Tuesday | September 8, 2026 |

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ; ಧರ್ಮೇಂದ್ರ ಪ್ರಧಾನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಅಪರಾಧಿಕ ಅಂಶಗಳಿಲ್ಲವೆಂದ ಪೊಲೀಸರು, ದೂರರ್ಜಿ ತಿರಸ್ಕೃತ

ಬೆಂಗಳೂರು; ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ವೈದ್ಯಕೀಯ ಆಕಾಂಕ್ಷಿ 21  ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ವಿರುದ್ಧ ನೀಡಿರುವ ದೂರಿನಲ್ಲಿ ಅಪರಾಧಿಕ ಅಂಶಗಳು ಕಂಡು ಬಂದಿರುವುದಿಲ್ಲ ಎಂದು ವಿಧಾನ ಸೌಧ ಪೊಲೀಸ್‌ ಇನ್ಸ್‌ಪೆಕ್ಟರ್‍‌ ಅವರು ದೂರುದಾರರಿಗೆ ಹಿಂಬರಹ ನೀಡಿದ್ದಾರೆ. ಅಲ್ಲದೇ ಅವರ ವಿರುದ್ಧ ನೀಡಿದ್ದ ದೂರನ್ನೂ ತಿರಸ್ಕರಿಸಿದ್ದಾರೆ.

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿಯೇ 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇದಕ್ಕೆ ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಅಧಿಕಾರಿಗಳ ವ್ಯವಸ್ಥಿತ ವೈಫಲ್ಯವೇ ಇದಕ್ಕೆ ನೇರ ಕಾರಣ ಎಂದು ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ನರಸಿಂಹಮೂರ್ತಿ ಅವರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಈ ದೂರನ್ನಾಧರಿಸಿ ಧರ್ಮೇಂದ್ರ ಪ್ರಧಾನ್ ವಿರುದ್ಧ ಎಫ್‌ಐಆರ್‍‌ ದಾಖಲಿಸಬೇಕು ಎಂದು ವಿಧಾನ ಸೌಧ ಪೊಲೀಸ್‌ ಠಾಣೆಯಲ್ಲಿ ದೂರುದಾರರು ಒತ್ತಾಯಿಸಿ ಧರಣಿ ನಡೆಸಿದ್ದರು. ಈ ಸಂಬಂಧ ದೂರನ್ನು ಸ್ವೀಕರಿಸಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‍‌, ಈ ಕುರಿತು ಕಾನೂನು ಸಲಹಾ ಘಟಕದ ಅಭಿಪ್ರಾಯ ಕೋರಿದ್ದರು. ಈ ಅಭಿಪ್ರಾಯದ ಅನ್ವಯ ಧರ್ಮೇಂದ್ರ ಪ್ರಧಾನ್‌ ಅವರ ವಿರುದ್ಧ ನೀಡಿರುವ ದೂರಿನಲ್ಲಿ ಯಾವುದೇ ಅಪರಾಧಿಕ ಅಂಶಗಳು ಕಂಡುಬಂದಿರುವುದಿಲ್ಲ ಎಂದು ಸ್ಪಷ್ಟ ಅಭಿಪ್ರಾಯ ನೀಡಿದ್ದಾರೆ.

ದೂರುದಾರರಿಗೆ ಈ ಹಿಂಬರಹ ನೀಡುವ ಮುನ್ನ ಹಿರಿಯ ಪೊಲೀಸ್‌ ಅಧಿಕಾರಿಗಳು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ದೂರುದಾರರಿಗೆ 2026ರ ಸೆ.2ರಂದು ಹಿಂಬರಹ ನೀಡಿದ್ದಾರೆ. ಇದರ ಪ್ರತಿಯು ದಿ ಫೈಲ್‌ ಗೆ ಲಭ್ಯವಾಗಿದೆ.

ಹಿಂಬರಹದಲ್ಲೇನಿದೆ?

ತಾವು ನೀಡಿದ ದೂರಿನಲ್ಲಿ ನೀಟ್‌ ಪರೀಕ್ಷೆಯ ಲೀಕ್‌ ನಂತರ 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಈ ಹಿಂದೆ ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್‌ ಅವರು ಪ್ರಚೋದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಇವರ ವಿರುದ್ಧ ಕಲಂ 108, 352, 61(2) ಬಿಎನ್‌ಎಸ್‌ ಅನ್ವಯ ಪ್ರಕರಣ ದಾಖಲಿಸಬೇಕು ಎಂದು ದೂರನ್ನು ನೀಡಲಾಗಿದೆ. ಈ ದೂರನ್ನು ಠಾಣೆಯಲ್ಲಿ ನೋಂದಾಯಿಸಲಾಗಿದೆ. ಅಲ್ಲದೇ ಈ ದೂರಿನಲ್ಲಿನ ಕೆಲವು ಅಂಶಗಳ ಬಗ್ಗೆ ಸ್ಪಷ್ಟತೆ ಕಂಡುಕೊಳ್ಳಲು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂಧು 2026ರ ಆಗಸ್ಟ್‌ 27ರಂದು ಸ್ವೀಕೃತಿ ನೀಡಿದೆ.

