Sunday | October 18, 2026 |

ಫಸಲ್ ಬಿಮಾ ಯೋಜನೆಯಡಿಯಲ್ಲಿ 304 ಕೋಟಿ ಬಿಡುಗಡೆ; ಆಯವ್ಯಯದಲ್ಲಿ ಅನುದಾನ ನಿಗದಿಪಡಿಸಿಲ್ಲವೆಂದಿದ್ದೇಕೆ?, ಚರ್ಚೆಗೆ ಗ್ರಾಸವಾದ ಸ್ಪಷ್ಟೀಕರಣ

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ ಗೋವಿಂದರಾವ್ ಅವರ ವರದಿ  ಶಿಫಾರಸ್ಸಿನಂತೆ  2026-27ನೇ ಸಾಲಿನ ಆಯವ್ಯಯದಲ್ಲಿ  ಅನುದಾನವನ್ನೇ ನಿಗದಿಪಡಿಸಿಲ್ಲ ಎಂದು ದಿ ಫೈಲ್‌ ಪ್ರಕಟಿಸಿದ್ದ  ವರದಿಗೆ ಸ್ಪಷ್ಟೀಕರಣ ನೀಡಿರುವ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಡಿಯಲ್ಲಿ 304.00 ಕೋಟಿ ರು ಪೂರ್ಣವಾಗಿ ಬಿಡುಗಡೆ ಮಾಡಿದೆ ಎಂದು ಸಮಜಾಯಿಷಿ ನೀಡಿದ್ದಾರೆ.

ವಿಶೇಷವೆಂದರೇ  2026ರ ಜುಲೈನಲ್ಲಿ ನಡೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ ಇಲಾಖೆಯ ಜಂಟಿ ನಿರ್ದೇಶಕರು  ಪ್ರೊ ಎಂ ಗೋವಿಂದರಾವ್ ಅವರ ವರದಿಯಲ್ಲಿ ಶಿಫಾರಸ್ಸು ಮಾಡಿರುವಂತೆ 2026-27ನೇ ಸಾಲಿನ ಆಯವ್ಯಯದಲ್ಲಿ ಅನುದಾನವನ್ನು ನಿಗದಿಪಡಿಸಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರೇ ಸಭೆಯ ಗಮನಕ್ಕೆ ತಂದಿದ್ದರು.

ಆದರೀಗ ಪ್ರಾದೇಶಿಕ ಅಸಮತೋಲನ ನಿವಾರಣೆ ಕಾರ್ಯಕ್ರಮದಡಿಯಲ್ಲಿ  2026-27ನೇ ಸಾಲಿನ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಗೆ (ಲೆಕ್ಕ ಶೀರ್ಷಿಕೆ; 2401-00-110-0-07) ವಿವಿಧ ಉಪ ಶೀರ್ಷಿಕೆಯಲ್ಲಿ 304 ಕೋಟಿ ರು. ಅನುದಾನ ನಿಗದಿಪಡಿಸಲಾಗಿತ್ತು ಮತ್ತು ಈ ಹಣವನ್ನು ಪೂರ್ಣವಾಗಿ ಬಿಡುಗಡೆ ಮಾಡಲಾಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

‘ಪ್ರೊ ಎಂ ಗೋವಿಂದರಾವ್ ಅವರ ವರದಿ ಸ್ವೀಕೃತವಾಗುವ ಮೊದಲೇ ಆಯವ್ಯಯ ಸಿದ್ದಪಡಿಸುವ ಕಾರ್ಯವನ್ನು ಬಹುತೇಕ ಪೂರ್ಣಗೊಳಿಸಿತ್ತು. ಹೀಗಾಗಿ ಪ್ರೊ ಎಂ ಗೋವಿಂದರಾವ್ ಅವರ ವರದಿಯ ಶಿಫಾರಸ್ಸಿನಂತೆ ಪೂರ್ಣ ಪ್ರಮಾಣದಲ್ಲಿ ಅನುದಾನ ನಿಗದಿಪಡಿಸಲು ಸಾಧ್ಯವಾಗಿಲ್ಲ,’ ಎಂದು ಸಭೆಯಲ್ಲಿ ವಿವರಿಸಿದ್ದರು.  ಆದರೀಗ ಜಂಟಿ ನ ನಿರ್ದೇಶಕರು ನೀಡಿರುವ ಸಮಜಾಯಿಷಿಯು ಚರ್ಚೆಗೆ ಗ್ರಾಸವಾಗಿದೆ.

