Thursday | May 14, 2026 |

ಆತ್ಮನಿರ್ಭರ; ಸೂಕ್ಷ್ಮ, ಸಣ್ಣ ಮಧ್ಯಮ ಕೈಗಾರಿಕೆಗಳಿಗೆ ಸಾಲ ನೀಡುವಲ್ಲಿ ಬ್ಯಾಂಕ್‌ಗಳ ಕಳಪೆ ಪ್ರದರ್ಶನ

ಬೆಂಗಳೂರು; ಆತ್ಮನಿರ್ಭರ್‌ ಭಾರತ್‌ ಯೋಜನೆಯಡಿಯಲ್ಲಿ ರಾಜ್ಯದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಜಿಇಸಿಎಲ್‌ಜಿಎಸ್‌ (ಗ್ಯಾರಂಟೇಡ್‌ ಎಮರ್ಜೆನ್ಸಿ ಕ್ರೆಡಿಟ್‌ ಲೈನ್‌ ಲೋನ್‌ ) ಅಡಿಯಲ್ಲಿ ಸಾಲ ಮಂಜೂರಾತಿಯಲ್ಲಿ ಬ್ಯಾಂಕ್‌ಗಳು ಕಳಪೆ ಪ್ರದರ್ಶನ ತೋರಿವೆ.

ರಾಜ್ಯಮಟ್ಟದ ಬ್ಯಾಂಕರ್‌ಗಳ ಸಮಿತಿಯು 2021ರ ನವೆಂಬರ್‌ 12ರಂದು ನಡೆಸಿದ್ದ ಲೀಡ್‌ ಬ್ಯಾಂಕ್‌ಗಳ ಸಭೆಯಲ್ಲಿ ಆತ್ಮನಿರ್ಭರ್‌ ಭಾರತ್‌ ಯೋಜನೆಯಡಿಯಲ್ಲಿ ನೀಡಿರುವ ಸಾಲವನ್ನೂ ಪರಾಮರ್ಶಿಸಲಾಗಿದೆ. ಸಭೆಯ ನಡವಳಿಗಳು ‘ದಿ ಫೈಲ್‌’ ಗೆ ಲಭ್ಯವಾಗಿದೆ.

ಸದಸ್ಯ ಬ್ಯಾಂಕ್‌ಗಳು 2022ರ ಮಾರ್ಚ್‌ 31ರ ಅಂತ್ಯಕ್ಕೆ ಒಟ್ಟು 4,50,000 ಕೋಟಿ ರು. ಸಾಲವನ್ನು ವಿತರಿಸಲು ಗುರಿ ನಿಗದಿಪಡಿಸಿಕೊಂಡಿದೆ. ಆದರೆ 2021ರ ಸೆಪ್ಟಂಬರ್‌ 30ರ ಅಂತ್ಯಕ್ಕೆ ಜಿಇಎಲ್‌ಜಿಎಸ್‌ ಅಡಿಯಲ್ಲಿ ಕೇವಲ 9, 595.85 ಕೋಟಿ ರು. ಸಾಲವನ್ನು( 209100 ಖಾತೆಗಳಿಗೆ ) ಮಂಜೂರು ಮಾಡಿದೆ. ಈ ಯೋಜನೆಯಡಿಯಲ್ಲಿ ಒಟ್ಟು 11082.45 ಕೋಟಿ ರು. ಸಾಲ ನೀಡಬೇಕಿತ್ತು. ಸೆಪ್ಟಂಬರ್‌ವರೆಗಿನ ಪ್ರಗತಿಯು ಕಳಪೆಯಾಗಿದೆ ಎಂದು ಬ್ಯಾಂಕರ್‌ಗಳ ಸಮಿತಿಯು ಅಸಮಾಧಾನ ವ್ಯಕ್ತಪಡಿಸಿರುವುದು ನಡವಳಿಯಿಂದ ತಿಳಿದು ಬಂದಿದೆ.

