Sunday | July 5, 2026 |

ಉಗ್ರಾಣಕ್ಕೆ ಬಾಯಿ ಹಾಕಿದ ಐಎಎಸ್‌ ಹೆಗ್ಗಣಗಳು; 495 ಕೋಟಿ ನಷ್ಟದ ಹೊಣೆ ಹೊರುವರ್ಯಾರು?

ಬೆಂಗಳೂರು; ರಾಜ್ಯದ 60 ಉಗ್ರಾಣ ಕೇಂದ್ರಗಳಲ್ಲಿ 11.14 ಲಕ್ಷ ಮೆಟ್ರಿಕ್ ಸಾಮರ್ಥ್ಯದ ಉಗ್ರಾಣಗಳು ಹಾಗೂ ಮೂಲಭೂತ ಸೌಕರ್ಯ ಕಾಮಗಾರಿ ಅನುಷ್ಠಾನಗೊಳಿಸುವ 724.81 ಕೋಟಿ ರು ಮೊತ್ತದ ಯೋಜನೆಯಲ್ಲಿ 495 ಕೋಟಿ ರು.ಗೂ ಅಧಿಕ ನಷ್ಟವಾಗಿರುವ ಪ್ರಕರಣ ಇದೀಗ ಬಹಿರಂಗವಾಗಿದೆ.

ಯೋಜನೆ ಅನುಷ್ಠಾನದಲ್ಲಿ ಅಧಿಕಾರಿಗಳು ಆಡಳಿತಾತ್ಮಕ ನಿಯಮಗಳನ್ನು ನಿಯಮಾನುಸಾರ ಕೂಲಂಕಷವಾಗಿ ಪರಿಶೀಲಿಸದಿರುವುದು ಅನುಮೋದಿತ ಅಂದಾಜು ಪಟ್ಟಿಯಲ್ಲಿ ಅವಕಾಶ ಕಲ್ಪಿಸದೇ ಇರುವ ಕೆಲವು ಹೆಚ್ಚುವರಿ ಐಟಂಗಳನ್ನು ಉಪಯೋಗಿಸಿಕೊಂಡು ನಿರ್ಮಾಣ ಇರುವುದೇ ಯೋಜನಾ ಮೊತ್ತದಲ್ಲಿ ಹೆಚ್ಚುವರಿಯಾಗಲು ಮೂಲ ಕಾರಣ ಎನ್ನಲಾಗಿದೆ.

2019ರಲ್ಲೇ ಸರ್ಕಾರದ ಹಿಂದಿನ ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲೇ ಉಲ್ಲಂಘನೆ ಮಾಡಿರುವ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮಕ್ಕೆ ಸೂಚಿಸಲಾಗಿತ್ತು. ಈ ಪ್ರಕರಣದಲ್ಲಿ ಆಡಳಿತಾತ್ಮಕ ನಿಯಮಗಳ ಉಲ್ಲಂಘಿಸಿರುವ ಆರೋಪಕ್ಕೆ ಗುರಿಯಾಗಿರುವ ಬಿಡಿಎನ ಹಾಲಿ ಆಯುಕ್ತ ಎಂ ಬಿ ರಾಜೇಶ್‌ಗೌಡ, ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಐಎಎಸ್‌ ಅಧಿಕಾರಿ ಜಯ ವಿಭವಸ್ವಾಮಿ ಸೇರಿ ಹಲವು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಸರ್ಕಾರವು ಕಳೆದ 3 ವರ್ಷಗಳಿಂದಲೂ ಮೀನಮೇಷ ಎಣಿಸುತ್ತಿದೆ.

ಉಗ್ರಾಣಗಳ ಸಾಮರ್ಥ್ಯ ಅಭಿವೃದ್ಧಿ ಕಾಮಗಾರಿಗೆ 2016ರ ಮಾರ್ಚ್‌ 3 ರಂದು ಕರೆದಿದ್ದ ಟೆಂಡರ್‌ನಲ್ಲಿ ಸೋಮ ಎಂಟರ್‌ಪ್ರೈಸೆಸ್‌ ಟೆಂಡರ್‌ ಪ್ರೀಮಿಯಂ ದರದ ಶೇ.7.673ರಂತೆ ಒಟ್ಟು 795.97 ಕೋಟಿ ರು. ವೆಚ್ಚದಲ್ಲಿ 9 ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಲು 2016ರ ಮೇ 17ರಂದು ಹಿಂದಿನ ಕಾಂಗ್ರೆಸ್‌ ಸರ್ಕಾರವು ಕಾರ್ಯಾದೇಶ ನೀಡಿತ್ತು.

