Monday | March 16, 2026 |

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

Support THE-FILE

spot_img

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು ಖರೀದಿಸುವ ಸಂಬಂಧ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ  ಸಚಿವರೊಬ್ಬರ ನಿವಾಸದ ನೆಲಮಹಡಿಯ ಕೊಠಡಿಯಲ್ಲಿ ಲಂಚದ ಹಣವನ್ನು ಖಾಸಗಿ ಕಂಪನಿಯೊಂದರಿಂದ ಉಪ ನಿರ್ದೇಶಕರೊಬ್ಬರು ಸ್ವೀಕರಿಸಿದ್ದಾರೆ ಎಂಬ ಆರೋಪಿತ ಪ್ರಕರಣವು ಕಳೆದ 3 ವರ್ಷಗಳಾದರೂ ಇನ್ನೂ ತಾರ್ಕಿಕ ಅಂತ್ಯ ಕಂಡಿಲ್ಲ. ಈ ಸಂಬಂಧ ವಿಧಾನ ಪರಿಷತ್‌ನ ಹಾಲಿ ಸದಸ್ಯ ರಮೇಶ್‌ ಬಾಬು ಅವರು ಮೂರು ವರ್ಷಗಳ ಹಿಂದೆಯೇ ಸಲ್ಲಿಸಿದ್ದ  ದೂರು ಸಹ ಲೋಕಾಯುಕ್ತದಲ್ಲಿ ತೆವಳುತ್ತಿದೆ.

ಅಲ್ಲದೇ ಈ ಸಂಬಂಧ ಈಗಿನ ಕಾಂಗ್ರೆಸ್‌ ಸರ್ಕಾರವೂ ಸಹ ಈ ಪ್ರಕರಣದಲ್ಲಿ ಆರೋಪಿತ ಅಧಿಕಾರಿ ಉಪ ನಿರ್ದೇಶಕ ಡಾ ಆರ್ ನಾರಾಯಣ್ ಅವರನ್ನು ಇಂಎಂಆರ್‍‌ಐ ವಿಭಾಗದಿಂದ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದೆ. ಅಲ್ಲದೇ ಈ ಅಧಿಕಾರಿಯ ವಿರುದ್ಧ ಯಾವುದೇ ಕ್ರಮವನ್ನೂ ಜರುಗಿಸಿಲ್ಲ. ಬದಲಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತುರ್ತು ವೈದ್ಯಕೀಯ ಸೇವೆಗಳ ಉಪ ನಿರ್ದೇಶಕರು 2025ರ ನವೆಂಬರ್‍‌ 28ರಂದು ಲೋಕಾಯುಕ್ತ ರಿಜಿಸ್ಟ್ರಾರ್‍‌ ಗೆ ಈವರೆಗಿನ ಪ್ರಗತಿ ಕುರಿತು  ಲಿಖಿತ ಮಾಹಿತಿ ಒದಗಿಸಿದ್ದರು. ಇದರ ಪ್ರತಿಯು ದಿ ಫೈಲ್‌ ಗೆ ಲಭ್ಯವಾಗಿದೆ.

ವಿಶೇಷವೆಂದರೇ ಈ ಪ್ರಕರಣದಲ್ಲಿ ವಿಧಾನ ಪರಿಷತ್‌ನ ಹಾಲಿ ಸದಸ್ಯ ರಮೇಶ್‌ ಬಾಬು ಅವರು ಲೋಕಾಯುಕ್ತಕ್ಕೆ ಸಲ್ಲಿಸಿದ್ದ ದೂರಿನಲ್ಲಿ  ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರನ್ನು ಮೊದಲ ಪ್ರತಿವಾದಿಯನ್ನಾಗಿಸಿದ್ದರು.

 

ಈ ಪ್ರಕರಣದ ಕುರಿತು ದಿ ಫೈಲ್ 2023ರ ಮೇ 9ರಂದು ದಾಖಲೆ ಮತ್ತು ಫೋಟೋ ಸಹಿತ ವರದಿ ಪ್ರಕಟಿಸಿತ್ತು.