 

 

‘ನೀವು ನೀಡಿದ ದೂರಿನಲ್ಲಿ ಮೇಲ್ನೋಟಕ್ಕೆ ಅಪರಾಧಿಕ ಅಂಶಗಳು ಕಂಡುಬಂದಿರುವುದಿಲ್ಲ. ಈ ಹಂತದಲ್ಲಿ ತಮ್ಮ ದೂರಿನ ಮೇಲೆ ಪ್ರಕರಣ ದಾಖಲಿಸಲು ಅವಕಾಶವಿಲ್ಲ. ಆದ್ದರಿಂದ ತಮ್ಮ ದೂರನ್ನು ತಿರಸ್ಕರಿಸಿದೆ,’ ಎಂದು ವಿಧಾನ ಸೌಧ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‍‌ ಅವರು 2026ರ ಸೆ.2ರಂದು ಹಿಂಬರಹದಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

21 ಮಂದಿ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಧರ್ಮೇಂದ್ರ ಪ್ರಧಾನ್ ಹಾಗೂ ಸಂಬಂಧಪಟ್ಟ ಇತರ ಅಧಿಕಾರಿಗಳ ವ್ಯವಸ್ಥಿತ ವೈಫಲ್ಯವೇ ನೇರ ಕಾರಣ ಎಂದು ದೂರಿನಲ್ಲಿ ಆರೋಪಿಸಿದ್ದರು. ಭಾರತೀಯ ನ್ಯಾಯ ಸಂಹಿತೆ 2023 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ (ಸೆಕ್ಷನ್ 108), 352, ಮತ್ತು 61(2) ರ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ದೂರುದಾರರು ಒತ್ತಾಯಿಸಿದ್ದರು.

 

 

 

 

 

 

 

 

 

 

 

ವಿಧಾನ ಸೌಧ ಪೊಲೀಸರು ದೂರಿನ ಸ್ವೀಕೃತಿ ನೀಡಿದ್ದರು.

 

 

ಈ ವಿಷಯದಲ್ಲಿ ‘ಝೀರೋ ಎಫ್‌ಐಆರ್’ ದಾಖಲಿಸಿಕೊಂಡು, ಮುಂದಿನ ತನಿಖೆಗಾಗಿ ಅಧಿಕೃತ ತನಿಖಾ ಸಂಸ್ಥೆಗೆ ಹಸ್ತಾಂತರಿಸಬೇಕು ಎಂದು ದೂರುದಾರರು ಪೊಲೀಸರನ್ನು ಆಗ್ರಹಿಸಿದ್ದರು.

ನೀಟ್ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಭಾರಿ ವಿವಾದ ಉಂಟಾಗಿತ್ತು. ನೀಟ್‌-ಯುಜಿ ಪರೀಕ್ಷೆ ವ್ಯವಸ್ಥೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದಗಳ ಹಿನ್ನೆಲೆಯಲ್ಲಿ ವ್ಯಾಪಕ ವಿರೋಧ ಹಾಗೂ ಪ್ರತಿಭಟನೆಗಳು ವ್ಯಕ್ತವಾಗಿದ್ದವು. ಈ ಬೆಳವಣಿಗೆಗಳ ನೈತಿಕ ಹೊಣೆ ಹೊತ್ತು ಜುಲೈ 25, 2026 ರಂದು ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸಿಬಿಐ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ಕೆಲವು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಮುಂದುವರಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಸಿಬಿಐ ತನಿಖೆ: 2026ರ ನೀಟ್-ಯುಜಿ ಪರೀಕ್ಷಾ ವಲಯದಲ್ಲಿ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿ ಬಂದಾಗ, ಕೇಂದ್ರ ಸರ್ಕಾರವು ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿ ಎಫ್‌ಐಆರ್ ದಾಖಲಿಸಿತ್ತು. ಸೋನಮ್ ವಾಂಗ್ಚುಕ್ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ದೆಹಲಿಯಲ್ಲಿ ತೀವ್ರ ಪ್ರತಿಭಟನೆಗಳು ನಡೆದಿದ್ದವು.

 

ನೀಟ್‌, ಜೆಇಇ, ಸಿಇಟಿ ತರಬೇತಿ ಕೇಂದ್ರ ಆಯ್ಕೆ; 10 ಕೋಟಿ ರು. ಮೌಲ್ಯದ ಟೆಂಡರ್‌ನಲ್ಲಿ ಅಕ್ರಮ ಆರೋಪ

 

ಕರ್ನಾಟಕದಲ್ಲಿ ನೀಟ್‌ ಪರೀಕ್ಷೆ ತರಬೇತಿ ನೀಡುವ ಸಂಬಂಧ ಕರೆದಿದ್ದ ಟೆಂಡರ್‍‌ನಲ್ಲೇ ಹಲವು ಲೋಪಗಳಿದ್ದವು.

