Wednesday | June 10, 2026 |

ಪಿಎಸ್‌ಎಸ್‌ಕೆ ಕಾರ್ಖಾನೆ ನೋಂದಣಿ ಶುಲ್ಕ ಮನ್ನಾ; ನಿರಾಣಿಗೆ ಭಾರೀ ಮುಖಭಂಗ

ಬೆಂಗಳೂರು; ಸರ್ಕಾರದ ಸಹಕಾರ ಒಡೆತನದಲ್ಲಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಕಾಲ ಗುತ್ತಿಗೆಗೆ ಪಡೆದ ನಂತರ ವರಾತ ತೆಗೆದಿದ್ದ ಬಿಜೆಪಿ ಶಾಸಕ ಮುರುಗೇಶ್‌ ನಿರಾಣಿ ಒಡೆತನಕ್ಕೆ ಸೇರಿರುವ ನಿರಾಣಿ ಉದ್ಯಮ ಸಮೂಹ ಮುಂದಿಟ್ಟಿದ್ದ ಹೊಸ ಬೇಡಿಕೆಯನ್ನು ತಿರಸ್ಕರಿಸುವ ನಿರ್ಧಾರವನ್ನು ಬಿಜೆಪಿ ಸರ್ಕಾರ ತಳೆದಿದೆ. ಇದು ನಿರಾಣಿ ಉದ್ಯಮ ಸಮೂಹಕ್ಕೀಗ ಭಾರೀ ಮುಖಭಂಗವಾದಂತಾಗಿದೆ.

ನಿರಾಣಿ ಉದ್ಯಮ ಸಮೂಹವು ಗುತ್ತಿಗೆ ಅವಧಿ ಪೂರ್ಣಗೊಂಡ ನಂತರವೂ ಕಂಪನಿಯಲ್ಲಿನ ಎಲ್ಲಾ ಬಗೆಯ ಯಂತ್ರೋಪಕರಣಗಳು ಸರ್ಕಾರದ ವಶಕ್ಕೆ ಬದಲಿಗೆ ಕಂಪನಿ ವಶಕ್ಕೆ ನೀಡಬೇಕು ಒತ್ತಡ ಹೇರಿತ್ತಲ್ಲದೆ ಮುದ್ರಾಂಕ ಮತ್ತು ನೋಂದಣಿ ಶುಲ್ಕ ಮನ್ನಾ ಮಾಡಬೇಕು ಎಂದು ಸರ್ಕಾರದ ಮೆಟ್ಟಿಲೇರಿತ್ತು. ಕರಾರು ಒಪ್ಪಂದಕ್ಕೆ ಸಹಿ ಮಾಡಿದ ನಂತರ ಕಂಪನಿಗೆ ಗುತ್ತಿಗೆ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದ ನಂತರ ನಿರಾಣಿ ಉದ್ಯಮ ಸಮೂಹ ತೆಗೆದಿದ್ದ ವರಾತಕ್ಕೆ ಸರ್ಕಾರ ಸೊಪ್ಪು ಹಾಕಿಲ್ಲ. ಬದಲಿಗೆ ನೋಂದಣಿ ಶುಲ್ಕವನ್ನು ಮನ್ನಾ ಮಾಡಬೇಕು ಎಂಬ ಮನವಿಯನ್ನೇ ತಿರಸ್ಕರಿಸಿದೆ.

‘ಬಾಗಲಕೋಟೆ ಮುಧೋಳದ ನಿರಾಣಿ ಶುಗರ್ಸ್‌ ಲಿಮಿಟೆಡ್‌ಗೆ 40 ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ಆದೇಶ ಹೊರಡಿಸಲಾಗಿದೆ. ಗುತ್ತಿಗೆ ಕರಾರಿನ ನೋಂದಣಿ ಸಂದರ್ಭದಲ್ಲಿ ವಿಧಿಸಲಾಗುವ ಮುದ್ರಾಂಕ ಮತ್ತು ನೋಂದಣಿ ಶುಲ್ಕವನ್ನು ಮನ್ನಾ ಮಾಡುವಂತೆ ಕೋರಿದ್ದ ಮನವಿಯನ್ನು ತಿರಸ್ಕರಿಸಲಾಗಿದೆ,’ಎಂದು ವಾಣಿಜ್ಯ ಕೈಗಾರಿಕೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಬ್ಬು ಅಭಿವೃದ್ಧಿ, ಸಕ್ಕರೆ ನಿರ್ದೇಶನಾಲಯದ ಆಯುಕ್ತರಿಗೆ 2020ರ ಅಕ್ಟೋಬರ್‌ 12ರಂದು ಪತ್ರ ಮುಖೇನ ತಿಳಿಸಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಪ್ರಕರಣದ ಹಿನ್ನೆಲೆ

ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆಯಲು ಸರ್ಕಾರ ವಿಧಿಸಿದ್ದ ಕರಾರು, ಷರತ್ತುಗಳಿಗೆ ಒಪ್ಪಿ ಗುತ್ತಿಗೆ ಒಪ್ಪಂದ ಮಾಡಿಕೊಂಡಿರುವ ನಿರಾಣಿ ಉದ್ಯಮ ಸಮೂಹ ಕರಾರುಗಳನ್ನು ತಿದ್ದುಪಡಿ ಮಾಡಬೇಕು ಎಂಬ ಬೇಡಿಕೆಯನ್ನೂ ಇರಿಸಿತ್ತು. ಅಲ್ಲದೆ ಕಂಪನಿಗೆ ಬೆಳಗಾವಿಯ ಭಾಗ್ಯಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಕರಣದಲ್ಲಿ ಆಡಳಿತಾಧಿಕಾರಿ ನೇಮಿಸಿರುವ ಮಾದರಿಯಲ್ಲೇ ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಗೂ ಸರ್ಕಾರವೇ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಒತ್ತಡ ಹೇರಿತ್ತು ಎಂದು ಗೊತ್ತಾಗಿದೆ.

ನಿರಾಣಿ ಉದ್ಯಮ ಸಮೂಹ ಬೆನ್ನಿಗೆ ನಿಂತಿದ್ದ ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ ಅವರು ಕರಾರಿನ ತಿದ್ದುಪಡಿ ಸಂಬಂಧ ಕ್ರಮ ಕೈಗೊಳ್ಳಲು ಟಿಪ್ಪಣಿ ಹಾಕಿದ್ದರು ಎಂದು ತಿಳಿದು ಬಂದಿದೆ.

‘ಬೆಳಗಾವಿಯ ಭಾಗ್ಯಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಕರಣದಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳನ್ನು ಗುತ್ತಿಗೆ ಅವಧಿ ಮುಕ್ತಾಯಗೊಳ್ಳುವವರೆಗೂ ಆಡಳಿತಾಧಿಕಾರಿಯ್ನನು ನೇಮಿಸಿರುವಂತೆ ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಆಡಳಿತಾಧಿಕಾರಿಯನ್ನು ನೇಮಿಸಲು ಹಾಗೂ ಗುತ್ತಿಗೆ ಒಪ್ಪಂದದಲ್ಲಿನ 32ನೇ ಕರಾರನ್ನು ತಿದ್ದುಪಡಿ ಮಾಡಲು ನಿರಾಣಿ ಶುಗರ್ಸ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರು ಕೋರಿದ್ದಾರೆ. ಈ ಸಂಬಂಧ ನಿಯಮಾನುಸಾರ ಪರಿಶೀಲಿಸಿ ಅಭಿಪ್ರಾಯವನ್ನು ಕಳಿಸಿಕೊಡಬೇಕು,’ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದಶಿfಗಳು 2020ರ ಜುಲೈ 30ರಂದು ಕಬ್ಬು ಅಭಿವೃದ್ಧಿ ಆಯುಕ್ತರಿಗೆ ಪತ್ರ ಬರೆದಿದ್ದರು. ಈ ಕುರಿತು ‘ದಿ ಫೈಲ್‌’ ವರದಿ ಮಾಡಿದ್ದನ್ನು ಸ್ಮರಿಸಬಹುದು.

ಪಿಎಸ್‌ಎಸ್‌ಕೆ ಕಾರ್ಖಾನೆ ಕೈಗೆ ಬರುತ್ತಿದ್ದಂತೆ ವರಾತ ತೆಗೆದ ನಿರಾಣಿ; ಗುತ್ತಿಗೆ ಕರಾರಿಗೆ ತಿದ್ದುಪಡಿಗೆ ಒತ್ತಡ

ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿರುವ ಯಂತ್ರೋಪಕರಣಗಳನ್ನು ಸರ್ಕಾರದ ವಶಕ್ಕೆ ನೀಡಬೇಕು. ಅದೇ ರೀತಿ ಹೊಸ ತಂತ್ರಜ್ಞಾನ ಹೊಂಧಿರುವ ಯಂತ್ರೋಪಕರಣಗಳನ್ನು ಅಳವಡಿಸಿದರೂ ಗುತ್ತಿಗೆ ಅವಧಿ ಪೂರ್ಣಗೊಂಡ ಬಳಿಕವೂ ಸರ್ಕಾರದ ವಶಕ್ಕೆ ನೀಡಬೇಕು ಎಂಬ ಕರಾರು ಆಗಿದೆ. ಆದರೀಗ ಗುತ್ತಿಗೆ ಅವಧಿ ಪೂರ್ಣಗೊಂಡ ಬಳಿಕ ಯಂತ್ರೋಪಕರಣಗಳನ್ನು ಸರ್ಕಾರಕ್ಕೆ ಹಸ್ತಾಂತರಿಸುವ ಬದಲಿಗೆ ಗುತ್ತಿಗೆ ಪಡೆದಿರುವ ನಿರಾಣಿ ಸಮೂಹದ ವಶದಲ್ಲಿರಬೇಕು ಎಂದು ಇರಿಸಿದ್ದ ಬೇಡಿಕೆ ಅಧಿಕಾರಿಗಳ ವಲಯದಲ್ಲೇ ಆಕ್ಷೇಪ ಕೇಳಿ ಬಂದಿತ್ತು.

ಕಾರ್ಖಾನೆಯನ್ನು ಗುತ್ತಿಗೆ ಪಡೆಯಲು ನಿರಾಣಿ ಕಂಪನಿ ಹಾಗೂ ಎನ್‌ಎಸ್‌ಎಲ್‌ ಕಂಪನಿಗಳು ಟೆಂಡರ್‌ನಲ್ಲಿ ಭಾಗವಹಿಸಿದ್ದವು. ಹಣಕಾಸು ಟೆಂಡರ್‌ ಪ್ರಕ್ರಿಯೆಯಲ್ಲಿ ಎನ್‌ಎಸ್‌ಎಲ್‌ ಕಂಪನಿ ತಿರಸ್ಕೃತಗೊಂಡಿದ್ದರಿಂದ ಅಂತಿಮವಾಗಿ ನಿರಾಣಿ ಕಂಪನಿಗೆ ಟೆಂಡರ್‌ ದೊರಕಿತ್ತು. ಅತಿ ಹೆಚ್ಚಿನ ಅಂದರೆ 405 ಕೋಟಿ ರೂಪಾಯಿಗಳ ಬಿಡ್‌ಗೆ 40 ವರ್ಷಗಳಿಗೆ ಸರ್ಕಾರ ಗುತ್ತಿಗೆ ಪಡೆದುಕೊಂಡಿದೆ. ದುಡಿಯುವ ಬಂಡವಾಳದ ಕೊರತೆಯಿಂದ ಕಾರ್ಖಾನೆಯನ್ನು ಈವರೆಗೆ ಆರಂಭಿಸಲು ಸಾಧ್ಯವಾಗಿರಲಿಲ್ಲ. 2010ರಿಂದ 2018ರವರೆಗೆ ರಾಜ್ಯಸರ್ಕಾರಗಳು 103.46 ಕೋಟಿ ರೂ. ಹಣವನ್ನು ಕಾರ್ಖಾನೆಗೆ ದುಡಿಯುವ ಬಂಡವಾಳ ನೀಡಿತ್ತಾದರೂ ಕಾರ್ಖಾನೆ ಪುನಶ್ಚೇತನಗೊಳ್ಳಲೇ ಇಲ್ಲ.

ಕಾರ್ಖಾನೆಯಲ್ಲಿ ಕಬ್ಬು ಅರೆಯುವ ಸಾಮರ್ಥ್ಯ ಹೆಚ್ಚಿಸಲಾಗಿದ್ದರೂ ಆಧುನಿಕ ಯಂತ್ರೋಪಕರಣಗಳ ಬಳಕೆ , ವಿಧಿ-ವಿಧಾನಗಳ ರೂಪುರೇಷೆ ಕ್ರಮಬದ್ಧತೆಯಿಂದ ಕೂಡಿರದ ಕಾರಣ ಕಬ್ಬು ಅರೆಯುವಿಕೆ ಪರಿಪೂರ್ಣಗೊಳ್ಳಲಿಲ್ಲ. ಕಬ್ಬು ಅರೆಯುವಿಕೆ ಸಾಮರ್ಥ್ಯವನ್ನು ಪೂರ್ಣವಾಗಿ ಬಳಕೆ ಮಾಡದಿರುವುದು ಕಾರ್ಖಾನೆ ನಷ್ಟದ ಹಾದಿ ಹಿಡಿಯಲು ಕಾರಣ ಎಂದು ಹೇಳಲಾಗಿದೆ.

Hot this week

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...
Please Scan to make Your Contribution

Topics

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

Related Articles

Popular Categories

error: Content is protected !!