ಆರೋಗ್ಯಕವಚ ಟೆಂಡರ್‍‌ನಲ್ಲಿ ಭಾರೀ ಅಕ್ರಮ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಫೋಟೋ ಸಹಿತ ಲೋಕಾಯುಕ್ತಕ್ಕೆ ದೂರು

ಈ ವರದಿ ಪ್ರಕಟಗೊಂಡ ಬೆನ್ನಲ್ಲೇ ರಮೇಶ್‌ ಬಾಬು ಅವರು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು. ಈ ದೂರನ್ನು ದಾಖಲಿಸಿಕೊಂಡಿದ್ದ ಕಳೆದ 3 ವರ್ಷದಲ್ಲಿ  ಲೋಕಾಯುಕ್ತವು 11 ಬಾರಿ ವಿಚಾರಣೆ ನಡೆಸಿದೆ. ಈ ಪ್ರಕರಣವು ಇದೇ ಮಾರ್ಚ್‌ 17ಕ್ಕೆ ವಿಚಾರಣೆಗೆ ಬರಲಿದೆ.

 

ಏನಿದು ಪ್ರಕರಣ?

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಕವಚ 108 ಅಂಬ್ಯುಲೆನ್ಸ್ ಸೇವೆಯನ್ನು ಮೇಲ್ದರ್ಜೆಗೇರಿಸಲು ಮುಂದಾಗಿತ್ತು. ಈ ಸಂಬಂಧ ಅಂಬ್ಯಲೆನ್ಸ್‌ ಸೇವೆಗಳನ್ನು 750 ಸಂಖ್ಯೆಗೆ ಸೀಮಿತಗೊಳಿಸಲು ಯೋಜಿಸಿತ್ತು. 54 ಕರೆ ಕೇಂದ್ರದ ಆಸನಗಳ ಸಂಖ್ಯೆಯನ್ನು 75 ಆಸನಗಳ ತುರ್ತು ಕರೆ ಕೇಂದ್ರ ಹಾಗೂ ತುರ್ತು ವೈದ್ಯಕೀಯ ತರಬೇತಿ ಕೇಂದ್ರಗಳನ್ನು ಅಂದಾಜು 1,260 ಕೋಟಿ ರು ವೆಚ್ಚವಾಗಲಿದೆ ಎಂದು ಅಂದಾಜಿಸಿತ್ತು.

 

 

ಅಲ್ಲದೇ ಅರ್ಹ ಸೇವಾದಾರರನ್ನು ಮುಂದಿನ 5 ವರ್ಷಗಳ ಸೇವಾವಧಿಗೆ ಕೆಟಿಪಿಪಿ ಕಾಯ್ದೆ 1999 ಮತ್ತು 2000 ಅನ್ವಯ ಗುಣಮಟ್ಟ ಮತ್ತು ವೆಚ್ಚ ಆಧರಿತ ಆಯ್ಕೆ ಮಾದರಿಯಲ್ಲಿ ಉತ್ತಮ ಸೇವೆ ನೀಡಲು ಸಿದ್ಧತೆ ನಡೆಸಿತ್ತು. ಇದಕ್ಕೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಮಂಜೂರಾತಿ ನೀಡಲಾಗಿತ್ತು. ಅರ್ಹ ಸೇವಾದಾರರನ್ನು ಆಯ್ಕೆ ಮಾಡಲು ಮೊದಲನೇ ಬಾರಿ ಆಹ್ವಾನಿಸಿದ್ದ ಟೆಂಡರ್‍‌ನಲ್ಲಿ ಯಾವುದೇ ಬಿಡ್‌ಗಳು ಸ್ವೀಕೃತವಾಗಿರಲಿಲ್ಲ. ಹೀಗಾಗಿ ಎರಡನೇ ಬಾರಿಗೆ 2023ರ ಜನವರಿ 9ರಂದು 21 ದಿನಗಳ ಅಲ್ಪಾವಧಿ ಟೆಂಡರ್ ಆಹ್ವಾನಿಸಿತ್ತು.