ಸಭೆಯಲ್ಲಿ ಗಮನಕ್ಕೆ ತಂದಿದ್ದೇನು?

ಕೃಷಿ ಇಲಾಖೆಗೆ ಲೆಕ್ಕ ಶೀರ್ಷಿಕೆ 2401-00-10-0-07ರ ಅಡಿಯಲ್ಲಿ 304.00 ಕೋಟಿ ರು.ಗಳನ್ನು ನಿಗದಿಪಡಿಸಿತ್ತು. ಆದರೆ ಪ್ರೊ ಎಂ ಗೋವಿಂದರಾವ್ ಅವರ ವರದಿಯಲ್ಲಿ ಶಿಫಾರಸ್ಸು ಮಾಡಿರುವಂತೆ 2026-27ನೇ ಸಾಲಿನ ಆಯವ್ಯಯದಲ್ಲಿ ಅನುದಾನವನ್ನು ನಿಗದಿಪಡಿಸಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರೇ, 2026ರ ಜುಲೈನಲ್ಲಿ ನಡೆದಿದ್ದ ಸಭೆಯ ಗಮನಕ್ಕೆ ತಂದಿದ್ದರು.

 

 

 

‘ಈ ವಿಷಯವನ್ನು ತಮ್ಮ ಕಾರ್ಯದರ್ಶಿಗಳ ಮೂಲಕ ಆರ್ಥಿಕ ಇಲಾಖೆ ಗಮನಕ್ಕೆ ತರಬೇಕು ಮತ್ತು ವರದಿಯ ಶಿಫಾರಸ್ಸಿನಂತೆ ಅನುದಾನವನ್ನು ಹಂಚಿಕೆ ಮಾಡಬೇಕು,’ ಎಂದು ಸಮಿತಿಯ ಸದಸ್ಯ ಕಾರ್ಯದರ್ಶಿ ಅವರು ಕೃಷಿ ಇಲಾಖೆಗೆ ಸೂಚಿಸಿದ್ದರು.

 

 

 

ಪ್ರೊ ಗೋವಿಂದರಾವ್ ವರದಿಯ ಶಿಫಾರಸ್ಸಿನಂತೆ ಕೃಷಿ ಇಲಾಖೆ ಅನುಷ್ಠಾನಗೊಳಿಸಿರುವ ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆಗೆ 304 ಕೋಟಿ ರು.ಗಳನ್ನು ಅನುದಾನ ನಿಗದಿಪಡಿಸಿತ್ತು. ಈ ಅನುದಾನವನ್ನು ಶೇ. 3; 1; 1ರ ಅನುಪಾತದಂತೆ ನಿಗದಿಪಡಿಸಿತ್ತು. ಒಟ್ಟು 59 ತಾಲೂಕುಗಳ ಪೈಕಿ  ಅತ್ಯಂತ ಹಿಂದುಳಿದ ತಾಲೂಕುಗಳಿಗೆ 152 ಕೋಟಿ, ಅತೀ ಹಿಂದುಳಿದ ತಾಲೂಕುಗಳಿಗೆ 101 ಕೋಟಿ, ಹಿಂದುಳಿದ ತಾಲೂಕುಗಳಿಗೆ 51 ಕೋಟಿ ರು ಸೇರಿತ್ತು.  ಈ ಅನುದಾನವನ್ನು ಸಮನಾಗಿ ಹಂಚಿಕೆ ಮಾಡಿ ವೆಚ್ಚ ಮಾಡಬೇಕು ಎಂದು ಸೂಚಿಸಿತ್ತು.

 

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

 

ಇಲಾಖೆ ನೀಡಿರುವ ಸ್ಪಷ್ಟೀಕರಣದಲ್ಲೇನಿದೆ?

ಕೇಂದ್ರ ಸರ್ಕಾರದ 2023ರ ಅನ್ವಯ ಮುಂಗಾರು 2023ರ ಹಂಗಾಮಿನಿಂದ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಯಡಿ ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬೆಳೆ ವಿಮೆಯಡಿ ನೋಂದಾಯಿಸಿಕೊಳ್ಳುವುದು ಐಚ್ಛಿಕವಾಗಿದೆ. ಈ ಯೋಜನೆಯು ಇಳುವರಿ ಮತ್ತು ಕ್ಷೇತ್ರ ಆಧಾರಿತ ಯೋಜನೆಯಾಗಿದೆ. ಮಾರ್ಗಸೂಚಿ ಪ್ರಕಾರ ಹೋಬಳಿ/ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯು ನೀಡುವ ಬೆಳೆ ಕಟಾವು ಪ್ರಯೋಗಗಳಿಂದ ಬಂದಂತಹ ವಾಸ್ತವಿಕ ಇಳುವರಿಯು ನಿಗದಿಪಡಿಸಲಾದ ಪ್ರಾರಂಭಿಕ ಇಳುವರಿಗಿಂತ  ಕಡಿಮೆ ಇದ್ದರೆ ಇಳುವರಿಯ ಶೇಕಡವಾರು ಕೊರತೆಗೆ ಅನುಗುಣವಾಗಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಲೆಕ್ಕ ಹಾಕಲಾಗುತ್ತದೆ ಎಂದು ಸ್ಪಷ್ಟೀಕರಣದಲ್ಲಿ ಜಂಟಿ ನಿರ್ದೇಶಕರು ವಿವರಿಸಿದ್ದಾರೆ.

