ಪರಮೇಶ್ವರ್ ಅವರು ಮಾಹಿತಿ ಒದಗಿಸಿರುವುದು ಗೊತ್ತಾಗಿದೆ.

2023ನೇ ಸಾಲಿನಲ್ಲಿ ಬೆಂಗಳೂರು ನಗರದ ಜೆ ಪಿ ನಗರ (ಮೊಕದ್ದಮೆ ಸಂಖ್ಯೆ 357/2023) ದಲ್ಲಿ ದಾಖಲಾದ ಪ್ರಕರಣವು ವಿಚಾರಣೆ ಹಂತದಲ್ಲಿದೆ. ಮೈಸೂರಿನ ಉದಯಗಿರಿಯಲ್ಲಿ (ಮೊಕದ್ದಮೆ ಸಂಖ್ಯೆ; 67/23) ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಬೆಳಗಾವಿ ತಿಲಕವಾಡಿಯಲ್ಲಿ ದಾಖಲಾಗಿದ್ದ ಪ್ರಕರಣ (57/2023)ದಲ್ಲಿ ತನಿಖಾಧಿಕಾರಿಗಳು ಸಿ ಅಂತಿಮ ವರದಿ ಸಲ್ಲಿಸಿದ್ದಾರೆ.

 

2024ನೇ ಸಾಲಿನಲ್ಲಿ ಬೆಂಗಳೂರು ನಗರದ ವಿಧಾನ ಸೌಧ ಪೊಲೀಸ್‌ ಠಾಣೆ (20/2024) ಪ್ರಕರಣವು ತನಿಖಾ ಹಂತದಲ್ಲಿದೆ. ಬೆಳಗಾವಿ ನಗರದ ಮಾರ್ಕೇಟ್ ಠಾಣೆಯಲ್ಲಿ (82/2024)ರಲ್ಲಿ ಆರೋಪಿಗೆ ಸಮನ್ಸ್‌ ಜಾರಿ ಮಾಡಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕುದೂರಿನಲ್ಲಿ ದಾಖಲಾಗಿರುವ  (122/2024) ಪ್ರಕರಣದಲ್ಲಿ ಪೊಲೀಸರು  2024ರ ಮೇ 28ರಂದು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದಾರೆ.  ಅಲ್ಲದೇ ಇದೇ ಪ್ರಕರಣದಲ್ಲಿ ವೈಲ್ಡ್‌ ಎಫ್‌ಐಆರ್ (101/2024) 2024ರ ಮೇ 29ರಂದು ಅಂಗೀಕೃತವಾಗಿದೆ ಎಂಬ ಮಾಹಿತಿ ಒದಗಿಸಿರುವುದು ತಿಳಿದು ಬಂದಿದೆ.

 

ಚಿತ್ರದುರ್ಗ ನಗರದ  ಪೊಲಿಸ್‌ ಠಾಣೆಯಲ್ಲಿ ದಾಖಲಾಗಿರುವ (132/2024)ದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಲು ಸರ್ಕಾರವು ಇನ್ನೂ ಅನುಮತಿ ನೀಡಿಲ್ಲ. ಸರ್ಕಾರದ ಅನುಮತಿಗಾಗಿ ಬಾಕಿ ಇದೆ. ಚಿಕ್ಕಮಗಳೂರಿನ ಕೊಪ್ಪದಲ್ಲಿ ದಾಖಲಾಗಿರುವ (31/2024) ಪ್ರಕರಣದಲ್ಲಿಯೂ 2024ರ ಮೇ 23ರಂದು ಪೊಲೀಸರು ನ್ಯಾಯಾಲಯಕ್ಕೆ  ಬಿ ರಿಪೋರ್ಟ್‌  ಸಲ್ಲಿಸಿದ್ದಾರೆ. ಬೆಳಗಾವಿಯ ಚಿಕ್ಕೋಡಿಯಲ್ಲಿ (99/2024) ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.

ಬಾಗಲಕೋಟೆಯ ತೇರದಾಳದಲ್ಲಿ (41/2024) ಪ್ರಕರಣವು ಸಹ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ರಾಯಚೂರಿನ ಪಶ್ಚಿಮ ಠಾಣೆಯಲ್ಲಿ (40/2024) ದಾಖಲಾಗಿರುವ ಪ್ರಕರಣದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಸಿ ಅಂತಿಮ ವರದಿ ಸಲ್ಲಿಸಿದ್ದಾರೆ.

