Thursday | June 25, 2026 |

ಗೃಹಲಕ್ಷ್ಮಿ; ಒಂದೇ ತಿಂಗಳಲ್ಲಿ ಒಂದು ಫಲಾನುಭವಿಗೆ ಒಂದಕ್ಕಿಂತ ಹೆಚ್ಚು ಖಾತೆಗೆ ಹಣ ಜಮೆಯಾಗಿಲ್ಲ, ಬ್ಯಾಂಕ್‌ನ ತಾಂತ್ರಿಕ ದೋಷವೇ ಕಾರಣ, ಸಿಎಜಿ ಆಕ್ಷೇಪಣೆ ತಳ್ಳಿ ಹಾಕಿದ ಸರ್ಕಾರ

ಬೆಂಗಳೂರು; ಗೃಹಲಕ್ಷ್ಮಿ ಯೋಜನೆಯಡಿ ಧನಸಹಾಯ ಪಾವತಿ ಪ್ರಕ್ರಿಯೆಯು ಎಬಿಪಿಎಸ್‌ ಆಗಿರುವುದರಿಂದ ಫಲಾನುಭವಿಗಳಿಗೆ ಒಂದು ತಿಂಗಳಿಗೆ ಒಂದಕ್ಕಿಂತ ಹೆಚ್ಚು ಸಲ ಧನಸಹಾಯ ಪಾವತಿಯಾಗಿಲ್ಲ. ಅದೇ ರೀತಿ ಒಂದೇ ತಿಂಗಳಲ್ಲಿ ಒಂದು ಫಲಾನುಭವಿಗೆ ಒಂದಕ್ಕಿಂತ ಹೆಚ್ಚು ಖಾತೆಗೆ ಹಣ ಜಮೆಯಾಗಿರುವುದಿಲ್ಲ ಎಂದು ಸಮಜಾಯಿಷಿ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಇದರಲ್ಲಿ ಯಾವುದೇ ಲೋಪಗಳು ನಡೆದಿಲ್ಲ ಎಂದು ಪ್ರತಿಪಾದಿಸಿದೆ.

ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಹಣ ಪಾವತಿಯಲ್ಲಿನ ಲೋಪಗಳಿಗೆ ಸಂಬಂಧಿಸಿದಂತೆ ಸಿಎಜಿಯ ಪತ್ರ ಆಧರಿಸಿ 225 ಕೋಟಿ ಅಕ್ರಮವಾಗಿದೆ ಎಂದು ಹಲವು ಮಾಧ್ಯಮಗಳು ವರದಿಗಳನ್ನು ಪ್ರಕಟಿಸಿದ್ದವು. ಮಾಧ್ಯಮಗಳಲ್ಲಿ ಈ ಕುರಿತಾದ ವರದಿಗಳು ಪ್ರಕಟಗೊಳ್ಳುತ್ತಿದ್ದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಸಿಎಜಿ ಪತ್ರ ಆಧರಿಸಿ ವಿವಿಧ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಳ್ಳುತ್ತಿದ್ದಂತೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಚರ್ಚಿಸಿದ್ದರು. ಈ ಚರ್ಚೆಯ ನಂತರ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಹೇಳಿಕೆಯಲ್ಲೇನಿದೆ?

ಎಬಿಪಿಎಸ್‌ (ಆಧಾರ್ ಆಧಾರಿತ ಪಾವತಿ ವ್ಯವಸ್ಥೆ) ವ್ಯವಸ್ಥೆಯಲ್ಲಿ ಅಧಾರ್ ಸಂಖ್ಯೆಯನ್ನು ಹಣಕಾಸಿನ ವಿಳಾಸವಾಗಿ ಬಳಸಲಾಗುತ್ತದೆ. ಪಾವತಿ ಕಡತದಲ್ಲಿರುವ ಆಧಾರ್ ಸಂಖ್ಯೆಯನ್ನು ಎನ್‌ಪಿಸಿಐ ಮ್ಯಾಪರ್‍‌ನಲ್ಲಿ ಪರಿಶೀಲಿಸಿದ ನಂತರ ಸಂಬಂಧಿತ ಬ್ಯಾಂಕ್‌ಗೆ ಕಳುಹಿಸಬಹುದು. ಈ ಕುರಿತು ಪರಿಶೀಲನೆ ನಡೆಸಿದಾಗ ನಂತರದ ತಿಂಗಳುಗಳಲ್ಲಿ ಬ್ಯಾಂಕ್‌ ಖಾತೆ ವಿವರಗಳೊಂದಿಗೆ ಪ್ರತಿಕ್ರಿಯೆ ಕಡತವನ್ನು ಬ್ಯಾಂಕ್ ಒದಗಿಸಿರುವುದು ಕಂಡು ಬಂದಿದೆ.