ಬಹುತೇಕ ಸದಸ್ಯ ಬ್ಯಾಂಕ್‌ಗಳು ಈ ಯೋಜನೆಯಡಿಯಲ್ಲಿ ಸಾಲಕ್ಕಾಗಿ ಸಲ್ಲಿಸಿರುವ ಅರ್ಜಿಗಳನ್ನು ವಿಲೇವಾರಿ ಮಾಡಿಲ್ಲ. ಅಲ್ಲದೆ ಬಹುತೇಕ ಎಂಎಸ್‌ಎಂಇಗಳಿಗೆ ಇಸಿಎಲ್‌ಜಿಎಸ್‌ ಯೋಜನೆಯ ಅರಿವಿಲ್ಲ. ಬ್ಯಾಂಕ್‌ಗಳು ಕೂಡ ಇದರ ಬಗ್ಗೆ ಹೆಚ್ಚಿನ ಪ್ರಚಾರವನ್ನೂ ಮಾಡಿಲ್ಲ ಎಂದು ಕಾಸಿಯಾ ಪ್ರತಿನಿಧಿ ಸಭೆಯಲ್ಲಿ ಮಾಹಿತಿ ನೀಡಿರುವುದು ನಡವಳಿಯಿಂದ ಗೊತ್ತಾಗಿದೆ.


ಸಣ್ಣ ಉದ್ಯಮಗಳಿಗೆ ಸಾಲ ನೀಡುವಲ್ಲಿ ಬ್ಯಾಂಕ್‌ಗಳು ಕಳಪೆ ಪ್ರದರ್ಶನ ತೋರಿರುವ ಬಗ್ಗೆ ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ ಅವರು ಸದ್ಯದಲ್ಲೇ ಲೀಡ್‌ ಬ್ಯಾಂಕ್‌ಗಳೊಂದಿಗೆ ಸಮಾಲೋಚಿಸಲಿದ್ದಾರೆ. ಪರಿಷತ್‌ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಸಭೆ ನಡೆಸಲಿದ್ದಾರೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಆತ್ಮ ನಿರ್ಭರ್‌ ಭಾರತ್‌ ಯೋಜನೆಯಡಿಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ಪಡೆದ ಸೂಕ್ಷ್ಮ, ಸಣ್ಣ ಮತ್ತುಮಧ್ಯಮ ಕೈಗಾರಿಕೆಗಳಿಗೆ ಗ್ಯಾರಂಟೇಡ್‌ ಎಮರ್ಜೆನ್ಸಿ ಕ್ರೆಡಿಟ್‌ ಲೈನ್‌ ಲೋನ್‌ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯ ಪ್ರಕಾರ 2020ರ ಫೆ.29ರಂದು ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ಪಡೆದ ಸೂಕ್ಷ್ಮ, ಸಣ್ಣ ಮತ್ತುಮಧ್ಯಮ ಕೈಗಾರಿಕೆಗಳ ಬಾಕಿ ಇರುವ ಮೊತ್ತ 25 ಕೋಟಿ ಗಿಂತ ಕಡಿಮೆ ಇದ್ದಲ್ಲಿ ಅಂತಹ ಘಟಕಗಳಿಗೆ ಈ ಬಾಕಿ ಮೊತ್ತದ ಶೇ.20ರಷ್ಟು ಮೊತ್ತವನ್ನು ಹೆಚ್ಚುವರಿ ಸಾಲವಾಗಿ ಯಾವುದೇ ಹೊಸ ಭದ್ರತೆ ಇಲ್ಲದೇ ನೀಡಲಾಗುವುದು. ಇದರ ಗರಿಷ್ಠ ಮೊತ್ತ ರೂ. 5 ಕೋಟಿ ಆಗಿರುತ್ತದೆ. ಈ ಸಾಲವನ್ನು 4 ವರ್ಷಗಳಲ್ಲಿ ಪಾವತಿಸಬೇಕು. ಬಡ್ಡಿ ದರವು ಶೇ.9.25ರಷ್ಟಿರುತ್ತದೆ ಎಂದು ಹಿಂದಿನ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಅವರು 2020ರ ಸೆ.29ರಂದು ಸದನಕ್ಕೆ ಲಿಖಿತ ಒದಗಿಸಿದ್ದರು.

