Tuesday | August 25, 2026 |

ಎಂಇಎಸ್‌ ಮುಖಂಡನ ಸೊಸೈಟಿ ಮೇಲೆ ಹಿಡಿತವಿಲ್ಲ; ಸಿಐಡಿ ತನಿಖೆ ಜಾರಿಯಲ್ಲಿದ್ದರೂ ಠೇವಣಿ ಆಕರ್ಷಣೆ

ಬೆಂಗಳೂರು; ಎಂಇಎಸ್‌ ಮುಖಂಡ ಕಿರಣ್‌ ಠಾಕೂರ್‌ ಒಡೆತನದಲ್ಲಿರುವ ಬೆಳಗಾವಿಯ ಲೋಕಮಾನ್ಯ ಮಲ್ಟಿಪರ್ಪಸ್‌ ಕೋ ಆಪರೇಟೀವ್‌ ಸೊಸೈಟಿ ಅಕ್ರಮಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿರುವ ಹೊತ್ತಿನಲ್ಲೇ ಠೇವಣಿದಾರನ್ನು ಆಕರ್ಷಿಸುವುದನ್ನು ಮುಂದುವರೆಸಿದೆ.

ಅಂದಾಜು 2 ಸಾವಿರ ಕೋಟಿ ರು. ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಈ ಸೊಸೈಟಿಯು ಠೇವಣಿದಾರರನ್ನು ಆಕರ್ಷಿಸುವುದನ್ನು ಮುಂದುವರೆಸಿದ್ದರೂ ಸಹಕಾರ ಇಲಾಖೆ ಯಾವುದೇ ಕ್ರಮ ವಹಿಸಿಲ್ಲ. ಈ ಕುರಿತು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಪ್ರಾಂತೀಯ ನಿರ್ದೇಶಕರು ರಾಜ್ಯ ಸರ್ಕಾರಕ್ಕೆ ಅರೆ ಸರ್ಕಾರಿ ಪತ್ರವನ್ನು (DO.FIDD(BG)NO 112/02.03.051/2020-21 ದಿನಾಂಕ 22.12.2020) ಬರೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಪತ್ರವನ್ನಾಧರಿಸಿ ಸಹ ಆರ್ಥಿಕ ಇಲಾಖೆಯ (ವಿತ್ತೀಯ ಸುಧಾರಣೆ) ಸರ್ಕಾರದ ಕಾರ್ಯದರ್ಶಿ ಮಂಜು ಪ್ರಸನ್ನನ್‌ ಪಿಳ್ಳೈ ಅವರು ಸಹಕಾರ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ 2021ರ ಜನವರಿ 12ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಲೋಕಮಾನ್ಯ ಮಲ್ಟಿ ಪರ್ಪಸ್‌ ಕೋ ಆಪರೇಟೀವ್‌ ಸೊಸೈಟಿಯ ಬಗ್ಗೆ ಸಿಐಡಿಯಲ್ಲಿ ತನಿಖೆ ನಡೆಯುತ್ತಿದ್ದರೂ ಕೋ ಆಪರೇಟೀವ್‌ ಸೊಸೈಟಿಯು ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಠೇವಣಿದಾರನ್ನು ಆಕರ್ಷಿಸುತ್ತಿದೆ. ಮಲ್ಟಿ ಕೋ ಆಪರೇಟೀವ್‌ ಸೊಸೈಟಿಗಳ ಮೇಲ್ವಿಚಾರಣೆಯಲ್ಲಿ ಲೋಪದೋಷಗಳನ್ನು ಸರಿಪಡಿಸಲು ಕೇಂದ್ರದ ಸಹಕಾರಿ ಸಂಘಗಳ ರಿಜಿಸ್ಟ್ರಾರ್‌ರೊಂದಿಗೆ ವಿಷಯವನ್ನು ಪ್ರಸ್ತಾಪಿಸಬೇಕು,’ ಎಂದು ಮಂಜು ಪ್ರಸನ್ನನ್‌ ಪಿಳ್ಳೈ ಅವರು ಅನಧಿಕೃತ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿರುವ ಈ ಸೊಸೈಟಿಯು ಎಂಇಎಸ್ ಮುಖಂಡ ಕಿರಣ್ ಠಾಕೂರ್ ಒಡೆತನಕ್ಕೆ ಸೇರಿದೆ. ಈ ಸೊಸೈಟಿಯಲ್ಲಿ ಠೇವಣಿದಾರರು ಇಟ್ಟಿದ್ದ 2 ಸಾವಿರ ಕೋಟಿಗೂ ಅಧಿಕ ಮೊತ್ತ ದುರುಪಯೋಗವಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಶಾಸಕ ಅಭಯ ಪಾಟೀಲ್ ಸೇರಿ 60 ಶಾಸಕರಿಂದ ಇ.ಡಿ, ಕೇಂದ್ರ ಹಣಕಾಸು ಇಲಾಖೆ, ರಾಜ್ಯ ಸರ್ಕಾರಕ್ಕೆ ದೂರು ನೀಡಿದ್ದರು. ಪ್ರಕರಣ ಸಂಪೂರ್ಣ ತನಿಖೆಗೆ ಸಹಕಾರ ಇಲಾಖೆಗೆ ಸೂಚಿಸಿತ್ತು. ಇಲಾಖೆ ರಿಜಿಸ್ಟ್ರಾರ್ ಶಿವಪ್ರಕಾಶ್ ನೇತೃತ್ವದಲ್ಲಿ ಅಧಿಕಾರಿಗಳು ಟಿಳಕವಾಡಿ ಬ್ರ್ಯಾಂಚ್​ಗೆ ಭೇಟಿ ನೀಡಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದರು.

ಗೋವಾ, ಮಹಾರಾಷ್ಟ್ರ, ಕರ್ನಾಟಕದ ಹಲವು ರಾಜಕಾರಣಿಗಳು ಈ ಸೊಸೈಟಿಯಲ್ಲಿ ಹಣ ಹೂಡಿಕೆ ಮಾಡಿದ್ದರು ತಿಳಿದುಬಂದಿದೆ.

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!