 

ನೀಟ್‌, ಜೆಇಇ, ಸಿಇಟಿ ತರಬೇತಿ ನೀಡುವ ಸಂಸ್ಥೆ ಆಯ್ಕೆಯಲ್ಲಿ ಅಕ್ರಮ ವಾಸನೆ; ನಿರ್ದಿಷ್ಟ ಸಂಸ್ಥೆಯ ಪಾಲಾದ 12 ಕೋಟಿ?

 

ನೀಟ್‌ ತರಬೇತಿ ನೀಡುವ ಸಂಸ್ಥೆಗಳ ಆಯ್ಕೆಯಲ್ಲಿ ಹಲವು ಅಕ್ರಮಗಳು ನಡೆದಿದ್ದವು. ಈ ಪೈಕಿ ಒಂದೇ ಸಂಸ್ಥೆಗೆ 12 ಕೋಟಿ ರು ಮೊತ್ತದ ಟೆಂಡರ್‍‌ ಪಾಲಾಗಿತ್ತು.

 

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

 

ಈ ಸಂಬಂಧ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಲೀಗಲ್ ನೋಟೀಸ್‌ ಕೂಡ ಜಾರಿಯಾಗಿತ್ತು.

 

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

 

ನೀಟ್‌ ಪರೀಕ್ಷೆ ನಡೆಸುವುದರಿಂದ ರಾಜ್ಯಕ್ಕೆ ವಿನಾಯಿತಿ ನೀಡಬೇಕು ಎಂದು ನಿರ್ಣಯವನ್ನು ರಾಜ್ಯ ಸರ್ಕಾರವು ಸಿದ್ಧಪಡಿಸಿದೆ. ಈ ನಿರ್ಣಯವು ಸದ್ಯ ವಿಧಾನ ಮಂಡಲದಲ್ಲಿ ಮಂಡಿಸಲು ಬಾಕಿ ಇದೆ. ಈ ಕುರಿತು ದಿ ಫೈಲ್‌ ಸರಣಿ ವರದಿಗಳನ್ನು ಪ್ರಕಟಿಸಿತ್ತು.

Hot this week

ಲೀಡ್‌ ಮೆಂಬರ್‍‌ನದ್ದು ಶೂನ್ಯ ವಹಿವಾಟು; ಆದರೂ ಟೆಂಡರ್ ಪ್ಯಾಕೇಜ್‌ನ 7 ಮತ್ತು 9ರಲ್ಲಿ ಎಲ್ 1 ಆಗಿದ್ಹೇಗೆ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆಗೆ ಸಂಬಂಧಿಸಿದಂತೆ...

ಪ್ರಜಾಸೇವೆ ಅಭಿಯಾನ ಚಾಲನೆ ಕಾರ್ಯಕ್ರಮಕ್ಕೆ 2.86 ಕೋಟಿ ವೆಚ್ಚ ; ಬರದಿಂದ ತತ್ತರಿಸಿದ್ದರೂ ದುಂದುವೆಚ್ಚಗಳಿಗೆ ಬಿದ್ದಿಲ್ಲ ಕಡಿವಾಣ

ಬೆಂಗಳೂರು;  ಬರದಿಂದ ತತ್ತರಿಸಿ ಹೋಗಿರುವ ರಾಜ್ಯದ 101 ತಾಲೂಕುಗಳಿಗೆ ನಷ್ಟದ ಪರಿಹಾರ...

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಬುಕ್ ಬ್ರಹ್ಮ ಸಾಹಿತ್ಯ ಉತ್ಸವಕ್ಕೆ 5 ಲಕ್ಷ ರು ಅನುದಾನ; ನೋಂದಣಿಯಾಗಿ 3 ವ‍ರ್ಷ ಪೂರೈಸದ ಬುಕ್‌ ಬ್ರಹ್ಮ ಫೌಂಡೇಷನ್‌ಗೆ ಒಂದು ಬಾರಿ ವಿನಾಯಿತಿ

ಬೆಂಗಳೂರು;  ಅನುದಾನ ಪಡೆಯುವ ಸಂಘ, ಸಂಸ್ಥೆಗಳು ನೋಂದಣಿಯಾಗಿ  3 ವರ್ಷಗಳನ್ನು ಪೂರೈಸಿರಬೇಕು...
Please Scan to make Your Contribution

Topics

ಲೀಡ್‌ ಮೆಂಬರ್‍‌ನದ್ದು ಶೂನ್ಯ ವಹಿವಾಟು; ಆದರೂ ಟೆಂಡರ್ ಪ್ಯಾಕೇಜ್‌ನ 7 ಮತ್ತು 9ರಲ್ಲಿ ಎಲ್ 1 ಆಗಿದ್ಹೇಗೆ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆಗೆ ಸಂಬಂಧಿಸಿದಂತೆ...

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...

Related Articles

Popular Categories

error: Content is protected !!