ಈ ಯೋಜನೆಯಡಿಯಲ್ಲಿ ಕರ್ನಾಟಕದಲ್ಲಿ ಒಟ್ಟು 2,83,583 ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು 10,41,982.04 ಲಕ್ಷ ರು.ಗಳ ಜಿಐಸಿಎಲ್‌ ಸಾಲ ಪಡೆಯಲು ಅರ್ಹತೆ ಹೊಂದಿವೆ. 2020ರ ಸೆಪ್ಟಂಬರ್‌ ಅಂತ್ಯಕ್ಕೆ 1,30,993 ಕೈಗಾರಿಕೆಗಳಿಗೂ ಅಧಿಕ ಘಟಕಗಳಿಗೆ 5,68,122.81 ಲಕ್ಷಕ್ಕೂ ಅಧಿಕ ಮೊತ್ತದ ಸಾಲ ವಿತರಿಸಲಾಗಿತ್ತು. ಈ ಯೋಜನೆಗೆ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ ನೀಡಲಾಗುವುದಿಲ್ಲ. ಎಂಎಸ್‌ಎಂಇಗಳಿಗೆ ನೀಡಬೇಕಾದ ಸಾಲವನ್ನು ಬ್ಯಾಂಕ್‌ಗಳೇ ತಮ್ಮ ನಿಧಿಯಿಂದ ನೀಡಬೇಕಾಗುತ್ತದೆ.

ಇನ್ನು, ಹಿಂದಿನ ಕಾಂಗ್ರೆಸ್‌ ಸರ್ಕಾರ 2018ರಲ್ಲಿ ಖಾಸಗಿ ಸಹಭಾಗಿತ್ವದಡಿಯಲ್ಲಿ ಕೈಗೆತ್ತಿಕೊಳ್ಳಲು ಮುಂದಾಗಿದ್ದ ಯೋಜನೆಗಳನ್ನೇ ಆತ್ಮನಿರ್ಭರ್‌ ಭಾರತ್‌ ಅಭಿಯಾನದಡಿಯಲ್ಲಿ ಅನುಷ್ಠಾನಕ್ಕೆ ಮುಂದಾಗಿದೆ. ಆತ್ಮನಿರ್ಭರ ಭಾರತ್ ಅಡಿಯಲ್ಲಿ ಬಿಡುಗಡೆ ಅಗಬಹುದಾದ ಹಣವನ್ನು ನಿರೀಕ್ಷಿಸಿ ಒಟ್ಟು 40,724.74 ಕೋಟಿ ರು. ಮೊತ್ತದಲ್ಲಿ ಅನುಷ್ಠಾನಗೊಳಿಸಬಹುದಾದ ವಿವಿಧ ಯೋಜನೆಗಳನ್ನು ಇತರೆ ಇಲಾಖೆಗಳು ಸಿದ್ಧಪಡಿಸಿಕೊಂಡಿವೆ. ಕೃಷಿ, ಸಾರಿಗೆ, ವಸತಿ, ರಿಯಲ್‌ ಎಸ್ಟೇಟ್‌, ಹೂಡಿಕೆ, ಉದ್ಯೋಗ ಸೃಷ್ಟಿ, ವಿದ್ಯುತ್‌ ಯೋಜನೆ ಸೇರಿದಂತೆ ಇನ್ನಿತರೆ ವಲಯಗಳಲ್ಲಿ ಯೋಜನೆಗಳ ನೀಲಿ ನಕ್ಷೆ ತಯಾರಿಸಿಟ್ಟುಕೊಂಡಿರುವ ಹಲವು ಇಲಾಖೆಗಳು ಇದಕ್ಕೆ ಸಂಬಂಧಿಸಿದಂತೆ ಕಾರ್ಯಸಾಧ್ಯತೆ ವರದಿಯನ್ನು ರೂಪಿಸಿರುವುದು ಗೊತ್ತಾಗಿದೆ.