 

 

2024-25 ಮತ್ತು 2025-26ನೇ ಸಾಲಿನಲ್ಲಿ ಆರ್ಥಿಕ ಇಲಾಖೆಯ ಅನುಮೋದನೆಯೊಂದಿಗೆ  CUP AND CAP (80;110) ಮಾದರಿಯನ್ನು ಅನುಷ್ಠಾನಗೊಳಿಸಿದೆ. CUP AND CAP (80;110) ಮಾದರಿಯಲ್ಲಿ ಒಂದು ವರ್ಷ ಒಂದು ಹಂಗಾಮಿನಲ್ಲಿ ಒಂದು ಕ್ಲಸ್ಟರ್‍‌ನಲ್ಲಿ ವಿಮಾ ಸಂಸ್ಥೆಯವರು ಪಡೆದ ಒಟ್ಟು ವಿಮಾ ಕಂತಿನ ಮೊತ್ತಕ್ಕೆ ಇತ್ಯರ್ಥಪಡಿಸಬೇಕಾದ ಬೆಳೆ ವಿಮೆ ಪರಿಹಾರ ಮೊತ್ತವು ಶೇ.110ಕ್ಕಿಂತ ಹೆಚ್ಚು ಇದ್ದಾಗ ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರವು ಭರಿಸಬೇಕಾಗುತ್ತದೆ ಎಂದು ಸಮಜಾಯಿಷಿ ನೀಡಿದ್ದಾರೆ.

2026-27ನೇ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಯಡಿಯಲ್ಲಿ ಲೆಕ್ಕ ಶೀರ್ಷಿಕೆ ( 2401-00-110-0-07) ರ ವಿವಿಧ ಉಪ ಶೀರ್ಷಿಕೆಗಳಡಿಯಲ್ಲಿ 304 ಕೋಟಿ ರು.ಗಳ ಅನುದಾನವನ್ನು ನಿಗದಿಪಡಿಸಿದ್ದು ಪೂರ್ಣವಾಗಿ ಬಿಡುಗಡೆಯಾಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಪ್ರಾದೇಶಿಕ ಅಸಮತೋಲನ ನಿವಾರಣೆ ಕಾರ್ಯಕ್ರಮದಡಿಯಲ್ಲಿ 254.43 ಕೋಟಿ ರು ನಿಗದಿಯಾಗಿತ್ತು. ಇದೇ ಕಾರ್ಯಕ್ರಮದ ವಿಶೇಷ ಘಟಕ ಯೋಜನೆಯಡಿಯಲ್ಲಿ 34.09 ಕೋಟಿ, ಗಿರಿಜನ ಉಪ ಯೋಜನೆಯಡಿಯಲ್ಲಿ 15.48 ಕೋಟಿ ರು ಒಟ್ಟಾರೆ 304 ಕೋಟಿ ರು ಬಿಡುಗಡೆಯಾಗಿದೆ ಎಂದು ವಿವರಿಸಿದ್ದಾರೆ.

 

 

‘ಪ್ರೊ ಎಂ ಗೋವಿಂದರಾವ್ ಅವರ ವರದಿಯ ಶಿಫಾರಸ್ಸಿನಂತೆ ಅತ್ಯಂತ ಹಿಂದುಳಿದ ಮತ್ತು ಅತೀ ಹಿಂದುಳಿದ ಹಾಗೂ ಹಿಂದುಳಿದ ತಾಲೂಕುಗಳಲ್ಲಿ ರಾಜ್ಯದ ಪಾಲಿನ ಬೆಳೆ ವಿಮೆ ಪರಿಹಾರವನ್ನು ಭರಿಸಲು ಬಳಸಲಾಗಿದೆ,’ ಎಂದು ಜಂಟಿ ಕೃಷಿ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.

