Monday | August 24, 2026 |

10 ಕಂಪನಿಗಳಲ್ಲಿ ಕುಟುಂಬ ಸದಸ್ಯರು ನಿರ್ದೇಶಕರು, 2 ಕಂಪನಿಗಳಿಂದ 400 ಕೋಟಿ ವಹಿವಾಟು ಆರೋಪ ಪ್ರಕರಣ; ಎಡಿಜಿಪಿ ಚಂದ್ರಶೇಖರ್ ವಿರುದ್ಧ ತನಿಖೆಗೆ ನಿರ್ದೇಶನ

ಬೆಂಗಳೂರು;  ಎರಡು ಕಂಪನಿಗಳಿಂದ ಒಂದು ವರ್ಷದ ಅವಧಿಯಲ್ಲಿ 400 ಕೋಟಿ ರು ಮೊತ್ತದ ವಹಿವಾಟು ಮತ್ತು  ಒಟ್ಟು 10 ಕಂಪನಿಗಳಿಗೆ ತಮ್ಮ ಕುಟುಂಬ ಸದಸ್ಯರನ್ನು ನಿರ್ದೇಶಕರನ್ನಾಗಿರಿಸಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ  ಹಿರಿಯ ಐಪಿಎಸ್‌ ಅಧಿಕಾರಿ ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧ ವಿಚಾರಣೆ, ತನಿಖೆ ನಡೆಸಲು ಮುಂದಾಗದ ಡಿಜಿ ಮತ್ತು ಐಜಿಪಿ ಅವರು ಈ ತೀರ್ಮಾನವನ್ನು  ಸರ್ಕಾರದ ಮಟ್ಟದಲ್ಲಿಯೇ ಕೈಗೊಳ್ಳಬೇಕು ಮತ್ತು ಸರ್ಕಾರವೇ ಆದೇಶಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವುದು ಇದೀಗ ಬಹಿರಂಗವಾಗಿದೆ.

ಈ ಪತ್ರವನ್ನಾಧರಿಸಿ ರಾಜ್ಯ ಸರ್ಕಾರವು  ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧ ತನಿಖೆ ನಡೆಸಲು ಒಳಾಡಳಿತ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ. ಈ ಸಂಬಂಧ  3 ತಿಂಗಳೊಳಗೆ ವರದಿ ಸಲ್ಲಿಸಬೇಕು ಎಂದು  ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಒಳಾಡಳಿತ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ. ಈ ಸಂಬಂಧ 2026ರ ಆಗಸ್ಟ್‌ 21ರಂದು ಪತ್ರ ಬರೆದಿದೆ.

ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಮತ್ತು ಐಜಿಪಿ ಚಂದ್ರಶೇಖರ್‍‌ ಮಧ್ಯೆ ರಾಜಿ ಸಂಧಾನ ಮಾತುಕತೆಯು ವಿಫಲವಾಗಿದೆ. ಈ ನಡುವೆಯೇ ಚಂದ್ರಶೇಖರ್‍‌ ಅವರ ಪ್ರಕರಣದಲ್ಲಿ ತನಿಖೆ ನಡೆಸಿ 3 ತಿಂಗಳ ಒಳಗೆ ವರದಿ ಸಲ್ಲಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ  ನಿರ್ದೇಶನವು ಮುನ್ನೆಲೆಗೆ ಬಂದಿದೆ.

ಡಿಜಿಐಜಿಪಿ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಬರೆದಿರುವ ಎರಡೂ ಪತ್ರಗಳು ದಿ ಫೈಲ್‌ ಗೆ ಲಭ್ಯವಾಗಿವೆ.

ಡಿಜಿಐಜಿಪಿ ಅವರು 2026ರ ಆಗಸ್ಟ್‌ 17ರಂದು ಪತ್ರ ಬರೆದಿದ್ದಾರೆ. ‘ಹಿರಿಯ ಅಧಿಕಾರಿಯ ಮೇಲೆ ಆರೋಪಗಳನ್ನು ಮಾಡಿರುವುದರಿಂದ ಈ ಬಗ್ಗೆ ವಿಚಾರಣೆ, ತನಿಖೆ ನಡೆಸಲು ಸರ್ಕಾರದ ಮಟ್ಟದಲ್ಲಿಯೇ ಆದೇಶಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವುದು ಸೂಕ್ತ,’ ಎಂಬ ಅಭಿಪ್ರಾಯವನ್ನು ಡೈರೆಕ್ಟರ್‍‌ ಜನರಲ್‌ ಮತ್ತು ಇನ್ಸ್‌ಪೆಕ್ಟರ್‍‌ ಜನರಲ್ ಆಫ್‌ ಪೊಲೀಸ್‌ನ ಯಡಾ ಮಾರ್ಟಿನ್ ಮಾರ್ಬನ್ಯಾಂಗ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

