Thursday | September 24, 2026 |

ಜಿಲ್ಲಾಸ್ಪತ್ರೆಗಳ ನಿರ್ವಹಣೆ, ಸಿಬ್ಬಂದಿ ವೇತನ ಪಾವತಿಸಲೂ ಕಷ್ಟಕರ ಪರಿಸ್ಥಿತಿ; ಹಿಮ್ಸ್‌ನಲ್ಲೂ ಆರ್ಥಿಕ ಮುಗ್ಗಟ್ಟು

ಬೆಂಗಳೂರು;  ಹೊಸ ಯೋಜನೆಗಳಿಗೆ ಸಂಪನ್ಮೂಲ ಕೊರತೆಯನ್ನು ಅನುಭವಿಸುತ್ತಿದೆ ಎಂದು ಆರ್ಥಿಕ ಇಲಾಖೆಯು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಗಮನ ಸೆಳೆದಿರುವ ಅನಧಿಕೃತ ಟಿಪ್ಪಣಿಯು ಸದನದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿರುವ ಬೆನ್ನಲ್ಲೆ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಸಂಯೋಜಿತ ಜಿಲ್ಲಾಸ್ಪತ್ರೆಗಳ ನಿರ್ವಹಣೆ ಮತ್ತು ಸಿಬ್ಬಂದಿಗಳ ವೇತನ ಪಾವತಿಸಲು ಕಷ್ಟಸಾಧ್ಯವಾಗುತ್ತಿದೆ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.

ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಂಯೋಜಿತ ಜಿಲ್ಲಾ ಆಸ್ಪತ್ರೆಗೆ ಸ್ವಚ್ಛತಾ ಸಿಬ್ಬಂದಿ, ಸೆಕ್ಯುರಿಟಿ ಗಾರ್ಡ್‌ ಗಳ ಹುದ್ದೆಯ ವೆಚ್ಚವನ್ನೂ ಭರಿಸಲು ಏದುಸಿರು ಬಿಡುತ್ತಿದೆ. ಅಲ್ಲದೆ ಕೆಲವು ವೈದ್ಯಕೀಯ ವಿಜ್ಞಾನ ಸಂಸ್ಥೆಗಳು ಸರ್ಕಾರದ ಅನುಮೋದನೆಯಿಲ್ಲದೆಯೇ ಹೆಚ್ಚುವರಿ ವೆಚ್ಚ ಮಾಡುತ್ತಿವೆ. ಇದರಿಂದ ಆರ್ಥಿಕ ಇಲಾಖೆಯ ತೀವ್ರ ಆಕ್ಷೇಪಣೆಗೂ ಗುರಿಯಾಗುತ್ತಿರುವ ಪ್ರಕರಣಗಳು ಸಹ ಮುನ್ನೆಲೆಗೆ ಬಂದಿವೆ.

ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಕರಣದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯು ಹೊರಡಿಸಿರುವ ಆದೇಶದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆರ್ಥಿಕ ಪರಿಸ್ಥಿತಿಯು ಅನಾವರಣಗೊಂಡಿದೆ. ಹಿಮ್ಸ್‌ ಸಲ್ಲಿಸಿದ್ದ ಪ್ರಸ್ತಾವನೆ ಕುರಿತು ಸಚಿವ ಡಾ ಶರಣ ಪ್ರಕಾಶ್‌ ಪಾಟೀಲ್‌ ಅವರೊಂದಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ಚರ್ಚಿಸಿದ್ದರು ಎಂದು ಗೊತ್ತಾಗಿದೆ.

ವೇತನ ಪಾವತಿಸಲು ಕಷ್ಟ ಸಾಧ್ಯವಾಗಿರುವ ಕುರಿತು ಸರ್ಕಾರವು ಹೊರಡಿಸಿರುವ ಆದೇಶದಲ್ಲಿ ವಿವರಿಸಿದೆ. ಈ  ಆದೇಶವು ದಿ ಫೈಲ್‌ ಗೆ ಲಭ್ಯವಾಗಿದೆ.

ವೇತನ ಪಾವತಿಸಲು ಕಷ್ಟಸಾಧ್ಯವಾಗುತ್ತಿದೆಯೇ?

ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಂಯೋಜಿತ ಜಿಲ್ಲಾ ಆಸ್ಪತ್ರೆಗೆ 25 ಸ್ವಚ್ಚತಾ ಸಿಬ್ಬಂದಿ ಮತ್ತು 10 ಮಂದಿ ಸೆಕ್ಯುರಿಟಿ ಗಾರ್ಡ್‌ ಹುದ್ದೆಗಳ ವೆಚ್ಚವನ್ನು ಸಂಸ್ಥೆಯ ಆಂತರಿಕ ಸಂಪನ್ಮೂಲಗಳಿಂದ ಭರಿಸುವ ಷರತ್ತಿಗೆ ಒಳಪಟ್ಟು ನೇಮಕಾತಿಗೆ ವೈದ್ಯಕೀಯ ಶಿಕ್ಷಣ ಇಲಾಖೆಗೆ ಅನುಮತಿ ನೀಡಿತ್ತು.  ಮಾಡಲ್‌ ಬಿಡ್‌ ಡಾಕ್ಯುಮೆಂಟ್‌ ಪ್ರಕಾರ ನಿಯಮಗಳ ಅನ್ವಯ ಏಜೆನ್ಸಿಗಳ ಮೂಲಕ ಸೇವಾ ಗುತ್ತಿಗೆ ಆಧಾರದ ಮೂಲಕ ಪಡೆಯಲು 2026ರ ಮೇ 13ರಂದು ಆದೇಶದ ಮೂಲಕ ಅನುಮತಿ ನೀಡಿತ್ತು.

ಆದರೆ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಂತರಿಕ ಖಾತೆಯಲ್ಲಿ (ಸಂಖ್ಯೆ 32690100031142) ಕೇವಲ 3 ಕೋಟಿ ರು ಮಾತ್ರ ಉಳಿದಿದೆ. ಇದರಲ್ಲಿ ಹಿಮ್ಸ್‌ ಬೋಧನಾ ಆಸ್ಪತ್ರೆ ಮತ್ತು ಸಮಸ್ಥೆಯ ನಿರ್ವಹಣೆಗೆ ಈ ಮೊತ್ತವು ಅವಶ್ಯಕವಾಗಿದೆ. ಇದರಲ್ಲಿಯೇ ವೇತನ ಪಾವತಿಸಲು ಕಷ್ಟಸಾಧ್ಯವಾಗುತ್ತದೆ ಎಂಬ ಸಂಗತಿಯನ್ನು ಹಿಮ್ಸ್‌ ತನ್ನ ಪ್ರಸ್ತಾವನೆಯಲ್ಲಿ ವಿವರಿಸಿರುವುದು ಸರ್ಕಾರದ ಆದೇಶದಿಂದ ತಿಳಿದು ಬಂದಿದೆ.

 

 

’25 ಸ್ವಚ್ಛತಾ ಸಿಬ್ಬಂದಿ ಮತ್ತು 10 ಸೆಕ್ಯೂರಿಟಿ ಹುದ್ದೆಗಳೀಗೆ ಕಾರ್ಮಿಕ ಇಲಾಖೆಯ ಕನಿಷ್ಟ ವೇತನ ಕಾಯ್ದೆ ಅನ್ವಯ ವಾರ್ಷಿಕವಾಗಿ 89,40,055 ರು ಮೊತ್ತ ಅವಶ್ಯಕತೆ ಇದೆ. ಈ ಹುದ್ದೆಗಳಿಗೆ ವೇತನ ಪಾವತಿಸಲು ಕ್ರಮ ಕೈಗೊಳ್ಳಬೇಕು,’ ಎಂದು ಹಿಮ್ಸ್‌ ತನ್ನ ಪ್ರಸ್ತಾವನೆಯಲ್ಲಿ ವಿವರಿಸಿತ್ತು.  ಹಿಮ್ಸ್‌ ನಲ್ಲಿ   (ಲೆಕ್ಕ ಶೀರ್ಷಿಕೆ; 2210-05-105-1067-115)   ಅನುದಾನದಲ್ಲಿ ಲಭ್ಯವಿದ್ದ 2.53 ಕೋಟಿ ರು ಪೈಕಿ ಮೂರನೇ ತ್ರೈಮಾಸಿಕ ಕಂತನ್ನು ಬಿಡುಗಡೆ ಮಾಡಿದೆ.

