Wednesday | May 6, 2026 |

ಜೈಲುಗಳಿಗೆ ಗಾಂಜಾ, ಮಾದಕ ವಸ್ತುಗಳ ಪ್ರವೇಶ; ಸಲ್ಲಿಕೆಯಾಗದ ಅನುಸರಣಾ ವರದಿ

ಬೆಂಗಳೂರು; ರಾಜ್ಯದ ಕಾರಾಗೃಹಗಳಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳು ಪ್ರವೇಶಿಸಲು ಕಾರಣರಾಗಿದ್ದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮಾಡಿದ್ದ ಶಿಫಾರಸ್ಸುಗಳ ಅನುಷ್ಠಾನದ ಅನುಸರಣ ವರದಿಯನ್ನು ಒಳಾಡಳಿತ ಇಲಾಖೆಯು ಈವರೆವಿಗೂ ಸಲ್ಲಿಸಿಲ್ಲ.

ಕಾರಾಗೃಹ ಇಲಾಖೆಯಲ್ಲಿನ ಆಂತರಿಕ ನಿಯಂತ್ರಣ ವ್ಯವಸ್ಥೆಯ ಕುರಿತಾದ ಅನುಪಾಲನಾ ಲೆಕ್ಕಪರಿಶೋಧನೆ ಕುರಿತು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್‌ ಕೆ ಪಾಟೀಲ್‌ ಅವರು 2020ರ ಮಾರ್ಚ್‌ 10ರಂದು ಉಭಯ ಸದನಗಳಿಗೆ ಮಂಡಿಸಿದ್ದರು.

ಸದನಕ್ಕೆ ವರದಿ ಮಂಡನೆಯಾದ 6 ತಿಂಗಳೊಳಗೆ ಸಂಬಂಧಿಸಿದ ಇಲಾಖೆಯು ಅನುಸರಣಾ ವರದಿಯನ್ನು ಸಮಿತಿಗೆ ಸಲ್ಲಿಸಬೇಕು. ಆದರೆ ಒಳಾಡಳಿತ ಇಲಾಖೆಯು ಕಾಲಮಿತಿಯೊಳಗೆ ಅನುಸರಣಾ ವರದಿ ಸಲ್ಲಿಸಿಲ್ಲ ಎಂದು ತಿಳಿದು ಬಂದಿದೆ. ಡಿ ರೂಪಾ ಅವರು ಗೃಹ ಇಲಾಖೆಗೆ ಕಾರ್ಯದರ್ಶಿಯಾದ ನಂತರವೂ ವರದಿ ಸಲ್ಲಿಕೆ ಕುರಿತು ಯಾವುದೇ ಪ್ರಗತಿಯಾಗಿಲ್ಲ ಎಂದು ಗೊತ್ತಾಗಿದೆ.

ರಾಜ್ಯದ ಕಾರಾಗೃಹಗಳಲ್ಲಿ ನಿಷೇಧಾತ್ಮಕ ವಸ್ತುಗಳ ಪ್ರವೇಶವನ್ನು ಪತ್ತೆ ಹಚ್ಚುವುದು, ತಡೆಗಟ್ಟುವುದು, ಕಣ್ಗಾವಲಿಗೆ, ಕೈಯಲ್ಲಿ ಹಿಡಿಯುವ ಲೋಹ ಪತ್ತೆಕಾರಿಗಳು, ಲೋಹ ಪತ್ತೆಕಾರಿಗಳು ಸೇರಿದಂತೆ ಇನ್ನಿತರೆ ಸಾಧನಗಳನ್ನು ಅಧಿಕಾರಿಗಳು ಬಳಸಿರಲಿಲ್ಲ. ಹೀಗಾಗಿ ಕಾರಾಗೃಹಗಳಲ್ಲಿ ಗಾಂಜಾ, ಅಫೀಮು, ತಂಬಾಕು, ಮಾದಕ ವಸ್ತುಗಳು ಸುಲಭವಾಗಿ ಪ್ರವೇಶಿಸಿದ್ದವು ಎಂದು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು (2014-15) ವರದಿ ಪತ್ತೆ ಹಚ್ಚಿತ್ತು.

‘ಮಾದಕ ವಸ್ತುಗಳು, ಮೊಬೈಲ್‌ ಫೋನ್‌, ಸಿಮ್‌ ಕಾರ್ಡ್‌ಗಳು ಕಾರಾಗೃಹಗಳಲ್ಲಿ ಅಪಾರ ಪ್ರಮಾಣದಲ್ಲಿ ಪತ್ತೆಯಾಗಿರುವುದಕ್ಕೆ ಸಮಿತಿಯು ತೀವ್ರ ಅತೃಪ್ತಿ ವ್ಯಕ್ತಪಡಿಸುತ್ತದೆ. ನಿಷೇಧಿತ ವಸ್ತುಗಳು ಕಾರಾಗೃಹಗಳನ್ನು ಪ್ರವೇಶಿಸದಂತೆ ತಡೆಯಲು ನಿಗದಿಪಡಿಸಿರುವ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸದೆ ಅಂತಹ ವಸ್ತುಗಳ ಪ್ರವೇಶಕ್ಕೆ ಜವಾಬ್ದಾರರಾದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು,’ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಶಿಫಾರಸ್ಸು ಮಾಡಿತ್ತು.