ಹೀಗಾಗಿ ಗೃಹಲಕ್ಷ್ಮಿ ಯೋಜನೆಯಡಿ ಧನಸಹಾಯ ಪಾವತಿ ಪ್ರಕ್ರಿಯೆಯು ಎಬಿಪಿಎಸ್‌ ಆಗಿರುವುದರಿಂದ ಫಲಾನುಭವಿಗಳಿಗೆ ಒಂದು ತಿಂಗಳಿಗೆ ಒಂದಕ್ಕಿಂತ ಹೆಚ್ಚು ಸಲ ಧನ ಸಹಾಯ ಪಾವತಿಯಾಗಿಲ್ಲ. ಅದೇ ರೀತಿ ಒಂದೇ ತಿಂಗಳಲ್ಲಿ ಒಂದು ಫಲಾನುಭವಿಗೆ ಒಂದಕ್ಕಿಂತ ಹೆಚ್ಚು ಖಾತೆಗೆ ಹಣ ಜಮೆಯಾಗಿರುವುದಿಲ್ಲ ಎಂದು ಪ್ರತಿಪಾದಿಸಿದೆ.

 

 

ಕೆಲವೊಮ್ಮೆ ಫಲಾನುಭವಿಗಳ ಬ್ಯಾಂಕ್‌ನ ತಾಂತ್ರಿಕ ಸಮಸ್ಯೆಯಿಂದ ಖಾತೆ ವಿವರಗಳಿಲ್ಲದ ಪ್ರತಿಕ್ರಿಯೆ ಲಭ್ಯವಾಗಿರುವುದರಿಂದ ಬ್ಯಾಂಕ್‌ ಖಾತೆ ತೋರಿಸುತ್ತಿರುವುದಿಲ್ಲ. ಆದರೆ ಈ ಖಾತೆಗಳಿಗೆ ಧನ ಸಹಾಯ ಜಮೆಯಾಗಿರುತ್ತದೆ. ಇದನ್ನು ಪರಿಶೀಲನೆ ನಡೆಸಿದಾಗ ನಂತರ ತಿಂಗಳುಗಳಲ್ಲಿ ಪ್ರತಿಕ್ರಿಯೆ ಕಡತವನ್ನು ಕಡತವನ್ನು ಬ್ಯಾಂಕ್‌ ಒದಗಿಸಿರುವುದು ಕಂಡುಬಂದಿದೆ ಎಂದು ಇಲಾಖೆಯು ವಿವರಿಸಿದೆ.

‘ಯೋಜನೆಯು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿದ್ದು ಅನರ್ಹರನ್ನು ಹೊರತುಪಡಿಸಿ ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಧನಸಹಾಯ ಪಾವತಿಯಾಗುತ್ತಿದೆ,’ ಎಂದು ಸಮರ್ಥಿಸಿಕೊಂಡಿದೆ.

ಬಹು ಫಲಾನುಭವಿಗಳು ಒಂದೇ ಬ್ಯಾಂಕ್‌ ಖಾತೆ ಸಂಖ್ಯೆಯನ್ನು ಹೊಂದಿದ್ದಾರೆ ಎಂದು ಸಿಎಜಿಯು ಆಕ್ಷೇಪ ವ್ಯಕ್ತಪಡಿಸಿತ್ತು. ಇಲಾಖೆಯು ಈ ಅಂಶವನ್ನು ಒಪ್ಪಿಲ್ಲ.