 

 

ಅಲ್ಲದೇ ಕೆಲವೊಂದು ಸಂಸ್ಥೆಗಳು ಸಾಮಾನ್ಯ ವೆಚ್ಚಗಳಿಗಾಗಿ ಗುತ್ತಿಗೆ- ಹೊರ ಗುತ್ತಿಗೆನೌಕರರ ವೇತನ ಪಾವತಿಗಾಗಿ ಆಯವ್ಯಯದಲ್ಲಿ  ಒದಗಿಸಿದ್ದ  ಅಂದಾಜು ಮಿತಿಗಿಂತಲೂ ಗಣನೀಯ ಪ್ರಮಾಣದಲ್ಲಿ  ಹೆಚ್ಚಿನ ವೆಚ್ಚ ಮಾಡಲಾಗುತ್ತಿದೆ. ಈ ರೀತಿಯ ವೆಚ್ಚಗಳಿಗೆ ಆರ್ಥಿಕ  ಸಮಿತಿ, ಆಡಳಿತ ಮಂಡಳಿ ಮತ್ತು ಸರ್ಕಾರದ ಅನುಮೋದನೆಯೇ ಇಲ್ಲ. ಆದರೂ ಹೆಚ್ಚುವರಿಯಾಗಿ ವೆಚ್ಚ ಮಾಡುತ್ತಿವೆ. ಹೀಗಾಗಿ ಸರ್ಕಾರವು ಹೆಚ್ಚುವರಿ ವೆಚ್ಚ ಭರಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ಆರ್ಥಿಕ ಇಲಾಖೆಯ ತೀವ್ರ ಆಕ್ಷೇಪಣೆಗೆ ಒಳಪಡುವಂತಾಗಿದೆ ಎಂದು ಆದೇಶದಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

 

 

‘ಹೆಚ್ಚುವರಿ ವೆಚ್ಚದ ಅಗತ್ಯವಿದ್ದಲ್ಲಿ ಮೊದಲಿಗೆ ಸರ್ಕಾರದ ಹಾಗೂ ಆರ್ಥಿಕ ಇಲಾಖೆಯ ಅನುಮೋದನೆ ಪಡೆದ ನಂತರವೇ ಹೆಚ್ಚುವರಿ ವೆಚ್ಚ ಮಾಡಲು ಕ್ರಮ ವಹಿಸಬೇಕು. ತಪ್ಪಿದಲ್ಲಿ ಇದಕ್ಕೆ ಸಂಸ್ಥೆಯ ಮುಖ್ಯಸ್ಥರನ್ನೇ ಜವಾಬ್ದಾರರನ್ನಾಗಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು,’ ಎಂದು ಎಚ್ಚರಿಸಿದೆ.

 

ಹಿಮ್ಸ್‌ ಕಟ್ಟಡ ನಿರ್ಮಾಣ ಕಾಮಗಾರಿ; 68.75 ಕೋಟಿ ರು ಹೆಚ್ಚುವರಿ, ಮೂಲ ಅಂದಾಜಿನಲ್ಲಿ ಅವಕಾಶವೇ ಇರಲಿಲ್ಲ, ಗುಣನಿಯಂತ್ರಣ ವರದಿಗೆ ಸಕ್ಷಮ ಪ್ರಾಧಿಕಾರದ ಅನುಮೋದನೆಯೇ ಇಲ್ಲ

 

ಹಿಮ್ಸ್‌ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಹಲವು ಅಕ್ರಮಗಳಾಗಿವೆ ಎಂದು ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಆದರೂ ಈ ವರದಿ ಬಗ್ಗೆ ಸರ್ಕಾರವು ಇದುವರೆಗೂ ಯಾವುದೇ ಕ್ರಮವಹಿಸಿಲ್ಲ ಎಂದು ತಿಳಿದು ಬಂದಿದೆ.

 

ಅನುದಾನ ಕೊರತೆ, ಪಾಲನೆಯಾಗದ ಮಾನದಂಡ; ಪ್ರಸಕ್ತ ಸಾಲಿನಲ್ಲಿ 150 ವಿದ್ಯಾರ್ಥಿಗಳ ಪ್ರವೇಶಾತಿಗೂ ಕಷ್ಟ

 

ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಪೈಕಿ ಚಿತ್ರದುರ್ಗದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿಯೂ ಅನುದಾನ ಕೊರತೆ ಎದುರಾಗಿತ್ತು. ಈ ಕುರಿತು ದಿ ಫೈಲ್ ವರದಿ ಪ್ರಕಟಿಸಿತ್ತು.