ಈ ಅವಧಿಯಲ್ಲಿಯೇ ಟ್ರಾನ್ಸ್‌ರೆನ್ಸಿ ಇಂಡಿಯಾ ಕಂಪನಿಯು ಬಹುದೊಡ್ಡ ಆರೋಪವನ್ನು ಮಾಡಿತ್ತು. ಶೈಕ್ಷಣಿಕ ಹಿನ್ನೆಲೆ ಹೊಂದಿರುವ ಎಡುಸ್ಪಾರ್ಕ್ ಪ್ರೈವೈಟ್‌ ಲಿಮಿಟೆಡ್ ಕಂಪನಿಗೆ ಟೆಂಡರ್‍‌ನಲ್ಲಿ ಅರ್ಹವನ್ನಾಗಿಸಲು ಇಂಎಂಆರ್‍‌ಐನ ಉಪನಿರ್ದೇಶಕ ಡಾ ಆರ್‍‌ ನಾರಾಯಣ್ ಅವರು ಪಕ್ಷಪಾತ ಎಸಗಿದ್ದಾರೆ ಎಂದು ಆಪಾದಿಸಿತ್ತು. ಈ ಕಂಪನಿಗಾಗಿಯೇ ಟೆಂಡರ್‍‌ನಲ್ಲಿ ಷರತ್ತು ಮತ್ತು ನಿಬಂಧನೆಗಳಲ್ಲಿ ಸಡಿಲಿಕೆ, ಪಕ್ಷಪಾತ ಎಸಗಿದ್ದಾರೆ ಎಂದು ಗುರುತರವಾದ ಆರೋಪ ಮಾಡಿತ್ತು.

100 ಕೋಟಿಗೆ ಬೇಡಿಕೆ ಇಟ್ಟಿದ್ದರೇ?

ಈ ಟೆಂಡರ್‍‌ನ ಅಂದಾಜು ವೆಚ್ಚವು 1,000 ಕೋಟಿ ರು ಆಗಿದ್ದು ಇದರಲ್ಲಿ 100 ಕೋಟಿ ರು ಗೆ ಬೇಡಿಕೆ ಇಡಲಾಗಿದೆ. ಆರೋಗ್ಯ ಸಚಿವ ಹಾಗೂ ಡಾ ನಾರಾಯಣ್ ಹಾಗೂ ಸಮಿತಿಯ ಸದಸ್ಯರು ಹಂಚಿಕೊಳ್ಳಲು ಒಪ್ಪಂದವಾಗಿದೆ. ಈ ಹಿನ್ನೆಲೆಯಲ್ಲಿ ಎಡುಸ್ಪಾರ್ಕ್‌ ಇಂಡಿಯಾ ಪ್ರೈವೈಟ್‌ ಲಿಮಿಟೆಡ್ ಸಂಸ್ಥೆಯ ಮಹಿಳಾ ಪ್ರತಿನಿಧಿಯಿಂದ ಲಂಚದ ಮೊತ್ತವನ್ನು ಡಾ ನಾರಾಯಣ್ ಅವರ ಸ್ವೀಕರಿಸುತ್ತಿರುವ ಭಾವಚಿತ್ರಗಳನ್ನು ಲಗತ್ತಿಸಿ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿತ್ತು. ಅಲ್ಲದೆ ಈ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ದೂರಿನಲ್ಲಿ ಕೋರಿತ್ತು.

 

ಲೋಕಾಯುಕ್ತ ದೂರಿನೊಂದಿಗೆ ಲಗತ್ತಿಸಿರುವ ಫೋಟೋ

 

ಈ ದೂರಿನ ಕುರಿತು ದಿ ಫೈಲ್ ವರದಿ ಪ್ರಕಟಿಸುತ್ತಿದ್ದಂತೆ ಡಾ ನಾರಾಯಣ್ ಅವರನ್ನು ಇಎಂಆರ್‍‌ಐ ಉಪ ನಿರ್ದೇಶಕ ಹುದ್ದೆಯಿಂದ ಬಿಡುಗಡೆಗೊಳಿಸಿತ್ತು. ಆ ಸ್ಥಾನಕ್ಕೆ  ಡಾ ಪ್ರಭುದೇವ್ ಬಿ ಗೌಡ ಅವರನ್ನು ನೇಮಿಸಿತ್ತು.

 

 

ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದ್ದೇನು?

