Monday | October 12, 2026 |

ಸ್ಟಿಂಗ್ ಆಪರೇಷನ್‌; ಮಾಧ್ಯಮಗಳ ವಿರುದ್ಧ ತಡೆಯಾಜ್ಞೆಗೆ ಸಿದ್ದರಾಮಯ್ಯ ಎಂಬುವರಿಂದ ಅಸಲು ದಾವೆ ದಾಖಲು, ನಾಳೆಯೇ ಅರ್ಜಿ ವಿಚಾರಣೆ

ಬೆಂಗಳೂರು;  ರಾಜ್ಯ ರಾಜಕಾರಣದಲ್ಲಿ ಬಹು ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮೌನ ಮುರಿದಿರುವ ನಡುವೆಯೇ ಸಿದ್ದರಾಮಯ್ಯ ಎಂಬ ಹೆಸರಿನಲ್ಲಿ ನ್ಯಾಯಾಲಯದಲ್ಲಿ ಅಸಲು ದಾವೆ ಹೂಡಿದ್ದಾರೆ.

ಸ್ಟಿಂಗ್‌ ಆಪರೇಷನ್‌ ಕುರಿತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯಲ್ಲಿಯೇ ಹಂಚಿಕೊಂಡಿದ್ದ  ವಿವರಗಳು ರಾಜಕೀಯ ವಲಯದಲ್ಲಿ ಕೋಲಾಹಲವನ್ನೇ ಎಬ್ಬಿಸಿತ್ತು. ಇದರ ನಡುವೆಯೇ ಸಿದ್ದರಾಮಯ್ಯ ಎಂಬುವರು ವಿಡಿಯೋ ಪ್ರಸಾರ ಮಾಡದಂತೆ ಸಿಸಿಹೆಚ್‌ (18)ರಲ್ಲಿ ಮಾಧ್ಯಮಗಳ ವಿರುದ್ಧ ತಡೆಯಾಜ್ಞೆ ತರಲು ಹೂಡಿರುವ  ಅಸಲು ದಾವೆ ಮುನ್ನೆಲೆಗೆ ಬಂದಿದೆ.

ಸಿದ್ದರಾಮಯ್ಯ ಎಂಬುವರು ತಮ್ಮ ವಕೀಲರಾದ ಪ್ರವೀಣ್ ಕಾಮತ್ ಎಂ ಆರ್ ಎಂಬುವರ ಮೂಲಕ ಸಿಸಿಹೆಚ್‌ 18ರಲ್ಲಿ ಅಸಲು ದಾವೆ (ಅಸಲು ದಾವೆ ಸಂಖ್ಯೆ; 7655/2026)  ಹೂಡಿದ್ದಾರೆ. ಇದರಲ್ಲಿ ಫ್ರೀಡಂ ಟಿ ವಿ ಚಾನಲ್‌ನ್ನು ಮೊದಲ ಪ್ರತಿವಾದಿಯನ್ನಾಗಿಸಿದ್ದಾರೆ.  ಕರ್ನಾಟಕ ಹನಿಟ್ರ್ಯಾಪ್ ಹೆಸರಿನ ಯೂ ಟ್ಯೂಬ್‌ ಲಿಂಕ್‌ನ್ನು ಎರಡನೇ ಪ್ರತಿವಾದಿಯನ್ನಾಗಿಸಿದ್ದಾರೆ.

 

 

ಪ್ರಜಾವಾಣಿ, ವಿಶ್ವವಾಣಿ ದಿನಪತ್ರಿಕೆಯೂ ಸೇರಿದಂತೆ ಒಟ್ಟಾರೆ 42 ಮಾಧ್ಯಮಗಳನ್ನು ಪ್ರತಿವಾದಿಯನ್ನಾಗಿಸಿರುವುದು ಗೊತ್ತಾಗಿದೆ. ಈ ಅರ್ಜಿಯ ವಿಚಾರಣೆಯು ನಾಳೆ ಅಂದರೇ 2026ರ ಅಕ್ಟೋಬರ್‍‌ 13ರಂದು ನಡೆಯಲಿದೆ. ಈ ಸಂಬಂಧ ನಾಳೆಯೇ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

 

 

