Tuesday | October 13, 2026 |

ಸ್ಟಿಂಗ್ ಆಪರೇಷನ್‌; ಅಸಲು ದಾವೆ ಬೆನ್ನಲ್ಲೇ ಪೊಲೀಸ್‌ ಆಯುಕ್ತರಿಗೂ ದೂರು ಸಲ್ಲಿಸಿ ಯಾವ ಭಯವೂ ನನಗಿಲ್ಲವೆಂದ ಸಿದ್ದರಾಮಯ್ಯ

ಬೆಂಗಳೂರು; ಯೂ ಟ್ಯೂಬ್‌ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ  ತಡೆಯಾಜ್ಞೆ ತರಲು ಅಸಲು ದಾವೆ ಹೂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಲಾಗಿದೆ ಎಂದು ಸ್ವತಃ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.

ಕಳೆದ ಹಲವು ದಿನಗಳಿಂದ ಸ್ಟಿಂಗ್‌ ಆಪರೇಷನ್‌ ಕುರಿತಾದ ವಿಡಿಯೋವೊಂದು ಯೂ ಟ್ಯೂಬ್‌ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ವಿಡಿಯೋದಲ್ಲಿರುವ ಅಂಶಗಳನ್ನೇ  ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹಲವು ಬಾರಿ ಪ್ರಸ್ತಾಪಿಸಿದ್ದರು. ಈ ನಡುವೆ ಇದೇ ವಿಡಿಯೋದಲ್ಲಿರುವ ಸಂಗತಿಗಳನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ನೈಜ ಹೋರಾಟಗಾರರ ವೇದಿಕೆಯೂ ಹೈಕೋರ್ಟ್‌ ಮೆಟ್ಟಿಲೇರಿದೆ.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆಯೇ ಅಸಲು ದಾವೆ ಹೂಡಿರುವುದನ್ನೂ  ಸಹ ಖಚಿತಪಡಿಸಿದ್ದಾರೆ.  ಸಿದ್ದರಾಮಯ್ಯ ಅವರು ಈ ಬಗ್ಗೆ ಅಧಿಕೃತವಾಗಿ ಪ್ರತಿಕ್ರಿಯಿಸಿರುವ ನಡುವೆಯೇ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೂ ದೂರು ನೀಡಿರುವುದನ್ನೂ ಎಕ್ಸ್‌ ಜಾಲತಾಣದಲ್ಲಿ ಘೋಷಿಸಿದ್ದಾರೆ.

ರಾಜಕೀಯ ದುರುದ್ದೇಶ- ಚಾರಿತ್ರ್ಯ ಹನನ

‘ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಇದು ಸ್ಪಷ್ಟವಾಗಿ ರಾಜಕೀಯ ದುರುದ್ದೇಶದಿಂದ ನನ್ನ ಚಾರಿತ್ರ್ಯಹನನ ಮಾಡುವ ಪ್ರಯತ್ನದಂತೆ ಕಾಣುತ್ತಿದೆ. ಈ ಸ್ಟ್ರಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲದೆ ಇದ್ದರೂ ಇದನ್ನು ಬಳಸಿಕೊಂಡು ಕೆಲವು ಕಿಡಿಗೇಡಿಗಳು ನನ್ನ ವಿರುದ್ದ ಅಪಪ್ರಚಾರದಲ್ಲಿ ತೊಡಗಿದ್ದಾರೆ,’ ಎಂದು ವಿವರಿಸಿರುವುದು ಗೊತ್ತಾಗಿದೆ.

