Saturday | October 3, 2026 |

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮನವಿ; ಸ್ಪಷ್ಟ ಅಭಿಪ್ರಾಯ ಸಲ್ಲಿಸಲು ಡಿಜಿಐಜಿಪಿಗೆ ನಿರ್ದೇಶನ

ಬೆಂಗಳೂರು;   ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧದ ಪ್ರಕರಣದಲ್ಲಿ ಸಿಐಡಿ ವಿಶೇಷ ವಿಚಾರಣೆ ವಿಭಾಗವು ನೀಡಿದ್ದ ವರದಿಯು ನೈಜ ದಾಖಲೆ, ಪುರಾವೆಗಳನ್ನು ಪರಿಗಣಿಸಿಲ್ಲ ಮತ್ತು ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ತಪ್ಪು ಮಾಹಿತಿ ನೀಡಿ  ಅನಪೇಕ್ಷಿತ ಹೇಳಿಕೆ ಪ್ರಕರಣವನ್ನು ಮುಚ್ಚಿ ಹಾಕಲಾಗುತ್ತಿದೆ ಎಂದು ವಿಧಾನ ಪರಿಷತ್‌ನ ಜೆಡಿಎಸ್‌ ಸದಸ್ಯರು ನೀಡಿದ್ದ ಮನವಿ ಆಧರಿಸಿ ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ನಡೆಸುವ ಸಂಬಂಧ ಸ್ಪಷ್ಟ ಅಭಿಪ್ರಾಯ ನೀಡಬೇಕು ಎಂದು ಒಳಾಡಳಿತ ಇಲಾಖೆಯು ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರಿಗೆ ನಿರ್ದೇಶಿಸಿದೆ.

ಆರೋಪಗಳ ಕುರಿತು ಒಳಾಡಳಿತ ಇಲಾಖೆಯಲ್ಲಿ ತನಿಖೆ ನಡೆಯುತ್ತಿರುವುದು ಗಮನದಲ್ಲಿದ್ದರೂ ಸಹ ದಿನಪತ್ರಿಕೆಯಲ್ಲಿ ಹೇಳಿಕೆ ನೀಡಿರುವುದಕ್ಕೆ ಕಾರಣ, ಸ್ಪಷ್ಟೀಕರಣ ನೀಡಬೇಕು ಅಲ್ಲದೇ ಸ್ಪಷ್ಟೀಕರಣ ನೀಡಲು ಸಕ್ಷಮ ಪ್ರಾಧಿಕಾರದ ಅನಮತಿ ಪಡೆದಿದ್ದರೆ ಅದರ ಸೂಕ್ತ ದಾಖಲೆಗಳನ್ನು ಒದಗಿಸಬೇಕು ಎಂದು ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಎಂ ಚಂದ್ರಸೇಖರ್‍‌ ಅವರಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಈಚೆಗಷ್ಟೇ  ನಿರ್ದೇಶನ ನೀಡಿದ್ದರು.

ಈ ನಿರ್ದೇಶನದ ಬೆನ್ನಲ್ಲೇ ಒಳಾಡಳಿತ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು 2026ರ ಅಕ್ಟೋಬರ್‍‌ 3ರಂದು ನೀಡಿರುವ ನಿರ್ದೇಶನವು ಮುನ್ನೆಲೆಗೆ ಬಂದಿದೆ. ಡಿಜಿಐಜಿಪಿಯವರಿಗೆ ನೀಡಿರುವ ನಿರ್ದೇಶನದ ಪ್ರತಿಯು ದಿ ಫೈಲ್ ಗೆ ಲಭ್ಯವಾಗಿದೆ.

ನಿರ್ದೇಶನ ನೀಡಿರುವ ಪತ್ರದಲ್ಲೇನಿದೆ?