ಎಬಿಪಿಎಸ್‌ (ಆಧಾರ್ ಆಧಾರಿತ ಪಾವತಿ ವ್ಯವಸ್ಥೆ) ವ್ಯವಸ್ಥೆಯಲ್ಲಿ ಅಧಾರ್ ಸಂಖ್ಯೆಯನ್ನು ಹಣಕಾಸಿನ ವಿಳಾಸವಾಗಿ ಬಳಸಲಾಗುತ್ತದೆ. ಪಾವತಿ ಕಡತದಲ್ಲಿರುವ ಆಧಾರ್ ಸಂಖ್ಯೆಯನ್ನು ಎನ್‌ಪಿಸಿಐ ಮ್ಯಾಪರ್‍‌ನಲ್ಲಿ ಪರಿಶೀಲಿಸಿದ ನಂತರ ಸಂಬಂಧಿತ ಬ್ಯಾಂಕ್‌ಗೆ ಕಳಿಸಲಾಗುತ್ತದೆ. ಸಂಬಂಧಿತ ಬ್ಯಾಂಕ್‌ ತನ್ನ ಸಿಬಿಎಸ್‌ (ಕೋರ್‍‌ ಬ್ಯಾಂಕಿಂಗ್ ಸಿಸ್ಟಂ) ವ್ಯವಸ್ಥೆಯಲ್ಲಿ ಆಧಾರ್ ಜೋಡಣೆಯನ್ನು ಪರಿಶೀಲಿಸಿ ಫಲಾನುಭವಿಯ ಖಾತೆಗೆ ಹಣವನ್ನು ಜಮಾ ಮಾಡಿ ಪ್ರತಿಕ್ರಿಯೆ ಕಡತದ ಭಾಗವಾಗಿ ಬ್ಯಾಂಕ್‌ ಖಾತೆಗಳ ವಿವರಗಳನ್ನು ಹಂಚಿಕೊಳ್ಳುತ್ತದೆ ಎಂದು ವಿವರಿಸಿದೆ.

 

ಒಂದೇ ಬ್ಯಾಂಕ್‌ ಖಾತೆಯಡಿ ಸಂಖ್ಯೆಯಡಿ ಬಹು ಫಲಾನುಭವಿಗಳು ಕಂಡು ಬರುವುದಕ್ಕೆ ಎರಡು ಕಾರಣಗಳನ್ನು ನೀಡಿರುವ ಇಲಾಖೆಯು ಜಂಟಿ ಬ್ಯಾಂಕ್‌ ಖಾತೆಯಿದ್ದಲ್ಲಿ ಒಂದೇ ಬ್ಯಾಂಕ್ ಖಾತೆಗೆ ಒಂದಕ್ಕಿಂತ ಹೆಚ್ಚು ಫಲಾನುಭವಿಗಳ ಸರ್ಕಾರಿ ಸೌಲಭ್ಯ ಜಮೆಯಾಗಿರಬಹುದು ಎಂದು ಹೇಳಿದೆ.

ಅದೇ ರೀತಿ ಫಲಾನುಭವಿಯು ಖಾತೆ ಹೊಂದಿರುವ ಬ್ಯಾಂಕ್‌ನ ತಾಂತ್ರಿಕ ದೋಷದಿಂದ ತಪ್ಪಾದ ಬ್ಯಾಂಕ್‌ ಖಾತೆ ವಿವರಗಳು ಪ್ರತಿಕ್ರಿಯಾ ಕಡತದಲ್ಲಿ ಹಂಚಿಕೆಯಾಗಿರಬಹುದು ಎಂದು ಹೇಳಿಕೆಯಲ್ಲಿ ವಿವರಿಸಿದೆ.

‘ಈ ಎರಡೂ ಕಾರಣಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲಾ ಹಾಗೂ ತಾಲೂಕುಮಟ್ಟದಲ್ಲಿ ಇಂತಹ ಪ್ರಕರಣಗಳ ಕುರಿತು ಅಧಿಕಾರಿಗಳ ಮೂಲಕ ಭೌತಿಕವಾಗಿ ಕ್ಷೇತ್ರ ಭೇಟಿ ನಡೆಸಿ, ಪರಿಶೀಲನೆ ನಡೆಸಲಾಗಿದೆ. ಜಂಟಿ ಖಾತೆ ಇರುವಂತಹ ಫಲಾನುಭವಿಗಳ (ಅತ್ತೆ-ಸೊಸೆ, ತಾಯಿ-ಮಗಳು) ಬ್ಯಾಂಕ್‌ ಖಾತೆಗೆ ಅನುದಾನ ಪಾವತಿಯಾಗಿರುವುದು ಕಂಡು ಬಂದಿರುತ್ತದೆ,’ ಎಂದು ಸ್ಪಷ್ಟೀಕರಣ ನೀಡಿದೆ.

