Sunday | October 4, 2026 |

ಬಿ ಸಿ ಪಾಟೀಲ್‌ರಿಂದಲೇ ಹಣಕ್ಕಾಗಿ ಬೇಡಿಕೆ!; ಮುಖ್ಯಮಂತ್ರಿಗೆ ನೌಕರರಿಂದಲೇ ಸಾಕ್ಷ್ಯ?

ಬೆಂಗಳೂರು; ಕೃಷಿ ಇಲಾಖೆಯಲ್ಲಿ ಗ್ರೂಪ್‌ ಎ, ಬಿ ಮತ್ತು ಸಿ ಗುಂಪಿನ ಅಧಿಕಾರಿ, ನೌಕರರ ವರ್ಗಾವಣೆಗಾಗಿ ಸಚಿವ ಬಿ ಸಿ ಪಾಟೀಲ್‌ ಮತ್ತು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಹಣಕ್ಕಾಗಿ ಬೇಡಿಕೆ ಇರಿಸಿದ್ದರು. ಈ ಸಂಬಂಧ ಸಚಿವರು ಮತ್ತು ಅವರ ಆಪ್ತಕೂಟ ಅಧಿಕಾರಿಗಳೊಂದಿಗೆ ನಡೆಸಿದ್ದ ಮಾತುಕತೆಯ ಧ್ವನಿ ಮತ್ತು ದೃಶ್ಯಾವಳಿಗಳೂ ಸಂತ್ರಸ್ತ ಅಧಿಕಾರಿ, ನೌಕರರ ಬಳಿ ಇವೆ!.

ಸಚಿವ ಬಿ ಸಿ ಪಾಟೀಲ್ ಅವರ ಹೆಸರು ಬಳಸಿ ಅವರ ಆಪ್ತಕೂಟ ಕೃಷಿ ಇಲಾಖೆ ಅಧಿಕಾರಿ, ನೌಕರರುಗಳಿಂದ ಲಕ್ಷಗಟ್ಟಲೇ ಸುಲಿಗೆ ಮಾಡಿದೆ ಎಂದು ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರ ಸದ್ದು ಮಾಡಿರುವ ಬೆನ್ನಲ್ಲೇ ಇದೇ ಇಲಾಖೆಯ ಗ್ರೂಪ್‌ ಎ , ಗ್ರೂಪ್‌ ಬಿ ಮತ್ತು ಗ್ರೂಪ್‌ ಸಿ ವರ್ಗದ ಅಧಿಕಾರಿ ನೌಕರರ ವರ್ಗಾವಣೆಯಲ್ಲಿಯೂ ಲಂಚಕ್ಕಾಗಿ ಬೇಡಿಕೆ ಇರಿಸಲಾಗಿತ್ತು ಎಂಬ ಮಾಹಿತಿಯನ್ನು ಸ್ವತಃ ಕೆಲ ಅಧಿಕಾರಿ, ನೌಕರರುಗಳೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗಮನಕ್ಕೆ ತಂದಿರುವುದು ಗೊತ್ತಾಗಿದೆ.

ಈ ಕುರಿತು ಒಂದಷ್ಟು ಅಧಿಕಾರಿಗಳು ಲಿಖಿತವಾಗಿ ಮುಖ್ಯಮಂತ್ರಿಗೆ 2020ರ ಜುಲೈ 1ರಂದು ಪತ್ರ ಮುಖೇನ ಗಮನಕ್ಕೆ ತಂದಿದ್ದಾರೆ ಎಂದು ಗೊತ್ತಾಗಿದೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

‘2020-21ನೇ ಸಾಲಿನ ಗ್ರೂಪ್‌ ಎ, ಗ್ರೂಪ್‌ ಮತ್ತು ಗ್ರೂಪ್‌ ಸಿ ವರ್ಗದ ಅಧಿಕಾರಿ/ನೌಕರರಿಗೆ ಮಾತ್ರ ಅನ್ವಯವಾಗುವಂತೆ 2020ರ ಜುಲೈ 10ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖೆ ಸಚಿವರುಗಳಿಗೆ ಅಧಿಕಾರಿ ಪ್ರತ್ಯಾಯೋಜಿಸಲಾಗಿದೆ. ಈ ಆದೇಶದ ಹಿನ್ನೆಲೆಯಲ್ಲಿ ಕೃಷಿ ಸಚಿವರಿಗೆ ಹಣ ಸಂದಾಯ ಮಾಡಬೇಕು ಎಂಬ ಸಬೂಬು ಹೇಳಿ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ತಮ್ಮ ಅಧೀನದಲ್ಲಿರುವ ಅಧಿಕಾರಿ/ನೌಕರರು ವರ್ಗಾವಣೆ ಪಡೆಯಬೇಕಾದರೆ ಅಥವಾ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಚೇರಿಗಳಲ್ಲಿಯೇ ಮುಂದುವರೆಯಬೇಕಾದರೆ ಲಕ್ಷ ರು.ಗಳನ್ನು ಕಡ್ಡಾಯವಾಗಿ ನೀಡಬೇಕು,’ ಎಂದು ಆದೇಶ ನೀಡಿರುತ್ತಾರೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಅಲ್ಲದೆ ಈ ಸಂಬಂಧ ಕೃಷಿ ಸಚಿವರ ಹಾಗೂ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳ ಹೇಳಿಕೆಗಳನ್ನು ಆಡಿಯೋ ಮತ್ತು ವಿಡಿಯೋ ರೆಕಾರ್ಡಿಂಗ್‌ ಮಾಡಲಾಗಿದೆ ಎಂದೂ ನೌಕರರು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದಾರೆ ಎಂದು ಗೊತ್ತಾಗಿದೆ.

