Wednesday | July 15, 2026 |

ಸಚಿವ ಅಶೋಕ್‌ ಆಪ್ತ ಸಹಾಯಕನಿಂದ ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ?

ಬೆಂಗಳೂರು; ಕಂದಾಯ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಎಂದು ಹೇಳಲಾದ ಗಂಗಾಧರ್‌ ಎಂಬುವರು ಶೃಂಗೇರಿ ತಾಲೂಕಿನ ಉಪನೋಂದಣಾಧಿಕಾರಿ ಎಚ್‌ ಎಸ್‌ ಚೆಲುವರಾಜು ಎಂಬುವರಿಗೆ ಅಕ್ರಮ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಕರಣ ಇದೀಗ ಹೊರಬಿದ್ದಿದೆ.

ಅಬಕಾರಿ ಸಚಿವರಾಗಿದ್ದ ಎಚ್‌ ನಾಗೇಶ್‌ ಅವರು ವರ್ಗಾವಣೆಗಾಗಿ ಮತ್ತು ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರ ಆಪ್ತ ಸಹಾಯಕರು ಅಧಿಕಾರಿಗಳಿಂದ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಇದೀಗ ಶೃಂಗೇರಿಯ ಉಪ ನೋಂದಣಾಧಿಕಾರಿ ಎಚ್‌ ಎಸ್‌ ಚೆಲುವರಾಜು ಅವರು ಶೃಂಗೇರಿ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಅವರಿಗೆ ಲಿಖಿತವಾಗಿ ದೂರು ಸಲ್ಲಿಸಲು ಚಿಂತಿಸಿದ್ದಾರೆ. ಈ ಬಗ್ಗೆ ಅಧಿಕಾರಿ ಚೆಲುವರಾಜು ಅವರು ‘ದಿ ಫೈಲ್‌’ಗೆ ಖಚಿತಪಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಶೃಂಗೇರಿಯ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಕ್ಷರ ಮಿತ್ರ ಕಾರ್ಯಕ್ರಮದಲ್ಲಿ ಸಚಿವ ಆರ್‌ ಅಶೋಕ್‌ ಅವರು ಭಾಗವಹಿಸಿದ್ದರು. 2021ರ ಜನವರಿ 21ರಂದು ಕಂದಾಯ ಸಚಿವರ ಪ್ರವಾಸ ವೇಳಾಪಟ್ಟಿಯನ್ನು ಉಪ ನೋಂದಣಾಧಿಕಾರಿ ಎಚ್‌ ಎಸ್‌ ಚೆಲುವರಾಜು ಅವರ ಖಾಸಗಿ ಮೊಬೈಲ್‌ ನಂಬರ್‌ 9741114815ಗೆ ಸಂದೇಶ ಕಳಿಸಲಾಗಿತ್ತು. ಆದರೆ ಸಂದೇಶ ಕಳಿಸಿದವ ಇವರಿಗೆ ಪರಿಚಯವಿರಲಿಲ್ಲ. ಇದಾಗಿ 3 ದಿನದ ನಂತರ 2021ರ ಜನವರಿ 24ರಂದು ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಎಂದು ಪರಿಚಯಿಸಿಕೊಂಡ ಗಂಗಾಧರ್‌ ಎಂಬ ವ್ಯಕ್ತಿಯು ತಮ್ಮನ್ನು ಮತ್ತು ಸಚಿವ ಅಶೋಕ್‌ ಅವರನ್ನು ಭೇಟಿ ಆಗಬೇಕು ಎಂದು ಸೂಚಿಸಿದ್ದರು ಎಂದು ತಿಳಿದು ಬಂದಿದೆ.

2021ರ ಜನವರಿ 24ರಂದು ಸಚಿವ ಆರ್‌ ಅಶೋಕ್‌ ಅವರನ್ನು ಭೇಟಿಯಾಗಲು ಶರಂಗೇರಿಯ ಆದಿಚುಂಚನಗಿರಿ ಸಮುದಾಯ ಭವನಕ್ಕೆ ತೆರಳಿದ್ದ ವೇಳೆಯಲ್ಲಿ ಗಂಗಾಧರ ಎಂಬಾತ ತನಗೆ ಹಣ ನೀಡಬೇಕು ಎಂದು ಬೇಡಿಕೆ ಇಟ್ಟರು. ಈ ಬಗ್ಗೆ ನನಗೆ ಯಾರಿಗೂ ಈ ರೀತಿ ಹಣ ನೀಡುವ ಅಥವಾ ಯಾರಿಂದಲೂ ಹಣ ಪಡೆಯುವ ಅಭ್ಯಾಸ ನನಗೆ ಇಲ್ಲ ಎಂದು ಸ್ಥಳದಲ್ಲಿಯೇ ತಿಳಿಸಿ ಆತನ ಬೇಡಿಕೆಯನ್ನು ತಿರಸ್ಕರಿಸಿದ್ದೇನೆ. ಅಲ್ಲದೆ ಸಭೆ ಮುಗಿದ ಬಳಿಕ ಮನಗೆ ಬಂದಿದ್ದರು ಎಂದು ಗೊತ್ತಾಗಿದೆ.

ಅದೇ ದಿನ ಗಂಗಾಧರ್‌ (ದೂರವಾಣಿ ಸಂಖ್ಯೆ ; 7760666222) 8-30ರ ಸಮಯದಲ್ಲಿ ತನ್ನ ಮೊಬೈಲ್‌ನಿಂದ ವಾಟ್ಸಾಪ್‌ ಧ್ವನಿ ಕರೆ ಮಾಡಿದ್ದ ಎಂದು ದೂರಿನಲ್ಲಿ ಹೇಳಿರುವ ಚೆಲುವರಾಜು ಅವರು ಗಂಗಾಧರ್‌ ಎಂಬುವರು ಸರ್ಕಾರಿ ಅಧಿಕಾರಿಯನ್ನು ಅಕ್ರಮ ಹಣಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಚೆಲುವರಾಜು ಅವರು ಆರೋಪಿಸಿದ್ದಾರೆ.

Hot this week

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!