ಈ ಫಲಾನಭವಿಗಳು ಬೇರೆ ಬೇರೆ ಪಡಿತರ ಚೀಟಿ ಹೊಂದಿದ್ದು ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿರುವುದರಿಂದ ಎರಡೂ ಫಲಾನುಭವಿಗಳ ಧನಸಹಾಯ ಮೊತ್ತವು ಒಂದೇ ಖಾತೆಗೆ ಪಾವತಿಯಾಗಿರುತ್ತದೆ. ಬ್ಯಾಂಕ್‌ ಖಾತೆಗೆ ಆಧಾರ್ ಜೋಡಣೆ ಮಾಡಿಸುವ ಜವಾಬ್ದಾರಿಯು ಸಂಪೂರ್ಣವಾಗಿ ಫಲಾನುಭವಿಯದ್ದಾಗಿದೆ. ಫಲಾನುಭವಿಯು ಸರ್ಕಾರಿ ಸೌಲಭ್ಯ ಪಡೆಯಲು ತಾನು ಬಯಸುವ ಯಾವುದೇ ಬ್ಯಾಂಕ್‌ ಖಾತೆಯನ್ನು ಆಯ್ಕೆ ಮಾಡಬಹುದು. ಅಗತ್ಯವಿದ್ದಲ್ಲಿ ಲಿಖಿತ ಒಪ್ಪಿಗೆ ಮೂಲಕ ಆಧಾರ್ ಜೋಡಣೆಯನ್ನು ಮತ್ತೊಂದು ಬ್ಯಾಂಕ್ ಖಾತೆಗೆ ಬದಲಾಯಿಸಬಹುದು.

 

 

ಎನ್‌ಪಿಸಿಐ ಮ್ಯಾಪರ್‍‌ನಲ್ಲಿ ಈ ಬದಲಾವಣೆ ನವೀಕರಿಸಿದ ನಂತರ ಸರ್ಕಾರಿ ಸೌಲಭ್ಯ ಹೊಸದಾಗಿ ಜೋಡಿಸಲಾದ ಬ್ಯಾಂಕ್‌ ಖಾತೆಗೆ ಜಮೆಯಾಗುತ್ತದೆ. ಬ್ಯಾಂಕ್‌ ಈ ಆಧಾರ್ ಜೋಡಣೆ ಪ್ರಕ್ರಿಯೆಯನ್ನು ಅನುಸರಿಸಿ ಈ ಬದಲಾವಣೆ ಮಾಡುತ್ತದೆ. ಈ ಸಂದರ್ಭದಲ್ಲಿ ಸರ್ಕಾರ ಅಥವಾ ಇಲಾಖೆಯ ಯಾವುದೇ ಪಾತ್ರ ಇರುವುದಿಲ್ಲ. ಒಂದೇ ಫಲಾನುಭವಿಯ ವಿವಿಧ ಖಾತೆಗಳಿಗೆ ಬೇರೆ ಬೇರೆ ತಿಂಗಳ ಧನಸಹಾಯ ಪಾವತಿ ಅವಕಾಶವಿದೆ. ಆದರೆ ಒಂದೇ ತಿಂಗಳಲ್ಲಿ ಒಂದು ಫಲಾನುಭವಿಗೆ ಒಂದಕ್ಕಿಂತ ಹೆಚ್ಚು ಖಾತೆಗೆ ಹಣ ಜಮೆಯಾಗಿರುವುದಿಲ್ಲ ಎಂದು ವಿವರಿಸಿದೆ.