ಆತ್ಮನಿರ್ಭರ್‌ ಭಾರತ್‌ ಯೋಜನೆಯಡಿಯಲ್ಲಿ ಹಂಚಿಕೆ ಮಾಡಲು ಒಟ್ಟು ಮೊತ್ತದ ಪೈಕಿ ಬಳ್ಳಾರಿ ಜಿಲ್ಲೆಯಲ್ಲಿ ಉದ್ದೇಶಿತ ಇಂಡಸ್ಟ್ರೀಯಲ್‌ ಪಾರ್ಕ್‌ ಯೋಜನೆಗೆ ಸಿಂಹಪಾಲು ದೊರೆತಿದೆ. ಇದಕ್ಕಾಗಿ 30,345 ಕೋಟಿ ರು. ಮೊತ್ತದ ಯೋಜನೆ ರೂಪಿಸಿರುವ ಹೂಡಿಕೆ ವಲಯವು ಕಾರ್ಯ ಸಾಧ್ಯತೆ ವರದಿಯನ್ನು ತಯಾರಿಸಿಟ್ಟುಕೊಂಡಿದೆ. ರಾಯಚೂರು, ಬೀದರ್‌ ಸೇರಿದಂತೆ ಹಿಂದುಳಿದ ಮತ್ತು ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ ಯೋಜನೆ ಸಂಬಂಧ ಇಲಾಖೆಗಳು ಕಾರ್ಯ ಸಾಧ್ಯತೆ ವರದಿಯನ್ನು ತಯಾರಿಸಿಲ್ಲ. ಆತ್ಮನಿರ್ಭರ್‌ ಯೋಜನೆಯಡಿಯಲ್ಲಿ ಹಂಚಿಕೆಯಾಗುವ ಮೊತ್ತವನ್ನು ರಾಜ್ಯದ ಹಿಂದಿನ ಸರ್ಕಾರಗಳು ರೂಪಿಸಿದ್ದ ಹಲವು ಯೋಜನೆಗಳಿಗೆ ಬಿಡುಗಡೆ ಮಾಡುವ ಉದ್ದೇಶ ಹೊಂದಿದೆ.

ಹೂಡಿಕೆ ವಲಯ ಮತ್ತು ಉದ್ಯೋಗ ಸೃಷ್ಟಿ ವಲಯಕ್ಕೆ 33,323 ಕೋಟಿ ರು, ಫುಡ್‌ ಪಾರ್ಕ್‌ ಯೋಜನೆಗಳಿಗೆ 233 ಕೋಟಿ, ಮೀನುಗಾರಿಕೆ ಯೋಜನೆಗೆ 120 ಕೋಟಿ, ಆರೋಗ್ಯ ಸೇವೆ ಮೂಲ ಸೌಕರ್ಯಗಳಿಗೆ 6.32 ಕೋಟಿ, ವಸತಿ ಯೋಜನೆಗೆ 536 ಕೋಟಿ, ರಿಯಲ್‌ ಎಸ್ಟೇಟ್‌ ವಲಯಕ್ಕೆ 808.16 ಕೋಟಿ ರು., ವಿದ್ಯುತ್‌ ಯೋಜನೆಗಳಿಗೆ 1,300 ಕೋಟಿ ರು. ಮೊತ್ತದಲ್ಲಿ ಕಾರ್ಯ ಸಾಧ್ಯತೆ ವರದಿಯನ್ನು ಇಲಾಖೆಗಳು ಸಿದ್ಧಪಡಿಸಿಕೊಂಡಿರುವುದು ತಿಳಿದು ಬಂದಿದೆ.