ಈ ಸಂಬಂಧ  ಸುವರ್ಣ ಆರೋಗ್ಯ ಟ್ರಸ್ಟ್‌ನ ಕಾರ್ಯಕಾರಿಣಿ ನಿರ್ದೇಶಕರು ಸರ್ಕಾರಕ್ಕೆ 3 ತಿಂಗಳೊಳಗೆ  ವಾಸ್ತವಾಂಶದ ವರದಿಯನ್ನು  ಸಲ್ಲಿಸಲು ಸೂಚಿಸಿತ್ತು. ಈ ಪ್ರಕರಣದ ಕುರಿತು ಇಲಾಖೆಯು ಪ್ರಾಥಮಿಕ ತನಿಖೆ ನಡೆಸಿತ್ತು. ಆದರೆ ಹೆಚ್ಚಿನ ತನಿಖೆ ನಡೆಸಿರಲಿಲ್ಲ. ಇಂತಹ ವಿಷಯಗಳಲ್ಲಿ ಪರಿಣಿತಿ ಹೊಂದಿರುವ ಸಂಸ್ಥೆಯಿಂದ ತನಿಖೆ ನಡೆಸುವುದು ಸೂಕ್ತ ಎಂದು ಅಭಿಪ್ರಾಯಿಸಿತ್ತು. ಅಲ್ಲದೇ ಮುಂದಿನ ಹಂತದಲ್ಲಿ ಸರ್ಕಾರವೇ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆಯು ಸರ್ಕಾರದ ಪ್ರಧಾನ ಕಾರ್ಯದರ್ಶಿ ನುಣುಚಿಕೊಂಡಿದ್ದರು.

ಟೆಂಡರ್ ಗೆ ಅನುಮೋದನೆಯೇ ಇರಲಿಲ್ಲ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಈ ಪ್ರಕರಣದ ಕುರಿತು 2023ರ ಜೂನ್ 5ರಂದು ಸಭೆ ನಡೆಸಿದ್ದರು. ವಿಶೇಷವೆಂದರೇ 2023ರ ಜನವರಿ 9ರಂದು ಕರೆದಿದ್ದ ಟೆಂಡರ್ ಗೆ ಟೆಂಡರ್ ಅಂಗೀಕಾರದ ಪ್ರಾಧಿಕಾರದ ಸಭೆಯಲ್ಲಿ ಅನುಮೋದನೆಯನ್ನೇ ಪಡೆದಿರಲಿಲ್ಲ ಎಂಬುದನ್ನು ಕಾಂಗ್ರೆಸ್‌ ಅವಧಿಯಲ್ಲಿ ನಡೆದಿದ್ದ ಸಭೆಯು ಪತ್ತೆ ಹಚ್ಚಿತ್ತು.

 

 

‘ಹಿಂದಿನ ಉಪ ನಿರ್ದೇಶಕರು ಟೆಂಡರ್ ಅರ್ಹತಾ ಮಾನದಂಡಗಳಲ್ಲಿ ಮಾಡಲಾಗಿರುವ ಬದಲಾವಣೆಗೆ ಸಂಬಂಧಪಟ್ಟ ಅಂಗೀಕಾರ ಪ್ರಾಧಿಕಾರದ ಕುರಿತಾಗಿ ಯಾವುದೇ ಅನುಮೋದನೆಯನ್ನು ಪಡೆಯದೇ ಇರುವ ಬಗ್ಗೆ ಮಾಹಿತಿ ಇರುವುದರಿಂದ ಹಾಗೂ ಈ ಟೆಂಡರ್ ಆರ್‍‌ಎಫ್‌ಪಿ ದಸ್ತಾವೇಜಿನಲ್ಲಿ ಅರ್ಹತಾ ಮಾನದಂಡ, ಮೌಲ್ಯಮಾಪನ ಮಾನದಂಡ, ತಾಂತ್ರಿಕ ವೈಶಿಷ್ಟ್ಯತೆ ಹಾಗೂ ಟೆಂಡರ್ ಪ್ರಕ್ರಿಯೆಯನ್ನು ನಡೆಸಲು ರಚಿಸಲಾದ ಸಮಿತಿಗಳ ಮೇಲೆ ದೂರುಗಳು ದಾಖಲಾಗಿವೆ. ಹೀಗಾಗಿ ಟೆಂಡರ್ ರದ್ದುಗೊಳಿಸಲು ಸಮಿತಿ ಸಮ್ಮತಿಸಿದೆ. ಹೀಗಾಗಿ ಟೆಂಡರ್‍‌ನ್ನು ರದ್ದುಗೊಳಿಸಿದೆ ಎಂದು ಹೇಳಿತ್ತು.