 

 

ಈ ಪತ್ರವನ್ನಾಧರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ‘ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಎಂ ಚಂದ್ರಶೇಖರ್ ಅವರ ವಿರುದ್ಧ  ಸಲ್ಲಿಸಿರುವ ಆರೋಪಗಳ ಕುರಿತು ಒಳಾಡಳಿತ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಂದ ತನಿಖೆ ನಡೆಸಿ ಸರ್ಕಾರಕ್ಕೆ ವರದಿಯನ್ನು 3 ತಿಂಗಳ ಒಳಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಕಳಿಸಿಕೊಡಬೇಕು,’ ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅನಧಿಕೃತ ಟಿಪ್ಪಣಿಯಲ್ಲಿ  ನಿರ್ದೇಶಿಸಿರುವುದು ಗೊತ್ತಾಗಿದೆ.

 

 

 

ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ ಸದಸ್ಯರ ಹೆಸರನ್ನು  ಒಟ್ಟು 10 ಕಂಪನಿಗಳಿಗೆ ನಿರ್ದೇಶಕರನ್ನಾಗಿ ಮಾಡಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಚಂದ್ರಶೇಖರ್ ಅವರು ಎರಡು ಕಂಪನಿಗಳಿಂದ ಒಂದು ವರ್ಷದ ಅವಧಿಯಲ್ಲಿ 400 ಕೋಟಿ ರು ಮೊತ್ತದ ವಹಿವಾಟು ಮಾಡಿದ್ದಾರೆ ಎಂಬ ಮತ್ತೊಂದು  ಆಪಾದನೆ ಕೇಳಿ ಬಂದಿತ್ತು. ಈ    ಕುರಿತು ಜರೂರಾಗಿ ವರದಿ ನೀಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಡಿಜಿಪಿಯವರಿಗೆ ಸೂಚಿಸಿತ್ತು.

ಜಾತ್ಯತೀತ ಜನತಾದಳದ ಶಾಸಕರು ಐಪಿಎಸ್‌ ಚಂದ್ರಶೇಖರ್ ಅವರ ವಿರುದ್ದ ದಾಖಲೆ ಸಹಿತ ಮುಖ್ಯಕಾರ್ಯದರ್ಶಿ ಮತ್ತು ಮುಖ್ಯಮಂತ್ರಿಗೆ ಲಿಖಿತ ದೂರು ಸಲ್ಲಿಸಿದ್ದರು. ಈ ದೂರನ್ನಾಧರಿಸಿ ವರದಿ ನೀಡಬೇಕು ಎಂದು ಡಿಪಿಎಆರ್‍‌ ಸೂಚಿಸಿದ್ದರೂ ಸಹ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಯಾವುದೇ ವರದಿ ನೀಡಿರಲಿಲ್ಲ.

ಹೀಗಾಗಿ ಜಾತ್ಯತೀತ ಜನತಾದಳದ ಶಾಸಕ ಹಾಗೂ ಶಾಸಕಾಂಗ ಸಭೆ ನಾಯಕ ಸಿ ಬಿ ಸುರೇಶ್‌ ಬಾಬು ಮತ್ತು ಸಿ ಎನ್ ಬಾಲಕೃಷ್ಣ ಅವರು ವಿಧಾನಸಭೆ ಅಧಿವೇಶನದಲ್ಲಿ ನಿಯಮ 351ರ ಮೇರೆಗೆ ಸೂಚನೆ ನೀಡಿದ್ದರು. ಈ ಎರಡೂ ಸೂಚನೆಗಳಿಗೆ ಉತ್ತರಿಸಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ವರದಿ ನೀಡಬೇಕು ಎಂದು ಡಿಜಿಐಜಿಪಿ ಅವರಿಗೆ ಸೂಚಿಸಿರುವ ಮಾಹಿತಿಯನ್ನು ಸದನಕ್ಕೆ ಲಿಖಿತವಾಗಿ ಒದಗಿಸಿದ್ದರು.

 

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

 

 

 

ಸರ್ಕಾರದ ಉತ್ತರದಲ್ಲೇನಿತ್ತು?

