Thursday | June 11, 2026 |

ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ;ಲಂಚಕೋರ ಅಧಿಕಾರಿಗಳ ಪಿತೂರಿಗೆ 47.07 ಕೋಟಿ ನಷ್ಟ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ ಸೇರಿದಂತೆ ಹಲವು ಉಪಕರಣಗಳ ಖರೀದಿಯಲ್ಲಿ ಹಲವು ನಿಯಮಾವಳಿಗಳನ್ನು ಅಧಿಕಾರಿಗಳು ಗಾಳಿಗೆ ತೂರಿದ್ದಾರೆ. ಬಯೋ ಮೆಡಿಕಲ್‌ ಉಪಕರಣಗಳ ನಿರ್ವಹಣೆ ಮಾಡಲು ಗುತ್ತಿಗೆ ನೀಡಿರುವ ಕಂಪನಿ ಜತೆ ಅಧಿಕಾರಿಗಳು ಶಾಮೀಲಾಗಿರುವ ಕಾರಣ ಸರ್ಕಾರಕ್ಕೆ ಅಂದಾಜು 47.07 ಕೋಟಿ ನಷ್ಟ ಸಂಭವಿಸಿದೆ.

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರ ಆಪ್ತ ಕಾರ್ಯದರ್ಶಿಯಾಗಿರುವ ಸಿ ನಾಗರಾಜ್‌ ಅವರು (ಕೆಡಿಎಲ್‌ಡಬ್ಲ್ಯೂಎಸ್‌ನ ಹೆಚ್ಚುವರಿ ನಿರ್ದೇಶಕರಗಾಗಿದ್ದ ಅವಧಿ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜಕುಮಾರ್‌ ಪಾಂಡೆ ಮತ್ತು ಕಾರ್ಯಾಕ್ರಮಾಧಿಕಾರಿಯೂ ಆಗಿದ್ದ ಉಪ ನಿರ್ದೇಶಕ ಸ್ವತಂತ್ರಕುಮಾರ್‌ ಬಣಕರ್‌ ಅವರು 47.07 ಕೋಟಿ ನಷ್ಟಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದಾರೆ. ಈ ಪ್ರಕರಣದ ಬಗ್ಗೆ ಸಮಗ್ರ ದಾಖಲಾತಿಗಳನ್ನು ಪಡೆದುಕೊಂಡಿರುವ ‘ದಿ ಫೈಲ್‌’, ಸರಣಿ ರೂಪದಲ್ಲಿ ಅಕ್ರಮದ ವಿವಿಧ ಮಗ್ಗುಲುಗಳನ್ನು ಮುಂದಿಡುತ್ತಿದೆ.

ನಷ್ಟ ತಪ್ಪಿಸಲು ಮುಂದಾಗಲಿಲ್ಲವೇಕೆ?

ವಿವಿಧ ಆಸ್ಪತ್ರೆಗಳಿಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದಿಂದ ಸರಬರಾಜಾಗಿರುವ ಉಪಕರಣಗಳ ಮಾಹಿತಿ ಪಡೆಯದ ಲಂಚಕೋರ ಅಧಿಕಾರಿಗಳು, ಉಪಕರಣಗಳ ನಿರ್ವಹಣೆಯ ವಸ್ತುಸ್ಥಿತಿ, ಮೌಲ್ಯವನ್ನೂ ಕರಾರುವಕ್ಕಾಗಿ ನಿರ್ಣಯಿಸಿಲ್ಲ. ಅಧಿಕಾರಿಗಳ ಈ ಲೋಪದಿಂದಾಗಿ ಬಿಡ್‌ದಾರರು ಸರಿಯಾದ ದರ ಸೂಚಿಸಿಲ್ಲ. ಸರಿಯಾದ ದರ ಸೂಚಿಸಲು ಮೌಲ್ಯ ನಿರ್ಣಯಿಸಿದ್ದರೆ ಸರ್ಕಾರಕ್ಕೆ ಸಂಭವಿಸಬಹುದಾಗಿದ್ದ ನಷ್ಟವನ್ನು ತಪ್ಪಿಸಬಹುದಾಗಿತ್ತು. ಆದರೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ಉಪಕರಣಗಳ ಮೌಲ್ಯವನ್ನು ಕರಾರುವಕ್ಕಾಗಿ ನಿರ್ಣಯಿಸದಿರುವ ಹಲವು ಪ್ರಕರಣಗಳು ವರದಿಯಾಗಿವೆ.

ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ ಟೆಂಡರ್‌ ಪ್ರಕ್ರಿಯೆಗಳೇ ಇದಕ್ಕೊಂದು ಉತ್ತಮ ನಿದರ್ಶನ. ಈ ಉಪಕರಣ ನಿರ್ವಹಣೆ ಸಂಬಂಧ ನಡೆದಿದ್ದ ಟೆಂಡರ್‌ ಸೇರಿದಂತೆ ಮತ್ತಿತರ ಪ್ರಕ್ರಿಯೆಗಳಲ್ಲಿ ಲೋಪಗಳನ್ನು ಎಸಗಿದ್ದಾರೆ ಎಂಬ ಆರೋಪದ ಮೇರೆಗೆ ಉಪ ನಿರ್ದೇಶಕ ಡಾ ಸ್ವತಂತ್ರಕುಮಾರ್‌ ಬಣಕರ್‌ ಅವರನ್ನು ಅಮಾನತುಗೊಳಿಸಲಾಗಿದೆಯಾದರೂ ಸರ್ಕಾರಕ್ಕೆ ಆಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಂಡಿಲ್ಲ.

2017ರ ಆಗಸ್ಟ್‌ 18ರಂದು ಕೆಡಿಎಲ್‌ಡಬ್ಲ್ಯೂಎಸ್‌ನ ಹೆಚ್ಚುವರಿ ನಿರ್ದೇಶಕರು ಬಯೋ ಮೆಡಿಕಲ್‌ ಉಪಕರಣಗಳ 3 ವರ್ಷಗಳ ಅವಧಿಗೆ ನಿರ್ವಹಣೆಗೆ ಸೇವಾದಾರರನ್ನು ಆಯ್ಕೆ ಮಾಡಲು ಆರ್‌ಎಫ್‌ಪಿ ಆಹ್ವಾನಿಸಿದ್ದರು. ಮೊದಲ ವರ್ಷದಲ್ಲಿ 9.6 ಕೋಟಿ, ಎರಡನೇ ವರ್ಷದಲ್ಲಿ 22.18 ಕೋಟಿ, ಮೂರನೇ ವರ್ಷದಲ್ಲಿ 22.18 ಕೋಟಿ ರೂ.ಗೆ ಅನುಮೋದನೆ ದೊರೆತಿತ್ತು. 2017ರಲ್ಲಿ ಆಹ್ವಾನಿಸಿದ್ದ ಟೆಂಡರ್‌ನಲ್ಲಿ ಭಾಗವಹಿಸಿದ್ದ 3 ಬಿಡ್‌ದಾರರಲ್ಲಿ ಒಬ್ಬರ ಬಿಡ್‌ ತಿರಸ್ಕೃತಗೊಂಡಿತ್ತು. ಇದರ ಮೇಲ್ಮನವಿ ಸಲ್ಲಿಸಿದ್ದ ಕಾರಣ ಟೆಂಡರ್‌ ರದ್ದುಗೊಳಿಸಲಾಗಿತ್ತು. ಹೀಗಾಗಿ 2018ರಲ್ಲಿ ಮತ್ತೊಮ್ಮೆ ಟೆಂಡರ್‌ ಕರೆಯಲಾಗಿತ್ತು.

74.98 ಕೋಟಿಗೆ ಕಾರ್ಯಾದೇಶ

ಟಿ ವಿ ಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌, ಜನಾರ್ಕ್ ಹೆಲ್ತ್‌ ಸಲ್ಯೂಷನ್ಸ್‌ ಮತ್ತು ಟ್ರಾನ್ಸ್‌ಕಾಲ್‌ ಇಂಜಿನಿಯರ್ಸ್ ಇಂಡಿಯಾ ಪ್ರೈ ಲಿ., ಮೂರು ಸಂಸ್ಥೆಯ ಕನ್‌ಸಾಸಿರ್ಯಮ್‌ ಪಾರ್ಟನರ್ಸ್‌ರವರೊಂದಿಗೆ 2019ರ ಫೆ.26ರಂದು ಕರಾರು ಸಹಿ ಮಾಡಲಾಗಿತ್ತು. 2019ರ ಮಾರ್ಚ್‌ 8ರಂದು 3 ವರ್ಷದ ಅವಧಿಗೆ ನಿರ್ವಹಣೆ ಮಾಡಲು 74.98 ಕೋಟಿ ರು.ಗೆ ಕಾರ್ಯಾದೇಶ ನೀಡಲಾಗಿತ್ತು.

ಮೂಲ ಪರಿಶೀಲಿಸದ ಬಣಕರ್‌?

