Saturday | October 17, 2026 |

ಐಪಿಎಸ್ ರವೀಂದ್ರ ಕಾಶಿನಾಥ್ ಗಡಾದಿ ವಿರುದ್ಧ ಆರೋಪ; 4 ತಿಂಗಳಾದರೂ ಸಲ್ಲಿಕೆಯಾಗದ ಚಾರ್ಜ್‌ಶೀಟ್‌, ಇಲಾಖೆ ವಿಚಾರಣೆ ವಿಳಂಬ

ಬೆಂಗಳೂರು; ಕರ್ತವ್ಯಲೋಪ ಮತ್ತು ನಿಯಮ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಐಪಿಎಸ್ ಅಧಿಕಾರಿ ರವೀಂದ್ರ ಕಾಶೀನಾಥ್ ಗಡಾದಿ ಅವರ ವಿರುದ್ಧ ಇಲಾಖೆ ವಿಚಾರಣೆ ನಡೆಸಲು ದೋಷಾರೋಪಣೆ ಪಟ್ಟಿ ಸಲ್ಲಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಸೂಚಿಸಿದೆ.

ರವೀಂದ್ರ ಕಾಶೀನಾಥ್ ಗಡಾದಿ ಅವರ ವಿರುದ್ಧ ಅಖಿಲ ಭಾರತ ಸೇವಾ ನಿಯಮಗಳು 1969ರ ನಿಯಮ 8(4) ರಂತೆ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕು ಎಂದು 5 ತಿಂಗಳ ಹಿಂದೆಯೇ ಸೂಚಿಸಿತ್ತು. ಆದರೆ ಪೊಲೀಸ್ ಪಡೆಗಳ ಮುಖ್ಯಸ್ಥರಾದ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರು ದೋಷಾರೋಪಣೆ ಪಟ್ಟಿ ಸಲ್ಲಿಸಿಲ್ಲ.  ಹೀಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2ನೇ ಬಾರಿಗೆ ನೆನಪೋಲೆಯನ್ನು ಕಳಿಸಿದ್ದಾರೆ.

2026ರ ಆಗಸ್ಟ್ 29ರಂದು ಮಹಾನಿರ್ದೇಶಕರಿಗೆ ಕಳಿಸಿರುವ 2ನೇ ನೆನಪೋಲೆಯು ದಿ ಫೈಲ್‌ ಗೆ ಲಭ್ಯವಾಗಿದೆ.

ನೆನಪೋಲೆಯಲ್ಲೇನಿದೆ?

ಐಪಿಎಸ್‌ ಅಧಿಕಾರಿ ರವೀಂದ್ರ ಕಾಶಿನಾಥ್ ಗಡಾದಿ ಅವರ ವಿರುದ್ಧ ಉತ್ತರ ವಲಯ ಐಜಿಪಿ ವರದಿ ಸಲ್ಲಿಸಿದ್ದರು. ಈ ವರದಿ ಆಧಾರದ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ ಅಧಿಕಾರಿಯವರಿಂದ ಉಂಟಾಗಿರುವ ಕರ್ತವ್ಯ ಲೋಪ ಮತ್ತು ಉಲ್ಲಂಘನೆಯಾಗಿರುವ ನಿಯಮ, ಕಾಯ್ದೆಯನ್ನು ಸ್ಪಷ್ಟವಾಗಿ ನಮೂದಿಸಿದ್ದರು. ಅಲ್ಲದೇ ಇವರ ವಿರುದ್ಧ ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಸೂಕ್ತ ಶಿಫಾರಸ್ಸು ಮಾಡಿದ್ದರು.

ಅಲ್ಲದೇ ಇಲಾಖೆ ವಿಚಾರಣೆ ಆರಂಭಿಸಲು ಅನುವಾಗುವಂತೆ ವಿರುದ್ಧ ಅಖಿಲ ಭಾರತ ಸೇವಾ ನಿಯಮಗಳು 1969ರ ನಿಯಮ 8(4) ರಂತೆ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕು ಎಂದು 2026ರ ಏಪ್ರಿಲ್‌ 21ರಂದು ಕೋರಿತ್ತು.