2026ರ ಜೂನ್‌ 6ರ ನಂತರದಲ್ಲಿ ಹಿರಿಯ ಐಪಿಎಸ್‌ ಅಧಿಕಾರಿಯ ವಿರುದ್ಧ ಸದರಿ ಅಧಿಕಾರಿಯವರ ಪತ್ನಿಯವರ ಹೆಸರಿನಲ್ಲಿ ಖಾಸಗಿ ಸಂಸ್ಥೆಯನ್ನು ರಚಿಸುವ ಮೂಲಕ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದಿಂದ ಕಾಮಗಾರಿ ವಹಿಸಿಕೊಂಡಿರುತ್ತಾರೆ. ಹಾಗೂ ರಾಜ್ಯ ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸ್ಕಿಲ್ ಮ್ಯಾನೇಜ್‌ಮೆಂಟ್‌ ತಂತ್ರಾಂಶವನ್ನು ಅಳವಡಿಸುವ ಕಾಮಗಾರಿಗೆ ಸಂಬಂಧಿಸಿದಂತೆ ಟೆಂಡರ್‍‌ನಲ್ಲಿ ಅಧಿಕಾರಿಯವರ ಪತ್ನಿಯವರು ಭಾಗಿಯಾಗಿ ಇ ಪ್ರೊಕ್ಯೂರ್‍‌ಮೆಂಟ್‌ ಮೂಲಕ ಟೆಂಡರ್ ಪಡೆದು ಅಖಿಲಭಾರತ ಸೇವೆಗಳ ನಿಯಮಗಳನ್ನು ಉಲ್ಲಂಘನೆ ಮಾಡಿರುತ್ತಾರೆ.

 

 

ಅಲ್ಲದೇ ಅಧಿಕಾರಿಯವರ ಪತ್ನಿ ಹಾಗೂ ಕುಟುಂಬ ಸದಸ್ಯರ ಹೆಸರಿನಲ್ಲಿ 7 ಸಂಸ್ಥೆಗಳನ್ನು ನೋಂದಣಿ ಮಾಡಿ ಸದರಿ ಕಂಪನಿಗಳಲ್ಲಿ ಕುಟುಂಬ ಸದಸ್ಯರನ್ನೇ ನಿರ್ದೇಶಕರನ್ನಾಗಿ ನೇಮಿಸಿ ಈ ಕಂಪನಿಗಳ ಮೇಲೆ ಬಂಡವಾಳ ಹೂಡಿಕೆ ಮಾಡಿ ಬಂಡವಾಳ ಹಣಕಾಸಿನ ಮೂಲದ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ವರದಿಯನ್ನು ಮಾಡದೇ ಹಾಗೂ ಕೇಂದ್ರ ಸರ್ಕಾರದ ಸ್ಥಿರ ಆಸ್ತಿ ರಿಟರ್ನ್‌ (ಐಪಿಆರ್) ನಲ್ಲಿ ವರದಿ ಸಲ್ಲಿಸದೇ ಅಖಿಲ ಭಾರತ ಸೇವೆಯಲ್ಲಿರುವ ಐಪಿಎಸ್‌ ಅಧಿಕಾರಿಯು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಆದೇಶಗಳು, ಅಧಿಸೂಚನೆಗಳು ಸಿಸಿಎಸ್‌ ನಡವಳಿಕೆ ನಿಯಮ ಪಾಲನೆ ಮಾಡದೇ ಕರ್ತವ್ಯ ಲೋಪ ಎಸಗಿರುತ್ತಾರೆ ಮತ್ತು ನಿಯಮಗಳಿಗೆ ವಿರುದ್ಧವಾಗಿ ಹೆಸರು ಬದಲಾವಣೆ ಮಾಡಿಕೊಂಡಿರುತ್ತಾರೆ ಎಂಬ ಆರೋಪಗಳ ಕುರಿತು ದೂರುಗಳು ವಿಧಾನ ಪರಿಷತ್ ಮತ್ತು ವಿಧಾನಸಭೆ ಶಾಸಕರು, ಮಾಜಿ ಶಾಸಕರುಗಳಿಂದ ಸರ್ಕಾರದಲ್ಲಿ ಸ್ವೀಕೃತಗೊಂಡಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದರು.

ಅಧಿಕಾರಿಯವರ ಮಗ, ಮಗಳು ಹಾಗೂ ಪತ್ನಿ ಇವರುಗಳು ಹಲವಾರು ಕಂಪನಿಗಳಲ್ಲಿ ನಿರ್ದೇಶಕರಾಗಿರುವ ಮಾಹಿತಿಯನ್ನು ಚಂದ್ರಶೇಖರ್ ಅವರು 2026ರ ಜೂನ್‌ 29 ಮತ್ತು 2926ರ4 ಜುಲೈ 3ರಂದು ಪತ್ರಗಳ ಮೂಲಕ ಸರ್ಕಾರಕ್ಕೆ ಮಾಹಿತಿ ಸಲ್ಲಿಸಿದ್ದರು.