Hot this week

ಮರಿಮಲ್ಲಪ್ಪ ಶಿಕ್ಷಣ ಸಂಸ್ಥೆಯಿಂದ ನಿಯಮ, ಕಾಯ್ದೆ ಉಲ್ಲಂಘನೆ ಆರೋಪ; ಆಡಳಿತಾಧಿಕಾರಿ ನೇಮಕಕ್ಕೆ ಮುಂದಾದ ಸರ್ಕಾರ, ಇದು ಖಾಸಗಿ ಸಂಸ್ಥೆಯೋ ಸಾರ್ವಜನಿಕ ಸಂಸ್ಥೆಯೋ?

ಬೆಂಗಳೂರು; ಮೈಸೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮರಿಮಲ್ಲಪ್ಪ ವಿದ್ಯಾ ಸಂಸ್ಥೆಯು ಕಾಲೇಜು, ...

ಅಪೆಕ್ಸ್ ಬ್ಯಾಂಕ್‌ನಲ್ಲಿ 1,000 ಕೋಟಿ ಹಗರಣ; ಹೈಕೋರ್ಟ್‌ನಲ್ಲಿ ಪಿಐಎಲ್‌, ಸರ್ಕಾರಕ್ಕೆ ಎದುರಾಗಲಿದೆಯೇ ಸಂಕಷ್ಟ?

ಬೆಂಗಳೂರು; ಕೃಷಿಗೆ ಸಂಬಂಧಿಸದ ಉದ್ದೇಶಗಳಿಗಾಗಿ ಸಾಲ ಮಂಜೂರಾತಿ,  ಈಗಾಗಲೇ ಅನುತ್ಪಾದಕ ಆಸ್ತಿಗಳೆಂದು (Non-Performing...

ರೈಲ್ವೇ- ವಿಮಾನ ಭತ್ಯೆ; 15ನೇ ವಿಧಾನಸಭೆಯ ಶಾಸಕರಿಗೆ 16.32 ಕೋಟಿ ಮರು ಪಾವತಿ

ಬೆಂಗಳೂರು; ಹದಿನೈದನೇ ವಿಧಾಸಭೆ ಅವಧಿಯಲ್ಲಿ ರಾಜ್ಯದ 224 ಶಾಸಕರು  16.32 ಕೋಟಿಯಷ್ಟು...

ಆರ್ಥಿಕ ಸ್ಥಿತಿ ಬಹಿರಂಗಪಡಿಸಿ ಕೋಲಾಹಲ ಎಬ್ಬಿಸಿದ್ದ ಅನಧಿಕೃತ ಟಿಪ್ಪಣಿಯ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರವು ₹2 ಲಕ್ಷ ಕೋಟಿಗೂ ಹೆಚ್ಚಿನ ಕಾಮಗಾರಿಗಳ ಬಾಕಿ...

ಸ್ಟಿಂಗ್ ಆಪರೇಷನ್‌; ಅಸಲು ದಾವೆ ಬೆನ್ನಲ್ಲೇ ಪೊಲೀಸ್‌ ಆಯುಕ್ತರಿಗೂ ದೂರು ಸಲ್ಲಿಸಿ ಯಾವ ಭಯವೂ ನನಗಿಲ್ಲವೆಂದ ಸಿದ್ದರಾಮಯ್ಯ

ಬೆಂಗಳೂರು; ಯೂ ಟ್ಯೂಬ್‌ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು...
Please Scan to make Your Contribution

Topics

ಮರಿಮಲ್ಲಪ್ಪ ಶಿಕ್ಷಣ ಸಂಸ್ಥೆಯಿಂದ ನಿಯಮ, ಕಾಯ್ದೆ ಉಲ್ಲಂಘನೆ ಆರೋಪ; ಆಡಳಿತಾಧಿಕಾರಿ ನೇಮಕಕ್ಕೆ ಮುಂದಾದ ಸರ್ಕಾರ, ಇದು ಖಾಸಗಿ ಸಂಸ್ಥೆಯೋ ಸಾರ್ವಜನಿಕ ಸಂಸ್ಥೆಯೋ?

ಬೆಂಗಳೂರು; ಮೈಸೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮರಿಮಲ್ಲಪ್ಪ ವಿದ್ಯಾ ಸಂಸ್ಥೆಯು ಕಾಲೇಜು, ...