ಕಪ್ಪು ಮಣ್ಣು ಪ್ರದೇಶ, ಭೂ ಜಾಗ ಬದಲಿಸಿದ ಕಾಋಣ ಹೆಚ್ಚುವರಿಯಾಗಿ ತಳಪಾಯದ ಕಾಮಘಾರಿಗಳ ನಿರ್ವಹಣೆಯಿಂದ ಹಾಗೂ ಸ್ಥಳೀಯ ಕಾರಣಗಳಿಂದ ವಿವಿಧ ವಿನ್ಯಾಸಗಳ ಅಳವಡಿಕೆ ಸೆರಿದಂತೆ ಇನ್ನಿತರ ಅಂಶಗಳಿಂದಾಗಿ ಯೋಜನಾ ಮೊತ್ತದಲ್ಲಿ ಏರಿಕೆಯಾಗಿತ್ತು. ಅಧಿಕಾರಿಗಳು ಮೊದಲೇ ಸರಿಯಾಗಿ ಅಂದಾಜಿಸಿದ್ದರೆ ಯೋಜನಾ ಮೊತ್ತದಲ್ಲಿ ಏರಿಕೆಯಾಗುತ್ತಿರಲಿಲ್ಲ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಯೋಜನಾ ಮೊತ್ತದಲ್ಲಿ ಏರಿಕೆಯಾಗಿತ್ತು ಎಂದು ತಿಳಿದು ಬಂದಿದೆ.

 


ಈ ಮಧ್ಯೆ ಯೋಜನೆಯ ಅನುಷ್ಠಾನದ ಕುರಿತು ಗುತ್ತಿಗೆದಾರರಾದ ಸೋಮ ಎಂಟರ್‌ಪ್ರೈಸೆಸ್‌ ಲಿಮಿಟೆಡ್‌ ಅರ್ಬಿಟ್ರೇಷನ್‌ನಲ್ಲಿ ದಾವೆ ಹೂಡಿತ್ತು. ನಿಗಮದ ವತಿಯಿಂದ 435.00 ಕೋಟಿ ರು.ಗಳಿಗೆ ಸೋಮಾ ಎಂಟರ್‌ಪ್ರೈಸೆಸ್‌ ಕ್ಲೈಮ್‌ ಮಾಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ನಿಗಮಕ್ಕೆ ಆಗಿರುವ ಆರ್ಥಿಕ ನಷ್ಟದ ಕುರಿತು ಪ್ರಾರಂಭಿಕ ಹಂತದಲ್ಲಿ 395.00 ಕೋಟಿ ರು.ಗಳಿಗೆ ಗುತ್ತಿಗೆದಾರರಿಂದ ಪಡೆಯಲು ಕೌಂಟರ್‌ ಕ್ಲೈಮ್‌ ಮಾಡಲಾಗಿತ್ತು.

ಯೋಜನೆ ಕಾಮಗಾರಿಯಲ್ಲಿನ ಅನುಷ್ಠಾನದಲ್ಲಿನ ವಿಳಂಬದಿಂದಾಗಿಯೇ 265 ಕೋಟಿ ರು. ಹೆಚ್ಚುವರಿಯಾಗಿತ್ತು. ಬಾಡಿಗೆಯಿಂದ ಬರಬೇಕಿದ್ದ ಆದಾಯದಲ್ಲಿ 48.35 ಕೋಟಿ ರು. ಸೇರಿದಂತೆ ಒಟ್ಟು 495.27 ಕೋಟಿ ರು. ನಷ್ಟವಾಗಿತ್ತು ಎಂದು ಗೊತ್ತಾಗಿದೆ. ಯೋಜನಾ ಕಾಮಗಾರಿಗಳ ಭೌತಿಕ ಮತ್ತು ಆರ್ಥಿಕ ಪ್ರಗತಿ ಆಧರಿಸಿ ಗುತ್ತಿಗೆದಾರರು 01ರಿಂದ 33ನೇ ಐಪಿಎ ಬಿಲ್‌ಗಳವರೆಗೆ 678.68 ಕೋಟಿಗೆ ಬಿಲ್‌ ಸಲ್ಲಿಸಿತ್ತು. ನಿಗಮದ ವಲಯವಾರು ಅಭಿಯಂತರರು ಐಟಂವಾರು ಪರಿಮಾಣಗಳನ್ನು ಪರಿಶೀಲಿಸಿ 668.65 ಕೋಟಿಗಳಿಗೆ ದೃಢೀಕರಿಸಲಾಗಿತ್ತು.