Hot this week

ರಾಜ್ಯದ ಆರ್ಥಿಕ ಪರಿಸ್ಥಿತಿ ಇಷ್ಟೊಂದು ಕೆಟ್ಟಿದೆಯೇ?; ಆರ್ಥಿಕ ಇಲಾಖೆ ಟಿಪ್ಪಣಿ ಬೆನ್ನಲ್ಲೇ ಮುನ್ನೆಲೆಗೆ ಬಂದ ದಿ ಫೈಲ್‌ನ 51 ವರದಿಗಳು

ಬೆಂಗಳೂರು; ಹೊಸ ಯೋಜನೆಗಳನ್ನು  ಘೋಷಿಸುವ ಮೊದಲು ಸಂಪನ್ಮೂಲ ಲಭ್ಯವಿದೆಯೇ ಎಂಬುದನ್ನು ಪರಿಶೀಲಿಸಬೇಕು...

ಮೂಲಸೌಕರ್ಯಗಳ ಕೊರತೆ; ಸಂಭಾವ್ಯ ಹೂಡಿಕೆದಾರರನ್ನು ಹಿಮ್ಮೆಟ್ಟಿಸಿದ್ದ ಮಂಡಳಿ, ಬಳಕೆಯಾಗದ 281.34 ಕೋಟಿ

ಬೆಂಗಳೂರು; ದೇವನಹಳ್ಳಿಯಲ್ಲಿರುವ ಏರೋಸ್ಪೇಸ್‌ ಪಾರ್ಕ್ ಸೇರಿದಂತೆ ಇನ್ನಿತರೆ ಕೈಗಾರಿಕೆ ಪ್ರದೇಶಗಳಲ್ಲಿ ಮೂಲಭೂತ...

ರಸ್ತೆ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲೇ ಲೋಪ; 483 ಕಾಮಗಾರಿಗಳಲ್ಲಿ 72.01 ಕೋಟಿಯಷ್ಟು ಹೆಚ್ಚುವರಿ ಹೊರೆ, ಪಿಡಬ್ಲ್ಯೂಡಿಯ ಕಾರ್ಯವೈಖರಿ ಬಯಲು ಮಾಡಿದ ಸಿಎಜಿ

ಬೆಂಗಳೂರು;  ರಸ್ತೆ ಕಾಮಗಾರಿಗಳಲ್ಲಿ  ಸಬ್‌ ಬೇಸ್‌ ದಪ್ಪವನ್ನು ಕಡಿಮೆ ಮಾಡದಿರುವುದು ಸೇರಿದಂತೆ...

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಆದೇಶ; ಮುನ್ನೆಲೆಗೆ ಬಂದ ದಿ ಫೈಲ್‌ ನ 10 ವರದಿಗಳು

ಬೆಂಗಳೂರು;  ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ...
Please Scan to make Your Contribution

Topics

ರಾಜ್ಯದ ಆರ್ಥಿಕ ಪರಿಸ್ಥಿತಿ ಇಷ್ಟೊಂದು ಕೆಟ್ಟಿದೆಯೇ?; ಆರ್ಥಿಕ ಇಲಾಖೆ ಟಿಪ್ಪಣಿ ಬೆನ್ನಲ್ಲೇ ಮುನ್ನೆಲೆಗೆ ಬಂದ ದಿ ಫೈಲ್‌ನ 51 ವರದಿಗಳು

ಬೆಂಗಳೂರು; ಹೊಸ ಯೋಜನೆಗಳನ್ನು  ಘೋಷಿಸುವ ಮೊದಲು ಸಂಪನ್ಮೂಲ ಲಭ್ಯವಿದೆಯೇ ಎಂಬುದನ್ನು ಪರಿಶೀಲಿಸಬೇಕು...

ಮೂಲಸೌಕರ್ಯಗಳ ಕೊರತೆ; ಸಂಭಾವ್ಯ ಹೂಡಿಕೆದಾರರನ್ನು ಹಿಮ್ಮೆಟ್ಟಿಸಿದ್ದ ಮಂಡಳಿ, ಬಳಕೆಯಾಗದ 281.34 ಕೋಟಿ

ಬೆಂಗಳೂರು; ದೇವನಹಳ್ಳಿಯಲ್ಲಿರುವ ಏರೋಸ್ಪೇಸ್‌ ಪಾರ್ಕ್ ಸೇರಿದಂತೆ ಇನ್ನಿತರೆ ಕೈಗಾರಿಕೆ ಪ್ರದೇಶಗಳಲ್ಲಿ ಮೂಲಭೂತ...

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಆದೇಶ; ಮುನ್ನೆಲೆಗೆ ಬಂದ ದಿ ಫೈಲ್‌ ನ 10 ವರದಿಗಳು

ಬೆಂಗಳೂರು;  ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ...

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

Related Articles

Popular Categories

error: Content is protected !!