ಯಾವ ಭಯವೂ ನನಗಿಲ್ಲ

ಈ ಹಿನ್ನೆಲೆಯಲ್ಲಿ ನನ್ನ ಹೆಸರಿನ ಉಲ್ಲೇಖ ಇರುವ ಈ ಸ್ಟ್ರಿಂಗ್ ಆಪರೇಷನ್ ವಿಡಿಯೋ ಅನ್ನು ಯಾವುದೇ ಪತ್ರಿಕೆ, ಚಾನೆಲ್ ಇಲ್ಲವೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ಇಲ್ಲವೇ ಪ್ರಸಾರ ಮಾಡದಂತೆ ತಡೆನೀಡಬೇಕು ಎಂದು ಕೋರಿ ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇನೆ ಎಂದು ಹೇಳಿಕೊಂಡಿರುವ ಸಿದ್ದರಾಮಯ್ಯ ಅವರು  ‘ಈ ವಿಷಯದಲ್ಲಿ ನಾನು ಸಂಪೂರ್ಣ ನಿರಪರಾಧಿ ಎನ್ನುವುದು ನನ್ನ ಆತ್ಮಸಾಕ್ಷಿಗೆ ತಿಳಿದಿದೆ. ತೆರೆದ ಪುಸ್ತಕದಂತಿರುವ ನನ್ನ ಐದು ದಶಕಗಳ ರಾಜಕೀಯ ಜೀವನದ ಅರಿವು ಇರುವ ರಾಜ್ಯದ ಜನತೆಗೂ ಇದು ಗೊತ್ತಿದೆ ಎನ್ನುವ ವಿಶ್ವಾಸ ನನಗಿದೆ. ಆದರೆ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುಳ್ಳನ್ನು ಸತ್ಯವಾಗಿ ಬಿಂಬಿಸುವುದು ಸುಲಭದ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ನಾನು ನ್ಯಾಯಾಲಯದ ಮೆಟ್ಟಿಲು ಏರಿದ್ದೇನೆಯೇ ಹೊರತು ಉಳಿದಂತೆ ಯಾವ ಭಯವೂ ನನಗಿಲ್ಲ,’ ಎಂದು ಹೇಳಿದ್ದಾರೆ.

ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗ

ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ ಎನ್ನುವ ವಿಶ್ವಾಸವೂ ನನಗಿದೆ. ನಾನು ಸಂಪೂರ್ಣವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು. ಇಲ್ಲಿಯ ವರೆಗಿನ ನನ್ನ ರಾಜಕೀಯ ಜೀವನದಲ್ಲಿ ನಾನೆಂದೂ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸಿದವನಲ್ಲ. ಆದರೆ ಕೆಲವು ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ನ್ಯಾಯಾಲಯದ ಮೂಲಕ ಪ್ರಕಟಣೆ-ಪ್ರಸಾರಕ್ಕೆ ತಡೆಯಾಜ್ಞೆ ತರಬೇಕಾದ ಪ್ರಸಂಗ ಬಂದಿದೆ ಎಂದು ಸಿದ್ದರಾಮಯ್ಯ ಅವರು  ವಿಷಾದ ವ್ಯಕ್ತಪಡಿಸಿದ್ದಾರೆ.

‘ಈ ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ನಾನು ಈಗಾಗಲೇ ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ಆ ತನಿಖೆಯಿಂದ ಸತ್ಯ ಹೊರಬರಲಿದೆ ಎಂಬ ವಿಶ್ವಾಸವೂ ನನಗಿದೆ. ಅಲ್ಲಿಯ ವರೆಗೆ ಮಾಧ್ಯಮಗಳು ಮಾತ್ರವಲ್ಲ ಸಾರ್ವಜನಿಕರು ಕೂಡಾ ಅನಗತ್ಯವಾಗಿ ಇಂತಹ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡದೆ ಸತ್ಯದ ಪರವಾಗಿ ನಿಲ್ಲಬೇಕು,’ ಎಂದು ಕೋರಿರುವುದು ಗೊತ್ತಾಗಿದೆ.

ಈ ವರದಿ ಪ್ರಕಟವಾಗುವ ಹೊತ್ತಿನಲ್ಲಿ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ಆದೇಶವನ್ನು ಪ್ರಕಟಿಸಿದೆ.