ನಿಗಮವು ಕಾಮಗಾರಿಗಳ ವಾಸ್ತವಿಕ ನಿರ್ವಹಣೆಗೆ ಸಂಬಂಧಿಸಿದಂತೆ 668.65 ಕೋಟಿ ರು.ಗಳನ್ನು ಪಾವತಿಸಬೇಕಾಗಿದ್ದು ಈ ಪೈಕಿ 612.18 ಕೋಟಿ ರು.ಗಳನ್ನು ಗುತ್ತಿಗೆದಾರರಿಗೆ ಪಾವತಿ ಮಾಡಲಾಗಿತ್ತು. ಬಾಕಿ ಮೊತ್ತ 56.46 ಕೋಟಿಗಳನ್ನು ನಿಯಮಗಳ ರೀತಿ ಶಾಸನಬದ್ಧ ಕಡಿತಗಳು ಮತ್ತು ಎಲ್‌ಡಿಗಳಿಗೆ ಹೊಂದಾಣಿಕೆ ಮಾಡಿಕೊಂಡಿತ್ತು. ಅದರಂತೆ ಗುತ್ತಿಗೆದಾರರಿಗೆ ಯಾವುದೆ ಪಾವತಿ ಬಾಕಿ ಇಲ್ಲವೆಂಬ ವರದಿಯನ್ನು ಆರ್ಬಿಟ್ರೇಷನ್‌ ಟ್ರಿಬ್ಯೂನಲ್‌ಗೆ ಸಲ್ಲಿಸಲಾಗಿತ್ತು ಎಂದು ತಿಳಿದು ಬಂದಿದೆ.

ನಿರ್ಮಾಣ ಸಂದರ್ಭದಲ್ಲಿ ಜಾಗಗಳ ಭೌಗೋಳಿಕ ಲಕ್ಷಣಗಳ ಆಧಾರದ ಮೇಲೆ ನಿರ್ಮಾಣ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಐಟಂವಾರು ಪರಿಮಾಣಗಳು ವ್ಯತ್ಯಾಸವಾಗಿತ್ತು. ಅನುಮೋದಿತ ಅಂದಾಜು ಪಟ್ಟಿಯಲ್ಲಿ ಅವಕಾಶ ಕಲ್ಪಿಸದೇ ಇರುವ ಕೆಲವು ಹೆಚ್ಚುವರಿ ಐಟಂಗಳನ್ನು ಉಪಯೋಗಿಸಿಕೊಂಡು ನಿರ್ಮಾಣ ಮಾಡಿದ್ದರಿಂದಾಗಿಯೇ ಯೋಜನಾ ಮೊತ್ತವು ಹೆಚ್ಚುವರಿಯಾಗಿತ್ತು.

2013-14, 2014-15, 2015-16ನೆ ಸಾಲಿನ ಡಬ್ಲ್ಯೂಐಎಫ್‌, ಎನ್‌ಡಬ್ಲ್ಯೂಎಸ್‌ ಯೋಜನೆಯಡಿಯಲ್ಲಿ ನಬಾರ್ಡ್‌ ಸಂಸ್ಥೆಯಿಂದ 615.78 ಕೋಟಿ ಸಾಲವನ್ನು ಸರ್ಕಾರದ ಖಾತರಿಯೊಂದಿಗೆ ಪಡೆಇದತ್ತು. 2015-16ನೇ ಸಾಲಿನ ನಿರ್ಮಾಣ ಕಾಮಗಾರಿಯನ್ನು ವಹಿಸಿಕೊಂಡಿದ್ದ ಸೋಮಾ ಎಂಟರ್‌ಪ್ರೈಸೆಸ್‌ ಕರಾರು ಒಪ್ಪಂದದ ಪ್ರಕಾರ ಕಾಮಗಾರಿಯನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಬಾಡಿಗೆ ಆದಾಯದಲ್ಲಿಯೂ ಖೋತಾ ಆಗಿತ್ತು.