‘ಆದರೆ ಕೋರಲಾದ ಮಾಹಿತಿಯು ಇದುವರೆಗೂ ಸರ್ಕಾರದಲ್ಲಿ ಸ್ವೀಕೃತಗೊಂಡಿಲ್ಲ. ಆದ್ದರಿಂದ ರವೀಂದ್ರ ಕಾಶೀನಾಥ್ ಗಡಾದಿ ಅವರ ವಿರುದ್ಧ ಇಲಾಖೆ ವಿಚಾರಣೆ ಆರಂಭಿಸಲು ದೋಷಾರೋಪಣೆ ಪಟ್ಟಿ (ಅನುಬಂಧ-1ರಿಂದ 4) ಸಿದ್ಧಪಡಿಸಿ ಕೂಡಲೇ ಒದಗಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ನಿರ್ದೇಶಿಸಿರುವುದು,’ ತಿಳಿದು ಬಂದಿದೆ.

ಸಿದ್ದರಾಮಯ್ಯ ಮತ್ತು  ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನದಿಂದ  ಅಧಿಕಾರ ದುರುಪಯೋಗ,  ಜೀವ ಬೆದರಿಕೆ,  ನಿಯಮ ಉಲ್ಲಂಘನೆ,  ಸುಲಿಗೆ, ಸರ್ಕಾರಿ ವಾಹನ ದುರ್ಬಳಕೆ,  ಅಪ್ರಾಪ್ತ ವಯಸ್ಸಿನ ಬಾಲಕಿ ಮದುವೆ ಮಾಡಿಸಿರುವುದು, ಅಧಿಕಾರಿಗಳ ಮೂಲಕ ಭ್ರಷ್ಟಾಚಾರ ಮಾಡಿಸಿರುವುದು, ನಕಲಿ ಸಹಿ, ಒಳಸಂಚು,  ಅಕ್ರಮ ಸಂಪಾದನೆ,  ನಿರಂತರ ಗೈರು ಹಾಜರಿ, ಅಕ್ರಮ ಡೇಟಾ ವರ್ಗಾವಣೆ ಸೇರಿದಂತೆ ಇನ್ನಿತರೆ ಗಂಭೀರ ಮತ್ತು ಗುರುತರವಾದ ಆರೋಪಳಿಗೆ 30ಕ್ಕೂ ಹೆಚ್ಚು ಹಿರಿಯ ಐಪಿಎಸ್‌ ಅಧಿಕಾರಿಗಳು ಗುರಿಯಾಗಿದ್ದಾರೆ.

2023ರ ಮೇ 20ರಿಂದ ಇಲ್ಲಿಯವರೆಗೆ ವಿವಿಧ ಪ್ರಕರಣಗಳ ಕುರಿತು  ದೂರುಗಳು ಸರ್ಕಾರಕ್ಕೆ ಸಲ್ಲಿಕೆಯಾಗಿವೆ ಎಂದು ಸ್ವತಃ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಈಚೆಗಷ್ಟೇ ಸದನಕ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದರು.