ಬಯೋ ಮೆಡಿಕಲ್‌ ಉಪಕರಣದ ನಿರ್ವಹಣೆಯ ರಾಜ್ಯಮಟ್ಟದ ನೋಡಲ್‌ ಅಧಿಕಾರಿಯಾದ ಡಾ ಸ್ವತಂತ್ರಕುಮಾರ್‌ ಬಣಕರ್‌ ಅವರು ಆರೋಗ್ಯ ಇಲಾಖೆಯ ಯಾವುದೇ ವಿಭಾಗ, ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿರುವ ಬಯೋ ಮೆಡಿಕಲ್‌ ಉಪಕರಣಗಳ ಪಟ್ಟಿ ಮತ್ತು ಅವುಗಳ ಮೂಲವನ್ನು ಪರಿಶೀಲಿಸಿರಲಿಲ್ಲ ಎಂಬುದು ದಾಖಲೆಯಿಂದ ತಿಳಿದು ಬಂದಿದೆ. ಆರೋಗ್ಯ ಇಲಾಖೆಯಲ್ಲಿ 215 ಮಾದರಿ ಉಪಕರಣಗಳು, 1,13,560 ಒಟ್ಟು ಉಪಕರಣಗಳು, ಈ ಪೈಕಿ 34,280 ಉಪಕರಣಗಳಿಗೆ ನಿರ್ವಹಣೆ ಬೇಕಾಗಿದೆ. ಇವುಗಳ ಆಸ್ತಿಯ ಅಂದಾಜು ಮೌಲ್ಯ 582 ಕೋಟಿ ಎಂದು ಘೋಷಿಸಿದ್ದರು.

ಆಸ್ತಿ ಮೌಲ್ಯ ತಪ್ಪಾಗಿ ಅಂದಾಜಿಸಿದ್ದೇಕೆ?

ಮೊದಲ ವರ್ಷದಲ್ಲಿ ಒಟ್ಟು 34,280 ಉಪಕರಣಗಳಿಗೆ ನಿರ್ವಹಣೆ ಅಗತ್ಯವಿದೆ ಎಂದು ಘೋಷಿಸಿದ್ದ ಬಣಕರ್‌, ಈ ಪೈಕಿ 4,465 ಉಪಕರಣಗಳು ವಾರೆಂಟಿಯಲ್ಲಿದ್ದವು. 1,796 ಉಪಕರಣಗಳು ವಾರ್ಷಿಕ ನಿರ್ವಹಣೆಯಲ್ಲಿವೆ ಎಂದು ಹೇಳಿದ್ದರು. ಉಳಿದ 28,019 ಉಪಕರಣಗಳ ನಿರ್ವಹಣೆ ಮತ್ತು ಈ ಉಪಕರಣಗಳ ಆಸ್ತಿ ಮೌಲ್ಯ 137.20 ಕೋಟಿ, 2 ಮತ್ತು 3 ನೇ ವರ್ಷದಲ್ಲಿ ನಿರ್ವಹಣೆ ಮಾಡಬೇಕಾದ ಉಪಕರಣಗಳ ಆಸ್ತಿ ಮೌಲ್ಯ 316.83 ಕೋಟಿ ಎಂದು ಬಣಕರ್‌ ಅವರು ವರದಿ ಮಾಡಿದ್ದರು ಎಂಬುದು ತಿಳಿದು ಬಂದಿದೆ.

ನಿರ್ವಹಣೆ ಮೊತ್ತದ ಏರಿಕೆ ಹಿಂದಿತ್ತು ಪಿತೂರಿ

ಮೊದಲ ವರ್ಷದಲ್ಲಿ ಉಪಕರಣಗಳ ಆಸ್ತಿ ಮೌಲ್ಯ 137.20 ಕೋಟಿ ಇದ್ದದ್ದು 2 ಮತ್ತು 3ನೇ ವರ್ಷಕ್ಕೆ 316.83 ಕೋಟಿ ಏರಿಕೆಯಾಗಿತ್ತು. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಉಪಕರಣಗಳ ನಿರ್ವಹಣೆಯ ಸೇವಾದಾರರಿಗೆ ಅನುಕೂಲ ಮಾಡಿಕೊಡುವ ಒಂದೇ ಉದ್ದೇಶದಿಂದ ಉಪಕರಣಗಳ ಸಂಖ್ಯೆ ಮತ್ತು ಆಸ್ತಿ ಮೌಲ್ಯದಲ್ಲಿ ಏರಿಕೆ ಮಾಡಿದ್ದರು. ಆದರೆ ಬಣಕರ್‌ ಅವರ ಲೆಕ್ಕಾಚಾರವನ್ನು ಇಲಾಖೆಯ ಆಯುಕ್ತ ಪಂಕಜಕುಮಾರ್‌ ಪಾಂಡೆ ಸೇರಿದಂತೆ ಮೇಲಾಧಿಕಾರಿಗಳ್ಯಾರು ಪರಿಶೀಲಿಸದಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

Hot this week

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

Related Articles

Popular Categories

error: Content is protected !!