ಅಲ್ಲದೆ ಎರಡು ವರ್ಷದ ಮೊರಾಟರಿಯಮ್‌ ಅವಧಿ ಮುಗಿದ ನಂತರ ಸಾಲ ಮರುಪಾವತಿಯ ಷೆಡ್ಯೂಲ್‌ 2019-20ರಿಂದ ಪ್ರಾರಂಭವಾಗಿತ್ತು. ಉಗ್ರಾಣಗಳ ನಿರ್ಮಾಣ ಕಾಮಗಾರಿಯು ಪೂರ್ಣಗೊಳ್ಳದಿರುವ ಕಾರಣ ನಿರೀಕ್ಷೆಯಂತೆ ಸಂಗ್ರಹಣಾ ಶುಲ್ಕ ರೂಪದಲ್ಲಿ ನಿಗಮಕ್ಕೆ ಆದಾಯ ಪಡೆಯಲು ಸಾಧ್ಯವಾಗಿಲ್ಲ ಎಂಬುದು ಗೊತ್ತಾಗಿದೆ.

ನಿಗಮಕ್ಕೆ ಕೋಟ್ಯಂತರ ರುಪಾಯಿ ನಷ್ಟವಾಗಿರುವ ಪ್ರಕರಣದಲ್ಲಿ ಬಿಡಿಎ ಆಯುಕ್ತ ಐಎಎಸ್‌ ಅಧಿಕಾರಿ ರಾಜೇಶ್‌ಗೌಡ, ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಐಎಎಸ್‌ ಅಧಿಕಾರಿ ಜಯ ವಿಭವಸ್ವಾಮಿ, ಕೆಎಎಸ್‌ ಅಧಿಕಾರಿ ಡಾ ಎನ್‌ ನವೀನ್‌ಕುಮಾರ್‌ ರಾಜು, ಕಾರ್ಯಪಾಲಕ ಅಭಿಯಂತರ ಹನುಮಂತರಾಯಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರ ಅರಣಿ ಗಿರೀಶ್‌, ಮಲ್ಲಿಕಾರ್ಜುನ ಆಲೀಪುರ, ಸಿ ಎಸ್‌ ಹೆಗಡೆ ಮತ್ತು ಸಿ ಎಸ್‌ ಗಾಂಜಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಡಾ ಆನಂದ ಕೆ ಅವರು ಸಹಕಾರ ಇಲಾಖೆಗೆ 2021ರ ಆಗಸ್ಟ್‌ 17ರಂದು ಪತ್ರ ಬರೆದಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಜಿಲ್ಲಾ ನ್ಯಾಯಾಧೀಶ ಸಿ ಆರ್‌ ಬೆನಕನಹಳ್ಳಿ ಅವರು ವರದಿ ನೀಡಿದ್ದರು. ‘ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೇ ವಿಳಂಬ ಮಾಡಿದ್ದರಿಂದ ಅಭಿವೃದ್ಧಿ ಕುಂಠಿತವಾಗಿತ್ತಲ್ಲದೆ ಬೊಕ್ಕಸಕ್ಕೆ ತೀವ್ರ ಆರ್ಥಿಕ ನಷ್ಟಕ್ಕೆ ಕಾರಣರಾಗಿದ್ದರು. ಏರಿಕೆ ವೆಚ್ಚವನ್ನು ಶೇ.50ಕ್ಕಿಂತಲೂ ಹೆಚ್ಚಳಗೊಳಿಸಿದ್ದರು. ಈ ಪ್ರಕರಣದಲ್ಲಿ 8 ಅಧಿಕಾರಿಗಳು ಭಾಗಿಯಾಗಿದ್ದಾರೆ. ಇದೊಂದು ಗಂಭೀರ ದುರ್ನಡತೆ,’ ಎಂದು ಬೆನಕನಹಳ್ಳಿ ಅವರು ವರದಿಯಲ್ಲಿ ಉಲ್ಲೇಖಿಸಿರುವುದು ಡಾ ಆನಂದ ಅವರು ಬರೆದಿರುವ ಪತ್ರದಿಂದ ತಿಳಿದು ಬಂದಿದೆ.