ಕೊಪ್ಪಳದಲ್ಲಿ ರೈಸ್‌ ಟೆಕ್ನಾಲಾಜಿ ಪಾರ್ಕ್‌ ಸ್ಥಾಪಿಸಲು ಕಾರ್ಯ ಸಾಧ್ಯತೆ ವರದಿಯನ್ನು ಸಿದ್ಧಪಡಿಸುತ್ತಿರುವ ಕೃಷಿ ಮಾರಾಟ ಇಲಾಖೆ (ಎಪಿಎಂಸಿ)ಯು ಇದಕ್ಕಾಗಿ 122 ಕೋಟಿ ರು. ಯೋಜನಾ ವೆಚ್ಚವೆಂದು ಅಂದಾಜಿಸಿದೆ. ಅದೇ ರೀತಿ ಹಾವೇರಿಯಲ್ಲಿ ಮೆಕ್ಕೆಜೋಳ ಟೆಕ್ನಾಲಜಿ ಪಾರ್ಕ್‌ಗಾಗಿ 111 ಕೋಟಿ ರು. ಮೊತ್ತದಲ್ಲಿ ಅನುಷ್ಠಾನಗೊಳಿಸಬಹುದಾದ ಯೋಜನೆಯ ಪೂರ್ವ ಕಾರ್ಯ ಸಾಧ್ಯತೆ ವರದಿಯನ್ನು ಸಿದ್ಧಪಡಿಸಿರುವುದು ದಾಖಲೆಯಿಂದ ಗೊತ್ತಾಗಿದೆ.

ತುಮಕೂರು, ಶಿವಮೊಗ್ಗ, ದಾವಣಗೆರೆ, ವಿಜಯಪುರ ಮತ್ತು ಬೆಳಗಾವಿಯಲ್ಲಿ ಫುಡ್‌ ಪಾರ್ಕ್‌ ಅಭಿವೃದ್ಧಿಗಾಗಿ ಯೋಜಿಸಿರುವ ಇಲಾಖೆ ಈ ಸಂಬಂಧ ಇನ್ನೂ ಯೋಜನಾ ವೆಚ್ಚವನ್ನು ಅಂದಾಜಿಸಿಲ್ಲ. ಹಾಗೆಯೇ ಕಾರ್ಯ ಸಾಧ್ಯತೆಯನ್ನೂ ತಯಾರಿಸಿಲ್ಲ ಎಂಬುದು ತಿಳಿದು ಬಂದಿದೆ.

ಬೆಂಗಳೂರು (ಹೆಸರಘಟ್ಟ), ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ಒಟ್ಟು 2,000 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಶೀಥಲೀಕರಣ ಕೇಂದ್ರಗಳಿಗೆ ಮೂಲ ಸೌಕರ್ಯಗಳಿಗಾಗಿ 300 ಕೋಟಿ ರು., ರಾಜ್ಯದ ವಿವಿಧೆಡೆ ಇರುವ ಉಗ್ರಾಣಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗಾಗಿ 2,500 ಕೋಟಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ ಮತ್ತು ಗದಗ್‌ನಲ್ಲಿ ಕೃಷಿ ಉತ್ಪನ್ನಗಳ ಉತ್ಪಾದನೆ ಮತ್ತು ರಫ್ತು ವಹಿವಾಟು ಕೇಂದ್ರಗಳ ನಿರ್ಮಾಣಕ್ಕೆ 680 ಕೋಟಿ ರು., ಬೆಂಗಳೂರಿನಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕೇಂದ್ರ ಬಳಿ ಇರುವ ಬಳೇಪುರದಲ್ಲಿ ಸಾರಿಗೆ ಕೇಂದ್ರಕ್ಕೆ 597 ಕೋಟಿ ರು., ಹುಬ್ಬಳ್ಳಿ ಧಾರವಾಡದಲ್ಲಿ ಲಾಜಿಸ್ಟಿಕ್‌ ಪಾರ್ಕ್‌ ನಿರ್ಮಾಣಕ್ಕೆ 331 ಕೋಟಿ ರು. ಅಂದಾಜಿಸಿದೆ.

ಹಾರೋಹಳ್ಳಿ, ಹಾಸನ, ಮೈಸೂರು, ಮಂಗಳೂರು, ಶಿವಮೊಗ್ಗ, ಬೆಳಗಾವಿ, ಚಿತ್ರದುರ್ಗ ಜಿಲ್ಲೆಯಲ್ಲಿಯೂ ಲಾಜಿಸ್ಟಿಕ್‌ ಸಂಪರ್ಕಗಳ ಅಭಿವೃದ್ಧಿಗೆ ಯೋಜನೆ ರೂಪಿಸಿದೆಯಾದರೂ ಯೋಜನಾ ವೆಚ್ಚವನ್ನು ಅಂದಾಜಿಸಿಲ್ಲ. ಆದರೆ ಪೂರ್ವ ಕಾರ್ಯ ಸಾಧ್ಯತೆ ವರದಿಯನ್ನು ಪೂರ್ಣಗೊಳಿಸಿದೆ.