ಬ್ಯಾಂಕ್‌ ಖಾತೆ ವಿವರಗಳಿಲ್ಲದ ಫಲಾನುಭವಿಗಳಿಗೆ ಪಾವತಿ

ಎಬಿಪಿಎಸ್‌ (ಆಧಾರ್ ಆಧಾರಿತ ಪಾವತಿ ವ್ಯವಸ್ಥೆ) ವ್ಯವಸ್ಥೆಯಲ್ಲಿ ಅಧಾರ್ ಸಂಖ್ಯೆಯನ್ನು ಹಣಕಾಸಿನ ವಿಳಾಸವಾಗಿ ಬಳಸಲಾಗುತ್ತದೆ. ಪಾವತಿ ಕಡತದಲ್ಲಿರುವ ಆಧಾರ್ ಸಂಖ್ಯೆಯನ್ನು ಎನ್‌ಪಿಸಿಐ ಮ್ಯಾಪರ್‍‌ನಲ್ಲಿ ಪರಿಶೀಲಿಸಿದ ನಂತರ ಸಂಬಂಧಿತ ಬ್ಯಾಂಕ್‌ಗೆ ಕಳುಹಿಸಬಹುದು. ಈ ಕುರಿತು ಪರಿಶೀಲನೆ ನಡೆಸಿದಾಗ ನಂತರದ ತಿಂಗಳುಗಳಲ್ಲಿ ಬ್ಯಾಂಕ್‌ ಖಾತೆ ವಿವರಗಳೊಂದಿಗೆ ಪ್ರತಿಕ್ರಿಯೆ ಕಡತವನ್ನು ಬ್ಯಾಂಕ್ ಒದಗಿಸಿರುವುದು ಕಂಡು ಬಂದಿದೆ.

ಹೀಗಾಗಿ ಗೃಹಲಕ್ಷ್ಮಿ ಯೋಜನೆಯಡಿ ಧನಸಹಾಯ ಪಾವತಿ ಪ್ರಕ್ರಿಯೆಯು ಎಬಿಪಿಎಸ್‌ ಆಗಿರುವುದರಿಂದ ಫಲಾನುಭವಿಗಳಿಗೆ ಒಂದು ತಿಂಗಳಿಗೆ ಒಂದಕ್ಕಿಂತ ಹೆಚ್ಚು ಸಲ ಧನಸಹಾಯ ಪಾವತಿಯಾಗಿಲ್ಲ. ಅದೇ ರೀತಿ ಒಂದೇ ತಿಂಗಳಲ್ಲಿ ಒಂದು ಫಲಾನುಭವಿಗೆ ಒಂದಕ್ಕಿಂತ ಹೆಚ್ಚು ಖಾತೆಗೆ ಹಣ ಜಮೆಯಾಗಿರುವುದಿಲ್ಲ.

 

 

ಕೆಲವೊಮ್ಮೆ ಫಲಾನುಭವಿಗಳ ಬ್ಯಾಂಕ್‌ನ ತಾಂತ್ರಿಕ ಸಮಸ್ಯೆಯಿಂದ ಖಾತೆ ವಿವರಗಳಿಲ್ಲದ ಪ್ರತಿಕ್ರಿಯೆ ಲಭ್ಯವಾಗಿರುವುದರಿಂದ ಬ್ಯಾಂಕ್‌ ಖಾತೆ ತೋರಿಸುತ್ತಿರುವುದಿಲ್ಲ ಆದರೆ ಸದರಿ ಖಾತೆಗಳಿಗೆ ಧನ ಸಹಾಯ ಜಮೆಯಾಗಿರುತ್ತದೆ. ಪರಿಶೀಲನೆ ನಡೆಸಿದಾಗ ನಂತರ ತಿಂಗಳುಗಳಲ್ಲಿ ಪ್ರತಿಕ್ರಿಯೆ ಕಡತವನ್ನು ಕಡತವನ್ನು ಬ್ಯಾಂಕ್‌ ಒದಗಿಸಿರುವುದು ಕಂಡುಬಂದಿದೆ.. ಯೋಜನೆಯು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿದ್ದು ಅನರ್ಹರನ್ನು ಹೊರತುಪಡಿಸಿ ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಧನಸಹಾಯ ಪಾವತಿಯಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದೆ.

Hot this week

ಮೆಟ್ರೋ ರೈಲು 3ನೇ ಹಂತಕ್ಕೆ 7.02 ಎಕರೆ ಭೂಮಿ; 203.76 ಕೋಟಿ ರುಪಾಯಿ ಭೂ ಪರಿಹಾರ ಕೇಳಿದ ರಕ್ಷಣಾ ಇಲಾಖೆ, ಸರ್ಕಾರದ ನಿಲುವೇನು?