ಈ ಕುರಿತು ವಿಧಾನಸಭೆ ಸದಸ್ಯ ಹೆಚ್‌ ಟಿ ಮಂಜು ಅವರು ಕೇಳಿದ್ದ  ಚುಕ್ಕೆ ರಹಿತ ಪ್ರಶ್ನೆಗೆ ಉತ್ತರಿಸಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು 2023ರ ಮೇ 20ರಿಂದ ಇದುವರೆಗೆ ಐಪಿಎಸ್‌ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗಿರುವ ಭ್ರಷ್ಟಾಚಾರ, ಅಕ್ರಮ ಸೇರಿದಂತೆ ಇನ್ನಿತರೆ ವಿಷಯಗಳಲ್ಲಿ ಸಲ್ಲಿಕೆಯಾಗಿರುವ ದೂರರ್ಜಿಗಳು, ದಾಖಲಾಗಿರುವ ಪ್ರಕರಣಗಳು, ಅಧಿಕಾರಿಗಳ ವಿವರ, ಬಾಕಿ ಇರುವ ಪ್ರಕರಣಗಳ ವಿವರ, ಈ ಸಂಬಂಧ ಎಷ್ಟು ಸಂಖ್ಯೆಯ ಕಡತಗಳನ್ನು ತೆರೆಯಲಾಗಿದೆ, ಎಷ್ಟು ಕಡತಗಳನ್ನು ವಿಲೇವಾರಿ ಮಾಡಲಾಗಿದೆ, ಎಷ್ಟು ಕಡತಗಳನ್ನು ಮುಕ್ತಾಯಗೊಳಿಸಲಾಗಿದೆ ಎಂದು ವಿವರ ಕೋರಿದ್ದರು.

ಅಧಿಕಾರ ದುರುಪಯೋಗ, ಜೀವ ಬೆದರಿಕೆ, ನಿಯಮ ಉಲ್ಲಂಘನೆ, ಸುಲಿಗೆ, ಒಳಸಂಚು, ಅಕ್ರಮ ಸಂಪಾದನೆ, ಅಕ್ರಮ ಡೇಟಾ ವರ್ಗಾವಣೆ; 30 ಐಪಿಎಸ್‌ ಅಧಿಕಾರಿಗಳ ವಿರುದ್ಧದ ದೂರರ್ಜಿಗಳ ಪಟ್ಟಿ ಬಿಡುಗಡೆ

ಐಪಿಎಸ್ ಅಧಿಕಾರಿಗಳ  ವಿರುದ್ಧದ ಪ್ರಕರಣವೊಂದರಲ್ಲಿ ಡಿಜಿಐಜಿಪಿ ಅವರು ಸರ್ಕಾರಕ್ಕೆ ಇನ್ನೂ ವರದಿ ಸಲ್ಲಿಸಿಲ್ಲ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸದನಕ್ಕೆ  ಬಿಡುಗಡೆ ಮಾಡಿದ್ದ ಪಟ್ಟಿಯಲ್ಲಿ ರವೀಂದ್ರ ಕಾಶೀನಾಥ್ ಗಡಾದಿ ಅವರ ಹೆಸರೂ ಸಹ ಇತ್ತು.   ಈ ಕುರಿತು ದಿ ಫೈಲ್‌ ವರದಿ ಪ್ರಕಟಿಸಿತ್ತು.

Hot this week

ಅಪೆಕ್ಸ್ ಬ್ಯಾಂಕ್‌ನಲ್ಲಿ 1,000 ಕೋಟಿ ಹಗರಣ; ಹೈಕೋರ್ಟ್‌ನಲ್ಲಿ ಪಿಐಎಲ್‌, ಸರ್ಕಾರಕ್ಕೆ ಎದುರಾಗಲಿದೆಯೇ ಸಂಕಷ್ಟ?

ಬೆಂಗಳೂರು; ಕೃಷಿಗೆ ಸಂಬಂಧಿಸದ ಉದ್ದೇಶಗಳಿಗಾಗಿ ಸಾಲ ಮಂಜೂರಾತಿ,  ಈಗಾಗಲೇ ಅನುತ್ಪಾದಕ ಆಸ್ತಿಗಳೆಂದು (Non-Performing...

ರೈಲ್ವೇ- ವಿಮಾನ ಭತ್ಯೆ; 15ನೇ ವಿಧಾನಸಭೆಯ ಶಾಸಕರಿಗೆ 16.32 ಕೋಟಿ ಮರು ಪಾವತಿ

ಬೆಂಗಳೂರು; ಹದಿನೈದನೇ ವಿಧಾಸಭೆ ಅವಧಿಯಲ್ಲಿ ರಾಜ್ಯದ 224 ಶಾಸಕರು  16.32 ಕೋಟಿಯಷ್ಟು...