ಬೆಂಗಳೂರು ಪೂರ್ವ ತಾಲೂಕಿನ ಕನ್ನಮಂಗಲ ಹಾರ್ಟಿಕಲ್ಚರ್‌ ಫಾರ್ಮ್, ತುಮಕೂರಿನ ದೊಡ್ಡಸಾಗ್ಗೆರೆಯಲ್ಲಿ ಬಟಾನಿಕಲ್‌ ಗಾರ್ಡನ್‌, ಮೈಸೂರಿನ ಲಿಂಗಾಬುದಿ ಬಟಾನಿಕಲ್‌ ಗಾರ್ಡನ್‌, ಕೊಪ್ಪಳದ ಪಾಂಬವನ ಬಟಾನಿಕಲ್‌ ಗಾರ್ಡನ್‌ ಅಭಿವೃದ್ಧಿಗೊಳಸಲು ಯೋಜನೆ ರೂಪಿಸಿದೆಯಾದರೂ ಯೋಜನಾ ವೆಚ್ಚವನ್ನು ಅಂದಾಜಿಸಿಲ್ಲ. ಆದರೆ ತೋಟಗಾರಿಕೆ ಇಲಾಖೆ ಈ ಸಂಬಂಧ ಸಮಗ್ರ ಪರಿಕಲ್ಪನೆಯನ್ನು ರೂಪಿಸಿದೆ.

ಮಂಗಳೂರು ಮತ್ತು ಉಡುಪಿಯಲ್ಲಿ ಸೀ ಫುಡ್‌ ಪಾರ್ಕ್‌ಗಾಗಿ 120 ಕೋಟಿ ರು.ಮೊತ್ತದಲ್ಲಿ ಯೋಜನೆ ರೂಪಿಸಿರುವ ಮೀನುಗಾರಿಕೆ ಇಲಾಖೆ, ಕರಾವಳಿ ಎಲ್ಲಾ ಜಿಲ್ಲೆಗಳಲ್ಲೂ ಬೀಜೋತ್ಪಾದನಾ ಕೇಂದ್ರಗಳ ಫಾರ್ಮ್‌ಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲು ಉದ್ಧೇಶಿಸಿದೆ. ಅದೇ ರೀತಿ ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮೀನುಗಾರಿಕೆ ಜಲಾಶಯ, ಅಕ್ವೇರಿಯಂ ಮೀನುಗಾರಿಕೆ ಬಂದರು ಮತ್ತು ತಂಗುದಾಣ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶಿಸಿದ್ದರೂ ಈವರೆವಿಗೂ ಕಾರ್ಯ ಸಾಧ್ಯತೆ ವರದಿಗಳು ಲಭ್ಯವಿಲ್ಲದಿರುವುದು ದಾಖಲೆಯಿಂದ ತಿಳಿದು ಬಂದಿದೆ.

ಕೋಲಾರ, ಶಿವಮೊಗ್ಗ ಮತ್ತು ಕಲ್ಬುರ್ಗಿಯಲ್ಲಿ ಜ್ಞಾನ ನಗರಿ ನಿರ್ಮಾಣ ಮತ್ತು ಇದಕ್ಕೆ ಮೂಲಸೌಕರ್ಯ ಕಲ್ಪಿಸಲು ಉದ್ಧೇಶಿಸಿರುವ ಶಿಕ್ಷಣ ಇಲಾಖೆ, ಪೂರ್ವ ಕಾರ್ಯಸಾಧ್ಯತೆ ವರದಿಯನ್ನು ತಯಾರಿಸಿದೆ. ಆದರೆ ಯೋಜನಾ ವೆಚ್ಚ ಎಷ್ಟೆಂದು ಅಂದಾಜಿಸಿಲ್ಲ.