ಇನ್ನು, ಸಚಿವ ಬಿ ಸಿ ಪಾಟೀಲ್‌ ಅವರ ಆಪ್ತ ಕಾರ್ಯದರ್ಶಿ ಕೆಎಎಸ್‌ ಅಧಿಕಾರಿ ಸಿ ಎಲ್‌ ಶಿವಕುಮಾರ್‌, ಎ ಸಿ ಮಂಜುನಾಥ್‌, ದಯಾನಂದ ಎಂಬ ಆಪ್ತಕೂಟಕ್ಕೆ ಹಣ ಸಂದಾಯ ಮಾಡಿರುವ ಪಟ್ಟಿಯನ್ನೂ ಕೃಷಿ ಇಲಾಖೆ ಸಿಬ್ಬಂದಿಗಳು ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್‌ 50 ಲಕ್ಷ, ಅಪರ ನಿರ್ದೇಶಕರುಗಳು 50 ಲಕ್ಷ, ಬೆಳಗಾವಿ ಜಂಟಿ ನಿರ್ದೇಶಕರು (ಜಿಲಾನಿ ಮತ್ತು ಪಾಟೀಲ್‌) 2 ಕೋಟಿ, ಕಲ್ಬುರ್ಗಿ ಜಂಟಿ ನಿರ್ದೇಶಕ (ಸೂಗೂರು) 1 ಕೋಟಿ, ರೂಪಾದೇವಿ 75 ಲಕ್ಷ, ಅಪರ ನಿರ್ದೇಶಕರು( ದಿವಾಕರ) 1 ಕೋಟಿ, ಚಿಕ್ಕಬಳ್ಳಾಪುರ ಜಂಟಿ ನಿರ್ದೇಶಕರು (ರೂಪ) 50 ಲಕ್ಷ, ದಾವಣಗೆರೆ ಜಂಟಿ ನಿರ್ದೇಶಕರು 50 ಲಕ್ಷ, ಜಂಟಿ ನಿರ್ದೇಶಕರು ಹಾವೇರಿ (ಮಂಜುನಾಥ್‌) 1 ಕೋಟಿ ನೀಡಿದ್ದಾರೆ ಎಂದು ಕೃಷಿ ಇಲಾಖೆ ಸಿಬ್ಬಂದಿ ಮುಖ್ಯ ಕಾರ್ಯದರ್ಶಿಗೆ ಪಟ್ಟಿ ಸಮೇತ ದೂರು ಸಲ್ಲಿಸಿರುವುದು ಗೊತ್ತಾಗಿದೆ.

ಆಪ್ತ ಕಾರ್ಯದರ್ಶಿ ಶಿವಕುಮಾರ್‌, ದಯಾನಂದ್‌ ಮತ್ತು ಮಂಜುನಾಥ್‌ ಎಂಬುವರು ಇಲಾಖೆಯ ಅಧಿಕಾರಿ, ನೌಕರರುಗಳಿಗೆ ವಾಟ್ಸಾಪ್‌ ಕರೆ ಮಾಡುವ ಮೂಲಕ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಪತ್ರದಲ್ಲಿ ದೂರಿರುವ ನೌಕರರು, ಕೃಷಿ ಯಾಂತ್ರೀಕರಣ, ಕೃಷಿ ಪರಿಕರ, ಕೀಟನಾಶಕಗಳು, ಸ್ಪ್ರಿಂಕಲ್‌/ಡ್ರಿಪ್‌ಗಳ ಅನುದಾನ ನೀಡುವುದರಲ್ಲಿಯೂ ಲೂಟಿ ಮಾಡಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದನ್ನು ಸ್ಮರಿಸಬಹುದು.

‘ಈ ಪ್ರಕರಣ ಬಹಳ ಗಂಭೀರವಾದದ್ದು. ಕೃಷಿ ಇಲಾಖೆ ಸಿಬ್ಬಂದಿಗಳು ಬರೆದಿದ್ದಾರೆ ಎನ್ನಲಾಗಿರುವ ದೂರರ್ಜಿಯನ್ನು ಮುಖ್ಯ ಕಾರ್ಯದರ್ಶಿಗಳು ತಕ್ಷಣವೇ ಭ್ರಷ್ಟಾಚಾರ ನಿಗ್ರಹ ದಳದ ಎಡಿಜಿಪಿಗೆ ನೇರವಾಗಿ ಕಳಿಸಿ ತುರ್ತಾಗಿ ಪ್ರಾಥಮಿಕ ತನಿಖೆ ನಡೆಸಲು ಆದೇಶಿಸಬೇಕು. ಹಾಗೆಯೇ ಬಿ ಸಿ ಪಾಟೀಲ್‌ ಅವರು ಈ ಪತ್ರದಲ್ಲಿ ಪ್ರಸ್ತಾಪಿತವಾಗಿರುವ ಅಧಿಕಾರಿ, ಏಜೆಂಟರ ಜತೆಗೆ ತಮಗಿರುವ ಸಂಬಂಧದ ಕುರಿತು ಕೂಡಲೇ ಸ್ಪಷ್ಟನೆ ನೀಡಬೇಕು,’