 

 

ಅಲ್ಲದೆ ಹಿಂದಿನ ಉಪ ನಿರ್ದೇಶಕ ಡಾ ಆರ್ ನಾರಾಯಣ್‌ ಅವರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಲೋಕಾಯುಕ್ತ ರಿಜಿಸ್ಟ್ರಾರ್‍‌ಗೆ ಮಾಹಿತಿ ಒದಗಿಸಿದ್ದರು.

ರಮೇಶ್‌ ಬಾಬು ಸಲ್ಲಿಸಿದ್ದ ದೂರಿನಲ್ಲೇನಿತ್ತು?

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಶಾಖೆಯ ಉಪನಿರ್ದೇಶಕ ಡಾ. ಆರ್.ನಾರಾಯಣ್ ಎಂಬುವವರು ಈ ಹಗರಣದಲ್ಲಿ ಮಧ್ಯವರ್ತಿಗಳಾಗಿದ್ದಾರೆ. ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿರುವುದಿಲ್ಲ. ಚುನಾವಣಾ ಸಮಯದಲ್ಲಿ ತರಾತುರಿಯಲ್ಲಿ ನಿಯಮಗಳ ಉಲ್ಲಂಘನೆ ಮಾಡಿ ಟೆಂಡರ್ ಹಂಚಿಕೆ ಮಾಡಿರುವ ಕ್ರಮದ ಹಿಂದೆ ಭ್ರಷ್ಟಾಚಾರದ ವಾಸನೆ ಬಡಿದಿದೆ ಎಂದು ರಮೇಶ್‌ ಬಾಬು ಅವರು ದೂರಿದ್ದರು.

ಡಾ ಆರ್‍‌ ನಾರಾಯಣ್‌ ಎಂಬುವರು ಮಧ್ಯವರ್ತಿಗಳಗಾಗಿ ಹಣ ಪಡೆದಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌, ಈ ಸಂಬಂಧ ಡಾ ನಾರಾಯಣ್‌ ಅವರು ಹಣ ಪಡೆದಿದ್ದಾರೆ ಎಂಬುವುದಕ್ಕೆ ಸಾಕ್ಷ್ಯವಾಗಿ ಕೆಲ ಫೋಟೋಗಳನ್ನೂ ಲೋಕಾಯುಕ್ತಕ್ಕೆ ಸಲ್ಲಿಸಿರುವ ದೂರಿನೊಂದಿಗೇ ಸಲ್ಲಿಸಿದ್ದರು.

 

ಈ ದೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಕೆ ಸುಧಾಕರ್‍‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಟಿ ಕೆ ಅನಿಲ್‌ಕುಮಾರ್‍‌, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ ನವೀನ್‌ ಭಟ್‌, ಇಲಾಖೆಯ ಆಯುಕ್ತ ಡಿ ರಂದೀಪ್‌ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ಉಪ ನಿರ್ದೇಶಕ (ಇಎಂಆರ್‍ಐ)ನ ಡಾ ನಾರಾಯಣ್‌ ಅವರನ್ನು ಪ್ರತಿವಾದಿಯನ್ನಾಗಿಸಿದ್ದರು.

‘ಬಹಳ ಪ್ರಮುಖವಾಗಿ ಈ ಹಗರಣಕ್ಕೆ ಸಂಬಂಧಪಟ್ಟಂತೆ ಮಧ್ಯವರ್ತಿಯಾಗಿ ಸಚಿವರ ಪರವಾಗಿ ಅವರ ಮನೆಯಲ್ಲೇ ಹಣ ಪಡೆದಿರುವ ಅನುಮಾನಗಳಿರುತ್ತವೆ. ಕರ್ನಾಟಕ ರಾಜ್ಯ ಸರ್ಕಾರದ ಪೊಲೀಸ್ ಇಲಾಖೆಯ ಬೆಂಗಳೂರಿನ ಕ್ರೈಂ ಬ್ರಾಂಚ್ ನವರಿಗೂ ಈ ಹಗರಣ ಸಂಬಂಧ ಮಾಹಿತಿ ಇರುವುದಾಗಿ ತಿಳಿದುಬಂದಿರುತ್ತದೆ. ಆದರೆ ಇಲ್ಲಿಯವರೆಗೆ ಪ್ರಕರಣದ ಆರೋಪಿತರ ಮೇಲೆ ಯಾವುದೇ ಕ್ರಮ ಜರುಗಿರುವುದಿಲ್ಲ,’ ಎಂದು ರಮೇಶ್‌ಬಾಬು ಅವರು ದೂರಿನಲ್ಲಿ ಆಪಾದಿಸಿದ್ದರು.