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯ ಸಾಕ್ಷಿಗಳನ್ನು ಮರೆಮಾಚಿ, ನೈಜ ದಾಖಲೆ/ಪುರಾವೆಗಳನ್ನು ಪರಿಗಣಿಸದೇ ಎಂ ಚಂದ್ರಶೇಖರ್ ಅವರ ವಿರುದ್ಧ  ಅನಾಪೇಕ್ಷಿತ ಹೇಳಿಕೆ ಪ್ರಕರಣವನ್ನು ಸಾಕ್ಷ್ಯಾಧಾರಗಳು ಲಭ್ಯವಾಗದ ಕಾರಣ ಎಂದು ತಪ್ಪು ಮಾಹಿತಿ ನೀಡಿ ಹಾಗೂ ಅಸತ್ಯದ ವರದಿ ನೀಡಿ ಪ್ರಕರಣವನ್ನು ಮುಚ್ಚಿ ಹಾಕುವ ಬಗ್ಗೆ ತಿಳಿದು ಬಂದಿದ್ದು, ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ  ನಡೆಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಸ್‌ ಎಲ್ ಭೋಜೇಗೌಡ ಮತ್ತು ಇತರ ಸದಸ್ಯರು  ಕೋರಿದ್ದಾರೆ. ಅದೇ ರೀತಿ 2026ರ ಸೆ.10ರಂದು ನೀಡಿರುವ ಮನವಿಯಲ್ಲಿ ಸಿಐಡಿ ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ಶಾಖೆಯು ನೀಡಿರುವ ವರದಿಯನ್ನೂ ಸಹ ಪ್ರಸ್ತಾಪಿಸಿದ್ದಾರೆ. ಈ ಮನವಿಯಲ್ಲಿ ಪ್ರಸ್ತಾಪಿಸಿರುವ ಅಂಶಗಳೊಂದಿಗೆ ಪರಿಶೀಲಿಸಿ ತಮ್ಮ  ಸ್ಪಷ್ಟ ಅಭಿಪ್ರಾಯವನ್ನು ಸಲ್ಲಿಸಬೇಕು ಎಂದು ಒಳಾಡಳಿತ ಇಲಾಖೆಯ ಸರ್ಕಾರದ ಹೆಚ್ಚುವರಿ  ಮುಖ್ಯ ಕಾರ್ಯದರ್ಶಿಯು ನಿರ್ದೇಶನ ನೀಡಿರುವುದು ಪತ್ರದಿಂದ ತಿಳಿದು ಬಂದಿದೆ.

 

 

ಈ ನಿರ್ದೇಶನದ ಪತ್ರಕ್ಕೆ ಸಂಬಂಧಿಸಿದಂತೆ ಒಳಾಡಳಿತ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.

ಎಡಿಜಿಪಿ ಚಂದ್ರಸೇಖರ್ ಅವರ ವಿರುದ್ಧ ಜೆಡಿಎಸ್‌ನ ವಿಧಾನ ಪರಿಷತ್‌ ಸದಸ್ಯರು ಲಿಖಿತ ದೂರು ನೀಡಿದ್ದರು. ಈ ದೂರಿನ ಕುರಿತು ಒಳಾಡಳಿತ ಇಲಾಖೆಯು ತನಿಖೆ ನಡೆಸುತ್ತಿದೆ. ಈ ಮಧ್ಯೆಯೇ ಚಂದ್ರಸೇಖರ್ ಅವರು ದಿನಪತ್ರಿಕೆಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ನೀಡುತ್ತಿದ್ದಂತೆ ಜೆಡಿಎಸ್‌ನ ವಿಧಾನ ಪರಿಷತ್‌ ಸದಸ್ಯರು ಮುಖ್ಯ ಕಾರ್ಯದರ್ಶಿಗೆ ಮತ್ತೊಂದು ದೂರು ನೀಡಿದ್ದರು. ಈ ದೂರನ್ನಾಧರಿಸಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು, ಚಂದ್ರಸೇಖರ್‍‌ ಅವರಿಗೆ ಪತ್ರ ಬರೆದಿದ್ದರು.

ಮುಖ್ಯ ಕಾರ್ಯದರ್ಶಿ ಪತ್ರದಲ್ಲೇನಿತ್ತು?

ವಿಧಾನ ಪರಿಷತ್ತಿನ ಹಾಲಿ ಮತ್ತು ಮಾಜಿ ಸದಸ್ಯರು 2026ರ ಆಗಸ್ಟ್‌ 31ರಂದು ಪತ್ರ ಬರೆದಿದ್ದಾರೆ. ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯಿಂದ ಕ್ರೋಢೀಕರಿಸಿ ನೀಡಿರುವ ಆಧಾರ ಮತ್ತು ದಾಖಲೆಗಳ ಅನುಗುಣವಾಗಿ ಮುಖ್ಯಮಂತ್ರಿಗಳು ಆಧಾರ ಸಮೇತ ಹಲವಾರು ಕಂಪನಿಗಳನ್ನು ನಿರ್ವಹಿಸುತ್ತಿರುವ ಬಗ್ಗೆ ಸದನದಲ್ಲಿ ಮಾಹಿತಿ ನೀಡಿದ್ದಾರೆ. ಅಲ್ಲದೇ ತಮ್ಮ ಧರ್ಮಪತ್ನಿಯವರು ಗುತ್ತಿಗೆ ಪಡೆದಿರುವ ಬಗ್ಗೆ ಹಾಗೂ ಗುತ್ತಿಗೆಯಲ್ಲಿ ಭಾಗಿಯಾಗಿರುವ ಬಗ್ಗೆ ಹಿರಿಯ ಸಚಿವರು, ಆಧಾರದ ಸಮೇತ ದಾಖಲೆ, ಮಾಹಿತಿ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಹಲವು ನೋಟೀಸ್‌ಗಳನ್ನು ಜಾರಿ ಮಾಡಿ ವಿವರಣೆ ನೀಡಲು ಸೂಚಿಸಿದೆ. ಆದರೆ ಈ ವಿವರಣೆಗೆ ಅಸ್ಪಷ್ಟವಾದ ಮಾಹಿತಿ ನೀಡಲಾಗಿದೆ ಎಂದು ಪತ್ರದಲ್ಲಿ ಮುಖ್ಯ ಕಾರ್ಯದರ್ಶಿ ಅವರು ವಿವರಿಸಿದ್ದರು.