ವಿಡಿಯೋ ಪ್ರಸಾರ ಮಾಡದಂತೆ ಪ್ರತಿವಾದಿಗಳಿಗೆ ನ್ಯಾಯಾಲಯವು ನಿರ್ಬಂಧ ಹೇರಿದೆ.

ಯೂಟ್ಯೂಬ್‌ನಲ್ಲಿ ಪ್ರಸಾರವಾಗಿದ್ದ ಎರಡು ವಿಡಿಯೋಗಳಿಗೆ ಸಂಬಂಧಿಸಿದಂತೆ ಮಾತ್ರವಲ್ಲದೇ  ಅದರ ತುಣುಕು, ಫೋಟೋ, ಬರಹಗಳನ್ನೂ ಹಂಚದಂತೆ ನಿರ್ಬಂಧಿಸಿದೆ.

ಅದೇ ರೀತಿ  ವಿಡಿಯೋ ಎಡಿಟ್ ಮಾಡಿ ಅಥವಾ ಬೇರೆ ಚಾನೆಲ್‌ನಲ್ಲಿ ಹಾಕಿದರೂ ಪ್ರಸಾರ ಮಾಡುವಂತಿಲ್ಲ. ಬೇರೆ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ವಿಡಿಯೋ ಹಾಕದಂತೆಯೂ ತಡೆ  ನೀಡಿದೆ.  ಯೂಟ್ಯೂಬ್ ಸೇರಿದಂತೆ ಸಂಬಂಧಪಟ್ಟ ವೇದಿಕೆಗಳಲ್ಲಿ ವಿಡಿಯೋ ಬ್ಲಾಕ್ ಮಾಡಲು ಸೂಚಿಸಿದೆ.  ಮುಂದಿನ ವಿಚಾರಣೆವರೆಗೂ ವ ವಿಡಿಯೋ ಪ್ರಸಾರಕ್ಕೆ ತಡೆ ನೀಡಿದೆ.

ಕೋರ್ಟ್ ಆದೇಶದ ಪ್ರತಿಯನ್ನು ಪಡೆಯಲು ದಾವೆದಾರರು ಕಾನೂನು ಪ್ರಕ್ರಿಯೆ ಪಾಲಿಸಬೇಕು.  ಸೂಚನೆ ಪಾಲಿಸದಿದ್ದರೆ ಮಧ್ಯಂತರ ತಡೆಯಾಜ್ಞೆ ಆದೇಶವೇ ರದ್ದಾಗಲಿದೆ ಎಂದೂ ನ್ಯಾಯಾಲಯವು ಹೇಳಿದೆ.

ಸ್ಟಿಂಗ್ ಆಪರೇಷನ್‌; ಮಾಧ್ಯಮಗಳ ವಿರುದ್ಧ ತಡೆಯಾಜ್ಞೆಗೆ ಸಿದ್ದರಾಮಯ್ಯ ಎಂಬುವರಿಂದ ಅಸಲು ದಾವೆ ದಾಖಲು, ನಾಳೆಯೇ ಅರ್ಜಿ ವಿಚಾರಣೆ

ಸಿದ್ದರಾಮಯ್ಯ ಅವರು ಅಸಲು ದಾವೆ ಹೂಡಿದ್ದರ ಕುರಿತು ದಿ ಫೈಲ್‌ ವರದಿ ಪ್ರಕಟಿಸಿತ್ತು. ಈ ವರದಿ ಬೆನ್ನಲ್ಲೇ ನೈಜ ಹೋರಾಟಗಾರರ ವೇದಿಕೆಯು ಹೈಕೋರ್ಟ್‌ ಮೆಟ್ಟಿಲೇರಿತ್ತು.

Hot this week

21 ಪ್ಯಾಕೇಜ್‌ ಟೆಂಡರ್; ಶೇ. 5 ಪ್ರೀಮಿಯಂ ಮೀರಿದ್ದರೂ ಪರಿಶೀಲನೆ ಸಮಿತಿ ರಚಿಸಲು ಆಕ್ಷೇಪ ಎತ್ತಿದ್ದ ಡಿಕೆಶಿ

ಬೆಂಗಳೂರು;  ಜಿಬಿಎ ವ್ಯಾಪ್ತಿಯಲ್ಲಿ  ಉತ್ಪತ್ತಿಯಾಗುವ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ...