ಬೆಂಗಳೂರು: ಮೆಟ್ರೋ ರೈಲು ಯೋಜನೆಯ ಮೂರನೇ ಹಂತದ ಅನುಷ್ಠಾನಕ್ಕಾಗಿ ಅಗತ್ಯವಿರುವ 7.02...

39, 437.37 ಕೋಟಿ ರು ಮೊತ್ತದ ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆ ಪರಿಶೀಲನೆ; ನಿಗದಿತ ಅವಧಿಯೊಳಗೆ ವರದಿ ಸಲ್ಲಿಸುವಲ್ಲಿ ಅಂಜುಂ ಪರ್ವೇಜ್ ಸಮಿತಿ ವಿಫಲ, 15 ದಿನಗಳ ಕಾಲಾವಕಾಶ ವಿಸ್ತರಣೆ

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳನ್ನು...
Please Scan to make Your Contribution

Topics

ಮೆಟ್ರೋ ರೈಲು 3ನೇ ಹಂತಕ್ಕೆ 7.02 ಎಕರೆ ಭೂಮಿ; 203.76 ಕೋಟಿ ರುಪಾಯಿ ಭೂ ಪರಿಹಾರ ಕೇಳಿದ ರಕ್ಷಣಾ ಇಲಾಖೆ, ಸರ್ಕಾರದ ನಿಲುವೇನು?

ಬೆಂಗಳೂರು: ಮೆಟ್ರೋ ರೈಲು ಯೋಜನೆಯ ಮೂರನೇ ಹಂತದ ಅನುಷ್ಠಾನಕ್ಕಾಗಿ ಅಗತ್ಯವಿರುವ 7.02...

39, 437.37 ಕೋಟಿ ರು ಮೊತ್ತದ ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆ ಪರಿಶೀಲನೆ; ನಿಗದಿತ ಅವಧಿಯೊಳಗೆ ವರದಿ ಸಲ್ಲಿಸುವಲ್ಲಿ ಅಂಜುಂ ಪರ್ವೇಜ್ ಸಮಿತಿ ವಿಫಲ, 15 ದಿನಗಳ ಕಾಲಾವಕಾಶ ವಿಸ್ತರಣೆ

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳನ್ನು...

ಸುರಂಗ ಮಾರ್ಗ; ಸಂಚಾರ ದಟ್ಟಣೆ ಕಡಿಮೆಯಾದರೂ 40 ವರ್ಷಕ್ಕೆ ಗುತ್ತಿಗೆ ವಿಸ್ತರಣೆಗೆ ಪ್ರಸ್ತಾವ, ಅದಾನಿ ಎಂಟರ್ ಪ್ರೈಸೆಸ್‌ಗೆ ಡಿ ಕೆ ಸರ್ಕಾರದಿಂದ 10 ವರ್ಷ ಅವಧಿಯ ಗಿಫ್ಟ್‌!

ಬೆಂಗಳೂರು; ಗ್ರೇಟರ್‌ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಹೆಬ್ಬಾಳ (ಎಸ್ಟಿಮ್‌ಮಾಲ್) ಜಂಕ್ಷನ್‌ನಿಂದ ಹೆಚ್‌.ಎಸ್‌.ಆರ್‌ ಲೇಔಟ್‌...

ದಲಿತರ ಜಮೀನು ಭೂ ಪರಿವರ್ತನೆ; ಜಿಲ್ಲಾಧಿಕಾರಿಯಿಂದ ವಾಸ್ತವಾಂಶ ವರದಿ, ಪ್ರಕರಣವನ್ನೇ ಮುಚ್ಚಿ ಹಾಕಿತೇ?

ಬೆಂಗಳೂರು;  ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಸಾದಲಿ ಹೋಬಳಿಯ ಪುರ ಬೈರನಹಳ್ಳಿ...

ಜಿಬಿಎ 5 ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣ; 992.00 ಕೋಟಿ ರು ವೆಚ್ಚ , 749 ಕಿಮೀ ಉದ್ದದಲ್ಲಿ 88 ಕಿ ಮೀ ಮಾತ್ರ ಪೂರ್ಣ

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 5 ನಗರಪಾಲಿಕೆಗಳು ಮುಖ್ಯಮಂತ್ರಿಗಳ ಮೂಲ...

Related Articles

Popular Categories

error: Content is protected !!