ಸಂಪೂರ್ಣ ಸುಳ್ಳು, ಆಧಾರ ರಹಿತ, ದೃಢೀಕರಣವಿಲ್ಲದ ಮತ್ತು ದುರುದ್ದೇಶಪೂರಿತ ಎಂದು 2026ರ ಆಗಸ್ಟ್‌ 26ರಂದು ಪತ್ರಿಕೆಯೊಂದಕ್ಕೆ  ಹೇಳಿಕೆ ನೀಡಿದ್ದೀರಿ. ಈ ಮೂಲಕ ಕರ್ನಾಟಕ ವಿಧಾನಸಭೆಯ ಸದನಕ್ಕೆ ಆಧಾರಗಳೊಂದಿಗೆ ಅಧಿಕೃತ ಮಾಹಿತಿ ನೀಡಿರುವ ಮುಖ್ಯಮಂತ್ರಿಗಳಿಗೆ, ಹಿರಿಯ ಸಚಿವರುಗಳಿಗೆ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಅವಮಾನಿಸುವಂತೆ ಮತ್ತು ಅಗೌರವ ತೋರಲಾಗಿದೆ. ಅಖಿಲ ಭಾರತ ಸೇವೆಗಳ (ನಡವಳಿಕೆ) ನಿಯಮಗಳು 1968ರ ನಿಯಮಗಳನ್ನು ಉಲ್ಲಂಘಿಸಿ ದುರ್ನಡತೆ ಮತ್ತು ದುರ್ವರ್ತನೆ ತೋರಲಾಗಿದೆ. ಇದು ಅಪದ್ಧ, ಅಸತ್ಯ, ಅಶುದ್ಧ ಹಾಗೂ ಅಸಂಬದ್ಧ ಪದಗಳನ್ನು ಬಳಸಿ ಪತ್ರಿಕೆ ಹೇಳಿಕೆಗಳನ್ನು ನೀಡುವ ಮೂಲಕ ಕರ್ತವ್ಯ ಲೋಪ ಎಸಗಿರುವ ನಿಮ್ಮ ಮೇಲೆ ಕೂಡಲೇ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕು ಎಂದು ಕೋರಲಾಗಿದೆ.

 

 

ಅಲ್ಲದೇ ಅಖಿಲ ಭಾರತ ಸೇವೆಗಳ ಅಧಿಕಾರಿಗಳನ್ನು  ಒಳಗೊಂಡಂತೆ ಎಲ್ಲಾ ಸರ್ಕಾರಿ ಅಧಿಕಾರಿಗಳು ಸರ್ಕಾರದ ಕಾರ್ಯಕ್ರಮ, ಯೋಜನೆಗಳ ಅಧಿಕೃತ ಮಾಹಿತಿಯನ್ನು ಪ್ರಚಾರಗೊಳಿಸಲು ಅವಶ್ಯವಿದ್ದಲ್ಲಿ ಮಾಧ್ಯಮಗಳನ್ನು ಬಳಸಲು ಅವಕಾಶ ನೀಡಿದೆ. ಉಳಿದಂತೆ ಯಾವುದೇ ಅಧಿಕೃತ ಕೃತ್ಯಗಳ ಸಮರ್ಥನೆಗೆ, ಅನಾವಶ್ಯಕವಾಗಿ ಹೇಳಿಕೆ ನೀಡಲು ಅಥವಾ ಅಹವಾಲುಗಳನ್ನು ವ್ಯಕ್ತಪಡಿಸಲು ಮಾಧ್ಯಮಗಳ ಬಳಕೆಯನ್ನು ನಿರ್ಬಂಧಿಸಲಾಗಿದೆ ಎಂದು ವಿವರಿಸಿರುವುದು ಗೊತ್ತಾಗಿದೆ.

‘ಶಾಸಕರುಗಳು ತಮ್ಮ ವಿರುದ್ಧ ಸಲ್ಲಿಸಿರುವ ದೂರು ಮತ್ತು ಸರ್ಕಾರದ ಸುತ್ತೋಲೆಯಲ್ಲಿನ ನಿರ್ದೇಶನಗಳ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ತಮ್ಮ ಸ್ಪಷ್ಟೀಕರಣ  ವಿವರಣೆಯನ್ನು ಸಲ್ಲಿಸಬೇಕು,’ ಎಂದು ಮುಖ್ಯ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದ್ದರು.