ಹಾಗೆಯೇ “ಈ ಟೆಂಡರ್ ಹಗರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು ಮತ್ತು ಸಚಿವರು ಭಾಗಿಯಾಗಿರುವ ಆರೋಪದ ಸಂಬಂಧ ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಾವಳಿಗಳನ್ನು ಮೀರಿ ಟೆಂಡರ್ ಹಂಚಿಕೆಯಾಗಿರುವ ಸಂಬಂಧ  ಲೋಕಾಯುಕ್ತರು ಸಾರ್ವಜನಿಕ ಹಿತದೃಷ್ಟಿಯಿಂದ ತನಿಖೆಯನ್ನು ಮಾಡಬೇಕಾಗಿರುತ್ತದೆ,’ ಎಂದೂ ದೂರಿನಲ್ಲಿ ಒತ್ತಾಯಿಸಿದ್ದರು.

ಕರ್ನಾಟಕದಲ್ಲಿ 10 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಟೆಂಡರ್ ಅಂಗೀಕಾರ ಆಗಬೇಕಾದಲ್ಲಿ ಅದು ಸಂಪುಟ ಸಭೆಯ ಮೂಲಕ ಅನುಮೋದನೆ ಆಗಬೇಕು. ಇದರ ಜೊತೆಗೆ ಕರ್ನಾಟಕ ಪಾರದರ್ಶಕ ಕಾಯಿದೆ ಅನ್ವಯ ಬಿಡ್ ದಾರರ ಟೆಂಡರ್ ಗಳು ತಾಂತ್ರಿಕ ಮತ್ತು ಆರ್ಥಿಕ ಅನುಮೋದನೆಯನ್ನು ಪಡೆಯಬೇಕಾಗುತ್ತದೆ. ರಾಜ್ಯ ಸರ್ಕಾರದ ಹೊಸ ನೀತಿಗೆ ಅನುಗುಣವಾಗಿ ಟೆಂಡರ್ ಅನುಮೋದನೆ ಸಮಿತಿಯಿಂದಲೂ ಅನುಮೋದನೆ ಪಡೆಯಬೇಕಾಗುತ್ತದೆ.

ಆದರೆ ಈ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೋರಿ ಚುನಾವಣಾ ಪೂರ್ವದಲ್ಲಿ ಟೆಂಡರ್ ಅನುಮೋದನೆ ಮಾಡಿರುವುದು ಹಲವಾರು ಅನುಮಾನಗಳಿಗೆ ಅವಕಾಶ ನೀಡುತ್ತದೆ. ಸದರಿ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿದ್ದು, ಮಾನ್ಯ ಮುಖ್ಯಮಂತ್ರಿಗಳು, ಆರೋಗ್ಯ ಇಲಾಖೆಯ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳು ಶಾಮೀಲಾಗಿರುವ ಸಾಧ್ಯತೆಗಳಿರುತ್ತವೆ ಎಂದು ವಿವರಿಸಿದ್ದರು.

ಸಾರ್ವಜನಿಕ ಹಣದ ಸಂರಕ್ಷಣೆಯನ್ನು ರಾಜ್ಯ ಸರ್ಕಾರವೇ ಮಾಡಬೇಕಾಗಿದ್ದು, ಈ ಹಗರಣದಲ್ಲಿ ಆಡಳಿತ ಪಕ್ಷ ಅಕ್ರಮ ರೀತಿಯಲ್ಲಿ ಆತುರ ಆತುರವಾಗಿ ಟೆಂಡರ್ ಗೆ ಅನುಮೋದನೆ ನೀಡುವ ಮೂಲಕ ಭ್ರಷ್ಟಾಚಾರದ ಆರೋಪಗಳಿಗೆ ಅವಕಾಶವನ್ನು ನೀಡಿದಂತಾಗಿದೆ ಎಂದು ದೂರಿನಲ್ಲಿ ಹೇಳಿದ್ದರು.