ಕಳೆದ ಒಂದು ವಾರದಿಂದಲೂ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಸ್ಟಿಂಗ್ ಆಪರೇಷನ್ ಬಗ್ಗೆ ಚರ್ಚೆ ನಡೆಯುತ್ತಿದ್ದರೂ ಸಿದ್ದರಾಮಯ್ಯ ಮೌನಕ್ಕೆ ಶರಣಾಗಿದ್ದರು. ಆದರೆ ಒಂದು ದಿನದ ಹಿಂದೆಯಷ್ಟೇ ಈ ಬಗ್ಗೆ ಮೌನ ಮುರಿದಿದ್ದರು.  ಸ್ಟಿಂಗ್ ಅಪರೇಷನ್ ಮಾಡಿದ್ದು ಯಾರು ಎಂಬುವುದು ಗೊತ್ತಾಗಬೇಕಾಗಿದೆ ಎಂದಿದ್ದರು.  ‘ಸ್ಟಿಂಗ್ ಮಾಡುತ್ತಿದ್ದಾರೆ ಎಂಬುವುದು ಗೊತ್ತಿದೆ. ಆದರೆ, ಆದರೆ ಯಾರು ಮಾಡುತ್ತಿದ್ದಾರೆ ಎಂಬುದು ಗೊತ್ತಾಗಬೇಕು’ ಹೀಗಂದವರು ಮಾಜಿ ಸಿಎಂ ಸಿದ್ದರಾಮಯ್ಯ. ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಕುರಿತಾಗಿ ನಡೆಯುತ್ತಿರುವ ಬೆಳವಣಿಗೆಯ ಬೆನ್ನಲ್ಲೇ ಮೌನ ಮುರಿದಿದ್ದರು. ಸಿದ್ದರಾಮಯ್ಯ ಅವರ ಈ  ನಡೆ ಸಾಕಷ್ಟು ಕುತೂಹಲ ಮೂಡಿಸಿತ್ತು.

ಹೊಸ ಚರ್ಚೆಗೆ ನಾಂದಿ ಹಾಡಿದ್ದ  ಎಚ್‌ಡಿಕೆ

ಸ್ಟಿಂಗ್ ಆಪರೇಷನ್ ಬಗ್ಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಕಳೆದ ಮೂರ್ನಾಲ್ಕು ದಿನಗಳಿಂದಲೂ ಹೇಳಿಕೆ ನೀಡುತ್ತಿದ್ದಾರೆ. ಈ ಹೇಳಿಕೆಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.  ರಾಜ್ಯದ ಸಿಎಂ ಆಗಿ, ಹಿಂದಿನ ಸಿಎಂ ಸಿದ್ದರಾಮಯ್ಯ ಅವರನ್ನು ಟ್ರ್ಯಾಪ್ ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆ ವಿಷಯವನ್ನು ಯಾಕೆ ಮುಚ್ಚಿಟ್ಟಿದ್ದೀರಿ? ಯಾಕೆ ಮುಚ್ಚಿಡುತ್ತಿದ್ದಿರಾ? ರಾಜ್ಯದ ಸಿಎಂ ಆಗಿದ್ದವರನ್ನು, ಹಾಲಿ ಮುಖ್ಯಮಂತ್ರಿಯನ್ನು ಟ್ರ್ಯಾಪ್ ಮಾಡತಕ್ಕದ್ದು ಅಂದರೆ ಏನರ್ಥ? ಎಲ್ಲಾ ಮಾಹಿತಿ ಇದ್ದರೂ ಇಟ್ಟುಕೊಂಡು ಏನು ಮಾಡುತ್ತಿದ್ದೀರಿ?.” ಎಂದು ಪ್ರಶ್ನಿಸಿದ್ದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಿದ ರಹಸ್ಯ ಸ್ಟಿಂಗ್ ಆಪರೇಷನ್ ಮತ್ತು ಬ್ಲ್ಯಾಕ್‌ಮೇಲ್ ಯತ್ನದ ಹಿಂದೆ ಯಾರಿದ್ದಾರೆ ಹಾಗೂ ತಪ್ಪಿತಸ್ಥರನ್ನು ರಕ್ಷಿಸುತ್ತಿರುವವರು ಯಾರು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಕೂಡಲೇ ಸಮಗ್ರ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದ್ದನ್ನು ಸ್ಮರಿಸಬಹುದು.

Hot this week

ಅಕ್ರಮ ಖಾತೆ, ಅನರ್ಹರಿಗೆ 79.28 ಕೋಟಿ ರು ಪರಿಹಾರ; ಕೆಎಎಸ್ ಅಧಿಕಾರಿ ವಿರುದ್ಧದ ಮೊದಲ ವಿಚಾರಣೆಯಲ್ಲೇ ಲೋಪ, ಮರು ವಿಚಾರಣೆಗೆ ಆದೇಶ

ಬೆಂಗಳೂರು; ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಇಮ್ಮಾವು ಗ್ರಾಮದಲ್ಲಿ 54 ಎಕರೆಗೆ...