400 ಕೋಟಿ ವಹಿವಾಟು

ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ ಸದಸ್ಯರ ಹೆಸರಿನಲ್ಲಿ ಒಟ್ಟು 10 ಕಂಪನಿಗಳಿಗೆ ನಿರ್ದೇಶಕರನ್ನಾಗಿ ಮಾಡಿ ಹಾಗೂ ಹಲವು ಕಂಪನಿಗಳಿಗೆ ಎಲ್‌ಎಲ್‌ಪಿ ಮಾಡಿ ಆರ್ಥಿಕ ತೆರಿಗೆ ವಂಚನೆ ಮಾಡುವ ದುರುದ್ದೇಶದಿಂದ ಸದರಿ ಕಂಪನಿಗಳ ಮೇಲೆ ಅಧಿಕ ಮೊತ್ತದ ಬಂಡವಾಳ ಹೂಡಿಕೆ ಮಾಡಿರುವ ಬಗ್ಗೆ ಹಾಗೂ ಅಂತಹ ಎರಡು ಕಂಪನಿಗಳಿಂದ ಒಂದು ವರ್ಷದ ಅವಧಿಯಲ್ಲಿ 400 ಕೋಟಿ ಮೊತ್ತದ ವಹಿವಾಟು ಮಾಡಿರುವ ಆರೋಪದ ಬಗ್ಗೆ ಸತ್ಯಾಸತ್ಯತೆಯನ್ನು ತಿಳಿಯಲು ಕೂಡಲೇ ಕೇಂದ್ರದ ಜಾರಿ ನಿರ್ದೇಶನಾಲಯ ಅಥವಾ ಸಿಬಿಐ ಸಂಸ್ಥೆಯಿಂದ ತನಿಖೆ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಕೋರಿಕೆ ಸಲ್ಲಿಸಿತ್ತು.

 

 

ಈ ಕೋರಿಕೆಗೆ ಸಂಬಂಧಿಸಿದಂತೆ ತನಿಖೆ ಡೆಸಿ ಸರ್ಕಾರಕ್ಕೆ ಜರೂರಾಗಿ ಒಂದು ವರದಿ ಸಲ್ಲಿಸಬೇಕು ಎಂದು ಡಿಜಿಪಿಯವರಿಗೆ 2026 ಆಗಸ್ಟ್‌ 10ರಂದು ಪತ್ರ ಬರೆದಿದೆ. ವರದಿ ನಿರೀಕ್ಷಿಸಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ವಿಧಾನಸಭೆಗೆ ತಿಳಿಸಿದ್ದರು.

 

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

 

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೂ ಐಪಿಎಸ್‌ ಚಂದ್ರಶೇಖರ್ ಅವರಿಗೆ ಸಂಬಂಧಿಸಿದಂತೆ ನಿಯಮ 351ರ ಅಡಿಯಲ್ಲಿ ಸೂಚನೆ ನೀಡಿತ್ತು. ಈ ಕುರಿತು ದಿ ಫೈಲ್ ವರದಿ ಪ್ರಕಟಿಸಿತ್ತು.

 

ಪತ್ನಿ ಹೆಸರಿನಲ್ಲಿ ಕಿಯೋನಿಕ್ಸ್‌ನಿಂದ ಗುತ್ತಿಗೆ, ಅಧಿಕಾರ ದುರುಪಯೋಗ ಆರೋಪ; ಸೂಕ್ತ ವಿವರಣೆ ನೀಡಲು ಐಪಿಎಸ್‌ ಚಂದ್ರಶೇಖರ್‍‌ಗೆ ಮುಖ್ಯ ಕಾರ್ಯದರ್ಶಿ ನಿರ್ದೇಶನ

 

ಅದೇ ರೀತಿ ಪತ್ನಿ ಹೆಸರಿನಲ್ಲಿ ಕಿಯೋನಿಕ್ಸ್‌ನಿಂದ ಗುತ್ತಿಗೆ ಪಡೆಯಲು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವಿಧಾನಪರಿಷತ್‌ನ ಸದಸ್ಯ ಬೋಜೇಗೌಡ ಮತ್ತಿತರರು ಮುಖ್ಯ ಕಾರ್ಯದರ್ಶಿಗೆ ಲಿಖಿತ ದೂರು ಸಲ್ಲಿಸಿದ್ದರು. ಈ ಕುರಿತು ದಿ ಫೈಲ್‌ ವರದಿ ಪ್ರಕಟಿಸಿತ್ತು.

Hot this week

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...
Please Scan to make Your Contribution

Topics

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

Related Articles

Popular Categories

error: Content is protected !!