ರಾಜ್ಯದ ಹಿತದೃಷ್ಟಿಯಿಂದ ಮತ್ತು ಅಗತ್ಯ ಸೇವೆಯಾದ ಆರೋಗ್ಯ ಇಲಾಖೆಯ ಆಂಬುಲೆನ್ಸ್ ಸೇವೆಯನ್ನು ಯಾವುದೇ ಹಗರಣಗಳಿಗೆ ಆಸ್ಪದ ನೀಡದಂತೆ ಜನರಿಗೆ ನೀಡುವ ಕಾರಣಕ್ಕಾಗಿ ಮಾನ್ಯ ಲೋಕಾಯುಕ್ತರು ಪಾರದರ್ಶಕ ತನಿಖೆ ನಡೆಸಿ ಈ ಹಗರಣದಲ್ಲಿ ನಡೆದಿರುವ ಅಕ್ರಮಗಳನ್ನು ಬಯಲಿಗೆಳೆಯಬೇಕು ಎಂದು ದೂರಿನಲ್ಲಿ ರಮೇಶ್‌ ಬಾಬು ಅವರು ಒತ್ತಾಯಿಸಿದ್ದರು.

ಕರ್ನಾಟಕ ವಿಧಾನಸಭೆಗೆ ಮತದಾನಕ್ಕೆ ಇನ್ನು ಐದೇ ಐದು ದಿನಗಳು ಬಾಕಿ ಇರುವಾಗಲೇ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ಖಾಸಗಿ ಕಂಪನಿಯೊಂದರಿಂದ ದೊಡ್ಡಮಟ್ಟದ ಲಂಚದ ವ್ಯವಹಾರ ನಡೆದಿದೆ ಎಂಬ ಆಪಾದನೆಗೂ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಪ್ರಭಾವಿ ಸಚಿವರೊಬ್ಬರು ಗುರಿಯಾಗಿದ್ದಾರೆ. ಈ ಸಂಬಂಧ ಖಾಸಗಿ ಸಂಸ್ಥೆಯೊಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಲಿಖಿತ ದೂರು ಸಲ್ಲಿಸಿತ್ತು ಎಂದು ಗೊತ್ತಾಗಿದೆ. ಈ ಕುರಿತು ‘ದಿ ಫೈಲ್‌’ 2023ರ ಮೇ 6ರಂದೇ ವರದಿ ಪ್ರಕಟಿಸಿತ್ತು.

 

ಆಂಬ್ಯುಲೆನ್ಸ್; ಶೈಕ್ಷಣಿಕ ಹಿನ್ನೆಲೆ ಕಂಪನಿಗೆ 1,260 ಕೋಟಿ ಮೊತ್ತದ ಟೆಂಡರ್‌,100 ಕೋಟಿ ಲಂಚದ ಆರೋಪ

 

ಅಲ್ಲದೇ ಸಚಿವರೊಬ್ಬರಿಗೆ 100 ಕೋಟಿ ರು., ಇಲಾಖೆಯ ಉನ್ನತ ಅಧಿಕಾರಿಗಳಿಗೆ 10 ಕೋಟಿ, ಉಪ ನಿರ್ದೇಶಕರೊಬ್ಬರಿಗೆ 10 ಕೋಟಿ ಮತ್ತು ಸಮಿತಿಯ ಸದಸ್ಯರುಗಳಿಗೂ 1 ಕೋಟಿ ಲಂಚ ನೀಡಲಾಗಿದೆ. ಲಂಚದ ಹಣವನ್ನು ಪಡೆಯುವಾಗ ಉಪ ನಿರ್ದೇಶಕರೊಬ್ಬರು ಸಿಕ್ಕಿಬಿದ್ದಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆಯಲ್ಲದೆ ಹಣವನ್ನು ಪಡೆದು ಬ್ಯಾಗ್‌ನಲ್ಲಿ ಇರಿಸುತ್ತಿರುವ ಫೋಟೋಗಳನ್ನೂ ಲಗತ್ತಿಸಲಾಗಿತ್ತು ಎಂದು ವರದಿಯಲ್ಲಿ ವಿವರಿಸಿದ್ದನ್ನು ಸ್ಮರಿಸಬಹುದು.

Hot this week

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

Topics

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

Related Articles

Popular Categories

error: Content is protected !!