ಆರ್ಥಿಕ ಸ್ಥಿತಿ ಬಹಿರಂಗಪಡಿಸಿ ಕೋಲಾಹಲ ಎಬ್ಬಿಸಿದ್ದ ಅನಧಿಕೃತ ಟಿಪ್ಪಣಿಯ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರವು ₹2 ಲಕ್ಷ ಕೋಟಿಗೂ ಹೆಚ್ಚಿನ ಕಾಮಗಾರಿಗಳ ಬಾಕಿ...

ಸ್ಟಿಂಗ್ ಆಪರೇಷನ್‌; ಅಸಲು ದಾವೆ ಬೆನ್ನಲ್ಲೇ ಪೊಲೀಸ್‌ ಆಯುಕ್ತರಿಗೂ ದೂರು ಸಲ್ಲಿಸಿ ಯಾವ ಭಯವೂ ನನಗಿಲ್ಲವೆಂದ ಸಿದ್ದರಾಮಯ್ಯ

ಬೆಂಗಳೂರು; ಯೂ ಟ್ಯೂಬ್‌ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು...

21 ಪ್ಯಾಕೇಜ್‌ ಟೆಂಡರ್; ಶೇ. 5 ಪ್ರೀಮಿಯಂ ಮೀರಿದ್ದರೂ ಪರಿಶೀಲನೆ ಸಮಿತಿ ರಚಿಸಲು ಆಕ್ಷೇಪ ಎತ್ತಿದ್ದ ಡಿಕೆಶಿ

ಬೆಂಗಳೂರು;  ಜಿಬಿಎ ವ್ಯಾಪ್ತಿಯಲ್ಲಿ  ಉತ್ಪತ್ತಿಯಾಗುವ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ...
Please Scan to make Your Contribution

Topics

ಪ್ರಭಾವಿ ನಾಯಕನ ವಿರುದ್ಧ ಸ್ಟಿಂಗ್ ಕಾರ್ಯಾಚರಣೆ; ನ್ಯಾಯಾಂಗ ತನಿಖೆಗೆ ಹೈಕೋರ್ಟ್‌, ಬಾಲ ನ್ಯಾಯಮಂಡಳಿ ಮೆಟ್ಟಿಲೇರಿದ ನೈಜ ಹೋರಾಟಗಾರರ ವೇದಿಕೆ

ಬೆಂಗಳೂರು; ಯೂ ಟ್ಯೂಬ್‌ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ  ‘ಹನಿಟ್ರ್ಯಾಪ್’ ಪ್ರಕರಣದ...

ಸ್ಟಿಂಗ್ ಆಪರೇಷನ್‌; ಮಾಧ್ಯಮಗಳ ವಿರುದ್ಧ ತಡೆಯಾಜ್ಞೆಗೆ ಸಿದ್ದರಾಮಯ್ಯ ಎಂಬುವರಿಂದ ಅಸಲು ದಾವೆ ದಾಖಲು, ನಾಳೆಯೇ ಅರ್ಜಿ ವಿಚಾರಣೆ

ಬೆಂಗಳೂರು;  ರಾಜ್ಯ ರಾಜಕಾರಣದಲ್ಲಿ ಬಹು ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಬಗ್ಗೆ...

ಅಕ್ರಮ ಖಾತೆ, ಅನರ್ಹರಿಗೆ 79.28 ಕೋಟಿ ರು ಪರಿಹಾರ; ಕೆಎಎಸ್ ಅಧಿಕಾರಿ ವಿರುದ್ಧದ ಮೊದಲ ವಿಚಾರಣೆಯಲ್ಲೇ ಲೋಪ, ಮರು ವಿಚಾರಣೆಗೆ ಆದೇಶ

ಬೆಂಗಳೂರು; ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಇಮ್ಮಾವು ಗ್ರಾಮದಲ್ಲಿ 54 ಎಕರೆಗೆ...

Related Articles

Popular Categories

error: Content is protected !!