 

 

ಪತ್ರಿಕೆಯ ಹೇಳಿಕೆಗಳನ್ನು ನೀಡಲು ತಾವು ಸಕ್ಷಮ ಪ್ರಾಧಿಕಾರದ ಅನುಮತಿ ಪಡೆದಿದ್ದರೇ ಎಂಬ ಬಗ್ಗೆ ಮಾಹಿತಿ ಮತ್ತು ಇದಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸಬೇಕು. ತಮ್ಮ ವಿರುದ್ಧದ ಆರೋಪಗಳ ಕುರಿತು ಒಳಾಡಳಿತ ಇಲಾಖೆಯಲ್ಲಿ ತನಿಖೆ  ನಡೆಯುತ್ತಿರುವುದು ಗಮನದಲ್ಲಿದ್ದರೂ ಸಹ ಈ ಹಂತದಲ್ಲಿ ತಮ್ಮ ವಿರುದ್ಧದ ಆರೋಪಗಳ ಕುರಿತು ಪತ್ರಿಕೆ ಹೇಳಿಕೆ ನೀಡಿರುವುದಕ್ಕೆ ಕಾರಣ, ಸ್ಪಷ್ಟೀಕರಣ ನೀಡಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ನಿರ್ದೇಶನ ನೀಡಿದ್ದರು.

Hot this week

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...

ವಿಮಾ ಕಂಪನಿಯಿಂದ ಹಣ ಬಂದಿದೆ, ಆದರೆ ರೈತರ ಖಾತೆಗಳಿಗೆ ಜಮೆಯೇ ಆಗಿಲ್ಲ; ಬರಗಾಲದ ನಡುವೆಯೇ ರೈತರಿಗೆ ಮತ್ತೊಂದು ಬರೆ

ಬೆಂಗಳೂರು;  ರಾಜ್ಯದಾದ್ಯಂತ ತೀವ್ರ ಬರಗಾಲ ಎದುರಾಗಿರುವ ನಡುವೆಯೇ  2025-26ನೇ ಮುಂಗಾರು ಹಂಗಾಮಿನ...
Please Scan to make Your Contribution

Topics

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...

ವಿಮಾ ಕಂಪನಿಯಿಂದ ಹಣ ಬಂದಿದೆ, ಆದರೆ ರೈತರ ಖಾತೆಗಳಿಗೆ ಜಮೆಯೇ ಆಗಿಲ್ಲ; ಬರಗಾಲದ ನಡುವೆಯೇ ರೈತರಿಗೆ ಮತ್ತೊಂದು ಬರೆ

ಬೆಂಗಳೂರು;  ರಾಜ್ಯದಾದ್ಯಂತ ತೀವ್ರ ಬರಗಾಲ ಎದುರಾಗಿರುವ ನಡುವೆಯೇ  2025-26ನೇ ಮುಂಗಾರು ಹಂಗಾಮಿನ...

ಪ್ರಿಂಟರ್, ಸ್ಕ್ಯಾನರ್ ಕೂಡ ಲಭ್ಯವಿಲ್ಲ, ಇ-ಮೇಲ್‌ ಮಾಡಲೂ ಕಷ್ಟಸಾಧ್ಯ; ಸರ್ಕಾರದ ಆರ್ಥಿಕ ಪರಿಸ್ಥಿತಿ ತೆರೆದಿಟ್ಟ ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ

ಬೆಂಗಳೂರು; ಚಾಲ್ತಿಯಲ್ಲಿರುವ ಮತ್ತು ಹೊಸ ಯೋಜನೆಗಳಿಗೆ ಅನುದಾನ ಹೊಂದಿಸಲು ಏದುಸಿರು ಬಿಡುತ್ತಿರುವ...

ಗೃಹಲಕ್ಷ್ಮಿ; 2,660.26 ಕೋಟಿ ಬಿಡುಗಡೆಗೆ ಸಹಮತಿಸಿದ್ದ ಆರ್ಥಿಕ ಇಲಾಖೆಯಲ್ಲಿ ಕಡತವೇ ಲಭ್ಯವಿಲ್ಲ, ಮುಚ್ಚಿಡಲಾಗಿದೆಯೇ, ನಾಪತ್ತೆ ಮಾಡಲಾಗಿದೆಯೇ?

ಬೆಂಗಳೂರು;  2024-25ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯ ವಲಯದ ಲೆಕ್ಕ ಶೀರ್ಷಿಕೆಯಡಿಯಲ್ಲಿ...

Related Articles

Popular Categories

error: Content is protected !!