ಬೆಳಗಾವಿ, ಬೀದರ್‌, ಹಾಸನ, ಮಂಡ್ಯ, ರಾಯಚೂರು ಮತ್ತು ಶಿವಮೊಗ್ಗದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಎಂಆರ್‌ಐ ಸ್ಕ್ಯಾನ್‌ ಕೇಂದ್ರಗಳ ಸ್ಥಾಪನೆಗೆ 6.32 ಕೋಟಿ ರು. ವೆಚ್ಚದಲ್ಲಿ ಯೋಜನೆ ರೂಪಿಸಿರುವ ಆರೋಗ್ಯ ಇಲಾಖೆ, ಗುಲಬರ್ಗಾ, ಮೈಸೂರು ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಡಯಾಗ್ನೋಸ್ಟಿಕ್‌ ಕೇಂದ್ರಗಳನ್ನು ತೆರೆಯಲು ಯೋಜನೆ ತಯಾರಿಸಿದೆ. ಹಾಗೆಯೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ವೈದ್ಯಕೀಯ ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿರುವುದು ತಿಳಿದು ಬಂದಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಇಂದಿರಾ ನಗರದಲ್ಲಿ ಮಾರುಕಟ್ಟೆಯ ಪುನಶ್ಚೇತನಕ್ಕೆ 220 ಕೋಟಿ ಮತ್ತು ಆರ್‌ ಟಿ ನಗರದಲ್ಲಿರುವ ಮಾರುಕಟ್ಟೆ ಪುನರ್‌ ಅಭಿವೃದ್ಧಿಗಾಗಿ 60 ಕೋಟಿ, ವಿಜಯನಗರದಲ್ಲಿನ ಮಾರುಕಟ್ಟೆ ಅಭಿವೃದ್ಧಿಗಾಗಿ 80 ಕೋಟಿ, ಕೆ ಆರ್‌ ಮಾರುಕಟ್ಟೆ, ಯಡಿಯೂರು, ಲಕ್ಕಸಂದ್ರ, ಮಾವಳ್ಳಿ, ಕಾಕ್ಸ್‌ ಟೌನ್‌ನಲ್ಲಿ ನ ಮಾರುಕಟ್ಟೆಗಳ ಅಭಿವೃದ್ಧಿಗಾಗಿ 60 ಕೋಟಿ ಮೊತ್ತದ ಯೋಜನೆಯನ್ನು ರೂಪಿಸಿದೆ. ಇದಕ್ಕೆ ಸಂಬಂಧಿಸಿದಂತೆ ಪೂರ್ವ ಕಾರ್ಯಸಾಧ್ಯತೆ ವರದಿ ತಯಾರಿಸಿರುವುದು ಗೊತ್ತಾಗಿದೆ.

ಮೈಸೂರು ಅಭಿವೃದ್ಧಿ ಪ್ರಾಧಿಕಾರವು ಬನ್ನಿಮಂಟಪ ಅಭಿವೃದ್ಧಿಗೊಳಿಸಲು ಪೂರ್ವ ಕಾರ್ಯಸಾಧ್ಯತೆ ವರದಿ ತಯಾರಿಸಿದ್ದರೆ, ಬೆಂಗಳೂರಿನ ಸಿಂಗಸಂದ್ರದಲ್ಲಿರುವ ಜಮೀನನ್ನು ಕ್ರಿಡಿಲ್‌ಗೆ ಹಸ್ತಾಂತರ ಯೋಜನೆಯನ್ನೂ ತಯಾರಿಸಿದೆ. ಆದರೆ ಈವರೆವಿಗೂ ಯೋಜನಾ ವೆಚ್ಚವನ್ನು ಅಂದಾಜಿಸಿಲ್ಲ. ಅದೇ ರೀತಿ ಮೈಸೂರು ನಗರಪಾಲಿಕೆಯು ಅರ್ಬನ್‌ ರಿಕ್ರಿಯೇಷನ್‌ ಸೆಂಟರ್‌ ಅಭಿವೃದ್ಧಿಗಾಗಿ 192.7 ಕೋಟಿ, ಮೈಸೂರು ನಗರದ ಗಡಿ ಚೌಕ್‌ನಲ್ಲಿನಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ 9.7 ಕೋಟಿ, ಮಯೂರ ವಾಣಿಜ್ಯ ಸಂಕೀರ್ಣ ಅಭಿವೃದ್ಧಿಗೆ 107.02 ಕೋಟಿ ಮೊತ್ತದ ಯೋಜನೆಯನ್ನು ರೂಪಿಸಿದೆ.