ಪ್ರಭಾವಿ ನಾಯಕನ ವಿರುದ್ಧ ಸ್ಟಿಂಗ್ ಕಾರ್ಯಾಚರಣೆ; ನ್ಯಾಯಾಂಗ ತನಿಖೆಗೆ ಹೈಕೋರ್ಟ್‌, ಬಾಲ ನ್ಯಾಯಮಂಡಳಿ ಮೆಟ್ಟಿಲೇರಿದ ನೈಜ ಹೋರಾಟಗಾರರ ವೇದಿಕೆ

ಬೆಂಗಳೂರು; ಯೂ ಟ್ಯೂಬ್‌ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ  ‘ಹನಿಟ್ರ್ಯಾಪ್’ ಪ್ರಕರಣದ...

ಸ್ಟಿಂಗ್ ಆಪರೇಷನ್‌; ಮಾಧ್ಯಮಗಳ ವಿರುದ್ಧ ತಡೆಯಾಜ್ಞೆಗೆ ಸಿದ್ದರಾಮಯ್ಯ ಎಂಬುವರಿಂದ ಅಸಲು ದಾವೆ ದಾಖಲು, ನಾಳೆಯೇ ಅರ್ಜಿ ವಿಚಾರಣೆ

ಬೆಂಗಳೂರು;  ರಾಜ್ಯ ರಾಜಕಾರಣದಲ್ಲಿ ಬಹು ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಬಗ್ಗೆ...

ಅಕ್ರಮ ಖಾತೆ, ಅನರ್ಹರಿಗೆ 79.28 ಕೋಟಿ ರು ಪರಿಹಾರ; ಕೆಎಎಸ್ ಅಧಿಕಾರಿ ವಿರುದ್ಧದ ಮೊದಲ ವಿಚಾರಣೆಯಲ್ಲೇ ಲೋಪ, ಮರು ವಿಚಾರಣೆಗೆ ಆದೇಶ

ಬೆಂಗಳೂರು; ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಇಮ್ಮಾವು ಗ್ರಾಮದಲ್ಲಿ 54 ಎಕರೆಗೆ...

ಅನುದಾನ ರಹಿತ ಅವಧಿಗೂ ವೇತನ, ಪಿಂಚಣಿ ಸೌಲಭ್ಯ; ಹೈಕೋರ್ಟ್ ಆದೇಶ ಪಾಲಿಸಿದರೇ 22,663.81 ಕೋಟಿ ವೆಚ್ಚ, ಬೊಕ್ಕಸಕ್ಕೆ ಹೊರೆ

ಬೆಂಗಳೂರು; ವೇತಾನುದಾನಕ್ಕೆ ಒಳಪಡಿಸುವ ಪೂರ್ವದಲ್ಲಿ ಸಲ್ಲಿಸಿರುವ ಸೇವೆಗಳನ್ನು ಪಿಂಚಣಿಗಳಿಗೆ ಪರಿಗಣಿಸಬೇಕು ಎಂದು...
Please Scan to make Your Contribution

Topics

ಪಡಿತರ ಆಹಾರಧಾನ್ಯ ಎತ್ತುವಳಿ, ಸಕ್ಕರೆ ಸಹಾಯಧನ, ಕನಿಷ್ಟ ಬೆಂಬಲ ಬೆಲೆ; 1,171.73 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

ಬೆಂಗಳೂರು; ಕನಿಷ್ಠ ಬೆಂಬಲ ಬೆಲೆ  ಅಡಿಯಲ್ಲಿ ಖರೀದಿ ಕಾರ್ಯಾಚರಣೆ ನಡೆಸುತ್ತಿರುವ ಕರ್ನಾಟಕ...

Related Articles

Popular Categories

error: Content is protected !!