ರಾಜ್ಯದ ಎಲ್ಲಾ ಕಾರಾಗೃಹಗಳ ಮುಖ್ಯಸ್ಥರು ಪ್ರತಿನಿತ್ಯ ತಪಾಸಣೆ ನಡೆಸಿ ಅಕ್ರಮವಾಗಿ ನಿಷೇಧಿತ ವಸ್ತುಗಳ ಬಳಕೆ/ಬಳಕೆಯಾಗದಿರುವ ಬಗ್ಗೆ ಕೇಂಧ್ರ ಕಚೇರಿಗೆ ದೃಢೀಕೃತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಇಲಾಖಾ ಮುಖ್ಯಸ್ಥರಿಗೆ ಸಮಿತಿಯು ಸೂಚಿಸಿತ್ತು.

ಕಾರಾಗೃಹಗಳಲ್ಲಿನ ಮಾದಕ ವಸ್ತುಗಳನ್ನು ಮತ್ತು ಮಾದಕ ವ್ಯಸನಿಗಳನ್ನು ಪತ್ತೆ ಹಚ್ಚಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಕೇಂದ್ರ ಸರ್ಕಾರವು 2010ರಲ್ಲೇ ಸೂಚಿಸಿತ್ತು. ಆದರೆ ಕರ್ನಾಟಕ ಕಾರಾಗೃಹಗಳ ಇಲಾಖೆಯು ಆ ಸೂಚನೆಗಳನ್ನು ಪಾಲಿಸಿರಲಿಲ್ಲ. ಬೆಳಗಾವಿ, ಚಿಕ್ಕಮಗಳೂರು, ಹಾವೇರಿ, ಬೀದರ್‌, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ ಕಾರಾಗೃಹಗಳಲ್ಲಿನ ಅನಿರೀಕ್ಷಿತ ತಪಾಸಣೆಗಳನ್ನೂ ನಡೆಸಿರಲಿಲ್ಲ.

‘ಕಾರಾಗೃಹಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಮಾದಕ ವಸ್ತುಗಳು, ಮೊಬೈಲ್‌ಗಳು, ಸಿಮ್‌ ಕಾರ್ಡ್‌ಗಳು, ಪೆನ್‌ಡ್ರೈವ್‌ಗಳು, ಸ್ಕ್ರೂ ಡ್ರೈವರ್‌ಗಳ ಕುರಿತು ಇಲಾಖೆ ನಡೆಸುತ್ತಿರುವ ವಿಚಾರಣೆಯನ್ನು ಶೀಘ್ರವಾಗಿ ಮುಕ್ತಾಯಗೊಳಿಸಬೇಕು. ಅಲ್ಲದೆ ತಪ್ಪಿತಸ್ಥ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಆ ಬಗ್ಗೆ ವರದಿಯನ್ನು ಜರೂರಾಗಿ ನೀಡಬೇಕು,’ ಎಂದು ಸಮಿತಿ ನಿರ್ದೇಶಿಸಿತ್ತು.

ಮೈಸೂರು, ಧಾರವಾಡ, ಬಳ್ಳಾರಿ ಮತ್ತು ಬೆಂಗಳೂರು ಕಾರಾಗೃಹಗಳಲ್ಲಿ ಮೊಬೈಲ್‌ ಜಾಮರ್‌ ಅಳವಡಿಸಲು 28.28 ಕೋಟಿ ರು. ಅನುದಾನ ಒದಗಿಸಲಾಗಿತ್ತು. ಈ ಪೈಕಿ 86.05 ಲಕ್ಷ ವೆಚ್ಚ ಮಾಡಿದ್ದರೂ 2012ರ ಮೇ ತಿಂಗಳಿನಿಂದಲೇ ಮೊಬೈಲ್‌ ಜಾಮರ್‌ಗಳು ಉಪಯೋಗಿಸುವ ಸ್ಥಿತಿಯಲ್ಲಿ ಇರಲಿಲ್ಲ ಎಂದು ಸಿಎಜಿ ವರದಿ ಮಾಡಿತ್ತು.

ಇದಲ್ಲದೆ ವಿಚಾರಣಾಧೀನ ಕೈದಿಗಳನ್ನು ನ್ಯಾಯಾಲಯದಲ್ಲಿ ಹಾಜರುಪಡಿಸುವುದು, ಅಭಿರಕ್ಷಣೆಯಿಂದ ತಪ್ಪಿಸಿಕೊಂಡ ಕೈದಿಗಳು, ವೈದ್ಯಕೀಯ ಸೌಲಭ್ಯಗಳು, ಸಂದರ್ಶಕರ ಮಂಡಳಿ ರಚನೆ ಸೇರಿದಂತೆ ಕಾರಾಗೃಹಗಳಲ್ಲಿ ಹಲವು ಸುಧಾರಣೆಗಳ ಕುರಿತು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಸಮಿತಿಯು ಶಿಫಾರಸ್ಸುಗಳನ್ನು ಮಾಡಿದ್ದನ್ನು ಸ್ಮರಿಸಬಹುದು.

Hot this week

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...
Please Scan to make Your Contribution

Topics

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

Related Articles

Popular Categories

error: Content is protected !!