ರವಿ ಕೃಷ್ಣಾರೆಡ್ಡಿ, ಕರ್ನಾಟಕ ರಾಷ್ಟ್ರಸಮಿತಿ ರಾಜ್ಯಾಧ್ಯಕ್ಷ

‘ಅನುದಾನ ಯಾರಿಗೆ ಕೊಡಬೇಕು ಎಂದು ಏಜೆಂಟರುಗಳು ಮಂತ್ರಿಗಳ ಕಚೇರಿ, ವಸೂಲಿಗಾಗಿ ಪ್ರತ್ಯೇಕ ಕಚೇರಿ ತೆರೆದು ಯಾರು ಹೆಚ್ಚಿನ ಕಮಿಷನ್‌ ನೀಡುತ್ತಾರೋ ಉಪಕರಣಗಳು ಗುಣಮಟ್ಟದಿಂದ ಕೂಡಿಲ್ಲದಿದ್ದರೂ ಆಪ್ತ ಕಾರ್ಯದರ್ಶಿ, ಖಾಸಗಿ ಏಜೆಂಟರುಗಳು ಸೂಚಿಸುವ ವ್ಯಕ್ತಿಗಳಿಗೆ ಜಂಟಿ ನಿರ್ದೇಶಕರುಗಳು ಇಂಡೆಂಟ್‌ಗಳನ್ನು ನೀಡಬೇಕು. ಎಲ್ಲದಕ್ಕೂ ಮಂತ್ರಿಗಳ ಹೆಸರನ್ನು ಹೇಳಲಾಗುತ್ತಿದೆ,’ ಎಂದು ದೂರಿನಲ್ಲಿ ಆರೋಪಿಸಿರುವುದು ಗೊತ್ತಾಗಿದೆ.

Hot this week

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮನವಿ; ಸ್ಪಷ್ಟ ಅಭಿಪ್ರಾಯ ಸಲ್ಲಿಸಲು ಡಿಜಿಐಜಿಪಿಗೆ ನಿರ್ದೇಶನ

ಬೆಂಗಳೂರು;   ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧದ ಪ್ರಕರಣದಲ್ಲಿ ಸಿಐಡಿ ವಿಶೇಷ ವಿಚಾರಣೆ...

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...
Please Scan to make Your Contribution

Topics

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮನವಿ; ಸ್ಪಷ್ಟ ಅಭಿಪ್ರಾಯ ಸಲ್ಲಿಸಲು ಡಿಜಿಐಜಿಪಿಗೆ ನಿರ್ದೇಶನ

ಬೆಂಗಳೂರು;   ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧದ ಪ್ರಕರಣದಲ್ಲಿ ಸಿಐಡಿ ವಿಶೇಷ ವಿಚಾರಣೆ...

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು...

ವಿಮಾ ಕಂಪನಿಯಿಂದ ಹಣ ಬಂದಿದೆ, ಆದರೆ ರೈತರ ಖಾತೆಗಳಿಗೆ ಜಮೆಯೇ ಆಗಿಲ್ಲ; ಬರಗಾಲದ ನಡುವೆಯೇ ರೈತರಿಗೆ ಮತ್ತೊಂದು ಬರೆ

ಬೆಂಗಳೂರು;  ರಾಜ್ಯದಾದ್ಯಂತ ತೀವ್ರ ಬರಗಾಲ ಎದುರಾಗಿರುವ ನಡುವೆಯೇ  2025-26ನೇ ಮುಂಗಾರು ಹಂಗಾಮಿನ...

ಪ್ರಿಂಟರ್, ಸ್ಕ್ಯಾನರ್ ಕೂಡ ಲಭ್ಯವಿಲ್ಲ, ಇ-ಮೇಲ್‌ ಮಾಡಲೂ ಕಷ್ಟಸಾಧ್ಯ; ಸರ್ಕಾರದ ಆರ್ಥಿಕ ಪರಿಸ್ಥಿತಿ ತೆರೆದಿಟ್ಟ ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ

ಬೆಂಗಳೂರು; ಚಾಲ್ತಿಯಲ್ಲಿರುವ ಮತ್ತು ಹೊಸ ಯೋಜನೆಗಳಿಗೆ ಅನುದಾನ ಹೊಂದಿಸಲು ಏದುಸಿರು ಬಿಡುತ್ತಿರುವ...

Related Articles

Popular Categories

error: Content is protected !!