ಹೂಡಿಕೆ ವಲಯಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಚಾಲನೆಯಲ್ಲಿರುವ ಮಷೀನ್‌ ಟೂಲ್‌ ಇಂಡಸ್ಟ್ರಿ ಪಾರ್ಕ್‌ ಅಭಿವೃದ್ಧಿಗೆ 410 ಕೋಟಿ ರು.ಗಳನ್ನು ಆತ್ಮ ನಿರ್ಭರ್‌ ಭಾರತ್‌ ಯೋಜನೆಯಲ್ಲಿ ಒದಗಿಸಲು ಸರ್ಕಾರ ಮುಂದಾಗಿದೆ. ಅಲ್ಲದೆ, ಬೆಂಗಳೂರಿನ ದೇವನಹಳ್ಳಿ ಬಳಿ ಏರೋಸ್ಪೇಸ್‌ ಪಾರ್ಕ್‌ಗೆ 90 ಕೋಟಿ, ಬ್ಯುಸಿನೆಸ್‌ ಪಾರ್ಕ್‌ ಸ್ಥಾಪಿಸಲು ಉದ್ದೇಶಿಸಿರುವ ಸರ್ಕಾರ ಇದಕ್ಕೆ ಯೋಜನಾ ವೆಚ್ಚವನ್ನು ಅಂದಾಜಿಸಿಲ್ಲ.

ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯು ಬಳ್ಳಾರಿ ಜಿಲ್ಲೆಯಲ್ಲಿ ಇಂಡಸ್ಟ್ರಿಯಲ್‌ ಪಾರ್ಕ್ ನಿರ್ಮಾಣಕ್ಕೆ 30, 345 ಕೋಟಿ ಮೊತ್ತದಲ್ಲಿ ಯೋಜನೆ ರೂಪಿಸಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾರ್ಯಸಾಧ್ಯತೆ ವರದಿ ತಯಾರಿಸಿರುವುದು ಗೊತ್ತಾಗಿದೆ. ಅದೇ ರೀತಿ ಯಾದಗಿರಿಯ ವಿಶೇಷ ಆರ್ಥಿಕ ವಲಯದಲ್ಲಿ ಫಾರ್ಮಾಸ್ಯುಟಿಕಲ್ಸ್‌ ಪಾರ್ಕ್ ಅಭಿವೃದ್ಧಿಗಾಗಿ 2,468 ಕೋಟಿ ಮೊತ್ತದ ಯೋಜನೆಗೆ ಪೂರ್ವ ಕಾರ್ಯಸಾಧ್ಯತೆ ವರದಿಯನ್ನು ತಯಾರಿಸಿದೆ.

ರಾಜ್ಯ ಉಗ್ರಾಣ ನಿಗಮ ಮತ್ತು ಶಿಕ್ಷಣ ಇಲಾಖೆಗೆ ಸೇರಿರುವ ಕಟ್ಟಡಗಳ ಮೇಲೆ ಸೋಲಾರ್‌ ಮೇಲ್ಛಾವಣಿ ಅಳವಡಿಸುವ ಸಂಬಂಧ 2016ರಲ್ಲೇ ಸಚಿವ ಸಂಪುಟ ಅನುಮೋದಿಸಿದ್ದ ಈ ಯೋಜನೆಗೆ ಅತ್ಮ ನಿರ್ಭರ್‌ ಅಡಿಯಲ್ಲಿ ಒಟ್ಟು 1,300 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ.

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!