ಅಪೆಕ್ಸ್ ಬ್ಯಾಂಕ್‌ನಲ್ಲಿ 1,000 ಕೋಟಿ ಹಗರಣ; ಹೈಕೋರ್ಟ್‌ನಲ್ಲಿ ಪಿಐಎಲ್‌, ಸರ್ಕಾರಕ್ಕೆ ಎದುರಾಗಲಿದೆಯೇ ಸಂಕಷ್ಟ?

ಬೆಂಗಳೂರು; ಕೃಷಿಗೆ ಸಂಬಂಧಿಸದ ಉದ್ದೇಶಗಳಿಗಾಗಿ ಸಾಲ ಮಂಜೂರಾತಿ,  ಈಗಾಗಲೇ ಅನುತ್ಪಾದಕ ಆಸ್ತಿಗಳೆಂದು (Non-Performing...

ರೈಲ್ವೇ- ವಿಮಾನ ಭತ್ಯೆ; 15ನೇ ವಿಧಾನಸಭೆಯ ಶಾಸಕರಿಗೆ 16.32 ಕೋಟಿ ಮರು ಪಾವತಿ

ಬೆಂಗಳೂರು; ಹದಿನೈದನೇ ವಿಧಾಸಭೆ ಅವಧಿಯಲ್ಲಿ ರಾಜ್ಯದ 224 ಶಾಸಕರು  16.32 ಕೋಟಿಯಷ್ಟು...

ಆರ್ಥಿಕ ಸ್ಥಿತಿ ಬಹಿರಂಗಪಡಿಸಿ ಕೋಲಾಹಲ ಎಬ್ಬಿಸಿದ್ದ ಅನಧಿಕೃತ ಟಿಪ್ಪಣಿಯ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರವು ₹2 ಲಕ್ಷ ಕೋಟಿಗೂ ಹೆಚ್ಚಿನ ಕಾಮಗಾರಿಗಳ ಬಾಕಿ...

ಸ್ಟಿಂಗ್ ಆಪರೇಷನ್‌; ಅಸಲು ದಾವೆ ಬೆನ್ನಲ್ಲೇ ಪೊಲೀಸ್‌ ಆಯುಕ್ತರಿಗೂ ದೂರು ಸಲ್ಲಿಸಿ ಯಾವ ಭಯವೂ ನನಗಿಲ್ಲವೆಂದ ಸಿದ್ದರಾಮಯ್ಯ

ಬೆಂಗಳೂರು; ಯೂ ಟ್ಯೂಬ್‌ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು...

21 ಪ್ಯಾಕೇಜ್‌ ಟೆಂಡರ್; ಶೇ. 5 ಪ್ರೀಮಿಯಂ ಮೀರಿದ್ದರೂ ಪರಿಶೀಲನೆ ಸಮಿತಿ ರಚಿಸಲು ಆಕ್ಷೇಪ ಎತ್ತಿದ್ದ ಡಿಕೆಶಿ

ಬೆಂಗಳೂರು;  ಜಿಬಿಎ ವ್ಯಾಪ್ತಿಯಲ್ಲಿ  ಉತ್ಪತ್ತಿಯಾಗುವ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ...

ಪ್ರಭಾವಿ ನಾಯಕನ ವಿರುದ್ಧ ಸ್ಟಿಂಗ್ ಕಾರ್ಯಾಚರಣೆ; ನ್ಯಾಯಾಂಗ ತನಿಖೆಗೆ ಹೈಕೋರ್ಟ್‌, ಬಾಲ ನ್ಯಾಯಮಂಡಳಿ ಮೆಟ್ಟಿಲೇರಿದ ನೈಜ ಹೋರಾಟಗಾರರ ವೇದಿಕೆ

ಬೆಂಗಳೂರು; ಯೂ ಟ್ಯೂಬ್‌ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ  ‘ಹನಿಟ್ರ್ಯಾಪ್’ ಪ್ರಕರಣದ...

ಸ್ಟಿಂಗ್ ಆಪರೇಷನ್‌; ಮಾಧ್ಯಮಗಳ ವಿರುದ್ಧ ತಡೆಯಾಜ್ಞೆಗೆ ಸಿದ್ದರಾಮಯ್ಯ ಎಂಬುವರಿಂದ ಅಸಲು ದಾವೆ ದಾಖಲು, ನಾಳೆಯೇ ಅರ್ಜಿ ವಿಚಾರಣೆ

ಬೆಂಗಳೂರು;  ರಾಜ್ಯ ರಾಜಕಾರಣದಲ್ಲಿ ಬಹು ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಬಗ್ಗೆ...

Related Articles

Popular Categories

error: Content is protected !!