ಅನುದಾನ ರಹಿತ ಅವಧಿಗೂ ವೇತನ, ಪಿಂಚಣಿ ಸೌಲಭ್ಯ; ಹೈಕೋರ್ಟ್ ಆದೇಶ ಪಾಲಿಸಿದರೇ 22,663.81 ಕೋಟಿ ವೆಚ್ಚ, ಬೊಕ್ಕಸಕ್ಕೆ ಹೊರೆ

ಬೆಂಗಳೂರು; ವೇತಾನುದಾನಕ್ಕೆ ಒಳಪಡಿಸುವ ಪೂರ್ವದಲ್ಲಿ ಸಲ್ಲಿಸಿರುವ ಸೇವೆಗಳನ್ನು ಪಿಂಚಣಿಗಳಿಗೆ ಪರಿಗಣಿಸಬೇಕು ಎಂದು...

ಪಡಿತರ ಆಹಾರಧಾನ್ಯ ಎತ್ತುವಳಿ, ಸಕ್ಕರೆ ಸಹಾಯಧನ, ಕನಿಷ್ಟ ಬೆಂಬಲ ಬೆಲೆ; 1,171.73 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

ಬೆಂಗಳೂರು; ಕನಿಷ್ಠ ಬೆಂಬಲ ಬೆಲೆ  ಅಡಿಯಲ್ಲಿ ಖರೀದಿ ಕಾರ್ಯಾಚರಣೆ ನಡೆಸುತ್ತಿರುವ ಕರ್ನಾಟಕ...
Please Scan to make Your Contribution

Topics

ಅಕ್ರಮ ಖಾತೆ, ಅನರ್ಹರಿಗೆ 79.28 ಕೋಟಿ ರು ಪರಿಹಾರ; ಕೆಎಎಸ್ ಅಧಿಕಾರಿ ವಿರುದ್ಧದ ಮೊದಲ ವಿಚಾರಣೆಯಲ್ಲೇ ಲೋಪ, ಮರು ವಿಚಾರಣೆಗೆ ಆದೇಶ

ಬೆಂಗಳೂರು; ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಇಮ್ಮಾವು ಗ್ರಾಮದಲ್ಲಿ 54 ಎಕರೆಗೆ...

ಅನುದಾನ ರಹಿತ ಅವಧಿಗೂ ವೇತನ, ಪಿಂಚಣಿ ಸೌಲಭ್ಯ; ಹೈಕೋರ್ಟ್ ಆದೇಶ ಪಾಲಿಸಿದರೇ 22,663.81 ಕೋಟಿ ವೆಚ್ಚ, ಬೊಕ್ಕಸಕ್ಕೆ ಹೊರೆ

ಬೆಂಗಳೂರು; ವೇತಾನುದಾನಕ್ಕೆ ಒಳಪಡಿಸುವ ಪೂರ್ವದಲ್ಲಿ ಸಲ್ಲಿಸಿರುವ ಸೇವೆಗಳನ್ನು ಪಿಂಚಣಿಗಳಿಗೆ ಪರಿಗಣಿಸಬೇಕು ಎಂದು...

ಪಡಿತರ ಆಹಾರಧಾನ್ಯ ಎತ್ತುವಳಿ, ಸಕ್ಕರೆ ಸಹಾಯಧನ, ಕನಿಷ್ಟ ಬೆಂಬಲ ಬೆಲೆ; 1,171.73 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

ಬೆಂಗಳೂರು; ಕನಿಷ್ಠ ಬೆಂಬಲ ಬೆಲೆ  ಅಡಿಯಲ್ಲಿ ಖರೀದಿ ಕಾರ್ಯಾಚರಣೆ ನಡೆಸುತ್ತಿರುವ ಕರ್ನಾಟಕ...

ಜೆಎಸ್‌ಡಬ್ಲ್ಯೂನಿಂದ ಸರ್ಕಾರಿ ಜಮೀನು ಒತ್ತುವರಿ ದೃಢಪಡಿಸಿದ ಪರಿಶೀಲನಾ ತಂಡ; ಅಂದಾಜು ಸಮಿತಿಗೆ ಕಂದಾಯ ಇಲಾಖೆ ವರದಿ, ಒತ್ತುವರಿ ತೆರವುಗೊಂಡಿದೆಯೇ?

ಬೆಂಗಳೂರು; ಜೆಎಸ್‌ಡಬ್ಲ್ಯೂ ಲಿಮಿಟೆಡ್‌ ಬಳ್ಳಾರಿಯ ವಿವಿಧೆಡೆ   ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದೆ...

Related Articles

Popular Categories

error: Content is protected !!