‘ಇಬ್ಬರು ಐಎಎಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-1)ಗೆ ಪ್ರಸ್ತಾಪ ಸಲ್ಲಿಸಬೇಕು. ಕೆಎಎಸ್‌ ಅಧಿಕಾರಿ ಮತ್ತು ಉಳಿದ 4 ಮಂದಿ ಅಧಿಕಾರಿಗಳು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸೇರಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಜಂಟಿ ಇಲಾಖೆ ವಿಚಾರಣೆ ಕೈಗೊಳ್ಳಲು ಅನುವಾಗುವಂತೆ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆದು ಇಲಾಖೆ ಅನುಮೋದನೆಯೊಂದಿಗೆ ಕರಡು ದೋಷಾರೋಪಣೆ ಪಟ್ಟಿ ತಯಾರಿಸಬೇಕು ಎಂದು 2021ರ ಮಾರ್ಚ್‌ ಮತ್ತು ಮೇ 25ರಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ಕೋರಿತ್ತು,’ ಎಂಬ ಮಾಹಿತಿ ಪತ್ರದಿಂದ ಗೊತ್ತಾಗಿದೆ.

S

ಕಳೆದ ಮಾರ್ಚ್‌ ಮತ್ತು ಮೇ ತಿಂಗಳಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಪತ್ರ ಬರೆದಿದ್ದರೂ ಸಹಕಾರ ಇಲಾಖೆಯ ಹಿಂದಿನ ಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಅವರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್‌ ಜಯರಾಮ್‌ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಮೇಲೂ ಇಲಾಖೆಯು ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

Hot this week

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...

ಸಿಎಂ, ಡಿಸಿಎಂ ಸೇರಿ ಐವರು ಸಚಿವರ ವಸತಿಗೃಹ ನವೀಕರಣ, ದುರಸ್ತಿ, ಪೀಠೋಪಕರಣ, ಗೃಹಪಯೋಗಿ ವಸ್ತುಗಳ ಖರೀದಿ; 3 ವರ್ಷದಲ್ಲಿ 19.01 ಕೋಟಿ ರು ವೆಚ್ಚ

ಬೆಂಗಳೂರು; ಸರ್ಕಾರಿ ಶಾಲೆ, ಸರ್ಕಾರಿ ವಿದ್ಯಾರ್ಥಿ ನಿಲಯಗಳ ನಿರ್ಮಾಣ, ಇರುವ ಕೊಠಡಿಗಳ...

ಶಾಲಾ ಶಿಕ್ಷಣಕ್ಕಾಗಿ ಹಣಕಾಸು ಪೂರೈಕೆ; ವೆಚ್ಚ ಸಾಲದು, ಹೆಚ್ಚಿದ ಸಂಪನ್ಮೂಲ ಅಂತರ, ಬಜೆಟ್‌ನಲ್ಲಿ ಕುಸಿತ, ಖಾಸಗೀಕರಣಕ್ಕೆ ದಾರಿಯಾಗಲಿದೆಯೇ?

ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ...
Please Scan to make Your Contribution

Topics

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...

ಶಾಲಾ ಶಿಕ್ಷಣಕ್ಕಾಗಿ ಹಣಕಾಸು ಪೂರೈಕೆ; ವೆಚ್ಚ ಸಾಲದು, ಹೆಚ್ಚಿದ ಸಂಪನ್ಮೂಲ ಅಂತರ, ಬಜೆಟ್‌ನಲ್ಲಿ ಕುಸಿತ, ಖಾಸಗೀಕರಣಕ್ಕೆ ದಾರಿಯಾಗಲಿದೆಯೇ?

ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ...

ರಾಷ್ಟ್ರೀಯ ಪರೀಕ್ಷೆಗಳಿಂದಾಗಿ ಎಸ್‌ ಸಿ, ಎಸ್‌ ಟಿ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕುಸಿತ, ನಗರ ವಿಶ್ವವಿದ್ಯಾಲಯಗಳೊಂದಿಗೆ ಗ್ರಾಮೀಣ ಕಾಲೇಜುಗಳ ವಿಲೀನಕ್ಕೆ ಆಯೋಗ ಅಸಮ್ಮತಿ

ಬೆಂಗಳೂರು;  ಸಾಮಾನ್ಯ ಶಿಕ್ಷಣ ಕೋರ್ಸ್‌ಗಳಲ್ಲಿ ರಾಷ್ಟ್ರೀಯ ಪ್ರವೇಶಗಳ ಪರೀಕ್ಷೆಗಳನ್ನು ಪರಿಚಯಿಸಿದ್ದರಿಂದಾಗಿ ಪರಿಶಿಷ್ಟ...

Related Articles

Popular Categories

error: Content is protected !!