2025ನೇ ಸಾಲಿನಲ್ಲಿಯೂ ರಾಜ್ಯದ ವಿವಿಧೆಡೆ ದೇಶದ್ರೋಹಿ ಘೋಷಣೆ ಕೂಗಿರುವ ಕುರಿತು ಪ್ರಕರಣಗಳು ದಾಖಲಾಗಿದ್ದವು. ಬೆಂಗಳೂರು ದಕ್ಷಿಣ ಜಿಲ್ಲೆಯ ವೈಟ್ ಫೀಲ್ಡ್‌ ಪೊಲೀಸ್‌ ಠಾಣೆಯಲ್ಲಿ (276/2025) ದಾಖಲಾಗಿರುವ ಪ್ರಕರಣವು ತನಿಖಾ ಹಂತದಲ್ಲಿದೆ. ಅದೇ ರೀತಿ ಇದೇ ಜಿಲ್ಲೆಯ ಬಿಡದಿ ಪೊಲೀಸ್ ಠಾಣೆಯಲ್ಲಿ (70/2025)ರಲ್ಲಿ ದಾಖಲಾಗಿರುವ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಮೈಸೂರಿನ ಹುಣಸೂರು ಪಟ್ಟಣದಲ್ಲಿ (275/2025) ದಾಖಲಾಗಿರುವ ಪ್ರಕರಣವು ಇನ್ನೂ ತನಿಖಾ ಹಂತದಲ್ಲಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹಳೇ ನಗರ ಠಾಣೆಯಲ್ಲಿ (136/2025) ದಾಖಲಾಗಿರುವ ಪ್ರಕರಣದಲ್ಲಿ ಎಫ್‌ಎಸ್‌ಎಲ್‌ ವರದಿ ಸ್ವೀಕೃತವಾಗಿದೆ. ಆದರೆ ಆರೋಪಿತ ವಿರುದ್ಧ ಮಾಡಲಾಗಿದ್ದ ಆರೋಪಗಳು ಸಾಬೀತಾಗಿಲ್ಲ. ಹೀಗಾಗಿ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಹಾಕಿದ್ದಾರೆ. ಈ ಬಿ ರಿಪೋರ್ಟ್‌, 2026ರ ಜನವರಿ 23ರಂದು ನ್ಯಾಯಾಲಯದಲ್ಲಿ ಅಂಗೀಕಾರವಾಗಿದೆ.

ಚಿಕ್ಕಮಗಳೂರಿನ ತರೀಕೇರೆಯಲ್ಲಿ (175/2025) ಪ್ರಕರಣವು ತನಿಖೆ ಹಂತದಲ್ಲಿದೆ. ರಾಯಚೂರಿನ ಮಾನ್ವಿ (125/2025)  ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ (125/2025) ಪ್ರಕರಣವು  ನ್ಯಾಯಾಲಯದಲ್ಲಿ ಇನ್ನೂ ವಿಚಾರಣೆ ಹಂತದಲ್ಲಿದೆ.

2026ರಲ್ಲಿ ಬೆಂಗಳೂರು ನಗರದ ಹೆಬ್ಬಗೋಡಿಯಲ್ಲಿ  (23/2026) ದಾಖಲಾಗಿರುವ ಪ್ರಕರಣವು ತನಿಖಾ ಹಂತದಲ್ಲಿದೆ. ದೇಶ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರಕರಣಗಳಲ್ಲಿ ಎರಡು ಪ್ರಕರಣಗಳಲ್ಲಿ ಸಿ ರಿಪೋರ್ಟ್ ಹಾಕಲಾಗಿದೆ. ಬೆಂಗಳೂರು ನಗರದ ಮಾದನಾಯಕನಹಳ್ಳಿಯಲ್ಲಿ (518/2024) ದಾಖಲಾದ ಪ್ರಕರಣವು ನ್ಯಾಯಾಲಯದ ವಿಚಾರಣೆ ಹಂತದಲ್ಲಿದೆ.

ದಕ್ಷಿಣ ಕನ್ನಡದ ಕಡಬ ಠಾಣೆಯಲ್ಲಿ ದಾಖಲಾಗಿರುವ (47/2024) ಪ್ರಕರಣದಲ್ಲಿ 2025ರ ಮಾರ್ಚ್‌ 12ರಂದೇ ಸಿ ರಿಪೋರ್ಟ್ ಹಾಕಲಾಗಿದೆ. ಉಡುಪಿಯ ಹೆಬ್ರಿಯಲ್ಲಿ (98/2024) ದಾಖಲಾಗಿರುವ ಪ್ರಕರಣದ ಬಗ್ಗೆ ಗೃಹ ಇಲಾಖೆಯು ಯಾವುದೇ ಮಾಹಿತಿಯನ್ನು ಒದಗಿಸಿಲ್ಲ.

ದೇಶವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣಕ್ಕೆ  ಸಂಬಂಧಿಸಿದಂತೆ 2025ರಲ್ಲಿ ಒಟ್ಟು 2 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದ ಜ್ಞಾನಭಾರತಿ ಠಾಣೆಯಲ್ಲಿ (423/2025)ರಲ್ಲಿ ದಾಖಲಾಗಿರುವ ಪ್ರಕರಣವು ತನಿಖಾ ಹಂತದಲ್ಲಿದೆ. ಮಂಡ್ಯದ ಕಿರುಗಾವಲಿನಲ್ಲಿ (43/2025) ಪ್ರಕರಣದಲ್ಲಿನ ತನಿಖೆಗೆ ಹೈಕೋರ್ಟ್‌ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ ಎಂದು ಮಾಹಿತಿ ಒದಗಿಸಿದ್ದಾರೆ.

Hot this week

ಅಪೆಕ್ಸ್ ಬ್ಯಾಂಕ್‌ನಲ್ಲಿ 1,000 ಕೋಟಿ ಹಗರಣ; ಹೈಕೋರ್ಟ್‌ನಲ್ಲಿ ಪಿಐಎಲ್‌, ಸರ್ಕಾರಕ್ಕೆ ಎದುರಾಗಲಿದೆಯೇ ಸಂಕಷ್ಟ?

ಬೆಂಗಳೂರು; ಕೃಷಿಗೆ ಸಂಬಂಧಿಸದ ಉದ್ದೇಶಗಳಿಗಾಗಿ ಸಾಲ ಮಂಜೂರಾತಿ,  ಈಗಾಗಲೇ ಅನುತ್ಪಾದಕ ಆಸ್ತಿಗಳೆಂದು (Non-Performing...

ರೈಲ್ವೇ- ವಿಮಾನ ಭತ್ಯೆ; 15ನೇ ವಿಧಾನಸಭೆಯ ಶಾಸಕರಿಗೆ 16.32 ಕೋಟಿ ಮರು ಪಾವತಿ

ಬೆಂಗಳೂರು; ಹದಿನೈದನೇ ವಿಧಾಸಭೆ ಅವಧಿಯಲ್ಲಿ ರಾಜ್ಯದ 224 ಶಾಸಕರು  16.32 ಕೋಟಿಯಷ್ಟು...

ಆರ್ಥಿಕ ಸ್ಥಿತಿ ಬಹಿರಂಗಪಡಿಸಿ ಕೋಲಾಹಲ ಎಬ್ಬಿಸಿದ್ದ ಅನಧಿಕೃತ ಟಿಪ್ಪಣಿಯ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರವು ₹2 ಲಕ್ಷ ಕೋಟಿಗೂ ಹೆಚ್ಚಿನ ಕಾಮಗಾರಿಗಳ ಬಾಕಿ...

ಸ್ಟಿಂಗ್ ಆಪರೇಷನ್‌; ಅಸಲು ದಾವೆ ಬೆನ್ನಲ್ಲೇ ಪೊಲೀಸ್‌ ಆಯುಕ್ತರಿಗೂ ದೂರು ಸಲ್ಲಿಸಿ ಯಾವ ಭಯವೂ ನನಗಿಲ್ಲವೆಂದ ಸಿದ್ದರಾಮಯ್ಯ

ಬೆಂಗಳೂರು; ಯೂ ಟ್ಯೂಬ್‌ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು...

21 ಪ್ಯಾಕೇಜ್‌ ಟೆಂಡರ್; ಶೇ. 5 ಪ್ರೀಮಿಯಂ ಮೀರಿದ್ದರೂ ಪರಿಶೀಲನೆ ಸಮಿತಿ ರಚಿಸಲು ಆಕ್ಷೇಪ ಎತ್ತಿದ್ದ ಡಿಕೆಶಿ

ಬೆಂಗಳೂರು;  ಜಿಬಿಎ ವ್ಯಾಪ್ತಿಯಲ್ಲಿ  ಉತ್ಪತ್ತಿಯಾಗುವ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ...
Please Scan to make Your Contribution

Topics

ಅಪೆಕ್ಸ್ ಬ್ಯಾಂಕ್‌ನಲ್ಲಿ 1,000 ಕೋಟಿ ಹಗರಣ; ಹೈಕೋರ್ಟ್‌ನಲ್ಲಿ ಪಿಐಎಲ್‌, ಸರ್ಕಾರಕ್ಕೆ ಎದುರಾಗಲಿದೆಯೇ ಸಂಕಷ್ಟ?

ಬೆಂಗಳೂರು; ಕೃಷಿಗೆ ಸಂಬಂಧಿಸದ ಉದ್ದೇಶಗಳಿಗಾಗಿ ಸಾಲ ಮಂಜೂರಾತಿ,  ಈಗಾಗಲೇ ಅನುತ್ಪಾದಕ ಆಸ್ತಿಗಳೆಂದು (Non-Performing...

ರೈಲ್ವೇ- ವಿಮಾನ ಭತ್ಯೆ; 15ನೇ ವಿಧಾನಸಭೆಯ ಶಾಸಕರಿಗೆ 16.32 ಕೋಟಿ ಮರು ಪಾವತಿ

ಬೆಂಗಳೂರು; ಹದಿನೈದನೇ ವಿಧಾಸಭೆ ಅವಧಿಯಲ್ಲಿ ರಾಜ್ಯದ 224 ಶಾಸಕರು  16.32 ಕೋಟಿಯಷ್ಟು...

ಆರ್ಥಿಕ ಸ್ಥಿತಿ ಬಹಿರಂಗಪಡಿಸಿ ಕೋಲಾಹಲ ಎಬ್ಬಿಸಿದ್ದ ಅನಧಿಕೃತ ಟಿಪ್ಪಣಿಯ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರವು ₹2 ಲಕ್ಷ ಕೋಟಿಗೂ ಹೆಚ್ಚಿನ ಕಾಮಗಾರಿಗಳ ಬಾಕಿ...

ಸ್ಟಿಂಗ್ ಆಪರೇಷನ್‌; ಅಸಲು ದಾವೆ ಬೆನ್ನಲ್ಲೇ ಪೊಲೀಸ್‌ ಆಯುಕ್ತರಿಗೂ ದೂರು ಸಲ್ಲಿಸಿ ಯಾವ ಭಯವೂ ನನಗಿಲ್ಲವೆಂದ ಸಿದ್ದರಾಮಯ್ಯ

ಬೆಂಗಳೂರು; ಯೂ ಟ್ಯೂಬ್‌ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು...

21 ಪ್ಯಾಕೇಜ್‌ ಟೆಂಡರ್; ಶೇ. 5 ಪ್ರೀಮಿಯಂ ಮೀರಿದ್ದರೂ ಪರಿಶೀಲನೆ ಸಮಿತಿ ರಚಿಸಲು ಆಕ್ಷೇಪ ಎತ್ತಿದ್ದ ಡಿಕೆಶಿ

ಬೆಂಗಳೂರು;  ಜಿಬಿಎ ವ್ಯಾಪ್ತಿಯಲ್ಲಿ  ಉತ್ಪತ್ತಿಯಾಗುವ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ...

ಪ್ರಭಾವಿ ನಾಯಕನ ವಿರುದ್ಧ ಸ್ಟಿಂಗ್ ಕಾರ್ಯಾಚರಣೆ; ನ್ಯಾಯಾಂಗ ತನಿಖೆಗೆ ಹೈಕೋರ್ಟ್‌, ಬಾಲ ನ್ಯಾಯಮಂಡಳಿ ಮೆಟ್ಟಿಲೇರಿದ ನೈಜ ಹೋರಾಟಗಾರರ ವೇದಿಕೆ

ಬೆಂಗಳೂರು; ಯೂ ಟ್ಯೂಬ್‌ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ  ‘ಹನಿಟ್ರ್ಯಾಪ್’ ಪ್ರಕರಣದ...

ಸ್ಟಿಂಗ್ ಆಪರೇಷನ್‌; ಮಾಧ್ಯಮಗಳ ವಿರುದ್ಧ ತಡೆಯಾಜ್ಞೆಗೆ ಸಿದ್ದರಾಮಯ್ಯ ಎಂಬುವರಿಂದ ಅಸಲು ದಾವೆ ದಾಖಲು, ನಾಳೆಯೇ ಅರ್ಜಿ ವಿಚಾರಣೆ

ಬೆಂಗಳೂರು;  ರಾಜ್ಯ ರಾಜಕಾರಣದಲ್ಲಿ ಬಹು ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಬಗ್ಗೆ...

ಅಕ್ರಮ ಖಾತೆ, ಅನರ್ಹರಿಗೆ 79.28 ಕೋಟಿ ರು ಪರಿಹಾರ; ಕೆಎಎಸ್ ಅಧಿಕಾರಿ ವಿರುದ್ಧದ ಮೊದಲ ವಿಚಾರಣೆಯಲ್ಲೇ ಲೋಪ, ಮರು ವಿಚಾರಣೆಗೆ ಆದೇಶ

ಬೆಂಗಳೂರು; ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಇಮ್ಮಾವು ಗ್ರಾಮದಲ್ಲಿ 54 ಎಕರೆಗೆ...

Related Articles

Popular Categories

error: Content is protected !!